ಶ್ರೀ ಹರೀಶ್ ಭಾಯ್ ನಾಯಕ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
April 12th, 02:30 pm
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾದ ಶ್ರೀ ಹರೀಶ್‌ಭಾಯ್ ನಾಯಕ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದರು. ಸಾಮಾಜಿಕ ಸೇವಾ ಚಟುವಟಿಕೆಗಳು ಮತ್ತು ಸಂಘಟನಾ ಕಾರ್ಯಗಳಿಗೆ ಅವರ ಕೊಡುಗೆ ಸದಾ ಸ್ಮರಣೀಯ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.