ಇಥಿಯೋಪಿಯಾ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 17th, 12:25 pm
ಪುರಾತನ ಜ್ಞಾನ ಮತ್ತು ಆಧುನಿಕ ಆಕಾಂಕ್ಷೆಗಳನ್ನು ಹೊಂದಿರುವ ರಾಷ್ಟ್ರದ ಹೃದಯಭಾಗದಲ್ಲಿರುವ ಈ ಪ್ರಜಾಪ್ರಭುತ್ವದ ದೇವಾಲಯದಲ್ಲಿ ಉಪಸ್ಥಿತರಿರುವುದು ನನಗೆ ಗೌರವದ ಸಂಗತಿಯಾಗಿದೆ. ನಿಮ್ಮ ಸಂಸತ್ತು, ನಿಮ್ಮ ಜನತೆ ಮತ್ತು ನಿಮ್ಮ ಪ್ರಜಾಪ್ರಭುತ್ವದ ಪಯಣದ ಬಗ್ಗೆ ಅಪಾರ ಗೌರವವನ್ನಿಟ್ಟುಕೊಂಡು ನಾನು ಇಲ್ಲಿಗೆ ಬಂದಿದ್ದೇನೆ. ಭಾರತದ 140 ಕೋಟಿ ಜನರ ಪರವಾಗಿ, ನಾನು ಸ್ನೇಹ, ಸದ್ಭಾವನೆ ಮತ್ತು ಸಹೋದರತ್ವದ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ.ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 17th, 12:12 pm
ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. - ರೈತರು, ಉದ್ಯಮಿಗಳು, ಹೆಮ್ಮೆಯ ಮಹಿಳೆಯರು ಮತ್ತು ಯುವಜನರು - ದೇಶದ ಭವಿಷ್ಯವನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಥಿಯೋಪಿಯಾದ ಗ್ರೇಟ್ ಹಾನರ್ ನಿಶಾನ್ ಎಂಬ ಅತ್ಯುನ್ನತ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಅವರು ಇಥಿಯೋಪಿಯಾದ ಜನರು ಮತ್ತು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಸಂಬಂಧದ ಮಹತ್ವವನ್ನು ಪರಿಗಣಿಸಿ, ಭೇಟಿಯ ಸಮಯದಲ್ಲಿ ಎರಡೂ ದೇಶಗಳ ನಡುವಿನ ಹಳೆಯ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿ ಉನ್ನತೀಕರಿಸಲಾಗಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು ಇದಕ್ಕೆ ತಮ್ಮ ಸಂತೃಪ್ತಿಯನ್ನು ವ್ಯಕ್ತಪಡಿಸಿದರು.ಇಥಿಯೋಪಿಯಾದ ಅತ್ಯುನ್ನತ ಗೌರವ ಪ್ರದಾನದ ನಂತರ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
December 17th, 09:25 am
ಇಂದು ಇಥಿಯೋಪಿಯಾದ ಈ ಭವ್ಯ ನಾಡಿನಲ್ಲಿ, ನಿಮ್ಮೆಲ್ಲರ ನಡುವೆ ಇರುವುದು ನನಗೆ ದೊರೆತ ಸೌಭಾಗ್ಯವಾಗಿದೆ. ನಾನು ಇಂದು ಮಧ್ಯಾಹ್ನವಷ್ಟೇ ಇಥಿಯೋಪಿಯಾಗೆ ಆಗಮಿಸಿದೆ. ಇಲ್ಲಿಗೆ ಕಾಲಿಟ್ಟ ಕ್ಷಣದಿಂದಲೇ, ಇಲ್ಲಿನ ಜನರಿಂದ ಅಪಾರವಾದ ಪ್ರೀತಿ ಮತ್ತು ಅನ್ಯೋನ್ಯತೆಯನ್ನು ನಾನು ಅನುಭವಿಸಿದ್ದೇನೆ. ಸ್ವತಃ ಪ್ರಧಾನ ಮಂತ್ರಿಗಳೇ ವಿಮಾನ ನಿಲ್ದಾಣಕ್ಕೆ ಬಂದು ನನ್ನನ್ನು ಬರಮಾಡಿಕೊಂಡರು ಹಾಗೂ ನನ್ನನ್ನು 'ಫ್ರೆಂಡ್ಶಿಪ್ ಪಾರ್ಕ್' ಮತ್ತು 'ವಿಜ್ಞಾನ ವಸ್ತುಸಂಗ್ರಹಾಲಯ'ಕ್ಕೆ ಕರೆದೊಯ್ದರು.ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ಪ್ರಧಾನಮಂತ್ರಿ
December 16th, 11:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 16ರಿಂದ 17ರವರೆಗೆ ಇಥಿಯೋಪಿಯಾಕ್ಕೆ ತಮ್ಮ ಮೊದಲ ದ್ವಿಪಕ್ಷೀಯ ಭೇಟಿ ಕೈಗೊಂಡರು. ಇಂದು ಅಡಿಸ್ ಇಂಟರ್‌ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ಲ್ಲಿ ಆಯೋಜಿಸಿದ್ದ ವಿಶೇಷ ಸಮಾರಂಭದಲ್ಲಿ, ಇಥಿಯೋಪಿಯಾದ ಪ್ರಧಾನಮಂತ್ರಿ ಘನತೆವೆತ್ತ ಡಾ. ಅಬಿ ಅಹ್ಮದ್ ಅವರು ಭಾರತ-ಇಥಿಯೋಪಿಯಾ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆ ನೀಡಿದ ಹಾಗೂ ಜಾಗತಿಕ ರಾಜಕಾರಣಿಯಾಗಿ ದೂರದೃಷ್ಟಿಯ ನಾಯಕತ್ವಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿಯಾದ 'ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ' ಅನ್ನು ಪ್ರದಾನ ಮಾಡಿದರು.