ಸೆಪ್ಟೆಂಬರ್‌ 26ರಂದು ಬಿಹಾರ ನಲ್ಲಿ ಮುಖ್ಯಮಂತ್ರಿ ಮಹಿಳಾ ರೋಜ್ಗಾರ್‌ ಯೋಜನೆಗೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ

September 25th, 06:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್‌ 26ರಂದು ಬೆಳಗ್ಗೆ 11 ಗಂಟೆಗೆ ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್ಗಾರ್‌ ಯೋಜನೆಗೆ ವಿಡಿಯೊ ಕಾನಧಿರೆನ್ಸ್‌ ಮೂಲಕ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಬಿಹಾರದಾದ್ಯಂತ 75 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ ತಲಾ 10,000 ರೂ.ಗಳನ್ನು ಒಟ್ಟು 7,500 ಕೋಟಿ ರೂ.ಗಳನ್ನು ನೇರವಾಗಿ ವರ್ಗಾಯಿಸಲಿದ್ದಾರೆ.

ಫೆಬ್ರವರಿ 28 ರಂದು ನವದೆಹಲಿಯಲ್ಲಿ ನಡೆಯಲಿರುವ ಜಹಾನ್-ಎ-ಖುಸ್ರೌ 2025 ರಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ

February 27th, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 28 ರಂದು ಸಂಜೆ 7:30ರ ಸುಮಾರಿಗೆ ನವದೆಹಲಿಯ ಸುಂದರ್ ನರ್ಸರಿಯಲ್ಲಿ ನಡೆಯಲಿರುವ ಭವ್ಯ ಸೂಫಿ ಸಂಗೀತ ಉತ್ಸವ ಜಹಾನ್-ಎ-ಖುಸ್ರೌ 2025ರಲ್ಲಿ ಭಾಗವಹಿಸಲಿದ್ದಾರೆ.