ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಶ್ರೀ ಹೆಚ್.ಡಿ. ದೇವೇಗೌಡ

January 29th, 04:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಮಂತ್ರಿ ಶ್ರೀ ಹೆಚ್.ಡಿ. ದೇವೇಗೌಡ ಅವರು ಇಂದು ಭೇಟಿ ಮಾಡಿದರು. ಪ್ರಮುಖ ವಿಷಯಗಳ ಕುರಿತು ಶ್ರೀ ಹೆಚ್.ಡಿ. ದೇವೇಗೌಡ ಅವರ ದೂರದೃಷ್ಟಿ ಅತ್ಯಂತ ಗಮನಾರ್ಹವಾಗಿವೆ ಮತ್ತು ಭಾರತದ ಅಭಿವೃದ್ಧಿಯ ಬಗ್ಗೆ ಅವರಿಗಿರುವ ಕಾಳಜಿ ಸಮಾನವಾಗಿ ಮೆಚ್ಚುವಂತದ್ದು ಎಂದು ಶ್ರೀ ಮೋದಿ ಅವರು ತಿಳಿಸಿದರು.

ಪ್ರಧಾನ ಮಂತ್ರಿ ಮೋದಿಯವರನ್ನು ಭೇಟಿ ಮಾಡಿದ ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ

July 25th, 08:41 pm

ಮಾಜಿ ಪ್ರಧಾನ ಮಂತ್ರಿ ಶ್ರೀ ಹೆಚ್ ಡಿ ದೇವೇಗೌಡ ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ದೆಹಲಿಯ 7, ಲೋಕ ಕಲ್ಯಾಣ ಮಾರ್ಗದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

​​​​​​​ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕರ್ನಾಟಕದ ಜೆಡಿಎಸ್ ಅಧ್ಯಕ್ಷ ಹಾಗೂ ಎಚ್ .ಡಿ.ರೇವಣ್ಣ ಅವರನ್ನು ಭೇಟಿ ಮಾಡಿದ ಪ್ರಧಾನಿ

December 21st, 12:57 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಿ ಶ್ರೀ ಎಚ್.ಡಿ. ದೇವೇಗೌಡ, ಕರ್ನಾಟಕದ ಜೆಡಿಎಸ್ ಅಧ್ಯಕ್ಷ ಶ್ರೀ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಶ್ರೀ ಎಚ್ .ಡಿ.ರೇವಣ್ಣ ಅವರನ್ನು ಭೇಟಿ ಮಾಡಿದರು.