ಗುಜರಾತ್ ನ ಹನಸಲ್ಪುರದಲ್ಲಿ ನಡೆದ ಗ್ರೀನ್ ಮೊಬಿಲಿಟಿ ಇನಿಶಿಯೇಟಿವ್ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
August 26th, 11:00 am
ಗುಜರಾತಿನ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಭೂಪೇಂದ್ರಭಾಯಿ ಪಟೇಲ್ ಅವರೇ, ಭಾರತದಲ್ಲಿನ ಜಪಾನ್ ರಾಯಭಾರಿಗಳಾದ ಶ್ರೀ ಕೀಚಿ ಒನೊ ಸನ್ ಅವರೇ, ಸುಜುಕಿ ಮೋಟಾರ್ ಕಾರ್ಪೊರೇಷನ್ ನ ಅಧ್ಯಕ್ಷರಾದ ಶ್ರೀ ತೋಶಿಹಿರೋ ಸುಜುಕಿ ಸ್ಯಾನ್ ಅವರೇ, ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಹಿಸಾಶಿ ಟಕೆಯುಚಿ ಸ್ಯಾನ್ ಅವರೇ, ಅಧ್ಯಕ್ಷರಾದ ಶ್ರೀ ಆರ್.ಸಿ. ಭಾರ್ಗವ ಅವರೇ, ಹಂಸಲ್ಪುರ ಘಟಕದ ಸಮಸ್ತ ನೌಕರರೇ, ಇತರ ಗಣ್ಯ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಹನಸಲ್ಪುರದಲ್ಲಿ ಗ್ರೀನ್ ಮೊಬಿಲಿಟಿ ಉಪಕ್ರಮಗಳನ್ನು ಉದ್ಘಾಟಿಸಿದರು
August 26th, 10:30 am
ಹಸಿರು ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರರಾಗುವತ್ತ ದೊಡ್ಡ ಹೆಜ್ಜೆಯಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಹನಸಲ್ಪುರದಲ್ಲಿ ಗ್ರೀನ್ ಮೊಬಿಲಿಟಿ ಉಪಕ್ರಮಗಳನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಗಣೇಶೋತ್ಸವದ ಉತ್ಸಾಹದ ನಡುವೆ, ಭಾರತದ 'ಮೇಕ್ ಇನ್ ಇಂಡಿಯಾ' ಪ್ರಯಾಣಕ್ಕೆ ಹೊಸ ಅಧ್ಯಾಯ ಸೇರ್ಪಡೆಯಾಗುತ್ತಿದೆ ಎಂದು ಹೇಳಿದರು. ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್ ಎಂಬ ಹಂಚಿಕೆಯ ಗುರಿಯತ್ತ ಇದು ಮಹತ್ವದ ಮುನ್ನಡೆಯಾಗಿದೆ ಎಂದು ಅವರು ಹೇಳಿದರು. ಭಾರತದಲ್ಲಿ ತಯಾರಾಗುವ ಎಲೆಕ್ಟ್ರಿಕ್ ವಾಹನಗಳನ್ನು ಇಂದಿನಿಂದ 100 ದೇಶಗಳಿಗೆ ರಫ್ತು ಮಾಡಲಾಗುವುದು ಎಂದು ಶ್ರೀ ಮೋದಿ ಅವರು ಹೇಳಿದರು. ದೇಶದಲ್ಲಿ ಹೈಬ್ರಿಡ್ ಬ್ಯಾಟರಿ ಎಲೆಕ್ಟ್ರೋಡ್ ಉತ್ಪಾದನೆಯನ್ನು ಪ್ರಾರಂಭಿಸುವುದಾಗಿ ಅವರು ಘೋಷಿಸಿದರು. ಭಾರತ ಮತ್ತು ಜಪಾನ್ ನಡುವಿನ ಸ್ನೇಹಕ್ಕೆ ಈ ದಿನವು ಹೊಸ ಆಯಾಮವನ್ನು ನೀಡುತ್ತದೆ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಭಾರತದ ನಾಗರಿಕರು, ಜಪಾನ್ ಮತ್ತು ಸುಜುಕಿ ಮೋಟಾರ್ ಕಾರ್ಪೊರೇಷನ್ ಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.