PM Modi extends greetings to Sashastra Seema Bal personnel on Raising Day

December 20th, 11:29 am

The Prime Minister, Narendra Modi, has extended his greetings to all personnel associated with the Sashastra Seema Bal on their Raising Day.

ಶ್ರೀ ರಜನಿಕಾಂತ್ ಅವರ 75ನೇ ಹುಟ್ಟುಹಬ್ಬದ ವಿಶೇಷ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಮಂತ್ರಿ

December 12th, 08:59 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ರಜನಿಕಾಂತ್ ಅವರ 75ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರಿಗೆ ಶುಭಾಶಯ ಕೋರಿದ್ದಾರೆ.

ಜೆಕ್ ಗಣರಾಜ್ಯದ ಪ್ರಧಾನಮಂತ್ರಿಯಾಗಿ ನೇಮಕಗೊಂಡಿರುವ ಘನತೆವೆತ್ತ ಆಂಡ್ರೆಜ್ ಬಾಬಿಸ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

December 09th, 10:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೆಕ್ ಗಣರಾಜ್ಯದ ಪ್ರಧಾನಮಂತ್ರಿಯಾಗಿ ಇಂದು ನೇಮಕಗೊಂಡಿರುವ ಘನತೆವೆತ್ತ ಆಂಡ್ರೆಜ್ ಬಾಬಿಸ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಅಂತಾರಾಷ್ಟ್ರೀಯ ಚಿರತೆ ದಿನದಂದು ಎಲ್ಲಾ ವನ್ಯಜೀವಿ ಪ್ರೇಮಿಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ

December 04th, 09:43 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಂತಾರಾಷ್ಟ್ರೀಯ ಚಿರತೆ ದಿನದಂದು ಚಿರತೆಯನ್ನು ರಕ್ಷಿಸಲು ಸಮರ್ಪಿತವಾದ ಎಲ್ಲಾ ವನ್ಯಜೀವಿ ಪ್ರೇಮಿಗಳು ಮತ್ತು ಸಂರಕ್ಷಕರಿಗೆ ಶುಭಾಶಯ ಕೋರಿದ್ದಾರೆ. ಮೂರು ವರ್ಷಗಳ ಹಿಂದೆ, ನಮ್ಮ ಸರ್ಕಾರವು ಈ ಭವ್ಯವಾದ ಪ್ರಾಣಿಯನ್ನು ರಕ್ಷಿಸುವ ಮತ್ತು ಅದು ನಿಜವಾಗಿಯೂ ಅಭಿವೃದ್ಧಿ ಹೊಂದುವ ಪರಿಸರ ವ್ಯವಸ್ಥೆಯನ್ನು ಪುನಃಸ್ಥಾಪಿಸುವ ಉದ್ದೇಶದಿಂದ ಪ್ರಾಜೆಕ್ಟ್ ಚೀತಾವನ್ನು ಪ್ರಾರಂಭಿಸಿತು. ಇದು ಕಳೆದುಹೋದ ಪರಿಸರ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಮತ್ತು ನಮ್ಮ ಜೀವವೈವಿಧ್ಯತೆಯನ್ನು ಬಲಪಡಿಸುವ ಪ್ರಯತ್ನವಾಗಿದೆ, ಎಂದು ಶ್ರೀ ಮೋದಿ ಅವರು ಹೇಳಿದರು.

ನೌಕಾಪಡೆ ದಿನದ ಅಂಗವಾಗಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ ಪ್ರಧಾನಮಂತ್ರಿ ಅವರು ಶುಭಾಶಯ ತಿಳಿಸಿದ್ದಾರೆ

December 04th, 08:41 am

ಇಂದು ನೌಕಾಪಡೆ ದಿನದ ಅಂಗವಾಗಿ ಭಾರತೀಯ ನೌಕಾಪಡೆಯ ಎಲ್ಲಾ ಸಿಬ್ಬಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. ನಮ್ಮ ನೌಕಾಪಡೆ ಅಸಾಧಾರಣ ಧೈರ್ಯ ಮತ್ತು ದೃಢಸಂಕಲ್ಪಕ್ಕೆ ಸಮಾನಾರ್ಥಕವಾಗಿದೆ ಎಂದು ಹೇಳಿದ್ದಾರೆ. ನೌಕಾಪಡೆ ಸಿಬ್ಬಂದಿ ನಮ್ಮ ತೀರಗಳನ್ನು ರಕ್ಷಿಸುತ್ತಾರೆ ಮತ್ತು ನಮ್ಮ ಕಡಲ ಹಿತಾಸಕ್ತಿಗಳನ್ನು ಹೆಚ್ಚಿಸುತ್ತಾರೆ. ''ಈ ವರ್ಷದ ದೀಪಾವಳಿಯನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ, ಅಂದು ನಾನು ಐಎನ್‌ಎಸ್ ವಿಕ್ರಾಂತ್‌ನಲ್ಲಿರುವ ನೌಕಾಪಡೆ ಸಿಬ್ಬಂದಿಯೊಂದಿಗೆ ಕಳೆದೆ. ಭಾರತೀಯ ನೌಕಾಪಡೆಯ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ ಎಂದು ಶ್ರೀ ಮೋದಿ ಹೇಳಿದ್ದಾರೆ.

ಅಂತಾರಾಷ್ಟ್ರೀಯ ವಿಶೇಷಚೇತನರ ದಿನದಂದು ದಿವ್ಯಾಂಗರಿಗೆ ಘನತೆ, ಲಭ್ಯತೆ ಮತ್ತು ಅವಕಾಶಗಳನ್ನು ಖಾತ್ರಿಪಡಿಸುವ ಬದ್ಧತೆ ಪುನರುಚ್ಚರಿಸಿದ ಪ್ರಧಾನಮಂತ್ರಿ

December 03rd, 04:09 pm

ಅಂತಾರಾಷ್ಟ್ರೀಯ ವಿಶೇಷಚೇತನರ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದಿವ್ಯಾಂಗ ಸಹೋದರ ಸಹೋದರಿಯರಿಗೆ ಘನತೆ, ಲಭ್ಯತೆ ಮತ್ತು ಅವಕಾಶಗಳನ್ನು ಒದಗಿಸುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ದಿವ್ಯಾಂಗರು ತಮ್ಮ ಸೃಜನಶೀಲತೆ ಮತ್ತು ದೃಢಸಂಕಲ್ಪದಿಂದಾಗಿ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ ಮತ್ತು ನಮ್ಮ ರಾಷ್ಟ್ರೀಯ ಪ್ರಗತಿಯನ್ನು ಗಮನಾರ್ಹವಾಗಿ ಶ್ರೀಮಂತಗೊಳಿಸಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. “ಕಳೆದ ಕೆಲವು ವರ್ಷಗಳಲ್ಲಿ ಭಾರತವು ಕಾನೂನುಗಳು, ಲಭ್ಯವಾಗಬಹುದಾದ ಮೂಲಸೌಕರ್ಯ, ಸಮಗ್ರ ಶಿಕ್ಷಣ ನೀತಿಗಳು ಮತ್ತು ಸಹಾಯಕ ತಂತ್ರಜ್ಞಾನಗಳಲ್ಲಿನ ನಾವೀನ್ಯತೆಗಳ ಮೂಲಕ ದಿವ್ಯಾಂಗ ಕಲ್ಯಾಣದತ್ತ ಪ್ರಮುಖ ಹೆಜ್ಜೆಗಳನ್ನಿಟ್ಟಿದೆ. ಮುಂಬರುವ ದಿನಗಳಲ್ಲಿ ನಾವು ಇನ್ನೂ ಹೆಚ್ಚಿನ ಕೆಲಸ ಕಾರ್ಯಗಳನ್ನು ಮಾಡುವುದನ್ನು ಮುಂದುವರಿಸುತ್ತೇವೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಪ್ರಧಾನಮಂತ್ರಿ ಅವರು ದಂಡಕ್ರಮ ಪಾರಾಯಣಂ ಪೂರ್ಣಗೊಳಿಸಿದ ವೇದಮೂರ್ತಿ ದೇವವ್ರತ್ ಮಹೇಶ್ ರೇಖೆ ಅವರನ್ನು ಅಭಿನಂದಿಸಿದ್ದಾರೆ

December 02nd, 01:03 pm

ಶುಕ್ಲ ಯಜುರ್ವೇದದ ಮಧ್ಯಂದಿನಿ ಶಾಖೆಯ 2000 ಮಂತ್ರಗಳನ್ನು ಒಳಗೊಂಡಿರುವ ದಂಡಕ್ರಮ ಪಾರಾಯಣವನ್ನು ಯಾವುದೇ ಅಡೆತಡೆಯಿಲ್ಲದೆ 50 ದಿನಗಳಲ್ಲಿ ಪೂರ್ಣಗೊಳಿಸಿದ್ದಕ್ಕಾಗಿ ವೇದಮೂರ್ತಿ ದೇವವ್ರತ್ ಮಹೇಶ್ ರೇಖೆ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಗೀತಾ ಜಯಂತಿಯ ಪವಿತ್ರ ದಿನದಂದು ದೇಶವಾಸಿಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ

December 01st, 06:13 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀಮದ್ ಭಗವದ್ಗೀತೆಗೆ ಸಂಬಂಧಿಸಿದ 'ಗೀತಾ ಜಯಂತಿ'ಯ ಪವಿತ್ರ ದಿನದಂದು ದೇಶಾದ್ಯಂತ ಎಲ್ಲಾ ಕುಟುಂಬಗಳ ಸದಸ್ಯರಿಗೆ ಶುಭಾಶಯ ಕೋರಿದ್ದಾರೆ. ಕರ್ತವ್ಯ ನಿರ್ವಹಣೆಯ ಕುರಿತು ಅಮೂಲ್ಯವಾದ ಸಂದೇಶಗಳಿಂದ ಕೂಡಿರುವ ಈ ದೈವಿಕ ಗ್ರಂಥವು ಭಾರತೀಯ ಕುಟುಂಬ, ಸಾಮಾಜಿಕ ಮತ್ತು ಆಧ್ಯಾತ್ಮಿಕ ಜೀವನದಲ್ಲಿ ಅತ್ಯಂತ ವಿಶಿಷ್ಟ ಸ್ಥಾನವನ್ನು ಹೊಂದಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. “ಇದರ ದೈವಿಕ ಸಾರ ಪ್ರತಿ ಪೀಳಿಗೆಯನ್ನು ನಿಸ್ವಾರ್ಥ ಕ್ರಿಯೆಯ ಕಡೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ’’ ಎಂದು ಶ್ರೀ ಮೋದಿ ಹೇಳಿದ್ದಾರೆ.

ನಾಗಾಲ್ಯಾಂಡ್ ಜನತೆಗೆ ರಾಜ್ಯ ಉದಯ ದಿನದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ

December 01st, 06:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನಾಗಾಲ್ಯಾಂಡ್ ಜನತೆಗೆ ರಾಜ್ಯ ಉದಯ ದಿನದ ಶುಭಾಶಯಗಳನ್ನು ಕೋರಿದ್ದಾರೆ. ಸೇವೆ, ಧೈರ್ಯ ಮತ್ತು ದಯೆ ಬೇರೂರಿರುವ ಅದ್ಭುತ ನಾಗಾ ಸಂಸ್ಕೃತಿಯನ್ನು ವ್ಯಾಪಕವಾಗಿ ಪ್ರಶಂಸಿಸಲಾಗುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. “ನಾಗಾಲ್ಯಾಂಡ್ ಜನರು ಅನೇಕ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ಮುಂದಿನ ವರ್ಷಗಳಲ್ಲಿ ರಾಜ್ಯವು ಸಮೃದ್ಧಿ ಮತ್ತು ಪ್ರಗತಿಯೊಂದಿಗೆ ಮುಂದುವರಿಯಲಿ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಆಂಥೋನಿ ಅಲ್ಬನೀಸ್ ಮತ್ತು ಶ್ರೀಮತಿ ಜೊಡಿ ಹೇಡನ್ ಅವರ ವಿವಾಹ ನಿಮಿತ್ತ ಅವರುಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ

November 29th, 09:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಆತ್ಮೀಯ ಸ್ನೇಹಿತ, ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಆಂಥೋನಿ ಅಲ್ಬನೀಸ್ ಮತ್ತು ಶ್ರೀಮತಿ ಜೊಡಿ ಹೇಡನ್ ಅವರ ವಿವಾಹಕ್ಕಾಗಿ ಅವರುಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

2025ರ ಮಹಿಳಾ ಕಬಡ್ಡಿ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ ಅಭಿನಂದನೆಗಳನ್ನು ಕೋರಿದ ಪ್ರಧಾನಮಂತ್ರಿ

November 24th, 08:11 pm

2025ರ ಮಹಿಳಾ ಕಬಡ್ಡಿ ವಿಶ್ವಕಪ್‌ ಸ್ಪರ್ಧೆಯಲ್ಲಿ ಗಮನಾರ್ಹ ಹಾಗೂ ಮಹತ್ವಪೂರ್ಣ ಗೆಲುವು ಸಾಧಿಸಿದ ಭಾರತೀಯ ಮಹಿಳಾ ಕಬಡ್ಡಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.

ಅಂಧ ಮಹಿಳೆಯರ ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಅವರಿಂದ ಅಭಿನಂದನೆ

November 24th, 12:23 pm

ಅಂಧ ಮಹಿಳೆಯರ ಟಿ20 ವಿಶ್ವಕಪ್ ಗೆದ್ದ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು.

ವಿಶ್ವ ಬಾಕ್ಸಿಂಗ್ ಕಪ್ ಫೈನಲ್ಸ್ 2025ರಲ್ಲಿ ಅಸಾಧಾರಣ, ದಾಖಲೆ ಮಾಡಿದ ಭಾರತೀಯ ಕ್ರೀಡಾಪಟುಗಳಿಗೆ ಪ್ರಧಾನಮಂತ್ರಿ ಅವರಿಂದ ಅಭಿನಂದನೆ

November 24th, 12:22 pm

ವಿಶ್ವ ಬಾಕ್ಸಿಂಗ್ ಕಪ್ ಫೈನಲ್ಸ್ 2025ರಲ್ಲಿ ಅಸಾಧಾರಣ, ದಾಖಲೆ ಮಾಡಿದ ಪ್ರದರ್ಶನಕ್ಕಾಗಿ ಭಾರತೀಯ ಕ್ರೀಡಾಪಟುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ಕಾಶಿ ಸಂಸದರ ಕ್ರೀಡಾ ಸ್ಪರ್ಧೆ”ಯಲ್ಲಿ ವಿಜೇತರು ಮತ್ತು ಭಾಗವಹಿಸಿದವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

November 21st, 03:46 pm

ಕಾಶಿ ಸಂಸದರ ಕ್ರೀಡಾ ಸ್ಪರ್ಧೆ”ಯ ಎಲ್ಲಾ ವಿಜೇತರು ಮತ್ತು ಭಾಗವಹಿಸಿದವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸಿದ್ದಾರೆ.

ಬಿಹಾರದ ನೂತನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಮತ್ತು ಸಚಿವರುಗಳಿಗೆ ಅಭಿನಂದನೆ ಕೋರಿದ ಪ್ರಧಾನಮಂತ್ರಿ

November 20th, 01:41 pm

ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಿತೀಶ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಶ್ರೀ ನಿತೀಶ್ ಕುಮಾರ್ ಅವರು ಹಲವು ವರ್ಷಗಳಿಂದ ಉತ್ತಮ ಆಡಳಿತದ ದಾಖಲೆಯನ್ನು ಹೊಂದಿರುವ ಅನುಭವಿ ಆಡಳಿತಗಾರರಾಗಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ ಮತ್ತು ಮುಂಬರುವ ಅವಧಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

ರಷ್ಯಾ ಅಧ್ಯಕ್ಷರ ಅನುಯಾಯಿಗಳಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭೇಟಿ

November 18th, 09:02 pm

ರಷ್ಯಾ ಒಕ್ಕೂಟದ ಸಾಗರ ಮಂಡಳಿಯ ಅಧ್ಯಕ್ಷರಾದ ಮತ್ತು ರಷ್ಯಾದ ರಾಷ್ಟಾಧ್ಯಕ್ಷರಾದ ಪುಟಿನ್ ಅವರ ಅನುಯಾಯಿಯಾದ ಶ್ರೀ ನಿಕೊಲಾಯ್ ಪತ್ರುಶೇವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಏಷ್ಯನ್ ಆರ್ಚರಿ ಚಾಂಪಿಯನ್‌ಶಿಪ್ 2025ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬಿಲ್ಲುಗಾರಿಕಾ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ

November 17th, 05:59 pm

2025ರ ಏಷ್ಯನ್ ಬಿಲ್ಲುಗಾರಿಕಾ ಚಾಂಪಿಯನ್‌ಶಿಪ್‌ನಲ್ಲಿ ಇದುವರೆಗೆ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬಿಲ್ಲುಗಾರಿಕೆ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಜಾರ್ಖಂಡ್ ರಾಜ್ಯ ಸಂಸ್ಥಾಪನಾ ದಿನದಂದು ಶುಭಾಶಯ ಕೋರಿದ ಪ್ರಧಾನಮಂತ್ರಿ

November 15th, 08:22 am

ಜಾರ್ಖಂಡ್‌ ರಾಜ್ಯದ ಸ್ಥಾಪನಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್‌ನ ಎಲ್ಲಾ ಜನರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಜಾರ್ಖಂಡ್ ಶ್ರೀಮಂತ ಬುಡಕಟ್ಟು ಸಂಸ್ಕೃತಿಯಿಂದ ಸಮೃದ್ಧವಾಗಿರುವ ಅದ್ಭುತ ಭೂಮಿಯಾಗಿದೆ ಎಂದು ಅವರು ಹೇಳಿದರು. ಭಗವಾನ್ ಬಿರ್ಸಾ ಮುಂಡಾ ಅವರ ಪರಂಪರೆಯನ್ನು ನೆನಪಿಸಿಕೊಳ್ಳುತ್ತಾ, ಈ ಪವಿತ್ರ ಭೂಮಿಯ ಇತಿಹಾಸವು ಧೈರ್ಯ, ಹೋರಾಟ ಮತ್ತು ಘನತೆಯ ಸ್ಪೂರ್ತಿದಾಯಕ ಕಥೆಗಳಿಂದ ತುಂಬಿದೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

ಪ್ರಧಾನಮಂತ್ರಿ ಅವರು ಗೋವಾದಲ್ಲಿನ ಐರನ್ ಮ್ಯಾನ್ 70.3 ರೀತಿಯ ಕಾರ್ಯಕ್ರಮದಲ್ಲಿ ಯುವಜನರ ಪಾಲ್ಗೊಳ್ಳುವಿಕೆ ಹೆಚ್ಚಾಗಿರುವುದನ್ನು ಸ್ವಾಗತಿಸಿದ್ದಾರೆ

November 09th, 10:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದಲ್ಲಿ ನಡೆದ ಐರನ್ ಮ್ಯಾನ್ 70.3 ರೀತಿಯ ಕಾರ್ಯಕ್ರಮದಲ್ಲಿ ಯುವಜನರು ಹೆಚ್ಚಾಗಿ ಪಾಲ್ಗೊಳ್ಳುತ್ತಿರುವುದನ್ನು ಸ್ವಾಗತಿಸಿದ್ದಾರೆ. ಈ ರೀತಿಯ ಕಾರ್ಯಕ್ರಮಗಳು ಫಿಟ್ ಇಂಡಿಯಾ ಅಭಿಯಾನಕ್ಕೆ ಕೊಡುಗೆ ನೀಡಲಿದೆ ಎಂದು ಶ್ರೀ ಮೋದಿ ಅವರು ಉಲ್ಲೇಖಿಸಿದ್ದಾರೆ. “ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು. ಐರನ್ ಮ್ಯಾನ್ ಟ್ರಯಥ್ಲಾನ್ ಯಶಸ್ವಿಯಾಗಿ ಪೂರ್ಣಗೊಳಿಸಿದವರಲ್ಲಿ ನಮ್ಮ ಪಕ್ಷದ ಇಬ್ಬರು ಯುವ ಸಹೋದ್ಯೋಗಿಗಳಾದ ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ ಸೇರಿರುವ ವಿಷಯ ತಿಳಿದು ಸಂತೋಷವಾಯಿತು” ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ.

ಭಗವಾನ್ ಬುದ್ಧನ ಪವಿತ್ರ ಅವಶೇಷಗಳಿಗೆ ನೀಡಿದ ಗೌರವಯುತ ಸ್ವಾಗತಕ್ಕೆ ಭೂತಾನಿನ ಜನರು ಮತ್ತು ದೊರೆಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ

November 09th, 03:43 pm

ಭಾರತದಿಂದ ಭಗವಾನ್ ಬುದ್ಧನ ಪವಿತ್ರ ಅವಶೇಷಗಳಿಗೆ ನೀಡಿದ ಗೌರವಯುತ ಸ್ವಾಗತಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೂತಾನಿನ ಜನರು ಮತ್ತು ಅಲ್ಲಿನ ದೊರೆಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ಭಗವಾನ್ ಬುದ್ಧನ ಅವಶೇಷಗಳು ಶಾಂತಿ, ಕರುಣೆ ಮತ್ತು ಸಾಮರಸ್ಯದ ಕಾಲಾತೀತ ಸಂದೇಶವನ್ನು ಸಂಕೇತಿಸುತ್ತವೆ. ಭಗವಾನ್ ಬುದ್ಧನ ಬೋಧನೆಗಳು ನಮ್ಮ ಎರಡೂ ರಾಷ್ಟ್ರಗಳ ಹಂಚಿಕೆಯ ಆಧ್ಯಾತ್ಮಿಕ ಪರಂಪರೆಯ ನಡುವಿನ ಪವಿತ್ರ ಕೊಂಡಿಯಾಗಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ.