ಮಲೇಷ್ಯಾಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ: ಫಲಪ್ರದತೆಯ ವಿವರ
February 08th, 11:05 am
ಭಾರತ ಸರ್ಕಾರ ಮತ್ತು ಮಲೇಷ್ಯಾ ಸರ್ಕಾರದ ನಡುವೆ ದೃಶ್ಯ-ಶ್ರಾವ್ಯ ಸಹ ನಿರ್ಮಾಣ ಒಪ್ಪಂದಮಲೇಷ್ಯಾ ಪ್ರಧಾನಮಂತ್ರಿ ಅವರ ಜೊತೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
February 08th, 08:35 am
ಮೊದಲನೆಯದಾಗಿ, ಆತ್ಮೀಯ ಸ್ವಾಗತಕ್ಕಾಗಿ ನನ್ನ ಆಪ್ತ ಮಿತ್ರರಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕಳೆದ ವರ್ಷ, ಆಸಿಯಾನ್ (ASEAN) ಶೃಂಗಸಭೆಯ ಸಂದರ್ಭದಲ್ಲಿ ನನಗೆ ಮಲೇಷ್ಯಾಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಆದರೆ ಶೀಘ್ರದಲ್ಲೇ ಮಲೇಷ್ಯಾಕ್ಕೆ ಬರುತ್ತೇನೆ ಎಂದು ನಾನು ನನ್ನ ಪ್ರಿಯ ಮಿತ್ರರಿಗೆ ಮಾತು ಕೊಟ್ಟಿದ್ದೆ. ಅದರಂತೆ ಇಂದು, 2026ರ ಸಾಲಿನ ನನ್ನ ಮೊದಲ ವಿದೇಶಿ ಪ್ರವಾಸದ ಅಂಗವಾಗಿ ನಾನು ಮಲೇಷ್ಯಾದಲ್ಲಿದ್ದೇನೆ.ಭಾರತದ ಪ್ರಧಾನಮಂತ್ರಿ ಅವರು ಮಲೇಷ್ಯಾಕ್ಕೆ ನೀಡಿದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ - ಮಲೇಷ್ಯಾ ಜಂಟಿ ಹೇಳಿಕೆ
February 08th, 08:30 am
ಮಲೇಷ್ಯಾ ಪ್ರಧಾನಮಂತ್ರಿ ಗೌರವಾನ್ವಿತ ಡಾಟೋ ಸೆರಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 7 ರಿಂದ 8 ರವರೆಗೆ ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡಿದರು. ಈ ಭೇಟಿಯು ಉಭಯ ದೇಶಗಳ ನಡುವಿನ ನಾಗರಿಕ ಸಂಬಂಧಗಳ ಆಧಾರದ ಮೇಲೆ ಆಳವಾಗಿ ಬೇರೂರಿರುವ ಸ್ನೇಹ ಮತ್ತು ಜನರ ನಡುವಿನ ಸುದೀರ್ಘ ಬಾಂಧವ್ಯವನ್ನು ಪ್ರತಿಫಲಿಸುತ್ತದೆ. ಭಾರತ-ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ವಿಸ್ತರಿಸಲು ಉಭಯ ನಾಯಕರ ಹಂಚಿಕೆಯ ಬದ್ಧತೆಯನ್ನು ಇದು ಪುನರುಚ್ಚರಿಸಿದೆ.ಅಕ್ಟೋಬರ್ 29ರಂದು ಮುಂಬೈಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 27th, 10:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಅಕ್ಟೋಬರ್ 29ರಂದು ಮುಂಬೈಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಸಂಜೆ 4:00 ಗಂಟೆಗೆ ಮುಂಬೈನ ನೆಸ್ಕೊ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯಲಿರುವ ಭಾರತ ಕಡಲ ಸಪ್ತಾಹ 2025ರಲ್ಲಿ ಜಾಗತಿಕ ಕಡಲ ಸಿ.ಇ.ಒ ವೇದಿಕೆಯ ಅಧ್ಯಕ್ಷತೆ ವಹಿಸಲಿದ್ದಾರೆ.