3ನೇ ಭಾರತ-ನಾರ್ಡಿಕ್ ಶೃಂಗಸಭೆಯ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
May 19th, 04:25 pm
ಇಂದು 3ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವುದು ನನಗೆ ತುಂಬಾ ಸಂತೋಷ ತಂದಿದೆ. ಮೊದಲನೆಯದಾಗಿ, ಈ ಶೃಂಗಸಭೆ ಆಯೋಜಿಸಿದ್ದಕ್ಕಾಗಿ ನಾರ್ವೆ ಪ್ರಧಾನಮಂತ್ರಿ ಅವರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಇಲ್ಲಿ ಉಪಸ್ಥಿತರಿರುವ ಎಲ್ಲಾ ನಾರ್ಡಿಕ್ ನಾಯಕರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.ಸ್ವೀಡನ್ ಪ್ರಧಾನಮಂತ್ರಿ ಜತೆ ಪ್ರಧಾನಮಂತ್ರಿ ದ್ವಿಪಕ್ಷೀಯ ಮಾತುಕತೆ
May 18th, 12:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವೀಡನ್‌ನ ಗೋಥೆನ್‌ಬರ್ಗ್‌ನಲ್ಲಿ ಅಲ್ಲಿನ ಪ್ರಧಾನಮಂತ್ರಿ ಶ್ರೀ ಉಲ್ಫ್ ಕ್ರಿಸ್ಟರ್ಸನ್ ಅವರೊಂದಿಗೆ ದ್ವಿಪಕ್ಷೀಯ ಸಮಾಲೋಚನೆ ನಡೆಸಿದರು. ಸ್ವೀಡನ್‌ನ ರಾಜಕುಮಾರಿ(ಯುವರಾಣಿ) ವಿಕ್ಟೋರಿಯಾ ಕೂಡ ಸಭೆಯಲ್ಲಿ ಭಾಗವಹಿಸಿ, ದೊರೆ ಕಾರ್ಲ್ XVI ಗುಸ್ತಾಫ್ ಮತ್ತು ರಾಜಪತ್ನಿ (ರಾಣಿ) ಸಿಲ್ವಿಯಾ ಅವರ ಆತ್ಮೀಯ ಶುಭಾಶಯಗಳನ್ನು ತಿಳಿಸಿದರು. ಪ್ರಧಾನಮಂತ್ರಿ ಶ್ರೀ ಮೋದಿ ಅವರು ದೊರೆಯ 80ನೇ ಹುಟ್ಟುಹಬ್ಬದ ಆತ್ಮೀಯ ಶುಭಾಶಯಗಳನ್ನು ಕೋರಿದರು.ಪಶ್ಚಿಮ ಬಂಗಾಳದ ಸಿಂಗೂರಿನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 18th, 03:30 pm
ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಶ್ರೀ ಸಿ.ವಿ.ಆನಂದ ಬೋಸ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೊವಾಲ್ ಜೀ, ಸುಕಾಂತ ಮಜುಂದಾರ್ ಜೀ, ಶಂತನು ಠಾಕೂರ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಸೌಮಿಕ್ ಭಟ್ಟಾಚಾರ್ಯ ಜೀ, ಸೌಮಿತ್ರಾ ಖಾನ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಜೀ, ಇತರ ಪ್ರತಿನಿಧಿಗಳು, ಮಹಿಳೆಯರು ಮತ್ತು ಮಹನೀಯರೇ!ಪಶ್ಚಿಮ ಬಂಗಾಳದ ಸಿಂಗೂರಿನಲ್ಲಿ ₹830 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ, ಶಂಕುಸ್ಥಾಪನೆ ನೆರವೇರಿಸಿದ ಮತ್ತು ಹಸಿರು ನಿಶಾನೆ ತೋರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 18th, 03:00 pm
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸಿಂಗೂರಿನಲ್ಲಿ ಇಂದು ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ₹830 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಹಾಗೂ ಹಲವು ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿಯವರು, ನಿನ್ನೆ ತಾನು ಮಾಲ್ಡಾದಲ್ಲಿದ್ದೆ ಮತ್ತು ಇಂದು ಹೂಗ್ಲಿಯ ಜನರ ನಡುವೆ ಇರುವ ಭಾಗ್ಯ ನನಗೆ ಲಭಿಸಿದೆ ಎಂದು ಹರ್ಷ ವ್ಯಕ್ತಪಡಿಸಿದರು. ವಿಕಸಿತ ಭಾರತಕ್ಕಾಗಿ ಪೂರ್ವ ಭಾರತದ ಅಭಿವೃದ್ಧಿ ಅತ್ಯಗತ್ಯ ಎಂದು ಪ್ರತಿಪಾದಿಸಿದ ಅವರು, ಇದೇ ಗುರಿಯೊಂದಿಗೆ ಕೇಂದ್ರ ಸರ್ಕಾರವು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಒತ್ತಿ ಹೇಳಿದರು. ನಿನ್ನೆಯ ಮತ್ತು ಇಂದಿನ ಕಾರ್ಯಕ್ರಮಗಳು ಈ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಅವರು ತಿಳಿಸಿದರು. ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಸಂಬಂಧಿಸಿದ ನೂರಾರು ಕೋಟಿ ರೂಪಾಯಿಗಳ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡುವ ಮತ್ತು ಉದ್ಘಾಟಿಸುವ ಅವಕಾಶ ಈ ಅವಧಿಯಲ್ಲಿ ತಮಗೆ ದೊರೆತಿದೆ ಎಂದು ಪ್ರಧಾನಮಂತ್ರಿಯವರು ಇದೇ ವೇಳೆ ಉಲ್ಲೇಖಿಸಿದರು.ಪ್ರಧಾನಮಂತ್ರಿ ಅವರಿಂದ ಅಕ್ಟೋಬರ್ 8ರಂದು 9ನೇ ಆವೃತ್ತಿಯ ಇಂಡಿಯನ್ ಮೊಬೈಲ್ ಕಾಂಗ್ರೆಸ್ ಉದ್ಘಾಟನೆ
October 07th, 10:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯ ಯಶೋಭೂಮಿಯಲ್ಲಿ 2025ರ ಅಕ್ಟೋಬರ್ 8ರಂದು ಏಷ್ಯಾದ ಅತಿದೊಡ್ಡ ದೂರಸಂಪರ್ಕ, ಮಾಧ್ಯಮ ಮತ್ತು ತಂತ್ರಜ್ಞಾನ ಕಾರ್ಯಕ್ರಮ ಇಂಡಿಯಾ ಮೊಬೈಲ್ ಕಾಂಗ್ರೆಸ್ (ಐಎಂಸಿ)ಯ 9ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.