ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಿದ ಕುರಿತು ಜಂಟಿ ಹೇಳಿಕೆ
December 16th, 03:56 pm
ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯದ ಘನವೆತ್ತ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 15 ಮತ್ತು 16 ರಂದು ಜೋರ್ಡಾನ್ಗೆ ಭೇಟಿ ನೀಡಿದರು.ಜೋರ್ಡಾನ್ ನ ಅಮ್ಮನ್ ಗೆ ಆಗಮಿಸಿದ ಪ್ರಧಾನಮಂತ್ರಿ ಅವರಿಗೆ ಭವ್ಯ ಸ್ವಾಗತ
December 15th, 04:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜೋರ್ಡಾನ್ ರಾಜಧಾನಿ ಅಮ್ಮನ್ ನಗರಕ್ಕೆ ಆಗಮಿಸಿದರು. ಎರಡು ದೇಶಗಳ ನಡುವಿನ ಆಪ್ತ ಸಂಬಂಧಗಳನ್ನು ಪ್ರತಿಬಿಂಬಿಸುವ ವಿಶೇಷ ಗೌರವದ ಸೂಚಕವಾಗಿ, ಅಮ್ಮನ್ ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿ ಮೋದಿ ಅವರಿಗೆ ಜೋರ್ಡಾನ್ ಪ್ರಧಾನಮಂತ್ರಿ ಗೌರವಾನ್ವಿತ ಡಾ. ಜಾಫರ್ ಹಸನ್ ಅವರು ಹಾರ್ದಿಕವಾಗಿ ಬರಮಾಡಿಕೊಂಡು ಭವ್ಯ ಸ್ವಾಗತವನ್ನು ನೀಡಿದರು.