ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:14 pm
ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:13 pm
ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ಮಾತಾ ಜಗದಾಂಬೆಯ ಅನುಗ್ರಹ ಭಕ್ತರ ಜೀವನದಲ್ಲಿ ಸಂತೋಷದ ಹೊಸ ಉದಯ ತರಲಿದೆ - ಪ್ರಧಾನಮಂತ್ರಿ ಪ್ರತಿಪಾದನೆ
April 04th, 08:28 am
ಮಾತಾ ಜಗದಾಂಬೆಯ ಅನುಗ್ರಹವು ಭಕ್ತರ ಜೀವನದಲ್ಲಿ ಸಂತೋಷದ ಹೊಸ ಹೊನಲು ತರಲಿದೆ ಎಂಬ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಿಳಿಸಿದ್ದಾರೆ. . ಶ್ರೀಮತಿ ಲತಾ ಮಂಗೇಶ್ಕರ್ ಅವರ ಪ್ರಾರ್ಥನೆಯನ್ನು ಸಹ ಅವರು ಹಂಚಿಕೊಂಡಿದ್ದಾರೆ.ನವರಾತ್ರಿಯ ಸಂದರ್ಭದಲ್ಲಿ ಮಾ ದುರ್ಗೆಯ ಆರಾಧನೆಯೊಂದಿಗೆ ಭಕ್ತರ ಜೀವನದಲ್ಲಿ ಹೊಸ ಶಕ್ತಿ ಮತ್ತು ಸಂಕಲ್ಪ ತುಂಬುತ್ತದೆ ಎಂದು ಪ್ರಧಾನಮಂತ್ರಿಯವರು ವಿವರಿಸಿದರು
April 03rd, 06:57 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವರಾತ್ರಿಯಲ್ಲಿ ಮಾ ದುರ್ಗೆಯ ಆರಾಧನೆಯೊಂದಿಗೆ ಭಕ್ತರ ಜೀವನದಲ್ಲಿ ಹೊಸ ಶಕ್ತಿ ಮತ್ತು ಸಂಕಲ್ಪವನ್ನು ವಿವರಿಸಿದರು. ಅವರು ಶ್ರೀಮತಿ ಅನುರಾಧಾ ಪೌಡ್ವಾಲ್ ಅವರ ಭಜನೆಯನ್ನೂ ಸಹ ಹಂಚಿಕೊಂಡರು.ಮಾತೆ ಅಂಬೆಯ ಆರಾಧನೆಯೊಂದಿಗೆ ನವರಾತ್ರಿಯ ಪವಿತ್ರತೆಯನ್ನು ಪ್ರಧಾನಮಂತ್ರಿಯವರು ಪ್ರತಿಬಿಂಬಿಸುತ್ತಾರೆ
April 02nd, 10:06 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾತೆ ಅಂಬೆಯ ಆರಾಧನೆಯೊಂದಿಗೆ ನವರಾತ್ರಿಯ ಪವಿತ್ರ ಆಚರಣೆಯನ್ನು ಮಾಡಿದರು. ದೇವಿ ಮಾತೆಯ ರೂಪಗಳಿಗೆ ಸಮರ್ಪಿತವಾದ ಪ್ರಾರ್ಥನೆಯನ್ನು ಎಲ್ಲರೂ ಕೇಳುವಂತೆ ಒತ್ತಾಯಿಸಿದರು, ಮತ್ತು ಅವರು ಪ್ರಾರ್ಥನೆಯನ್ನು ಹಂಚಿಕೊಂಡರು.ನವರಾತ್ರಿಯಲ್ಲಿ ಮಾತಾ ದೇವಿಯ ಆರಾಧನೆಯಿಂದ ಮನಸ್ಸು ಅಪಾರ ಪ್ರಶಾಂತತೆಯಿಂದ ತುಂಬಿರಲಿದೆ - ಪ್ರಧಾನಮಂತ್ರಿ ಪ್ರತಿಪಾದನೆ
April 01st, 10:02 am
ನವರಾತ್ರಿಯಲ್ಲಿ ಮಾತಾ ದೇವಿಯ ಆರಾಧನೆಯಿಂದ ಮನಸ್ಸು ಅಪಾರ ಪ್ರಶಾಂತತೆಯಿಂದ ಕೂಡಿರಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿವರಿಸಿದ್ದಾರೆ. ಪಂಡಿತ್ ಭೀಮಸೇನ್ ಜೋಶಿಯವರ ಭಜನೆಯನ್ನೂ ಅವರು ಹಂಚಿಕೊಂಡಿದ್ದಾರೆ.ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 23rd, 06:11 pm
ಸಹೋದರ ಸಹೋದರಿಯರೆ, ನೀವೆಲ್ಲಾ ದಯಮಾಡಿ ಮಾತಂಗೇಶ್ವರನಿಗೆ ಜೈ, ಬಾಗೇಶ್ವರ ಧಾಮಕ್ಕೆ ಜೈ, ಜಟಾಶಂಕರ ಧಾಮಕ್ಕೆ ಜೈ ಎಂದು ಹೇಳಿ, ನಾನು ನನ್ನ ಎರಡೂ ಕೈಗಳನ್ನು ಎತ್ತಿ ಹಿಡಿದು ನಿಮ್ಮ ಪರವಾಗಿ ನಮಿಸುತ್ತಿದ್ದೇನೆ, ಜೋರಾಗಿ ರಾಮ್-ರಾಮ್ ಎಂದು ಹೇಳಿ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಿದರು
February 23rd, 04:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಛತ್ತರಪುರ ಜಿಲ್ಲೆಯ ಗರ್ಹಾ ಗ್ರಾಮದಲ್ಲಿ ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ ನೆರವೇರಿಸಿದರು. ಅಲ್ಪಾವಧಿಯಲ್ಲಿಯೇ ಎರಡನೇ ಬಾರಿಗೆ ಬುಂದೇಲಖಂಡಕ್ಕೆ ಮತ್ತೆ ಬಂದಿರುವುದು ತಮ್ಮ ಅದೃಷ್ಟ ಎಂದು ಹೇಳಿದ ಶ್ರೀ ಮೋದಿ, ಆಧ್ಯಾತ್ಮಿಕ ಕೇಂದ್ರ ಬಾಗೇಶ್ವರ ಧಾಮ ಶೀಘ್ರದಲ್ಲೇ ಆರೋಗ್ಯ ಕೇಂದ್ರವಾಗಲಿದೆ ಎಂದು ಹೇಳಿದರು. ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯನ್ನು 10 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುವುದು ಮತ್ತು ಮೊದಲ ಹಂತದಲ್ಲಿ 100 ಹಾಸಿಗೆಗಳ ಸೌಲಭ್ಯ ಸಿದ್ಧವಾಗಲಿದೆ ಎಂದು ಅವರು ಹೇಳಿದರು. ಶ್ರೀ ಧೀರೇಂದ್ರ ಶಾಸ್ತ್ರಿ ಅವರ ಉದಾತ್ತ ಕಾರ್ಯಕ್ಕಾಗಿ ಅವರು ಅವರನ್ನು ಅಭಿನಂದಿಸಿದರು ಮತ್ತು ಬುಂದೇಲಖಂಡದ ಜನರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.ಥೈಲ್ಯಾಂಡ್ ನ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ
February 14th, 08:30 am
ಥೈಲ್ಯಾಂಡ್‌ನಲ್ಲಿ ಸಂವಾದ ಆವೃತ್ತಿಯಲ್ಲಿ ನಿಮ್ಮೆಲ್ಲರೊಂದಿಗೆ ಭಾಗಿಯಾಗುತ್ತಿರುವುದು ನನಗೆ ಗೌರವ ತಂದಿದೆ. ಭಾರತ, ಜಪಾನ್ ಮತ್ತು ಥೈಲ್ಯಾಂಡ್‌ನ ಪ್ರತಿಷ್ಠಿತ ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನು ಈ ಕಾರ್ಯಕ್ರಮವನ್ನು ಸಾಧ್ಯವಾಗಿಸಿದ್ದಾರೆ, ಆ ಪ್ರಯತ್ನಗಳನ್ನು ನಾನು ಶ್ಲಾಘಿಸುತ್ತೇನೆ ಹಾಗೂ ಭಾಗವಹಿಸಿದ ಎಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಥೈಲ್ಯಾಂಡ್‌ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆ
February 14th, 08:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥೈಲ್ಯಾಂಡ್‌ನಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದ ಸಂದರ್ಭದಲ್ಲಿ ವಿಡಿಯೋ ಸಂದೇಶದ ಮೂಲಕ ತಮ್ಮ ಹೇಳಿಕೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಥೈಲ್ಯಾಂಡ್‌ನಲ್ಲಿ ಸಂವಾದ ಆವೃತ್ತಿಯಲ್ಲಿ ಭಾಗಿಯಾಗುತ್ತಿರುವುದು ತಮಗೆ ಗೌರವ ತಂದಿದೆ, ಈ ಕಾರ್ಯಕ್ರಮವನ್ನು ಸಾಧ್ಯವಾಗಿಸಿದ್ದಕ್ಕಾಗಿ ಭಾರತ, ಜಪಾನ್ ಮತ್ತು ಥೈಲ್ಯಾಂಡ್‌ನ ಪ್ರತಿಷ್ಠಿತ ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನು ಶ್ಲಾಘಿಸಿದರು. ಹಾಗೂ ಭಾಗವಹಿಸಿದ ಎಲ್ಲರಿಗೂ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು.ಕಾಂಗ್ರೆಸ್‌ನ ರಾಜಮನೆತನವು ದೇಶದ ಅತ್ಯಂತ ಭ್ರಷ್ಟ ಕುಟುಂಬ: ಕತ್ರಾದಲ್ಲಿ ಪ್ರಧಾನಿ ಮೋದಿ
September 19th, 12:06 pm
ಜಮ್ಮು ಮತ್ತು ಕಾಶ್ಮೀರದ ತ್ವರಿತ ಅಭಿವೃದ್ಧಿ, ಹೆಚ್ಚಿದ ಮತದಾರರ ಮತದಾನ ಮತ್ತು ಸುಧಾರಿತ ಭದ್ರತೆಗೆ ಒತ್ತು ನೀಡಿದ ಪ್ರಧಾನಿ ಮೋದಿ ಅವರು ಕತ್ರಾದಲ್ಲಿ ದೊಡ್ಡ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಅವರು ಈ ಪ್ರದೇಶವನ್ನು ನಿರ್ಲಕ್ಷಿಸಿದ್ದಕ್ಕಾಗಿ ಹಿಂದಿನ ನಾಯಕತ್ವವನ್ನು ಟೀಕಿಸಿದರು, ರಾಜವಂಶದ ರಾಜಕೀಯದ ವಿರುದ್ಧ ಯುವಕರು ಏಳುತ್ತಿದ್ದಾರೆ ಎಂದು ಶ್ಲಾಘಿಸಿದರು ಮತ್ತು ಮೂಲಸೌಕರ್ಯ ಯೋಜನೆಗಳು, ಶಿಕ್ಷಣ ಮತ್ತು ಪ್ರವಾಸೋದ್ಯಮ ಬೆಳವಣಿಗೆಯನ್ನು ಎತ್ತಿ ತೋರಿಸಿದರು. ಜಮ್ಮು ಮತ್ತು ಕಾಶ್ಮೀರದ ಪ್ರಗತಿ ಮತ್ತು ರಾಜ್ಯತ್ವ ಮರುಸ್ಥಾಪನೆಗೆ ಬಿಜೆಪಿಯ ಬದ್ಧತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರು.370 ನೇ ವಿಧಿ ಹಿಂಪಡೆದ ನಂತರ, ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದವು ಸ್ಥಿರವಾಗಿ ದುರ್ಬಲಗೊಳ್ಳುತ್ತಿದೆ: ಶ್ರೀನಗರದಲ್ಲಿ ಪ್ರಧಾನಿ ಮೋದಿ
September 19th, 12:05 pm
ಜಮ್ಮು ಮತ್ತು ಕಾಶ್ಮೀರದ ತ್ವರಿತ ಅಭಿವೃದ್ಧಿ, ಹೆಚ್ಚಿದ ಮತದಾರರ ಮತದಾನ ಮತ್ತು ಸುಧಾರಿತ ಭದ್ರತೆಗೆ ಒತ್ತು ನೀಡಿದ ಪ್ರಧಾನಿ ಮೋದಿ ಶ್ರೀನಗರದಲ್ಲಿ ದೊಡ್ಡ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಅವರು ಈ ಪ್ರದೇಶವನ್ನು ನಿರ್ಲಕ್ಷಿಸಿದ್ದಕ್ಕಾಗಿ ಹಿಂದಿನ ನಾಯಕತ್ವವನ್ನು ಟೀಕಿಸಿದರು, ರಾಜವಂಶದ ರಾಜಕೀಯದ ವಿರುದ್ಧ ಯುವಕರು ಏಳುತ್ತಿದ್ದಾರೆ ಎಂದು ಶ್ಲಾಘಿಸಿದರು ಮತ್ತು ಮೂಲಸೌಕರ್ಯ ಯೋಜನೆಗಳು, ಶಿಕ್ಷಣ ಮತ್ತು ಪ್ರವಾಸೋದ್ಯಮ ಬೆಳವಣಿಗೆಯನ್ನು ಎತ್ತಿ ತೋರಿಸಿದರು. ಜಮ್ಮು ಮತ್ತು ಕಾಶ್ಮೀರದ ಪ್ರಗತಿ ಮತ್ತು ರಾಜ್ಯತ್ವ ಮರುಸ್ಥಾಪನೆಗೆ ಬಿಜೆಪಿಯ ಬದ್ಧತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರು.ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಮತ್ತು ಕತ್ರಾದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ
September 19th, 12:00 pm
ಜಮ್ಮು ಮತ್ತು ಕಾಶ್ಮೀರದ ತ್ವರಿತ ಅಭಿವೃದ್ಧಿ, ಹೆಚ್ಚಿದ ಮತದಾರರ ಮತದಾನ ಮತ್ತು ಸುಧಾರಿತ ಭದ್ರತೆಗೆ ಒತ್ತು ನೀಡಿದ ಪ್ರಧಾನಿ ಮೋದಿ ಶ್ರೀನಗರ ಮತ್ತು ಕತ್ರಾದಲ್ಲಿ ದೊಡ್ಡ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಅವರು ಈ ಪ್ರದೇಶವನ್ನು ನಿರ್ಲಕ್ಷಿಸಿದ್ದಕ್ಕಾಗಿ ಹಿಂದಿನ ನಾಯಕತ್ವವನ್ನು ಟೀಕಿಸಿದರು, ರಾಜವಂಶದ ರಾಜಕೀಯದ ವಿರುದ್ಧ ಯುವಕರು ಏಳುತ್ತಿದ್ದಾರೆ ಎಂದು ಶ್ಲಾಘಿಸಿದರು ಮತ್ತು ಮೂಲಸೌಕರ್ಯ ಯೋಜನೆಗಳು, ಶಿಕ್ಷಣ ಮತ್ತು ಪ್ರವಾಸೋದ್ಯಮ ಬೆಳವಣಿಗೆಯನ್ನು ಎತ್ತಿ ತೋರಿಸಿದರು. ಜಮ್ಮು ಮತ್ತು ಕಾಶ್ಮೀರದ ಪ್ರಗತಿ ಮತ್ತು ರಾಜ್ಯತ್ವ ಮರುಸ್ಥಾಪನೆಗೆ ಬಿಜೆಪಿಯ ಬದ್ಧತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರು.ಭಾರತದಲ್ಲಿ ಕಾಂಗ್ರೆಸ್ ಅತ್ಯಂತ ಅಪ್ರಾಮಾಣಿಕ ಮತ್ತು ಮೋಸದ ಪಕ್ಷವಾಗಿದೆ: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಪ್ರಧಾನಿ ಮೋದಿ
September 14th, 01:00 pm
ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸುರಕ್ಷಿತ, ಸಮೃದ್ಧ ಮತ್ತು ಭಯೋತ್ಪಾದನೆ ಮುಕ್ತ ಪ್ರದೇಶವನ್ನು ರಚಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು. ಮೂಲಸೌಕರ್ಯ ಅಭಿವೃದ್ಧಿ ಮತ್ತು ಯುವ ಸಬಲೀಕರಣಕ್ಕೆ ಒತ್ತು ನೀಡಿದ ಅವರು ಬಿಜೆಪಿಯ ಆಡಳಿತದಲ್ಲಿ ಪರಿವರ್ತನೆಯನ್ನು ಎತ್ತಿ ತೋರಿಸಿದರು. ಕಾಂಗ್ರೆಸ್ ತನ್ನ ರಾಜವಂಶದ ರಾಜಕೀಯ ಮತ್ತು ವಿಭಜಕ ತಂತ್ರಗಳನ್ನು ಟೀಕಿಸಿದ ಪ್ರಧಾನಿ ಮೋದಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಿರಂತರ ಪ್ರಗತಿ ಮತ್ತು ಒಳಗೊಳ್ಳುವಿಕೆಗಾಗಿ ಬಿಜೆಪಿಯನ್ನು ಬೆಂಬಲಿಸುವಂತೆ ಮತದಾರರನ್ನು ಒತ್ತಾಯಿಸಿದರು.PM Modi addresses public meeting in Doda, Jammu & Kashmir
September 14th, 12:30 pm
PM Modi, addressing a public meeting in Doda, Jammu & Kashmir, reaffirmed his commitment to creating a safe, prosperous, and terror-free region. He highlighted the transformation under BJP's rule, emphasizing infrastructure development and youth empowerment. PM Modi criticized Congress for its dynastic politics and pisive tactics, urging voters to support BJP for continued progress and inclusivity in the upcoming Assembly elections.ಯುಎಇಯ ಅಬುಧಾಬಿಯಲ್ಲಿ ಬಿಎಪಿಎಸ್ ಹಿಂದೂ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 14th, 07:16 pm
ಶ್ರೀ ಸ್ವಾಮಿ ನಾರಾಯಣ್ ಜೈ ದೇವ್, ಗೌರವಾನ್ವಿತ ಶೇಖ್ ನಹ್ಯಾನ್ ಅಲ್ ಮುಬಾರಕ್, ಗೌರವಾನ್ವಿತ ಮಹಂತ್ ಸ್ವಾಮಿ ಜೀ ಮಹಾರಾಜ್, ಭಾರತ, ಯುಎಇ ಮತ್ತು ವಿಶ್ವದಾದ್ಯಂತದ ವಿವಿಧ ದೇಶಗಳ ಗೌರವಾನ್ವಿತ ಅತಿಥಿಗಳು ಮತ್ತು ವಿಶ್ವದ ಮೂಲೆ ಮೂಲೆಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ನನ್ನ ಸಹೋದರ ಸಹೋದರಿಯರೇ!PM Modi inaugurates BAPS Hindu Mandir in Abu Dhabi, UAE
February 14th, 06:51 pm
Prime Minister Narendra Modi inaugurated the BAPS Hindu Mandir in Abu Dhabi, UAE. The PM along with the Mukhya Mahant of BAPS Hindu Mandir performed all the rituals. The PM termed the Hindu Mandir in Abu Dhabi as a symbol of shared heritage of humanity.ನವರಾತ್ರಿಯ ಮಹಾನವಮಿಯಂದು ಮಾತೆ ಸಿದ್ಧಿಧಾತ್ರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ
October 23rd, 10:05 am
ನವರಾತ್ರಿಯ ಮಹಾನವಮಿಯಂದು ಮಾತೆ ಸಿದ್ಧಿಧಾತ್ರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಮಿಸಿದ್ದಾರೆ. ಸಂಕಲ್ಪದ ಈಡೇರಿಕೆಗಾಗಿ ದೇಶದ ಪ್ರತಿಯೊಬ್ಬ ನಾಗರಿಕರನ್ನು ಆಶೀರ್ವದಿಸುವಂತೆ ಅವರು ದೇವಿಯನ್ನು ಪ್ರಾರ್ಥಿಸಿದ್ದಾರೆ.ದುರ್ಗಾ ಪೂಜೆಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭಹಾರೈಸಿದ ಪ್ರಧಾನಮಂತ್ರಿ
October 22nd, 10:48 am
ದುರ್ಗಾ ಪೂಜೆಯ ಶುಭ ಸಂದರ್ಭದಲ್ಲಿ ದೇಶವಾಸಿ ತನ್ನ ಎಲ್ಲಾ ಕುಟುಂಬಗಳಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶುಭ ಹಾರೈಸಿದ್ದಾರೆ. ಎಲ್ಲರಿಗೂ ಸುಖ, ಆರೋಗ್ಯ ಕರುಣಿಸಲಿ ಎಂದು ಅವರು ದೇವಿಯಲ್ಲಿ ಪ್ರಾರ್ಥಿಸಿದರು.ಕಾಳರಾತ್ರಿ ದೇವಿಗೆ ಪೂಜೆ ಸಲ್ಲಿಸಿದ ಪ್ರಧಾನಮಂತ್ರಿ
October 21st, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವರಾತ್ರಿಯ ಮಹಾಸಪ್ತಮಿಯ ಸಂದರ್ಭದಲ್ಲಿ ಕಾಳರಾತ್ರಿ ದೇವಿಗೆ ಪೂಜೆ ಸಲ್ಲಿಸಿದರು.