ಗಾಂಧಿನಗರದಲ್ಲಿ ನಡೆದ ಗುಜರಾತ್ ನಗರಾಭಿವೃದ್ಧಿ ಇತಿಹಾಸದ 20ನೇ ವಾರ್ಷಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 27th, 11:30 am

ವೇದಿಕೆಯಲ್ಲಿ ಉಪಸ್ಥಿತರಿರುವ ಗುಜರಾತ್ ರಾಜ್ಯಪಾಲರಾದ ಗೌರವಾನ್ವಿತ ಆಚಾರ್ಯ ದೇವವ್ರತ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳೆ, ಮನೋಹರ್ ಲಾಲ್ ಜೀ, ಸಿ.ಆರ್. ಪಾಟೀಲ್ ಜೀ, ಗುಜರಾತ್ ಸರ್ಕಾರದ ಸಚಿವರೆ, ಸಂಸದರೆ, ಶಾಸಕರೆ ಮತ್ತು ಗುಜರಾತ್‌ನ ವಿವಿಧೆಡೆಯಿಂದ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,

ಗುಜರಾತ್ ನಗರ ಬೆಳವಣಿಗೆಯ 20 ವರ್ಷಗಳ ಸಂಭ್ರಮಾಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

May 27th, 11:09 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತಿನ ಗಾಂಧಿನಗರದಲ್ಲಿ ಗುಜರಾತ್ ನಗರ ವಿಕಾಸದ 20 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, 'ನಗರ ಅಭಿವೃದ್ಧಿ ವರ್ಷ 2005'ರ 20 ವರ್ಷಗಳ ನೆನಪಿಗಾಗಿ ನಗರ ಅಭಿವೃದ್ಧಿ ವರ್ಷ 2025 ಅನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ಎರಡು ದಿನಗಳಲ್ಲಿ ವಡೋದರ, ದಹೋದ್, ಭುಜ್, ಅಹಮದಾಬಾದ್ ಮತ್ತು ಗಾಂಧಿನಗರಕ್ಕೆ ಭೇಟಿ ನೀಡಿದಾಗ, ಆಪರೇಷನ್ ಸಿಂಧೂರ್ನ ಯಶಸ್ಸಿನ ಘೋಷಣೆಗಳು ಮತ್ತು ಹಾರಾಡುತ್ತಿದ್ದ ತ್ರಿವರ್ಣ ಧ್ವಜಗಳೊಂದಿಗೆ ದೇಶಭಕ್ತಿಯ ಉತ್ಸಾಹವನ್ನು ಅನುಭವಿಸಿದೆ. ಈ ದೃಶ್ಯ ಅದ್ಭುತವಾಗಿತ್ತು ಮತ್ತು ಈ ಭಾವನೆ ಕೇವಲ ಗುಜರಾತ್ ನಲ್ಲಿ ಮಾತ್ರವಲ್ಲ, ಭಾರತದ ಮೂಲೆಮೂಲೆಯಲ್ಲೂ ಮತ್ತು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲೂ ಇತ್ತು. ಭಾರತವು ಭಯೋತ್ಪಾದನೆಯ ಮುಳ್ಳನ್ನು ಕಿತ್ತೊಗೆಯಲು ನಿರ್ಧರಿಸಿತ್ತು ಮತ್ತು ಅದನ್ನು ದೃಢ ಸಂಕಲ್ಪದಿಂದ ಸಾಧಿಸಿತು ಎಂದು ಪ್ರಧಾನಮಂತ್ರಿಗಳು ನುಡಿದರು.

ಮೇ 26 ಮತ್ತು 27ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

May 25th, 09:14 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 26 ಮತ್ತು 27ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಅವರು ದಾಹೋಡ್ ಗೆ ಪ್ರಯಾಣ ಬೆಳೆಸಲಿದ್ದು, ಬೆಳಗ್ಗೆ 11:15 ರ ಸುಮಾರಿಗೆ ಅವರು ಲೋಕೋಮೋಟಿವ್ ಉತ್ಪಾದನಾ ಘಟಕವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಎಲೆಕ್ಟ್ರಿಕ್ ಲೋಕೋಮೋಟಿವ್ ಗೆ ಹಸಿರು ನಿಶಾನೆ ತೋರಲಿದ್ದಾರೆ. ನಂತರ ಅವರು ದಾಹೋಡ್ ನಲ್ಲಿ ಸುಮಾರು 24,000 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ಉದ್ಘಾಟಿಸಲಿದ್ದಾರೆ. ಇದೇ ವೇಳೆ ಅವರು ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ.