ಇಂಡೋನೇಷ್ಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 07th, 11:47 pm
ಇಂಡೋನೇಷ್ಯಾದಲ್ಲಿ ನಡೆದ ಈ ಮೂರು ಕಾರ್ಯಕ್ರಮಗಳಲ್ಲೂ 'ಪಂದ್ಯ ಶ್ರೇಷ್ಠ' ಪ್ರಶಸ್ತಿ ಒಂದೇ ಆಗಿತ್ತು - ನೀವೆಲ್ಲರೂ ಇಂಡೋನೇಷ್ಯಾದಲ್ಲಿ ವಾಸಿಸುತ್ತಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಜವಾದ 'ಪಂದ್ಯ ಶ್ರೇಷ್ಠರು'!ಜಕಾರ್ತದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
July 07th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಕಾರ್ತದಲ್ಲಿಂದು ನಡೆದ ಅನಿವಾಸಿ ಭಾರತೀಯ ಸಮುದಾಯದ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಅವರಿಗೆ, ಅನಿವಾಸಿ ಭಾರತೀಯರು ಮತ್ತು ಭಾರತದ ಇಂಡೋನೇಷ್ಯಾದ ಸ್ನೇಹಿತರು ದೊಡ್ಡ ಸಂಖ್ಯೆಯಲ್ಲಿ ಸೇರಿ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತ ನೀಡಿದರು. ವಿಶೇಷ ಗೌರವದ ಸಂಕೇತವಾಗಿ ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪ್ರಬೋವೊ ಸುಬಿಯಾಂಟೊ ಅವರು ಕೂಡ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರೊಂದಿಗೆ ಪಾಲ್ಗೊಂಡರು.ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಇಂಡೋನೇಷ್ಯಾ ಗಣರಾಜ್ಯದ ಬಿಂಟಾಂಗ್ ಆದಿಪೂರ್ಣ'ವನ್ನು ಆ ದೇಶದ ರಾಷ್ಟ್ರಾಧ್ಯಕ್ಷರು ಪ್ರಧಾನಮಂತ್ರಿ ಅವರಿಗೆ ಪ್ರದಾನ ಮಾಡಿದರು
July 07th, 03:27 pm
ಇಂಡೋನೇಷ್ಯಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಪ್ರಬೋವೊ ಸುಬಿಯಾಂಟೊ ಅವರು ಇಂದು 'ಇಂಡೋನೇಷ್ಯಾ ಗಣರಾಜ್ಯದ ಬಿಂಟಾಂಗ್ ಆದಿಪೂರ್ಣ' ಪದಕದವನ್ನು ಗೌರವಪೂರ್ಣವಾಗಿ ಪ್ರಧಾನಮಂತ್ರಿಯವರಿಗೆ ಪ್ರದಾನ ಮಾಡಿದರು. ಈ ಪ್ರಶಸ್ತಿಯು ಇಂಡೋನೇಷ್ಯಾ ಗಣರಾಜ್ಯದ ಅತ್ಯುನ್ನತ ನಾಗರಿಕ ಗೌರವವಾಗಿದೆ. ಭಾರತ-ಇಂಡೋನೇಷ್ಯಾ ಸಂಬಂಧಗಳನ್ನು ಬಲಪಡಿಸುವಲ್ಲಿ ಪ್ರಧಾನಮಂತ್ರಿಯವರ ನಾಯಕತ್ವ ಮತ್ತು ಅಸಾಧಾರಣ ಕೊಡುಗೆಗಾಗಿ ಇದನ್ನು ಪ್ರಧಾನಮಂತ್ರಿಯವರಿಗೆ ನೀಡಲಾಯಿತು. ಪ್ರಧಾನಮಂತ್ರಿಯವರು ಈ ಪ್ರಶಸ್ತಿಯನ್ನು ಭಾರತ ಮತ್ತು ಇಂಡೋನೇಷ್ಯಾ ಜನರಿಗೆ ಮತ್ತು ಎರಡೂ ದೇಶಗಳ ನಡುವಿನ ಶಾಶ್ವತ ನಾಗರಿಕ ಸಂಬಂಧಗಳಿಗೆ ಅರ್ಪಿಸಿದ್ದಾರೆ.ಪ್ರಧಾನಿ ಮೋದಿಯವರಿಗೆ ಅತ್ಯುನ್ನತ ನಾಗರಿಕ ಗೌರವಗಳು
December 18th, 04:30 pm
ಪ್ರಧಾನಿ ನರೇಂದ್ರ ಮೋದಿಯವರಿಗೆ ಹಲವಾರು ರಾಷ್ಟ್ರಗಳು ಅತ್ಯುನ್ನತ ನಾಗರಿಕ ಗೌರವಗಳನ್ನು ನೀಡಿ ಗೌರವಿಸಿವೆ. ಈ ಮನ್ನಣೆಗಳು ಪ್ರಧಾನಿ ಮೋದಿಯವರ ನಾಯಕತ್ವ ಮತ್ತು ದೃಷ್ಟಿಯ ಪ್ರತಿಬಿಂಬವಾಗಿದ್ದು, ಜಾಗತಿಕ ವೇದಿಕೆಯಲ್ಲಿ ಭಾರತದ ಹೊರಹೊಮ್ಮುವಿಕೆಯನ್ನು ಬಲಪಡಿಸಿದೆ. ಇದು ಪ್ರಪಂಚದಾದ್ಯಂತದ ದೇಶಗಳೊಂದಿಗೆ ಭಾರತದ ಬೆಳೆಯುತ್ತಿರುವ ಬಾಂಧವ್ಯವನ್ನು ಪ್ರತಿಬಿಂಬಿಸುತ್ತದೆ.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ದಿನಾಚರಣೆಯಲ್ಲಿ ಮಾರಿಷಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಸ್ವೀಕರಿಸಿದರು
March 12th, 03:12 pm
ಸಮಾರಂಭದಲ್ಲಿ, ಮಾರಿಷಸ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಶ್ರೀ ಧರ್ಮಬೀರ್ ಗೋಖೂಲ್ ಅವರು ಪ್ರಧಾನಿ ಮೋದಿಯವರಿಗೆ ಮಾರಿಷಸ್ ನ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಅಂಡ್ ಕೀ ಆಫ್ ದಿ ಇಂಡಿಯನ್ ಓಷನ್ (ಜಿ.ಸಿ.ಎಸ್.ಕೆ) ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಭಾರತದ ನಾಯಕರೊಬ್ಬರು ಈ ಗೌರವಕ್ಕೆ ಪಾತ್ರರಾಗುತ್ತಿರುವುದು ಇದೇ ಮೊದಲು.ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಮತ್ತು ಕೀ ಆಫ್ ಇಂಡಿಯನ್ ಓಷನ್ (ಜಿ ಸಿ ಎಸ್ ಕೆ ) ಗೌರವ ಪಡೆದ ಪ್ರಧಾನಮಂತ್ರಿಯವರ ಸ್ವೀಕಾರದ ನುಡಿಗಳು
March 12th, 03:00 pm
ಮಾರಿಷಸ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ಇದು ಕೇವಲ ನನಗೆ ಸಂದಿರುವ ಗೌರವವಲ್ಲ. ಇದು 1.4 ಶತಕೋಟಿ ಭಾರತೀಯರಿಗೆ ಸಂದ ಗೌರವವಾಗಿದೆ. ಭಾರತ ಮತ್ತು ಮಾರಿಷಸ್ ನಡುವಿನ ಶತಮಾನಗಳ ಹಳೆಯ ಸಾಂಸ್ಕೃತಿಕ ಮತ್ತು ಐತಿಹಾಸಿಕ ಬಾಂಧವ್ಯದ ಗೌರವ ಸೂಚಕವಾಗಿದೆ. ಇದು ಪ್ರಾದೇಶಿಕ ಶಾಂತಿ, ಪ್ರಗತಿ, ಭದ್ರತೆ ಮತ್ತು ಸುಸ್ಥಿರ ಅಭಿವೃದ್ಧಿಗೆ ನಮ್ಮ ಹಂಚಿತ ಬದ್ಧತೆಯ ಗುರುತಿಸುವಿಕೆ ಹಾಗೂ ಜಾಗತಿಕ ದಕ್ಷಿಣದ ಹಂಚಿತ ಭರವಸೆಗಳು ಮತ್ತು ಆಕಾಂಕ್ಷೆಗಳ ಸಂಕೇತವಾಗಿದೆ. ನಾನು ಈ ಪ್ರಶಸ್ತಿಯನ್ನು ಪೂರ್ಣ ನಮ್ರತೆ ಮತ್ತು ಕೃತಜ್ಞತೆಯಿಂದ ಸ್ವೀಕರಿಸುತ್ತೇನೆ. ಶತಮಾನಗಳ ಹಿಂದೆ ಭಾರತದಿಂದ ಮಾರಿಷಸ್‌ಗೆ ಬಂದ ನಿಮ್ಮ ಪೂರ್ವಜರಿಗೆ ಮತ್ತು ಅವರ ಎಲ್ಲಾ ಪೀಳಿಗೆಗೆ ನಾನು ಅದನ್ನು ಅರ್ಪಿಸುತ್ತೇನೆ. ತಮ್ಮ ಕಠಿಣ ಪರಿಶ್ರಮದ ಮೂಲಕ ಅವರು ಮಾರಿಷಸ್ ಅಭಿವೃದ್ಧಿಯಲ್ಲಿ ಸುವರ್ಣ ಅಧ್ಯಾಯವನ್ನು ಬರೆದಿದ್ದಾರೆ ಮತ್ತು ಅದರ ರೋಮಾಂಚಕ ವೈವಿಧ್ಯತೆಗೆ ಕೊಡುಗೆ ನೀಡಿದ್ದಾರೆ.ಮಾರಿಷಸ್ ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣ
March 12th, 06:07 am
10 ವರ್ಷಗಳ ಹಿಂದೆ ಇದೇ ದಿನದಂದು ನಾನು ಮಾರಿಷಸ್‌ಗೆ ಬಂದಾಗ, ನಾನು ಆಗಮನಕ್ಕೆ ಕೇವಲ ಒಂದು ವಾರ ಮೊದಲು ನಾವು ಹೋಳಿ ಆಚರಿಸಿದೆವು. ನಾನು ಭಾರತದಿಂದ ಫಾಗುವಾದ ಉತ್ಸಾಹವನ್ನು ನನ್ನೊಂದಿಗೆ ತಂದಿದ್ದೇನೆ. ಈ ಬಾರಿ ನಾನು ಮಾರಿಷಸ್‌ನಿಂದ ಭಾರತಕ್ಕೆ ಹೋಳಿಯ ಬಣ್ಣಗಳನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ. ಒಂದು ದಿನದ ನಂತರ ನಾವು ಅಲ್ಲಿ ಹೋಳಿಯನ್ನು ಆಚರಿಸುತ್ತೇವೆ. 14 ರಂದು ಎಲ್ಲೆಡೆ ಬಣ್ಣ ಇರುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರಿಷಸ್ ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು
March 11th, 07:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಪ್ರಧಾನಮಂತ್ರಿ ಘನತೆವೆತ್ತ ನವೀನಚಂದ್ರ ರಾಮಗೂಲಮ್ ಅವರೊಂದಿಗೆ ಟ್ರಿಯಾನಾನ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮಾರಿಷಸ್ ನಲ್ಲಿರುವ ಭಾರತೀಯ ಸಮುದಾಯ ಮತ್ತು ಭಾರತದ ಸ್ನೇಹಿತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮವು ವಿದ್ಯಾರ್ಥಿಗಳು, ವೃತ್ತಿಪರರು, ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳು ಮತ್ತು ವ್ಯಾಪಾರ ಮುಖಂಡರು ಸೇರಿದಂತೆ ಭಾರತೀಯ ಸಮುದಾಯದ ಉತ್ಸಾಹಪೂರ್ಣ ಭಾಗವಹಿಸುವಿಕೆಗೆ ಸಾಕ್ಷಿಯಾಯಿತು. ಇದರಲ್ಲಿ ಮಾರಿಷಸ್ ನ ಹಲವಾರು ಸಚಿವರು, ಸಂಸದರು ಮತ್ತು ಇತರ ಗಣ್ಯರು ಭಾಗವಹಿಸಿದ್ದರು.ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಟಿಮೋರ್-ಲೆಸ್ಟೆಯ ಗ್ರ್ಯಾಂಡ್ ಕಾಲರ್ ಆಫ್ ದಿ ಆರ್ಡರ್ ಪ್ರಶಸ್ತಿ ಗೌರವ ಪಡೆದಿರುವ ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೆಮ್ಮೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ
August 11th, 11:07 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರ್ಯಾಂಡ್ ಕಾಲರ್ ಆಫ್ ದಿ ಆರ್ಡರ್ ಆಫ್ ಟಿಮೋರ್-ಲೆಸ್ಟೆ ನೀಡಿ ಗುರುತಿಸಿರುವ ಬಗ್ಗೆ ಟ್ವೀಟ್ ನಲ್ಲಿ ಅಪಾರ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಈ ಪ್ರತಿಷ್ಠಿತ ಗೌರವವು ಭಾರತ ಮತ್ತು ಟಿಮೋರ್-ಲೆಸ್ಟೆ ನಡುವಿನ ಆಳವಾದ ಸಂಬಂಧ ಮತ್ತು ಪರಸ್ಪರ ಗೌರವವನ್ನು ಎತ್ತಿ ತೋರಿಸುತ್ತದೆ.ಫಿಜಿ ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಭಾಜನರಾದ ರಾಷ್ಟ್ರಪತಿಯವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ
August 06th, 05:29 pm
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಫಿಜಿ ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿ ಕಂಪ್ಯಾನಿಯನ್ ಆಫ್ ದಿ ಆರ್ಡರ್ ಆಫ್ ಫಿಜಿ ಯನ್ನು ಪ್ರದಾನ ಮಾಡಲಾಗಿದೆ.22ನೇ ʻಭಾರತ-ರಷ್ಯಾ ವಾರ್ಷಿಕ ಶೃಂಗಸಭೆʼ ಬಳಿಕ ಉಭಯ ದೇಶಗಳ ಜಂಟಿ ಹೇಳಿಕೆ
July 09th, 09:54 pm
1. 22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜುಲೈ 8 ಮತ್ತು 9ರಂದು ರಷ್ಯಾ ಒಕ್ಕೂಟಕ್ಕೆ ಅಧಿಕೃತ ಭೇಟಿ ನೀಡಿದರು.ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಪ್ರಧಾನಮಂತ್ರಿ
July 09th, 08:12 pm
ಕ್ರೆಮ್ಲಿನ್ ನ ಸೇಂಟ್ ಆಂಡ್ರ್ಯೂ ಹಾಲ್ ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ, ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ವ್ಲಾಡಿಮಿರ್ ಪುಟಿನ್ ರವರು ಭಾರತ-ರಷ್ಯಾ ಸಂಬಂಧಗಳ ಉತ್ತಮಗೊಳಿಸುವಿಕೆಗೆ ನೀಡಿದ ಕೊಡುಗೆಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ರಷ್ಯಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ದಿ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಯನ್ನು 2019ರಲ್ಲಿ ಘೋಷಿಸಲಾಗಿತ್ತು.ಪ್ರಧಾನ ಮಂತ್ರಿ ಅವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಹಾನರ್ ಪ್ರಶಸ್ತಿ ಪ್ರದಾನ
July 13th, 11:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್ ನ ಅತ್ಯುನ್ನತ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಹಾನರ್ ನ್ನು ಫ್ರಾನ್ಸ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ಪ್ರದಾನ ಮಾಡಿದರು.ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಭಾಜನರಾದ ಪ್ರಧಾನಿ
December 17th, 08:42 pm
ಭೂತಾನ್‌ನ ರಾಷ್ಟ್ರೀಯ ದಿನದ ಸಂದರ್ಭದಲ್ಲಿ ದೇಶದ ದೊರೆ ಘನತೆವೆತ್ತ ಜಿಗ್ಮೆ ಕೇಸರ್ ನಮ್‌ಗೇಯ್ಲ್ ವಾಂಗ್‌ಚುಕ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಗೌರವ ʻಆರ್ಡರ್ ಆಫ್ ದಿ ಡ್ರಕ್ ಗ್ಯಾಲ್ಪೊʼ ಪ್ರಶಸ್ತಿಯನ್ನು ಘೋಷಿಸಿದ್ದಾರೆ. ಈ ಆತ್ಮೀಯ ನಡೆಗಾಗಿ ಶ್ರೀ ಮೋದಿ ಅವರು ಭೂತಾನ್ನ ಘನತೆವೆತ್ತ ದೊರೆಗೆ ಕೃತಜ್ಞತೆ ಅರ್ಪಿಸಿದ್ದಾರೆ.