ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ "ಎಲ್ಲರಿಗೂ ಸಮತೋಲಿತ, ಹಂಚಿಕೆಯ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸುವ" ಎಂಬ ವಿಷಯದ ಕುರಿತು ಪ್ರಧಾನಮಂತ್ರಿ ಅವರ ಭಾಷಣ

June 18th, 05:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಎಲ್ಲರಿಗೂ ಸಮತೋಲಿತ, ಹಂಚಿಕೆಯ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸುವ ಎಂಬ ವಿಷಯದ ಕುರಿತ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು.

ಜಿ-7 ಶೃಂಗಸಭೆ-ಜನಸಂಪರ್ಕ ಅಧಿವೇಶನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಇಂಗ್ಲಿಷ್ ಅನುವಾದ: ಎಲ್ಲರಿಗೂ ಸಮತೋಲಿತ, ಹಂಚಿಕೆಯ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸುವುದು

June 17th, 06:07 pm

ಫ್ರಾನ್ಸ್‌ನ ಜಿ-7 ಅಧ್ಯಕ್ಷತೆಯು ಎಲ್ಲರನ್ನೂ ಒಳಗೊಳ್ಳುವ ಮತ್ತು ಸುಸ್ಥಿರ ಬೆಳವಣಿಗೆಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡಿದೆ ಎಂಬುದು ನನಗೆ ಸಂತೋಷ ತಂದಿದೆ. ಜಗತ್ತು ಅನೇಕ ಸವಾಲುಗಳು ಮತ್ತು ಅನಿಶ್ಚಿತತೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ, ಈ ವೇದಿಕೆಯಿಂದ ಹೊರಹೊಮ್ಮುವ ಸಂದೇಶವು ಎಲ್ಲಾ ಮಾನವೀಯತೆಯ ಯೋಗಕ್ಷೇಮ ಮತ್ತು ಭವಿಷ್ಯಕ್ಕೆ ಮುಖ್ಯವಾಗಿದೆ.

ಗುಜರಾತ್‌ನ ಸೂರತ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

June 05th, 04:30 pm

ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಾಂಘ್ವಿ, ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ ಮತ್ತು ಸೂರತ್‌ನ ನನ್ನ ಆತ್ಮೀಯ ಸಹೋದರ ಸಹೋದರಿಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಸೂರತ್ ನಲ್ಲಿ ₹18,800 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಿದರು

June 05th, 04:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಗುಜರಾತ್ ನ ಜನತೆ ನೀಡುತ್ತಿರುವ ಅಚಲ ಬೆಂಬಲಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ನಾನು ಮೊದಲ ಬಾರಿಗೆ ಸೂರತ್ ಗೆ ಭೇಟಿ ನೀಡುತ್ತಿದ್ದೇನೆ. ಸೂರತ್ ನಿಂದ ನಾನು ಇಡೀ ಗುಜರಾತ್ ನ ಜನತೆಗೆ ನಮಸ್ಕರಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.

ಪ್ರಧಾನಮಂತ್ರಿ ಅವರಿಂದ ಇಟಲಿ ಅಧ್ಯಕ್ಷರ ಭೇಟಿ

May 20th, 07:19 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರೋಮ್ ನ ಅಧ್ಯಕ್ಷರ ಅರಮನೆಯಾದ ಕ್ವಿರಿನಾಲೆಯಲ್ಲಿ ಇಟಲಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಸೆರ್ಗಿಯೋ ಮಟ್ಟರೆಲ್ಲಾ ಅವರನ್ನು ಭೇಟಿ ಮಾಡಿದರು.

ಯುಎಇ, ನೆದರ್‌ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಭೇಟಿ ನೀಡುವ ಮುನ್ನ ಪ್ರಧಾನ ಮಂತ್ರಿಯವರ ನಿರ್ಗಮನ ಹೇಳಿಕೆ

May 15th, 07:56 am

ಪ್ರಧಾನಿ ಮೋದಿ ಅವರು 2026 ರ ಮೇ 15 ರಿಂದ 20 ರವರೆಗೆ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಐದು ರಾಷ್ಟ್ರಗಳ ಭೇಟಿಯನ್ನು ಕೈಗೊಳ್ಳಲಿದ್ದಾರೆ. ಈ ಭೇಟಿಯ ಸಮಯದಲ್ಲಿ ಅವರು ವಿವಿಧ ರಾಷ್ಟ್ರಗಳ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದಾರೆ ಮತ್ತು ಪ್ರಮುಖ ವಲಯಗಳಲ್ಲಿ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆಗಳನ್ನು ನಡೆಸಲಿದ್ದಾರೆ. ಸ್ವೀಡನ್‌ನಲ್ಲಿ ಕೈಗಾರಿಕೆಗಾಗಿ ಯುರೋಪಿಯನ್ ದುಂಡು ಮೇಜಿನ ಸಭೆಯಲ್ಲಿ ಮತ್ತು ಓಸ್ಲೋದಲ್ಲಿ ನಡೆಯುವ 3 ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುವುದು ಈ ಭೇಟಿಯ ಪ್ರಮುಖ ಅಂಶಗಳಾಗಿವೆ.

ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿಯವರ ಭೇಟಿ (ಮೇ 15 - 20, 2026)

May 11th, 09:00 pm

ಮೇ 15 ರಿಂದ ಮೇ 20, 2026 ರವರೆಗೆ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ನೆದರ್ಲ್ಯಾಂಡ್ಸ್‌ನಲ್ಲಿ, ಪ್ರಧಾನಿ ರಾಜ ವಿಲ್ಲೆಮ್-ಅಲೆಕ್ಸಾಂಡರ್ ಅವರನ್ನು ಭೇಟಿ ಮಾಡಿ ಪ್ರಧಾನಿ ರಾಬ್ ಜೆಟ್ಟನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸ್ವೀಡನ್‌ನಲ್ಲಿ, ಅವರು ಪ್ರಧಾನಿ ಕ್ರಿಸ್ಟರ್ಸನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಾರ್ವೆಯಲ್ಲಿ, ಅವರು ಕಿಂಗ್ ಹೆರಾಲ್ಡ್ V ಅವರನ್ನು ಭೇಟಿ ಮಾಡಿ ಪ್ರಧಾನಿ ಜೋನಾಸ್ ಗಹರ್ ಸ್ಟೋರೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ನಂತರ, ಅವರು ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಮಾತುಕತೆ ನಡೆಸಲು ಇಟಲಿಗೆ ಭೇಟಿ ನೀಡಲಿದ್ದಾರೆ.

ಮುಂಬೈನಲ್ಲಿ ನಡೆದ 'ಕಡಲಯಾನ ನಾಯಕರ ಸಮಾವೇಶ'ದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 29th, 04:09 pm

ಮಹಾರಾಷ್ಟ್ರದ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರೇ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಸರ್ಬಾನಂದ ಸೋನೊವಾಲ್ ಅವರೇ, ಶಂತನು ಠಾಕೂರ್ ಅವರೇ ಮತ್ತು ಕೀರ್ತಿವರ್ಧನ್ ಸಿಂಗ್ ಅವರೇ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಅವರೇ ಮತ್ತು ಅಜಿತ್ ಪವಾರ್ ಅವರೇ, ಸಮುದ್ರಯಾನ ಮತ್ತು ಇತರ ಉದ್ಯಮಗಳ ಪ್ರಮುಖರೇ, ಇತರ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು

October 29th, 04:08 pm

ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಜಾಗತಿಕ ಕಡಲ ಸಿಇಒ ವೇದಿಕೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ಕಡಲ ನಾಯಕರ ಸಮಾವೇಶಕ್ಕೆ ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿದರು. ಈ ಕಾರ್ಯಕ್ರಮವು 2016ರಲ್ಲಿ ಮುಂಬೈನಲ್ಲಿ ಪ್ರಾರಂಭವಾಯಿತು ಮತ್ತು ಇದೀಗ ಇದು ಜಾಗತಿಕ ಶೃಂಗಸಭೆಯಾಗಿ ವಿಕಸನಗೊಂಡಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. 85ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆಯು ಬಲವಾದ ಸಂದೇಶವನ್ನು ಕಳುಹಿಸುತ್ತದೆ ಎಂದು ಶ್ರೀ ಮೋದಿ ಬಣ್ಣಿಸಿದರು. ನೌಕಾ ಸಾರಿಗೆ ದಿಗ್ಗಜರ ಸಿಇಒಗಳು, ಸ್ಟಾರ್ಟ್‌ ಅಪ್‌ ಗಳು, ನೀತಿ ನಿರೂಪಕರು ಮತ್ತು ನಾವೀನ್ಯಕಾರರು ಎಲ್ಲರೂ ಈ ಕಾರ್ಯಕ್ರಮದಲ್ಲಿ ಒಗ್ಗೂಡಿರುವುದನ್ನು ಅವರು ಗಮನಿಸಿದರು. ಇದಲ್ಲದೆ, ಸಣ್ಣ ದ್ವೀಪ ರಾಷ್ಟ್ರಗಳ ಪ್ರತಿನಿಧಿಗಳ ಹಾಜರಾತಿಯನ್ನು ಅವರು ಶ್ಲಾಘಿಸಿದರು ಮತ್ತು ಅವರ ಸಾಮೂಹಿಕ ದೃಷ್ಟಿಕೋನವು ಶೃಂಗಸಭೆಯ ಪರಸ್ಪರ ಸಹಕಾರ ಮತ್ತು ಶಕ್ತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ ಎಂದು ಹೇಳಿದರು.

ಮೇ 1 ಮತ್ತು 2ರಂದು ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರ ಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ

April 30th, 03:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 1 ಮತ್ತು 2ರಂದು ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಮೇ 1ರಂದು ಮುಂಬೈಗೆ ಪ್ರಯಾಣಿಸಲಿದ್ದು, ಬೆಳಗ್ಗೆ 10.30ರ ಸುಮಾರಿಗೆ ವಿಶ್ವ ದೃಶ್ಯ ಶ್ರವಣ ಮತ್ತು ಮನರಂಜನಾ ಶೃಂಗಸಭೆ(ವೇವ್ಸ್-WAVES) ಉದ್ಘಾಟಿಸಲಿದ್ದಾರೆ.

ಈ ವಾರ ಭಾರತದ ಬಗ್ಗೆ ವಿಶ್ವ

March 26th, 12:06 pm

ಭಾರತವು ರಕ್ಷಣೆ ಮತ್ತು ತಂತ್ರಜ್ಞಾನದಿಂದ ಜಾಗತಿಕ ವ್ಯಾಪಾರ ಮತ್ತು ರಾಜತಾಂತ್ರಿಕತೆಯವರೆಗೆ ವಿವಿಧ ಕ್ಷೇತ್ರಗಳಲ್ಲಿ ಅಲೆಗಳನ್ನು ಸೃಷ್ಟಿಸುತ್ತಿದೆ. ಈ ವಾರ, ದೇಶವು ತನ್ನ ನೌಕಾ ಶಕ್ತಿಯನ್ನು ಬಲಪಡಿಸುತ್ತಿದೆ, ಭವಿಷ್ಯದ ಸಾರಿಗೆಯನ್ನು ಅಳವಡಿಸಿಕೊಳ್ಳುತ್ತಿದೆ ಮತ್ತು ಜಾಗತಿಕ ಪಾಲುದಾರರೊಂದಿಗೆ ಆರ್ಥಿಕ ಸಂಬಂಧಗಳನ್ನು ನಿರ್ಮಿಸುತ್ತಿದೆ.

ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

December 06th, 02:10 pm

ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!

ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 06th, 02:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.

ಜರ್ಮನ್ ಬ್ಯುಸಿನೆಸಸ್‌ ಕುರಿತಾದ 18ನೇ ಏಷ್ಯಾ ಫೆಸಿಪಿಕ್ ಸಮ್ಮೇಳನ (ಎಪಿಕೆ 2024)ನಲ್ಲಿ ಪ್ರಧಾನಮಂತ್ರಿ ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅನುವಾದ

October 25th, 11:20 am

ಮೊದಲ ಭೇಟಿಯು ಅವರು ಮೇಯರ್ ಆಗಿದ್ದಾಗ ಮತ್ತು ನಂತರದ ಮೂರು ಭೇಟಿಗಳು ಅವರು ಚಾನ್ಸೆಲರ್ ಆದ ನಂತರ. ಇದು ಭಾರತ-ಜರ್ಮನಿ ಸಂಬಂಧಗಳ ಮೇಲೆ ಅವರ ಹೆಚ್ಚಿನ ಗಮನ ಹರಿಸುತ್ತಿರುವುದನ್ನು ಎತ್ತಿ ತೋರಿಸುತ್ತದೆ.