ಜಾಗತಿಕ ಬಾಹ್ಯಾಕಾಶ ಪರಿಶೋಧನೆ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ
May 07th, 12:00 pm
ಗೌರವಾನ್ವಿತ ಪ್ರತಿನಿಧಿಗಳೆ, ಗೌರವಾನ್ವಿತ ವಿಜ್ಞಾನಿಗಳೆ, ಅನುಶೋಧಕರೆ, ಗಗನಯಾತ್ರಿಗಳೆ ಮತ್ತು ವಿಶ್ವದೆಲ್ಲೆಡೆಯಿಂದ ಆಗಮಿಸಿರುವ ಸ್ನೇಹಿತರೆ,ಬಾಹ್ಯಾಕಾಶ ಅನ್ವೇಷಣೆ ಕುರಿತ ಜಾಗತಿಕ ಸಮ್ಮೇಳನ (ಜಿಎಲ್ಇಎಕ್ಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
May 07th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಾಹ್ಯಾಕಾಶ ಅನ್ವೇಷಣೆ ಕುರಿತ ಜಾಗತಿಕ ಸಮ್ಮೇಳನ (ಜಿಎಲ್ಇಎಕ್ಸ್) 2025ನ್ನು ಉದ್ದೇಶಿಸಿ ಭಾಷಣ ಮಾಡಿದರು. ವಿಶ್ವದಾದ್ಯಂತದ ಗೌರವಾನ್ವಿತ ಪ್ರತಿನಿಧಿಗಳು, ವಿಜ್ಞಾನಿಗಳು ಮತ್ತು ಗಗನಯಾತ್ರಿಗಳನ್ನು ಸ್ವಾಗತಿಸಿದ ಅವರು, ಜಿಎಲ್ಇಎಕ್ಸ್ 2025ರಲ್ಲಿ ಭಾರತದ ಗಮನಾರ್ಹ ಬಾಹ್ಯಾಕಾಶ ಪ್ರಯಾಣವನ್ನು ಪ್ರಸ್ತಾಪಿಸಿದ ಅವರು ಬಾಹ್ಯಾಕಾಶವು ಕೇವಲ ಒಂದು ಗಮ್ಯಸ್ಥಾನವಲ್ಲ ಜೊತೆಗೆ ಅದು ಕುತೂಹಲ, ಧೈರ್ಯ ಮತ್ತು ಸಾಮೂಹಿಕ ಪ್ರಗತಿಯ ಘೋಷಣೆಯಾಗಿದೆ ಎಂದು ಹೇಳಿದರು. 1963ರಲ್ಲಿ ಸಣ್ಣ ರಾಕೆಟ್ ಉಡಾವಣೆಯಿಂದ ಹಿಡಿದು ಚಂದ್ರನ ದಕ್ಷಿಣ ಧ್ರುವದ ಬಳಿ ಇಳಿದ ಮೊದಲ ರಾಷ್ಟ್ರವಾಗುವವರೆಗೆ ಭಾರತದ ಬಾಹ್ಯಾಕಾಶ ಸಾಧನೆಗಳು ಈ ಸ್ಫೂರ್ತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಒತ್ತಿ ಹೇಳಿದರು. ಭಾರತೀಯ ರಾಕೆಟ್ ಗಳು ಪೇಲೋಡ್ ಗಳಿಗಿಂತ (ಸಾಮರ್ಥ್ಯಕ್ಕಿಂತ) ಹೆಚ್ಚಿನದನ್ನು ಸಾಗಿಸುತ್ತವೆ - ಅವು 1.4 ಬಿಲಿಯನ್ ಭಾರತೀಯರ ಕನಸುಗಳನ್ನು ಹೊತ್ತೊಯ್ಯುತ್ತವೆ ಎಂದು ಅವರು ಹೇಳಿದರು, ಭಾರತದ ಬಾಹ್ಯಾಕಾಶ ಪ್ರಗತಿಗಳು ಗಮನಾರ್ಹ ವೈಜ್ಞಾನಿಕ ಮೈಲಿಗಲ್ಲುಗಳಾಗಿವೆ ಮತ್ತು ಮಾನವ ಚೈತನ್ಯವು ಗುರುತ್ವಾಕರ್ಷಣೆಯನ್ನು ಮೀರಬಲ್ಲದು ಎಂಬುದಕ್ಕೆ ಪುರಾವೆಯಾಗಿದೆ ಎಂದು ಹೇಳಿದರು. 2014 ರಲ್ಲಿ ಮೊದಲ ಪ್ರಯತ್ನದಲ್ಲೇ ಮಂಗಳ ಗ್ರಹವನ್ನು ತಲುಪಿದ ಭಾರತದ ಐತಿಹಾಸಿಕ ಸಾಧನೆಯನ್ನು ಅವರು ಸ್ಮರಿಸಿದರು. ಚಂದ್ರಯಾನ -1 ಚಂದ್ರನ ಮೇಲ್ಮೈಯಲ್ಲಿ ನೀರನ್ನು ಕಂಡುಹಿಡಿಯಲು ಸಹಾಯ ಮಾಡಿತು, ಚಂದ್ರಯಾನ -2 ಚಂದ್ರನ ಮೇಲ್ಮೈಯ ಅತಿ ಹೆಚ್ಚು ರೆಸಲ್ಯೂಶನ್ (ಸ್ಪಷ್ಟ) ಚಿತ್ರಗಳನ್ನು ಒದಗಿಸಿತು ಮತ್ತು ಚಂದ್ರಯಾನ -3 ಚಂದ್ರನ ದಕ್ಷಿಣ ಧ್ರುವದ ತಿಳುವಳಿಕೆಯನ್ನು ಹೆಚ್ಚಿಸಿತು ಎಂದು ಅವರು ಒತ್ತಿ ಹೇಳಿದರು. ಭಾರತವು ದಾಖಲೆಯ ಸಮಯದಲ್ಲಿ ಕ್ರಯೋಜೆನಿಕ್ ಎಂಜಿನ್ ಗಳನ್ನು ಅಭಿವೃದ್ಧಿಪಡಿಸಿದೆ, ಒಂದೇ ಕಾರ್ಯಾಚರಣೆಯಲ್ಲಿ 100 ಉಪಗ್ರಹಗಳನ್ನು ಉಡಾವಣೆ ಮಾಡಿದೆ ಮತ್ತು ಭಾರತೀಯ ಉಡಾವಣಾ ವಾಹನಗಳನ್ನು ಬಳಸಿಕೊಂಡು 34 ದೇಶಗಳಿಗೆ 400 ಕ್ಕೂ ಹೆಚ್ಚು ಉಪಗ್ರಹಗಳನ್ನು ಯಶಸ್ವಿಯಾಗಿ ನಿಯೋಜಿಸಿದೆ ಎಂಬುದರತ್ತ ಅವರು ಗಮನಸೆಳೆದರು. ಭಾರತದ ಇತ್ತೀಚಿನ ಸಾಧನೆಗಳತ್ತ ಬೆಟ್ಟು ಮಾಡಿದ ಅವರು ಈ ವರ್ಷ ಎರಡು ಉಪಗ್ರಹಗಳನ್ನು ಬಾಹ್ಯಾಕಾಶದಲ್ಲಿ ಸ್ಥಾಪಿಸಿರುವುದು ಬಾಹ್ಯಾಕಾಶ ಅನ್ವೇಷನೆಯತ್ತ ಪ್ರಮುಖ ಹೆಜ್ಜೆಯಾಗಿದೆ ಎಂದರು.