ನಾಲ್ಕು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ವಾರಣಾಸಿಯಿಂದ ಚಾಲನೆ ನೀಡುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

November 08th, 08:39 am

ಉತ್ತರ ಪ್ರದೇಶದ ಉತ್ಸಾಹಭರಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ; ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮತ್ತು ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ದ ಬಲವಾದ ಅಡಿಪಾಯವನ್ನು ಹಾಕುತ್ತಿರುವ ಗಮನಾರ್ಹ ತಾಂತ್ರಿಕ ಪ್ರಗತಿಗೆ ಕಾರಣರಾದ ಶ್ರೀ ಅಶ್ವಿನಿ ವೈಷ್ಣವ್ ಜಿ; ಎರ್ನಾಕುಲಂನಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರುತ್ತಿರುವ ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್ ಜಿ; ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳಾದ ಶ್ರೀ ಸುರೇಶ್ ಗೋಪಿ ಜಿ ಮತ್ತು ಶ್ರೀ ಜಾರ್ಜ್ ಕುರಿಯನ್ ಜಿ; ಕೇರಳದಲ್ಲಿ ಈ ಕಾರ್ಯಕ್ರಮದಲ್ಲಿ ಹಾಜರಿರುವ ಎಲ್ಲಾ ಇತರ ಸಚಿವರು ಮತ್ತು ಸಾರ್ವಜನಿಕ ಪ್ರತಿನಿಧಿಗಳು; ಫಿರೋಜ್‌ ಪುರದಿಂದ ಸಂಪರ್ಕ ಹೊಂದಿದ ಕೇಂದ್ರದ ನನ್ನ ಸಹೋದ್ಯೋಗಿ ಮತ್ತು ಪಂಜಾಬ್ ನಾಯಕ ಶ್ರೀ ರವನೀತ್ ಸಿಂಗ್ ಬಿಟ್ಟು ಜಿ; ಅಲ್ಲಿನ ಎಲ್ಲಾ ಸಾರ್ವಜನಿಕ ಪ್ರತಿನಿಧಿಗಳು; ಲಕ್ನೋದಿಂದ ಸಂಪರ್ಕ ಹೊಂದಿದ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜಿ; ಇತರ ಗಣ್ಯ ಅತಿಥಿಗಳೇ; ಮತ್ತು ಕಾಶಿಯಲ್ಲಿರುವ ನನ್ನ ಕುಟುಂಬ ಸದಸ್ಯರುಗಳೇ!

ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 08th, 08:15 am

ಭಾರತದ ಆಧುನಿಕ ರೈಲ್ವೆ ಮೂಲಸೌಕರ್ಯವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ, ಉತ್ತರ ಪ್ರದೇಶದ ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ, ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಬಾಬಾ ವಿಶ್ವನಾಥನ ಪವಿತ್ರ ನಗರವಾದ ವಾರಣಾಸಿಯ ಎಲ್ಲಾ ಕುಟುಂಬಗಳಿಗೆ ತಮ್ಮ ಗೌರವಯುತ ಶುಭಾಶಯಗಳನ್ನು ಕೋರಿದರು. ದೇವ ದೀಪಾವಳಿಯ ಸಮಯದ ಅದ್ಭುತ ಆಚರಣೆಗಳ ಬಗ್ಗೆ ಅವರು ಮಾತನಾಡಿದರು ಮತ್ತು ಇಂದು ಕೂಡ ಒಂದು ಶುಭ ಸಂದರ್ಭವಾಗಿದೆ ಮತ್ತು ಈ ಅಭಿವೃದ್ಧಿಯ ಹಬ್ಬಕ್ಕೆ ಎಲ್ಲರಿಗೂ ಅವರು ಶುಭಾಶಯಗಳನ್ನು ತಿಳಿಸಿದರು.

ಹರಿದ್ವಾರದ ಉತ್ತರಾಖಂಡದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಸಂತಾಪ

July 27th, 12:39 pm

ಹರಿದ್ವಾರ, ಉತ್ತರಾಖಂಡದ ಮಾನಸ ದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಉಂಟಾದ ಪ್ರಾಣಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಮತ್ಸ್ಯ ಸಂಪದ ಮೂಲಕ ತನ್ನ ಆದಾಯವನ್ನು ದ್ವಿಗುಣಗೊಳಿಸಿದ ಹರಿದ್ವಾರದ ರೈತನಿಗೆ ಪ್ರಧಾನಮಂತ್ರಿಯವರ ಮೆಚ್ಚುಗೆ

December 27th, 02:34 pm

ದೇಶಾದ್ಯಂತ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಾವಿರಾರು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ಸಂಸದರು, ಶಾಸಕರು ಹಾಗೂ ಸ್ಥಳೀಯ ಮಟ್ಟದ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಂಗ್ರಹಿತ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 25th, 04:31 pm

ಮೊದಲನೆಯದಾಗಿ, ನಿಮ್ಮೆಲ್ಲರಿಗೂ ಮೆರ್ರಿ ಕ್ರಿಸ್ಮಸ್! ಇಂದು ಭಾರತ ಮತ್ತು ಭಾರತೀಯತೆಯಲ್ಲಿ ನಂಬಿಕೆ ಹೊಂದಿರುವ ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿ ಕಾರ್ಯನಿರ್ವಹಿಸುವ ದಿನ. ಇಂದು ಮಹಾಮನ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನ. ಇಂದು ಅಟಲ್ ಜಿ ಅವರ ಜನ್ಮದಿನವೂ ಆಗಿದೆ. ಈ ಪವಿತ್ರ ಸಂದರ್ಭದಲ್ಲಿ ನಾನು ಮಹಾಮನ ಮಾಳವೀಯ ಅವರ ಪಾದಗಳಿಗೆ ನಮಸ್ಕರಿಸುತ್ತೇನೆ ಮತ್ತು ಅಟಲ್ ಜೀ ಅವರಿಗೆ ಗೌರವಪೂರ್ವಕ ನಮನ ಸಲ್ಲಿಸುತ್ತೇನೆ. ಅಟಲ್ ಜೀ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ದೇಶವು ಉತ್ತಮ ಆಡಳಿತ ದಿನವನ್ನು ಆಚರಿಸುತ್ತಿದೆ. ಉತ್ತಮ ಆಡಳಿತ ದಿನದಂದು ನಾನು ಎಲ್ಲಾ ನಾಗರಿಕರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

​​​​​​​ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ʻಪಂಡಿತ್‌ ಮಾಳವೀಯ ಅವರ ಸಮಗ್ರ ಕೃತಿ ಸಂಕಲನʼ ಪುಸ್ತಕವನ್ನು ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿಗಳು

December 25th, 04:30 pm

ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ʻಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಮಗ್ರ ಕೃತಿ ಸಂಕಲನʼದ 11 ಸಂಪುಟಗಳ ಸರಣಿಯ ಪೈಕಿ ಮೊದಲ ಸಂಪುಟವನ್ನು ಲೋಕಾರ್ಪಣೆ ಮಾಡಿದರು. ಶ್ರೀ ಮೋದಿ ಅವರು ಪಂಡಿತ್ ಮದನ್ ಮೋಹನ್ ಮಾಳವೀಯ ಅವರಿಗೆ ಪುಷ್ಪ ನಮನವನ್ನೂ ಸಲ್ಲಿಸಿದರು. ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಖ್ಯಾತ ಸ್ಥಾಪಕ ಪಂಡಿತ್ ಮದನ್ ಮೋಹನ್ ಮಾಳವೀಯ ಅವರು ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಪ್ರಮುಖ ಸ್ಥಾನ ಪಡೆದಿದ್ದಾರೆ. ಜನರಲ್ಲಿ ರಾಷ್ಟ್ರೀಯ ಪ್ರಜ್ಞೆಯನ್ನು ಜಾಗೃತಗೊಳಿಸಲು ಅವಿರತವಾಗಿ ಶ್ರಮಿಸಿದ ಶ್ರೇಷ್ಠ ವಿದ್ವಾಂಸ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿ ಮಾಳವೀಯ ಅವರನ್ನು ಸ್ಮರಿಸಲಾಗುತ್ತದೆ.

ಡೆಹ್ರಾಡೂನ್‌ನಿಂದ ದೆಹಲಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ ಸಂದರ್ಭದಲ್ಲಿ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಭಾಷಣ

May 25th, 11:30 am

ಉತ್ತರಾಖಂಡದ ಗವರ್ನರ್ ಶ್ರೀ ಗುರ್ಮೀತ್ ಸಿಂಗ್ ಜಿ, ಉತ್ತರಾಖಂಡದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಉತ್ತರಾಖಂಡ ಸರ್ಕಾರದ ಸಚಿವರು, ವಿವಿಧ ಸಂಸದರು, ಶಾಸಕರು, ಮೇಯರ್‌ಗಳು, ಜಿಲ್ಲಾ ಪರಿಷತ್ ಸದಸ್ಯರು, ಇತರ ಗಣ್ಯರು ಮತ್ತು ಉತ್ತರಾಖಂಡದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ ! ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕಾಗಿ ಉತ್ತರಾಖಂಡದ ಎಲ್ಲ ಜನರಿಗೆ ಅಭಿನಂದನೆಗಳು.

ಡೆಹ್ರಾಡೂನ್‌- ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ

May 25th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಡೆಹ್ರಾಡೂನ್‌ನಿಂದ ದೆಹಲಿಗೆ ಸಂಚರಿಸಿದ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ರೈಲಿಗೆ ಹಸಿರು ನಿಶಾನೆ ತೋರಿದರು. ಹೊಸದಾಗಿ ವಿದ್ಯುದ್ದೀಕರಿಸಿದ ರೈಲು ವಿಭಾಗಗಳನ್ನು ಅವರು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಉತ್ತರಾಖಂಡವನ್ನು ಶೇ.100 ರಷ್ಟು ವಿದ್ಯುದ್ದೀಕರಿಸಿದ ರಾಜ್ಯವೆಂದು ಘೋಷಿಸಿದರು.

ಉತ್ತರಾಖಂಡದ ಅಭಿವೃದ್ಧಿಗೆ ಶ್ರಮಿಸುವುದು ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಆದ್ಯತೆ: ಪ್ರಧಾನಿ ಮೋದಿ

February 07th, 02:40 pm

ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಾಖಂಡದ ಹರಿದ್ವಾರ ಮತ್ತು ಡೆಹ್ರಾಡೂನ್‌ನಲ್ಲಿ ವರ್ಚುವಲ್ ವಿಜಯ್ ಸಂಕಲ್ಪ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಾಸ್ತವಿಕವಾಗಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಉತ್ತರಾಖಂಡ ನಮಗೆ ದೇವಭೂಮಿ, ಆದರೆ ಈ ಜನರು ಉತ್ತರಾಖಂಡವನ್ನು ತಮ್ಮ ಕಮಾನು ಎಂದು ಪರಿಗಣಿಸುತ್ತಾರೆ. ಈ ಜನರು ರಾಜ್ಯಕ್ಕೆ ದೇವರು ನೀಡಿದ ನೈಸರ್ಗಿಕ ಸಂಪತ್ತು ಮತ್ತು ಸಂಪನ್ಮೂಲಗಳನ್ನು ಲೂಟಿ ಮಾಡುತ್ತಲೇ ಇರುತ್ತಾರೆ, ಅವರು ತಮ್ಮ ಜೇಬು ತುಂಬಿಸಿಕೊಳ್ಳುತ್ತಾರೆ. ಇದು ಅವರ ಮನಸ್ಥಿತಿ. ”

ಉತ್ತರಾಖಂಡದ ಹರಿದ್ವಾರ ಮತ್ತು ಡೆಹ್ರಾಡೂನ್‌ನಲ್ಲಿ ವರ್ಚುವಲ್ ವಿಜಯ್ ಸಂಕಲ್ಪ್ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ

February 07th, 02:39 pm

ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಾಖಂಡದ ಹರಿದ್ವಾರ ಮತ್ತು ಡೆಹ್ರಾಡೂನ್‌ನಲ್ಲಿ ವರ್ಚುವಲ್ ವಿಜಯ್ ಸಂಕಲ್ಪ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಾಸ್ತವಿಕವಾಗಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಉತ್ತರಾಖಂಡ ನಮಗೆ ದೇವಭೂಮಿ, ಆದರೆ ಈ ಜನರು ಉತ್ತರಾಖಂಡವನ್ನು ತಮ್ಮ ಕಮಾನು ಎಂದು ಪರಿಗಣಿಸುತ್ತಾರೆ. ಈ ಜನರು ರಾಜ್ಯಕ್ಕೆ ದೇವರು ನೀಡಿದ ನೈಸರ್ಗಿಕ ಸಂಪತ್ತು ಮತ್ತು ಸಂಪನ್ಮೂಲಗಳನ್ನು ಲೂಟಿ ಮಾಡುತ್ತಲೇ ಇರುತ್ತಾರೆ, ಅವರು ತಮ್ಮ ಜೇಬು ತುಂಬಿಸಿಕೊಳ್ಳುತ್ತಾರೆ. ಇದು ಅವರ ಮನಸ್ಥಿತಿ. ”

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

December 04th, 12:35 pm

ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜೀ, ಜನಪ್ರಿಯ, ಉತ್ಸಾಹಿ ಮುಖ್ಯಮಂತ್ರಿ ಶ್ರೀ ಪುಷ್ಕರ ಸಿಂಗ್ ಧಾಮೀ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾಗಿರುವ ಪ್ರಹ್ಲಾದ್ ಜೋಶೀ ಜೀ ಮತ್ತು ಅಜಯ್ ಭಟ್ ಜೀ, ಉತ್ತರಾಖಂಡದ ಸಚಿವರಾಗಿರುವ ಸತ್ಪಾಲ್ ಮಹಾರಾಜ್ ಜೀ, ಹರಾಕ್ ಸಿಂಗ್ ರಾವತ್ ಜೀ, ಮತ್ತು ರಾಜ್ಯ ಸಂಪುಟದ ಇತರ ಸದಸ್ಯರೇ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿಯಾಗಿರುವ ನಿಶಾಂಕ್ ಜೀ, ತೀರತ್ ಸಿಂಗ್ ರಾವತ್ ಜೀ,ಇತರ ಸಂಸತ್ ಸದಸ್ಯರೇ, ತ್ರಿವೇಂದ್ರ ಸಿಂಗ್ ರಾವತ್ ಜೀ, ವಿಜಯ ಬಹುಗುಣ ಜೀ, ರಾಜ್ಯ ವಿಧಾನ ಸಭೆಯ ಇತರ ಸದಸ್ಯರೇ, ಜಿಲ್ಲಾ ಪಂಚಾಯತ್ ಸದಸ್ಯರೇ, ಮದನ್ ಕೌಶಿಕ್ ಜೀ, ಮತ್ತು ನನ್ನ ಪ್ರೀತಿಯ ಸಹೋದರರೇ ಹಾಗು ಸಹೋದರಿಯರೇ,

ಡೆಹರಾಡುನ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 18 ಸಾವಿರ ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡಿದರು

December 04th, 12:34 pm

ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು ಏಳು ಯೋಜನೆಗಳನ್ನು ಉದ್ಘಾಟಿಸಿದರು. ಈ ಯೋಜನೆಗಳ ಮುಖ್ಯ ಉದ್ದೇಶ ಸುರಕ್ಷಿತ ಪ್ರಾಯಣವೇ ಆಗಿದೆ. ಈ ಭೂಪ್ರದೇಶದಲ್ಲಿ ಆಗುವ ಭೂ ಕುಸಿತವನ್ನು ತಡೆಹಿಡಿಯಲು ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ದೇವಪ್ರಯಾಗದಿಂದ ಶ್ರೀಕೋಟದವರೆಗೆ ರಸ್ತೆ ಅಗಲೀಕರಣ, ಬ್ರಹ್ಮಪುರಿಯಿಂದ ಕೋಡಿಯಾಳ ರಾಷ್ಟ್ರೀಯ ಹೆದ್ದಾರಿ 58ರ ಅಗಲೀಕರಣ, 120 ಮೆಗಾವಾಟ್ಸ್‌ ಸಾಮರ್ಥ್ಯದ ಜಲವಿದ್ಯುತ್‌ ಯೋಜನೆಯನ್ನು ಯಮುನಾ ನದಿಯ ಮೇಲಿನ ನಿರ್ಮಾಣಗಳು, ಡೆಹರಾಡುನ್‌ನಲ್ಲಿ ಹಿಮಾಲಯನ್‌ ಸಾಂಸ್ಕೃತಿಕ ಕೇಂದ್ರ, ರಾಜ್ಯದ ಸುಗಂಧದ್ರವ್ಯ ಕಲೆಯ ರಾಜ್ಯದಲ್ಲಿ ಸುಗಂಧ ಮತ್ತು ಸುಗಂಧ ದ್ರವ್ಯ ಸಸ್ಯಗಳ ಅಭಿವೃದ್ಧಿಗೆ ಪ್ರಯೋಗಾಲಯ ಸ್ಥಾಪನೆಗಳೂ ಒಳಗೊಂಡಿವೆ.

ಡಿಸೆಂಬರ್ 4ರಂದು ಡೆಹ್ರಾಡೂನ್‌ನಲ್ಲಿ 18,000 ಕೋಟಿ ರೂಪಾಯಿ ವೆಚ್ಚದ ಬಹುಹಂತದ ಯೋಜನೆಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

December 01st, 12:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ರ ಡಿಸೆಂಬರ್ 4 ರಂದು ಸುಮಾರು 18,000 ಕೋಟಿ ರೂಪಾಯಿ ಮೊತ್ತದ ಬಹು ಹಂತದ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಪ್ರಧಾನಮಂತ್ರಿಯವರ ಈ ಭೇಟಿಯಿಂದ ಈ ಭಾಗದ ರಸ್ತೆ ವಲಯದ ಮೂಲ ಸೌಲಭ್ಯ ಸುಧಾರಣೆ ಮತ್ತು ಪ್ರವಾಸಿಗರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಸಹಕಾರಿಯಾಗಲಿದೆ. ಒಂದು ಕಾಲದಲ್ಲಿ ದೂರದ ಪ್ರದೇಶಗಳೆಂದು ಪರಿಗಣಿಸಲ್ಪಟ್ಟ ಪ್ರದೇಶಗಳಲ್ಲಿ ಸಂಪರ್ಕ ಹೆಚ್ಚಿಸುವ ಪ್ರಧಾನಮಂತ್ರಿ ಅವರ ದೂರದೃಷ್ಟಿಗೆ ಈ ಯೋಜನೆಗಳು ಅನುಗುಣವಾಗಿವೆ.

ಉತ್ತರಾಖಂಡದಲ್ಲಿ ನಮಾಮಿ ಗಂಗೆ ಮಿಷನ್ ಅಡಿ ಆರು ಬೃಹತ್ ಯೋಜನೆಗಳನ್ನು ಉದ್ಘಾಟಿಸಲಿರುವ ಪ್ರಧಾನಿ

September 28th, 05:32 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡದಲ್ಲಿ ನಮಾಮಿ ಗಂಗೆ ಮಿಷನ್ ಅಡಿಯಲ್ಲಿ ಆರು ಬೃಹತ್ ಯೋಜನೆಗಳನ್ನು 2020 ಸೆಪ್ಟೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.

ಹರಿದ್ವಾರದಲ್ಲಿ ಉಮಿಯಾ ಧಾಮ್ ಆಶ್ರಮ ಉದ್ಘಾಟನೆ ಸಮಾರಂಭದಲ್ಲಿ ಸಭಿಕರನ್ನುದ್ದೇಶಿಸಿ ವಿಡಿಯೋ ಸಂವಾದದ ಮೂಲಕ ಪ್ರಧಾನಿ ಭಾಷಣ

October 05th, 10:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿದ್ವಾರದಲ್ಲಿ ಉಮಿಯಾ ಧಾಮ್ ಆಶ್ರಮದ ಉದ್ಘಾಟನೆ ಅಂಗವಾಗಿ ನಡೆದ ಕಾರ್ಯಕ್ರಮ ಉದ್ದೇಶಿಸಿ ವಿಡಿಯೋ ಸಂವಾದದ ಮೂಲಕ ಭಾಷಣ ಮಾಡಿದರು.

ಯೋಗದಿಂದ ಆಯುರ್ವೇದವರೆಗೆ ಭಾರತೀಯರು ತಮ್ಮ ಪರಂಪರೆಯ ಬಗ್ಗೆ ಹೆಮ್ಮೆಪಡುತ್ತಾರೆ : ಪ್ರಧಾನಿ ಮೋದಿ

May 03rd, 01:31 pm

ಉತ್ತರಾಖಂಡದ ಹರಿದ್ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಪತಂಜಲಿ ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಿದರು . ಸಭೆಯನ್ನುದ್ದೇಶಿಸಿ ಮಾತನಾಡುತ್ತಾ , ಅವರು ಭಾರತದ ಜನರಲ್ಲಿ ಸಂಪೂರ್ಣ ನಂಬಿಕೆಯನ್ನು ಹೊಂದಿದ್ದಾರೆ ಮತ್ತು ಅವರನ್ನು ಶಕ್ತಿಯ ಮೂಲವೆಂದು ಪ್ರಧಾನಿ ಕರೆದರು. ಸ್ವಚ್ಚತೆಯು ತಡೆಗಟ್ಟುವ ಆರೋಗ್ಯದ ಪ್ರಮುಖ ಅಂಶಗಳಲ್ಲಿ ಒಂದು ಎಂದು ಹೇಳಿದ್ದಾರೆ. ಕೊಳಕು-ಮುಕ್ತ ವಾತಾವರಣವು ಹೆಚ್ಚು ಬಡವರಿಗೆ ಪ್ರಯೋಜನವಾಗುತ್ತದೆ ಎಂದು ಮೋದಿ ಹೇಳಿದ್ದಾರೆ .

"ಉತ್ತರಾಖಂಡದ ಹರಿದ್ವಾರದಲ್ಲಿ ಪತಂಜಲಿ ಸಂಶೋಧನಾ ಸಂಸ್ಥೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು "

May 03rd, 01:30 pm

ಉತ್ತರಾಖಂಡದ ಹರಿದ್ವಾರದಲ್ಲಿ ಪತಂಜಲಿ ಸಂಶೋಧನಾ ಸಂಸ್ಥೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು . ಸಭೆಯನ್ನುದ್ದೇಶಿಸಿ ಮಾತನಾಡುತ್ತಾ , ಅವರು ಭಾರತದ ಜನರಲ್ಲಿ ಸಂಪೂರ್ಣ ನಂಬಿಕೆಯನ್ನು ಹೊಂದಿದ್ದರು ಮತ್ತು ಅವರನ್ನು ಶಕ್ತಿಯ ಮೂಲವೆಂದು ಪ್ರಧಾನಿ ಕರೆದರು.

ಪ್ರಧಾನಿ ಮೋದಿ ರಾಷ್ಟ್ರದ ಋಷಿ ಎಂದು ಬಾಬಾ ರಾಮ್ ದೇವ್ ಹೇಳಿದರು

May 03rd, 12:27 pm

ಯೋಗ ಗುರು ಬಾಬಾ ರಾಮ್ ದೇವ್ ಇಂದು ಪ್ರಧಾನಿ ಮೋದಿಯವರ ನಾಯಕತ್ವವನ್ನು ಹೊಗಳಿದರು ಮತ್ತು ಸಂಪೂರ್ಣ ದೇಶಕ್ಕೆ ಪ್ರಧಾನ ಮಂತ್ರಿಯವರ ಬಗ್ಗೆ ಹೆಮ್ಮೆಯಿದೆ . ಪ್ರಧಾನಿ ಮೋದಿಯವರನ್ನು ರಾಷ್ಟ್ರದ ಋಷಿ ಎಂದು ಸಂಭೋಧಿಸುತ್ತಾ , ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರ ಗೌರವ್ ಮತ್ತು ವಿಶ್ವ ನಾಯಕ್ ಅವರು ವಿಶ್ವ ಹಂತದಲ್ಲಿ ಭಾರತಕ್ಕೆ ಹೆಮ್ಮೆ ತಂದಿದ್ದಾರೆ .

Development of Uttarakhand Is a Priority for the BJP: PM Modi

February 10th, 03:35 pm

Prime Minister Narendra Modi addressed a huge public meeting in Haridwar, Uttarakhand. Shri Modi said that Uttarakhand was the Dev Bhoomi and did not deserve a tainted and corrupt government. He said that BJP was dedicated to open up new avenues for youth and ensure welfare of farmers.

ಉತ್ತರಾಖಂಡದಲ್ಲಿ ಜನರು ದೋಷಪೂರಿತ ಸರ್ಕಾರವನ್ನು ತೆಗೆದುಹಾಕಲು ನಿರ್ಧರಿಸಿದ್ದಾರೆ : ಶ್ರೀ ಮೋದಿ

February 10th, 03:32 pm

Speaking at a public meeting in Haridwar, Shri Modi remarked that people of Uttarakhand had made up their minds to remove the tainted Congress government from power in the state elections. Shri Modi said that it should be the collective resolve of people of Uttarakhand to rid the state from a government that had never thought of its people’s welfare.