ಹಿಂದೂಸ್ತಾನ್ ಟೈಮ್ಸ್ ಲೀಡರ್‌ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

December 06th, 08:14 pm

ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್‌ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

December 06th, 08:13 pm

ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ನವದೆಹಲಿಯಲ್ಲಿ ನಡೆದ 21 ನೇ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ 2023 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ

November 04th, 07:30 pm

ಮೊದಲನೆಯದಾಗಿ, ನಾನು ನಿಮ್ಮೆಲ್ಲರಲ್ಲಿ ಕ್ಷಮೆಯಾಚಿಸುತ್ತೇನೆ ಏಕೆಂದರೆ ನಾನು ಚುನಾವಣಾ ಸಭೆಯಲ್ಲಿದ್ದೆ, ಆದ್ದರಿಂದ ಇಲ್ಲಿಗೆ ಬರಲು ನನಗೆ ಸ್ವಲ್ಪ ಸಮಯ ಹಿಡಿಯಿತು. ಆದರೆ ನಾನು ನಿಮ್ಮ ನಡುವೆ ಇರಲು ವಿಮಾನ ನಿಲ್ದಾಣದಿಂದ ನೇರವಾಗಿ ಬಂದಿದ್ದೇನೆ. ಶೋಭನಾ ಅವರು ತುಂಬಾ ಚೆನ್ನಾಗಿ ಮಾತನಾಡುತ್ತಿದ್ದರು. ಅವರು ಎತ್ತಿದ ವಿಷಯಗಳು ಉತ್ತಮವಾಗಿದ್ದವು. ನಾನು ತಡವಾಗಿ ಬಂದಿದ್ದರಿಂದ ಅದನ್ನು ಓದಲು ನನಗೆ ಖಂಡಿತವಾಗಿಯೂ ಅವಕಾಶ ಸಿಗುತ್ತದೆ.

ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ-2023 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

November 04th, 07:00 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ-2023 ಉದ್ದೇಶಿಸಿ ಮಾತನಾಡಿದರು. 2023ലെ ഹിന്ദുസ്ഥാൻ ടൈംസ് നേതൃത്വ ഉച്ചകോടിയിലേക്ക് ക്ഷണിച്ചതിന് പ്രധാനമന്ത്രി എച്ച്ടി ഗ്രൂപ്പിന് നന്ദി പറഞ്ഞു. ഈ നേതൃത്വ ഉച്ചകോടിയുടെ പ്രമേയങ്ങളുമായി ഇന്ത്യ മുന്നോട്ടുപോകുന്നതിന്റെ സന്ദേശം എച്ച്‌ടി ഗ്രൂപ്പ് എല്ലായ്‌പ്പോഴും എങ്ങനെയാണു കൈമാറുന്നതെന്നു ശ്രീ മോദി വ്യക്തമാക്കി. 2014ൽ ഇപ്പോഴത്തെ ഗവണ്മെന്റ് അധികാരത്തിൽ വന്നപ്പോൾ ‘ഇന്ത്യയെ പുനർനിർമിക്കുക’ എന്നതായിരുന്നു ഈ ഉച്ചകോടിയുടെ പ്രമേയമെന്ന് അദ്ദേഹം അനുസ്മരിച്ചു. വലിയ മാറ്റങ്ങൾ വരാനിരിക്കുന്നതായും ഇന്ത്യയെ പുനർരൂപകൽപ്പന ചെയ്യുമെന്നും മുൻകൂട്ടി കാണാൻ ഈ ഗ്രൂപ്പിനായി എന്ന് അദ്ദേഹം പറഞ്ഞു. ഇതിലും വലിയ ഭൂരിപക്ഷത്തിൽ വിജയിച്ച് 2019ൽ നിലവിലെ ഗവണ്മെന്റ് പുനഃസ്ഥാപിച്ചപ്പോൾ നൽകിയത് ‘നല്ല നാളേക്കുള്ള സംഭാഷണങ്ങൾ’ എന്ന വിഷയമാണെന്നും അദ്ദേഹം അനുസ്മരിച്ചു. 2023ൽ പൊതുതിരഞ്ഞെടുപ്പ് അടുത്തിരിക്കെ, ഉച്ചകോടിയുടെ പ്രമേയമായ ‘പ്രതിബന്ധങ്ങൾ മറികടക്കുക’ എന്ന വിഷയവും വരാനിരിക്കുന്ന പൊതുതിരഞ്ഞെടുപ്പിൽ നിലവിലെ ഗവണ്മെന്റ് എല്ലാ റെക്കോർഡുകളും തകർത്ത് വിജയിക്കുമെന്ന സന്ദേശവും ശ്രീ മോദി ഉയർത്തിക്കാട്ടി. “2024ലെ പൊതുതിരഞ്ഞെടുപ്പുഫലം പ്രതിബന്ധങ്ങൾക്ക് അതീതമായിരിക്കും” - ശ്രീ മോദി അഭിപ്രായപ്പെട്ടു.

For Better Tomorrow, our government is working on to solve the current challenges: PM Modi

December 06th, 10:14 am

Prime Minister Modi addressed The Hindustan Times Leadership Summit. PM Modi said the decision to abrogate Article 370 may seem politically difficult, but it has given a new ray of hope for development in of Jammu, Kashmir and Ladakh. The Prime Minister said for ‘Better Tomorrow’, the government is working to solve the current challenges and the problems.

ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿಯವರ ಭಾಷಣ

December 06th, 10:00 am

ಯಾವುದೇ ಸಮಾಜ ಅಥವಾ ದೇಶ ಪ್ರಗತಿ ಕಾಣಲು ಪರಸ್ಪರ ಮಾತುಕತೆ ಮುಖ್ಯ ಎಂದ ಪ್ರಧಾನಿಯವರು, ಮಾತುಕತೆಗಳು ಉತ್ತಮ ಭವಿಷ್ಯಕ್ಕಾಗಿ ಅಡಿಪಾಯವನ್ನು ಹಾಕುತ್ತವೆ ಎಂದು ಹೇಳಿದರು. “ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್” ಎಂಬ ಮಂತ್ರದೊಂದಿಗೆ ಪ್ರಸ್ತುತ ಸವಾಲುಗಳು ಮತ್ತು ಸಮಸ್ಯೆಗಳ ಬಗ್ಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.

ಹಿಂದೂಸ್ತಾನ್ ಟೈಮ್ಸ್ ನ ನಾಯಕತ್ವ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಗಳು ಮಾಡಿದ ಭಾಷಣ

November 30th, 10:30 am

ಮತ್ತೊಮ್ಮೆ ನಿಮ್ಮ ನಡುವೆ ಬರುವ ಅವಕಾಶ ನನಗೆ ಸಿಕ್ಕಿದೆ. ಬಹಳಷ್ಟು ಪರಿಚಿತ ಮುಖಗಳೂ ಕಾಣುತ್ತಿವೆ. ಮತ್ತೊಮ್ಮೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಹಿಂದೂಸ್ತಾನ್ ಟೈಮ್ಸ್ ಗ್ರೂಪ್ ಮತ್ತು ಅದರ ಓದುಗರಿಗೆ ನಾನು ಬಹಳ ಆಭಾರಿಯಾಗಿದ್ದೇನೆ.