ಖ್ಯಾತ ಬರಹಗಾರ ವಿನೋದ್ ಕುಮಾರ್ ಶುಕ್ಲಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
December 23rd, 07:35 pm
ಖ್ಯಾತ ಬರಹಗಾರ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಿನೋದ್ ಕುಮಾರ್ ಶುಕ್ಲಾಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಹಿಂದಿ ಸಾಹಿತ್ಯ ಜಗತ್ತಿಗೆ ಅವರು ನೀಡಿದ ಅಮೂಲ್ಯ ಕೊಡುಗೆಗಾಗಿ ಅವರನ್ನು ಸದಾ ಸ್ಮರಿಸಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಖ್ಯಾತ ಸಾಹಿತಿ ಮತ್ತು ಶಿಕ್ಷಣ ತಜ್ಞರಾದ ರಾಮದರಾಶ್ ಮಿಶ್ರಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
November 01st, 02:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಖ್ಯಾತ ಸಾಹಿತಿ ಮತ್ತು ಶಿಕ್ಷಣತಜ್ಞರಾದ ರಾಮದರಾಶ್ ಮಿಶ್ರಾ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಪಾಡ್‌ಕ್ಯಾಸ್ಟ್ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ
March 16th, 11:47 pm
ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು
March 16th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್ ಆಫ್ ದಿ ಬಾಕ್ಸ್) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.ಹಿಂದಿ ಭಾಷೆ ಕಲಿಯುವ ಉಕ್ರೇನ್ ವಿದ್ಯಾರ್ಥಿಗಳೊಂದಿಗೆ ಪ್ರಧಾನ ಮಂತ್ರಿ ಅವರ ಸಂವಾದ
August 23rd, 06:33 pm
ಕೀವ್ ನಲ್ಲಿರುವ ಸ್ಕೂಲ್ ಆಫ್ ಓರಿಯಂಟಲ್ ಸ್ಟಡೀಸ್‌ನಲ್ಲಿ ಹಿಂದಿ ಭಾಷೆಯನ್ನು ಕಲಿಯುತ್ತಿರುವ ಉಕ್ರೇನ್ ವಿದ್ಯಾರ್ಥಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂವಾದ ನಡೆಸಿದರು.ಪ್ರಾದೇಶಿಕ ಭಾಷೆಯಲ್ಲಿ ನೇಮಕಾತಿ ಪರೀಕ್ಷೆಗಳನ್ನು ನಡೆಸುತ್ತಿರುವುದಕ್ಕಾಗಿ ಪ್ರಧಾನಮಂತ್ರಿಯವರು ಮೆಚ್ಚುಗೆ ವ್ಯಕ್ತಪಡಿಸಿದರು
April 19th, 03:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ಸರ್ಕಾರಿ ಉದ್ಯೋಗಗಳಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ ಮಲ್ಟಿಟಾಸ್ಕಿಂಗ್ ಸ್ಟಾಫ್ (SSC MTS) ಪರೀಕ್ಷೆ ಮತ್ತು CHSLE ಪರೀಕ್ಷೆಯನ್ನು ನಡೆಸುವ ಉಪಕ್ರಮವನ್ನು ಶ್ಲಾಘಿಸಿದ್ದಾರೆ. ಇದು ಭಾಷೆಯ ಸಮಸ್ಯೆಯಿಲ್ಲದೆ ಎಲ್ಲಾ ಯುವಕರಿಗೆ ಸಮಾನ ಅವಕಾಶವನ್ನು ಒದಗಿಸುತ್ತದೆ. .ಸೋಶಿಯಲ್ ಮೀಡಿಯಾ ಕಾರ್ನರ್ - 14 ಸೆಪ್ಟೆಂಬರ್
September 14th, 06:45 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !प्रधानमंत्री ने हिंदी दिवस के अवसर पर शुभकामनाएं दीं
September 14th, 05:47 pm
प्रधानमंत्री नरेंद्र मोदी ने हिन्दी दिवस के अवसर पर देश की जनता को शुभकानाएं दी। इस अवसर पर उन्होंने ट्वीट में लिखा, 'हिंदी दिवस की शुभकामनाएं'.PM bows to Rashtrakavi Ramdhari Singh Dinkar, on his birth anniversary
September 23rd, 07:30 am
PM greets the people on Hindi Diwas
September 14th, 08:10 pm
भाषा चैतन्य होती है और उस चेतना की अनुभूति आवश्यक होती है: प्रधानमंत्री मोदी
September 10th, 02:06 pm
PM to visit Bhopal 10th September, 2015
September 09th, 06:46 pm
Text of PM’s address at interaction with Indologists, Hindi students and Indian community in Tashkent
July 07th, 01:49 pm
PM addresses Indologists, Hindi language students and Indian community in Tashkent
July 07th, 11:12 am