ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
February 24th, 10:35 am
ಮೊದಲನೆಯದಾಗಿ, ನಾನು ಇಲ್ಲಿಗೆ ಬರುವುದರಲ್ಲಿ ವಿಳಂಬವಾದದ್ದಕ್ಕೆ ಕ್ಷಮೆಯಿರಲಿ. ನಿನ್ನೆ ನಾನು ಇಲ್ಲಿಗೆ ಬಂದಾಗ, ಇಂದು 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿವೆ ಎಂದು ತಿಳಿಯಿತು. ರಾಜಭವನದಿಂದ ನಾನು ಹೊರಡುವ ಸಮಯ ಮತ್ತು ಅವರ ಪರೀಕ್ಷೆಯ ಸಮಯ ಒಂದೇ ಆಗುತ್ತಿತ್ತು. ಭದ್ರತಾ ಕಾರಣಗಳಿಂದ ರಸ್ತೆಗಳನ್ನು ಮುಚ್ಚಿದರೆ, ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳಿಗೆ ತಲುಪಲು ತೊಂದರೆಯಾಗುವ ಸಾಧ್ಯತೆ ಇತ್ತು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದೆಂದು, ಎಲ್ಲಾ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು ತಲುಪಿದ ನಂತರವೇ ರಾಜಭವನದಿಂದ ಹೊರಡಲು ನಿರ್ಧರಿಸಿದೆ. ಆದ್ದರಿಂದ, ನಾನು ಉದ್ದೇಶಪೂರ್ವಕವಾಗಿ 15-20 ನಿಮಿಷಗಳ ಕಾಲ ನನ್ನ ಹೊರಡುವಿಕೆಯನ್ನು ವಿಳಂಬ ಮಾಡಿದೆ. ಇದರಿಂದ ನಿಮಗೆಲ್ಲರಿಗೂ ಸ್ವಲ್ಪ ಅನಾನುಕೂಲವಾಯಿತು. ಮತ್ತೊಮ್ಮೆ ನಿಮ್ಮೆಲ್ಲರಿಗೂ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು
February 24th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ (ಜಿಐಎಸ್) 2025 ಅನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳು ಇದ್ದುದರಿಂದ ಮತ್ತು ಕಾರ್ಯಕ್ರಮಕ್ಕೆ ಬರುವ ದಾರಿಯಲ್ಲಿ ತಮ್ಮ ಭದ್ರತಾ ಕ್ರಮಗಳು ವಿದ್ಯಾರ್ಥಿಗಳಿಗೆ ಅನಾನುಕೂಲತೆಯನ್ನುಂಟುಮಾಡಬಹುದಾಗಿದ್ದರಿಂದ ಕಾರ್ಯಕ್ರಮಕ್ಕೆ ಬರುವುದು ವಿಳಂಬವಾಗಿದ್ದಕ್ಕಾಗಿ ಕ್ಷಮೆಯಾಚಿಸಿದರು. ರಾಜ ಭೋಜ ಭೂಮಿಗೆ ಹೂಡಿಕೆದಾರರು ಮತ್ತು ವ್ಯಾಪಾರ ನಾಯಕರನ್ನು ಸ್ವಾಗತಿಸುವುದು ನನಗೆ ಅತ್ಯಂತ ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ದು ಹೇಳಿದರು. ವಿಕಸಿತ ಮಧ್ಯಪ್ರದೇಶ ಅಥವಾ ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶವು ವಿಕಸಿತ ಭಾರತದತ್ತ ಪ್ರಯಾಣದಲ್ಲಿ ಅಗತ್ಯವಾಗಿರುವುದರಿಂದ ಇಂದಿನ ಕಾರ್ಯಕ್ರಮವು ಮುಖ್ಯವಾಗಿದೆ ಎಂದು ಅವರು ಹೇಳಿದರು. ಶೃಂಗಸಭೆಯ ಅದ್ಭುತ ಸಂಘಟನೆಗಾಗಿ ಅವರು ಮಧ್ಯಪ್ರದೇಶ ಸರ್ಕಾರವನ್ನು ಅಭಿನಂದಿಸಿದರು.ಫೆಬ್ರವರಿ 23 ರಿಂದ 25 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
February 22nd, 02:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 23 ರಿಂದ 25, 2025 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 23, 2025 ರಂದು, ಅವರು ಮಧ್ಯಪ್ರದೇಶದ ಛತ್ತರ್ ಪುರ ಜಿಲ್ಲೆಯಲ್ಲಿ ಪ್ರಯಾಣಿಸಲಿದ್ದಾರೆ ಮತ್ತು ಅಂದು ಮಧ್ಯಾಹ್ನ 2 ಗಂಟೆಗೆ, ಪ್ರಧಾನಮಂತ್ರಿಯವರು ಬಾಗೇಶ್ವರ್ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಫೆಬ್ರವರಿ 24 ,2025 ರಂದು, ಸುಮಾರು 10 ಗಂಟೆಗೆ, ಪ್ರಧಾನಮಂತ್ರಿಯವರು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಲಿದ್ದಾರೆ. ನಂತರ, ಅವರು ಬಿಹಾರದ ಭಾಗಲ್ಪುರಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 2:15 ರ ಸುಮಾರಿಗೆ, ಪ್ರಧಾನಮಂತ್ರಿಯವರು ಪಿಎಂ ಕಿಸಾನ್ ಯೋಜನೆಯ 19 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ ಮತ್ತು ಬಿಹಾರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಹಾಗೂ ಆನಂತರ ಅವರು ಅಸ್ಸಾಂನ ಗುವಾಹಟಿಗೆ ಪ್ರಯಾಣಿಸಲಿದ್ದಾರೆ ಮತ್ತು ಸಂಜೆ 6 ಗಂಟೆಗೆ ಅವರು ಜುಮೋಯಿರ್ ಬಿನಂದಿನಿ (ಮೆಗಾ ಜುಮೋಯಿರ್) 2025 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ 25 ರಂದು, ಬೆಳಗ್ಗೆ ಸುಮಾರು 10:45 ಗಂಟೆಗೆ, ಪ್ರಧಾನಮಂತ್ರಿಯವರು ಗುವಾಹಟಿಯಲ್ಲಿ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025 ಅನ್ನು ಉದ್ಘಾಟಿಸಲಿದ್ದಾರೆ.