17ನೇ ಬ್ರಿಕ್ಸ್ ಶೃಂಗಸಭೆ - ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯ ಕುರಿತ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 07th, 11:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯ ಕುರಿತಾದ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ಅಧಿವೇಶನದಲ್ಲಿ ಬ್ರಿಕ್ಸ್ ಸದಸ್ಯರು, ಪಾಲುದಾರ ರಾಷ್ಟ್ರಗಳು ಮತ್ತು ಆಹ್ವಾನಿತ ರಾಷ್ಟ್ರಗಳು ಭಾಗವಹಿಸಿದ್ದವು. ವಿಶ್ವದ ಭವಿಷ್ಯಕ್ಕಾಗಿ ಇಂತಹ ಮಹತ್ವದ ವಿಷಯ ಕುರಿತು ಅಧಿವೇಶನವನ್ನು ಆಯೋಜಿಸಿದ್ದಕ್ಕಾಗಿ ಅವರು ಬ್ರೆಜಿಲ್ ಗೆ ಧನ್ಯವಾದ ಸಲ್ಲಿಸಿದರು. ಭಾರತಕ್ಕೆ ಹವಾಮಾನ ಬದಲಾವಣೆಯು ಕೇವಲ ಇಂಧನ ಸಮಸ್ಯೆಗಳನ್ನು ನಿಭಾಯಿಸುವುದಲ್ಲ, ಬದಲಾಗಿ ಅದು ಜೀವನ ಮತ್ತು ನಿಸರ್ಗದ ನಡುವಿನ ಸಮತೋಲನದ ಮೇಲೆ ಪರಿಣಾಮ ಬೀರುವುದಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಭಾರತವು ಹವಾಮಾನ ನ್ಯಾಯವನ್ನು ಈಡೇರಿಸಬೇಕಾದ ನೈತಿಕ ಜವಾಬ್ದಾರಿಯಾಗಿ ನೋಡುತ್ತದೆ ಎಂದು ಅವರು ಒತ್ತಿ ಹೇಳಿದರು. ಪರಿಸರ ಕ್ರಮಕ್ಕೆ ಭಾರತದ ಆಳವಾದ ಬದ್ಧತೆಯನ್ನು ಪುನರುಚ್ಚರಿಸಿದ ಅವರು, ಜನರು ಮತ್ತು ಗ್ರಹದ ಅಭಿವೃದ್ಧಿಯನ್ನು ಉತ್ತೇಜಿಸಲು ಅದು ಕೈಗೊಂಡ ಉಪಕ್ರಮಗಳಾದ ಅಂತಾರಾಷ್ಟ್ರೀಯ ಸೌರ ಒಕ್ಕೂಟ, ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯಕ್ಕಾಗಿ ಒಕ್ಕೂಟ, ಜಾಗತಿಕ ಜೈವಿಕ ಇಂಧನ ಒಕ್ಕೂಟ, ಅಂತರರಾಷ್ಟ್ರೀಯ ಬಿಗ್ ಕ್ಯಾಟ್ ಒಕ್ಕೂಟ, ಮಿಷನ್ ಲೈಫ್, ತಾಯಿಯ ಹೆಸರಿನಲ್ಲಿ ಒಂದು ಗಿಡ ಇತ್ಯಾದಿಗಳ ಬಗ್ಗೆ ವಿವರಿಸಿದರು.ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯದ ಕುರಿತಾದ ಬ್ರಿಕ್ಸ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
July 07th, 11:13 pm
ಬ್ರೆಜಿಲ್ ಅಧ್ಯಕ್ಷತೆಯಲ್ಲಿ ಬ್ರಿಕ್ಸ್, ಪರಿಸರ ಮತ್ತು ಆರೋಗ್ಯ ಸುರಕ್ಷತೆಯಂತಹ ಪ್ರಮುಖ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದು ನನಗೆ ಸಂತೋಷ ತಂದಿದೆ. ಈ ವಿಷಯಗಳು ಪರಸ್ಪರ ಸಂಬಂಧ ಹೊಂದಿರುವುದು ಮಾತ್ರವಲ್ಲ ಮಾನವೀಯತೆಯ ಉಜ್ವಲ ಭವಿಷ್ಯಕ್ಕೂ ಸಹ ಬಹಳ ಮುಖ್ಯವಾಗಿವೆ.