ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 28.06.2026 ರಂದು ಮಾಡಿದ ‘ಮನ್ ಕಿ ಬಾತ್’ – 135ನೇ ಸಂಚಿಕೆಯ ಕನ್ನಡ ಅವತರಣಿಕೆ
June 28th, 11:30 am
‘ಮನದ ಮಾತು’ ಮೂಲಕ ನಿಮ್ಮೆಲ್ಲರೊಂದಿಗೆ ಮತ್ತೆ ಮಾತನಾಡಲು ಅವಕಾಶ ಸಿಕ್ಕಿರುವುದು ನನಗೆ ಅಪಾರ ಸಂತೋಷವಾಗುತ್ತಿದೆ. 2026 ನೇ ವರ್ಷದ ಅರ್ಧ ಭಾಗವು ಮುಗಿಯಲಿದೆ. ಈ ಆರು ತಿಂಗಳುಗಳಲ್ಲಿ, ಈ ಕಾರ್ಯಕ್ರಮದಲ್ಲಿ ನಮ್ಮ ದೇಶದ ನಾಗರಿಕರ ಹಲವಾರು ಸಾಧನೆಗಳ ಬಗ್ಗೆ ನಾವು ಚರ್ಚಿಸಿದ್ದೇವೆ. ಜೂನ್‌ನಲ್ಲಿಯೂ ಸಹ, ಪ್ರತಿಯೊಬ್ಬ ನಾಗರಿಕನು ಹೆಮ್ಮೆ ಪಡುವಂತಹ ಸಾಧನೆಗಳನ್ನು ರಾಷ್ಟ್ರವು ಸಾಧಿಸಿದೆ. ಈ ಯಶಸ್ಸು ದೇಶದ ಭದ್ರತೆ ಮತ್ತು ಸ್ವಾವಲಂಬನೆಗೆ ಸಂಬಂಧಿಸಿದ್ದಾಗಿವೆ. ಇತ್ತೀಚೆಗೆ ನನಗೆ ಕೋಲ್ಕತ್ತಾದಲ್ಲಿ ನೌಕಾಪಡೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿತು. ಅಲ್ಲಿ, ಐಎನ್ಎಸ್ ದೂನಗಿರಿ, ಐಎನ್ಎಸ್ ಸಂಶೋಧಕ್ ಮತ್ತು ಐಎನ್ಎಸ್ ಅಗ್ರಯಗಳನ್ನು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಲಾಯಿತು. ವಿನ್ಯಾಸದಿಂದ ಹಿಡಿದು ಈ ಹಡಗುಗಳ ತಯಾರಿಕೆಯವರೆಗೆ ಎಲ್ಲವೂ ಸ್ವದೇಶದಲ್ಲೇ ಸಿದ್ಧಪಡಿಸಲಾಗಿದೆ.