ಗ್ರೇಟರ್ ನೋಯ್ಡಾದಲ್ಲಿ “ಉತ್ತರ ಪ್ರದೇಶದ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ”ದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 25th, 10:22 am

ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ಉತ್ತರ ಪ್ರದೇಶದ ಸರ್ಕಾರದ ಸಚಿವರುಗಳೆ, ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರಾದ ಭೂಪೇಂದ್ರ ಚೌಧರಿ ಜಿ, ಉದ್ಯಮದ ಎಲ್ಲಾ ಸ್ನೇಹಿತರೆ, ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡಿದರು

September 25th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಆಯೋಜಿಸಲಾದ 'ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ 2025'ಕ್ಕೆ ಚಾಲನೆ ನೀಡಿ, ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಈ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಸಮಸ್ತ ವ್ಯಾಪಾರಿಗಳು, ಹೂಡಿಕೆದಾರರು, ಉದ್ಯಮಿಗಳು ಹಾಗೂ ಯುವ ಪ್ರತಿನಿಧಿಗಳನ್ನು ಪ್ರಧಾನಮಂತ್ರಿಯವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಪ್ರದರ್ಶನದಲ್ಲಿ 2,200ಕ್ಕೂ ಅಧಿಕ ಪ್ರದರ್ಶಕರು ತಮ್ಮ ಉತ್ಪನ್ನಗಳು ಮತ್ತು ಸೇವೆಗಳನ್ನು ಅನಾವರಣಗೊಳಿಸುತ್ತಿರುವುದು ಅತ್ಯಂತ ಸಂತಸದ ವಿಷಯ ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಈ ಬಾರಿಯ ವ್ಯಾಪಾರ ಪ್ರದರ್ಶನಕ್ಕೆ 'ರಷ್ಯಾ' ಪಾಲುದಾರ ರಾಷ್ಟ್ರವಾಗಿರುವುದು, ಉಭಯ ದೇಶಗಳ ನಡುವಿನ ಕಾಲಪರೀಕ್ಷಿತ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದರ ದ್ಯೋತಕವಾಗಿದೆ ಎಂದು ಶ್ರೀ ಮೋದಿಯವರು ವಿಶೇಷವಾಗಿ ಪ್ರಸ್ತಾಪಿಸಿದರು. ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅವರ ಸರ್ಕಾರದ ಸಹೋದ್ಯೋಗಿಗಳು ಮತ್ತು ಇತರ ಎಲ್ಲ ಪಾಲುದಾರರಿಗೆ ಅಭಿನಂದನೆ ಸಲ್ಲಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳಿಗೆಯಾದ 'ಅಂತ್ಯೋದಯ'ದ ಪಥವನ್ನು ದೇಶಕ್ಕೆ ತೋರಿದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜಯಂತಿಯಂದೇ ಈ ಶುಭ ಸಂದರ್ಭ ಒದಗಿ ಬಂದಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿದರು. ಅಂತ್ಯೋದಯದ ನಿಜವಾದ ಅರ್ಥವೇ, ಅಭಿವೃದ್ಧಿಯ ಫಲಗಳು ಸಮಾಜದ ಅತ್ಯಂತ ಬಡವರನ್ನೂ ತಲುಪುವಂತೆ ಮಾಡುವುದು ಮತ್ತು ಎಲ್ಲ ಬಗೆಯ ತಾರತಮ್ಯವನ್ನು ನಿರ್ಮೂಲನೆ ಮಾಡುವುದಾಗಿದೆ ಎಂದು ಅವರು ಪ್ರತಿಪಾದಿಸಿದರು. ಭಾರತವು ಇದೀಗ ಇದೇ ಸಮಗ್ರ ಅಭಿವೃದ್ಧಿ ಮಾದರಿಯನ್ನು ಇಡೀ ವಿಶ್ವಕ್ಕೆ ಅರ್ಪಿಸುತ್ತಿದೆ ಎಂದು ಅವರು ಹೆಮ್ಮೆಯಿಂದ ನುಡಿದರು.

ಪ್ರಧಾನಮಂತ್ರಿ ಅವರು ಸೆಪ್ಟೆಂಬರ್ 25 ರಂದು ಉತ್ತರ ಪ್ರದೇಶ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ

September 24th, 06:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 25 ರಂದು ಉತ್ತರ ಪ್ರದೇಶ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 9:30ರ ಸುಮಾರಿಗೆ ಗ್ರೇಟರ್ ನೋಯ್ಡಾದಲ್ಲಿ “ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ-2025” ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದ ಸೆಮಿಕಾನ್ ಇಂಡಿಯಾ-2024 ಸಮ್ಮೇಳನದಲ್ಲಿ ಭಾರತ ಮತ್ತು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಉನ್ನತ ಸೆಮಿಕಂಡಕ್ಟರ್ ಕಂಪನಿಗಳ ಸಿಇಒಗಳು

September 11th, 04:28 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿಂದು ಇಂಡಿಯಾ ಎಕ್ಸ್‌ಪೋ ಮಾರ್ಟ್‌ನಲ್ಲಿ ಆಯೋಜಿಸಿದ್ದ ಸೆಮಿಕಾನ್ ಇಂಡಿಯಾ-2024 ಸಮ್ಮೇಳನ ಉದ್ಘಾಟಿಸಿದರು. ಸೆಮಿಕಾನ್ ಇಂಡಿಯಾ-2024 ಸೆಪ್ಟೆಂಬರ್ 11ರಿಂದ 13ರ ವರೆಗೆ 'ಸೆಮಿಕಂಡಕ್ಟರ್ ಭವಿಷ್ಯವನ್ನು ರೂಪಿಸುವುದು' ಎಂಬ ವಸ್ತು ವಿಷಯದೊಂದಿಗೆ ಆಯೋಜಿಸಲಾಗಿದೆ. 3 ದಿನಗಳ ಈ ಸಮ್ಮೇಳನವು ಭಾರತದ ಸೆಮಿಕಂಡಕ್ಟರ್ ಕಾರ್ಯತಂತ್ರ ಮತ್ತು ನೀತಿಗಳನ್ನು ಪ್ರದರ್ಶಿಸುತ್ತದೆ, ಇದು ಭಾರತವನ್ನು ಸೆಮಿಕಂಡಕ್ಟರ್‌ ವಲಯದ ಜಾಗತಿಕ ತಾಣವಾಗಿ ರೂಪಿಸುತ್ತದೆ. ಜಾಗತಿಕ ಸೆಮಿಕಂಡಕ್ಟರ್ ವಲಯದ ಉನ್ನತ ನಾಯಕತ್ವವು ಸಮ್ಮೇಳನದಲ್ಲಿ ಭಾಗವಹಿಸುತ್ತಿದೆ. ಇದು ಜಾಗತಿಕ ನಾಯಕರು, ಕಂಪನಿಗಳು ಮತ್ತು ಸೆಮಿಕಂಡಕ್ಟರ್ ಉದ್ಯಮದ ತಜ್ಞರನ್ನು ಒಟ್ಟುಗೂಡಿಸುತ್ತದೆ. ಸಮ್ಮೇಳನದಲ್ಲಿ 250ಕ್ಕೂ ಹೆಚ್ಚು ಪ್ರದರ್ಶಕರು ಮತ್ತು 150 ಭಾಷಣಕಾರರು ಭಾಗವಹಿಸುತ್ತಿದ್ದಾರೆ.

ಸೆಪ್ಟೆಂಬರ್ 11ರಂದು ಸೆಮಿಕಾನ್ ಇಂಡಿಯಾ 2024ನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿಯವರು

September 09th, 08:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 2024ರ ಸೆಪ್ಟೆಂಬರ್ 11ರಂದು ಬೆಳಿಗ್ಗೆ 10:30ರ ಸುಮಾರಿಗೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ ಪೋ ಮಾರ್ಟ್ ನಲ್ಲಿ ಸೆಮಿಕಾನ್ ಇಂಡಿಯಾ 2024ನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣವನ್ನು ಕೂಡಾ ಮಾಡಲಿದ್ದಾರೆ.