ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳಲ್ಲಿ ಹೈಬ್ರಿಡ್ ಅನ್ಯುಯಿಟಿ ಮೋಡ್ ಅಡಿಯಲ್ಲಿ ದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇಯ ದೆಹಲಿ-ಫರಿದಾಬಾದ್-ಬಲ್ಲಭಗಢ-ಸೋಹ್ನಾ ಸ್ಪರ್ ನಿಂದ ಜೇವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗ್ರೀನ್ ಫೀಲ್ಡ್ ಸಂಪರ್ಕದ ನಿರ್ಮಾಣಕ್ಕಾಗಿ ಪರಿಷ್ಕೃತ ವೆಚ್ಚದ ಅಂದಾಜಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ

March 10th, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು, ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳಲ್ಲಿ ಹೈಬ್ರಿಡ್ ಅನ್ಯುಯಿಟಿ ಮೋಡ್ ಅಡಿಯಲ್ಲಿ ದೆಹಲಿ-ಮುಂಬೈ ಎಕ್ಸ್ ಪ್ರೆಸ್ವೇಯ ದೆಹಲಿ-ಫರಿದಾಬಾದ್-ಬಲ್ಲಭಗಢ-ಸೋಹ್ನಾ ಸ್ಪರ್ ನಿಂದ ಜೇವರ್ ಅಂತಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗ್ರೀನ್ಫೀಲ್ಡ್ ಸಂಪರ್ಕದ ನಿರ್ಮಾಣಕ್ಕಾಗಿ 3630.77 ಕೋಟಿ ರೂಪಾಯಿಗಳ ಪರಿಷ್ಕೃತ ಒಟ್ಟು ಬಂಡವಾಳ ವೆಚ್ಚಕ್ಕೆ ಅನುಮೋದನೆ ನೀಡಿದೆ.

ಮಾರ್ಚ್ 11 ರಂದು ಕೇರಳ ಮತ್ತು ತಮಿಳುನಾಡಿಗೆ ಪ್ರಧಾನಮಂತ್ರಿ ಭೇಟಿ

March 09th, 09:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 11 ರಂದು ಕೇರಳ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1:30ರ ಸುಮಾರಿಗೆ, ಪ್ರಧಾನ ಮಂತ್ರಿಗಳು ಕೇರಳದ ಎರ್ನಾಕುಲಂನಲ್ಲಿ ಸುಮಾರು ₹10,800 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸುತ್ತಾರೆ ಮತ್ತು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಸಂಜೆ 5:45ರ ಸುಮಾರಿಗೆ, ಪ್ರಧಾನಮಂತ್ರಿಗಳು ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಸುಮಾರು ₹5,650 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಗಳು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಬಿಹಾರದ ಕರಕಟ್ ನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 30th, 11:29 am

ಬಿಹಾರದ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜಿತನ್ ರಾಮ್ ಮಾಂಝಿ ಜಿ, ಲಲ್ಲನ್ ಸಿಂಗ್ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ನಿತ್ಯಾನಂದ್ ರಾಯ್ ಜಿ, ಸತೀಶ್ ಚಂದ್ರ ದುಬೇ ಜಿ, ರಾಜಭೂಷಣ್ ಜಿ, ರಾಜ್ಯದ ಉಪಮುಖ್ಯಮಂತ್ರಿ ಶ್ರೀ ಸಾಮ್ರಾಟ್ ಚೌಧರಿ ಜಿ, ವಿಜಯ್ ಕುಮಾರ್ ಸಿನ್ಹಾ ಜೀ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಸಚಿವರೆ, ಜನ ಪ್ರತಿನಿಧಿಗಳೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಬಿಹಾರದ ಕರಕಟ್‌ನಲ್ಲಿ 48,520 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

May 30th, 10:53 am

ಬಿಹಾರದ ಕರಕಟ್‌ನಲ್ಲಿ ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 48,520 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಪವಿತ್ರ ಭೂಮಿಯಲ್ಲಿ ಬಿಹಾರದ ಅಭಿವೃದ್ಧಿಯನ್ನು ವೇಗಗೊಳಿಸುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಹೇಳಿದರು ಹಾಗು ₹48,000 ಕೋಟಿಗೂ ಹೆಚ್ಚಿನ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಅವರು ಪ್ರಮುಖವಾಗಿ ಉಲ್ಲೇಖಿಸಿದರು. ತಮ್ಮನ್ನು ಆಶೀರ್ವದಿಸಲು ಬಂದಿದ್ದ ಬೃಹತ್ ಸಭೆಯನ್ನು ಪ್ರಧಾನಿ ಸ್ಮರಿಸಿದರು ಮತ್ತು ಬಿಹಾರದ ಮೇಲಿನ ಅವರ ವಾತ್ಸಲ್ಯ ಮತ್ತು ಪ್ರೀತಿಗೆ ತಮ್ಮ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದರು, ಅವರ ಬೆಂಬಲವನ್ನು ತಾವು ಸದಾ ಅತ್ಯುನ್ನತ ಗೌರವದಿಂದ ಕಾಣುವುದಾಗಿ ಒತ್ತಿ ಹೇಳಿದರು. ಅವರು ಬಿಹಾರದ ತಾಯಂದಿರು ಮತ್ತು ಸಹೋದರಿಯರಿಗೆ ತಮ್ಮ ಭಾವನಾತ್ಮಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

Cabinet approves construction of 6-lane access controlled Greenfield Highway starting from JNPA Port to Chowk in Maharashtra

March 19th, 04:12 pm

The Cabinet Committee on Economic Affairs chaired by the Prime Minister, Shri Narendra Modi, has approved the construction of 6- lane access controlled Greenfield High Speed National Highway starting from JNPA Port (Pagote) to Chowk (29.219 km) in Maharashtra. The project will be developed on Build, Operate and Transfer (BOT) mode at a total capital cost of Rs. 4500.62 Crore.