ಗುಜರಾತ್ ರಾಜ್ಯದ ಹಜೀರಾದಲ್ಲಿ ಆಯೋಜಿಸಲಾದ ಪ್ರದರ್ಶನದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
June 05th, 10:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಹಜೀರಾದಲ್ಲಿ ಆಯೋಜಿಸಲಾದ ಪ್ರದರ್ಶನದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಅವರು ‘ಮೇಕ್ ಇನ್ ಇಂಡಿಯಾ’ ಉಪಕ್ರಮದ ಅಡಿಯಲ್ಲಿ ದೇಶದ ರಕ್ಷಣಾ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಸಾಮರ್ಥ್ಯಗಳನ್ನು ವೀಕ್ಷಿಸಿದರು.ಗುಜರಾತ್‌ನ ಹಜೀರಾದಲ್ಲಿರುವ ಎಲ್ & ಟಿ ಸಂಕೀರ್ಣಕ್ಕೆ ಪ್ರಧಾನಮಂತ್ರಿ ಅವರ ಭೇಟಿ
June 05th, 08:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಹಜೀರಾದಲ್ಲಿರುವ ಲಾರ್ಸೆನ್ & ಟೂಬ್ರೊ (ಎಲ್ & ಟಿ) ಸಂಕೀರ್ಣಕ್ಕೆ ಭೇಟಿ ನೀಡಿ, ಕಂಪನಿಯು ವಿವಿಧ ವಲಯಗಳಲ್ಲಿ ಅಭಿವೃದ್ಧಿಪಡಿಸುತ್ತಿರುವ ಪ್ರವರ್ತಕ ನಾವೀನ್ಯತೆಗಳನ್ನು ಅವರು ವೀಕ್ಷಿಸಿದರು.ಗುಜರಾತ್‌ನ ಸೂರತ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 05th, 04:30 pm
ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಾಂಘ್ವಿ, ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ ಮತ್ತು ಸೂರತ್‌ನ ನನ್ನ ಆತ್ಮೀಯ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಸೂರತ್ ನಲ್ಲಿ ₹18,800 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಿದರು
June 05th, 04:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಗುಜರಾತ್ ನ ಜನತೆ ನೀಡುತ್ತಿರುವ ಅಚಲ ಬೆಂಬಲಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ನಾನು ಮೊದಲ ಬಾರಿಗೆ ಸೂರತ್ ಗೆ ಭೇಟಿ ನೀಡುತ್ತಿದ್ದೇನೆ. ಸೂರತ್ ನಿಂದ ನಾನು ಇಡೀ ಗುಜರಾತ್ ನ ಜನತೆಗೆ ನಮಸ್ಕರಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.ಜೂನ್ 5 ರಂದು ಸೂರತ್ ಮತ್ತು ದಮನ್ ಗೆ ಪ್ರಧಾನಮಂತ್ರಿ ಅವರ ಭೇಟಿ
June 04th, 10:03 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 5 ರಂದು ಗುಜರಾತ್ ಮತ್ತು ದಮನ್ ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಸುಮಾರು 2:30 ಕ್ಕೆ ಪ್ರಧಾನಮಂತ್ರಿ ಅವರು ಸೂರತ್ ಜಿಲ್ಲೆಯ ಹಜಿರಾಗೆ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ಕೈಗಾರಿಕಾ ಕಾರ್ಯಗಳು ಮತ್ತು ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ. ಮಧ್ಯಾಹ್ನ ಸುಮಾರು 4:15ಕ್ಕೆ ಪ್ರಧಾನಮಂತ್ರಿ ಅವರು ಸೂರತ್ ನಲ್ಲಿ ಸುಮಾರು ₹18,800 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ 2 ನೇ ಹಂತ ಮತ್ತು ಸೂರತ್ ಮೆಟ್ರೋ ರೈಲು ಯೋಜನೆಗೆ ಪ್ರಧಾನಿಯವರಿಂದ ಭೂಮಿ ಪೂಜೆ
January 18th, 10:30 am
ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ 2ನೇ ಹಂತ ಮತ್ತು ಸೂರತ್ ಮೆಟ್ರೋ ರೈಲು ಯೋಜನೆಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗುಜರಾತ್ ರಾಜ್ಯಪಾಲರು, ಕೇಂದ್ರ ಗೃಹ ಸಚಿವರು, ಗುಜರಾತ್ ಮುಖ್ಯಮಂತ್ರಿ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವರು ಉಪಸ್ಥಿತರಿದ್ದರು.India is taking bold decisions and implementing them with speed: PM Modi
January 18th, 10:30 am
PM Modi performed ‘bhoomi pujan’ of Ahmedabad Metro’s Phase-II and Surat Metro. “Ahmedabad and Surat are receiving very important gifts today. Metro will further strengthen the connectivity in what are two major business centres of the country,” the Prime Minister said in his remarks. He further added that the rapid expansion of metro network in India in recent years showed the gulf between the work done by our government and the previous ones.Ro-Pax service will decrease transportation costs and enhance ease of doing business: PM Modi
November 08th, 10:51 am
PM Modi inaugurated a Ro-Pax ferry service between Hazira near Surat and Ghogha in Bhavnagar district. Addressing the event, PM Modi said that the Ro-Pax service will decrease transportation costs and aid ease of doing business. The PM also mentioned that name of Ministry of Shipping will be changed to Ministry of Ports, Shipping and Waterways.ಗುಜರಾತ್ ನ ಹಾಜಿರಾದ ರೊ-ಪಾಕ್ಸ್ ಟರ್ಮಿನಲ್ ಉದ್ಘಾಟನೆ; ಘೋಘಾ ಮತ್ತು ಹಾಜಿರಾ ನಡುವೆ ರೊ-ಪಾಕ್ಸ್ ಹಡಗು ಸೇವೆಗಳಿಗೆ ಹಸಿರು ನಿಶಾನೆ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 08th, 10:50 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಗುಜರಾತ್ ನ ಹಾಜಿರಾದಲ್ಲಿ ರೊ-ಪಾಕ್ಸ್ ಟರ್ಮಿನಲ್ ಉದ್ಘಾಟಿಸಿದರು ಮತ್ತು ಹಾಜಿರಾ ಹಾಗೂ ಘೋಘಾ ನಡುವೆ ಹಡಗು ಸೇವೆಗಳಿಗೆ ಚಾಲನೆ ನೀಡಿದರು. ಅವರು ಸ್ಥಳೀಯ ಬಳಕೆದಾರರೊಂದಿಗೆ ಸಂವಾದ ನಡೆಸಿದರು. ಪ್ರಧಾನಮಂತ್ರಿ ಅವರು ನೌಕಾ ಸಚಿವಾಲಯವನ್ನು ಬಂದರು, ನೌಕಾ ಮತ್ತು ಜಲಮಾರ್ಗಗಳ ಸಚಿವಾಲಯ ಎಂದು ಮರು ನಾಮಕರಣ ಮಾಡಿದರು.ಗುಜರಾತ್ ನ ಹಾಜಿರಾದಲ್ಲಿ ರೋ-ಪಾಕ್ಸ್ ಟರ್ಮಿನಲ್ ಉದ್ಘಾಟನೆ ಮತ್ತು ಹಾಜೀರಾ-ಘೋಗಾ ನಡುವೆ ರೋ-ಪಾಕ್ಸ್ ದೋಣಿ ಸೇವೆಗೆ ನವಂಬರ್ 8 ರಂದು,
November 06th, 03:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ನವೆಂಬರ್ 8,2020ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಗುಜರಾತ್ ನ ಹಾಜೀರಾದಲ್ಲಿ ರೋ-ಪಾಕ್ಸ್ ಟರ್ಮಿನಲ್ ಉದ್ಘಾಟಿಸುವರು ಮತ್ತು ಹಾಜೀರಾ ಮತ್ತು ಘೋಗಾ ನಡುವೆ ರೋ-ಪಾಕ್ಸ್ ದೋಣಿ ಸೇವೆಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ದೇಶದ ಜಲಮಾರ್ಗಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಮತ್ತು ಅವುಗಳನ್ನು ದೇಶದ ಆರ್ಥಿಕಾಭಿವೃದ್ಧಿಯ ಜೊತೆ ಜೋಡಿಸಬೇಕು ಎಂಬ ಪ್ರಧಾನಿ ಅವರ ಕನಸು ನನಸು ಮಾಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು ಸೇವೆಗಳ ಸ್ಥಳೀಯ ಬಳಕೆದಾರರ ಜೊತೆ ಸಂವಾದ ನಡೆಸಲಿದ್ದಾರೆ. ಕೇಂದ್ರ ಬಂದರು ಖಾತೆ ರಾಜ್ಯ ಸಚಿವ ಮತ್ತು ಗುಜರಾತ್ ಮುಖ್ಯಮಂತ್ರಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.ರೋಮಾಂಚಕ ಗುಜರಾತ್ ಶೃಂಗ 2019ರಲ್ಲಿ ಭಾಗಿಯಾಗಲು ನಾಳೆ ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿಗಳು
January 16th, 08:03 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2019ರ ಜನವರಿ 17 ಅಂದರೆ ನಾಳೆಯಿಂದ ಮೂರು ದಿನಗಳ ಗುಜರಾತ್ ಭೇಟಿ ಕೈಗೊಳ್ಳಲಿದ್ದಾರೆ. ಈ ವೇಳೆ, ಅವರು ಗಾಂಧಿನಗರ, ಅಹ್ಮದಾಬಾದ್ ಮತ್ತು ಹಜೀರಾಕ್ಕೆ ಭೇಟಿ ನೀಡಲಿದ್ದಾರೆ.