ಮಹಾನ್ ಕ್ರಾಂತಿಕಾರಿ ಮಂಗಲ್ ಪಾಂಡೆ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
July 19th, 10:55 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾನ್ ಕ್ರಾಂತಿಕಾರಿ ಮಂಗಲ್ ಪಾಂಡೆ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಅವರ ಕೆಚ್ಚೆದೆಯ ಜೀವನವು ಇಂದಿಗೂ ಪ್ರತಿಯೊಬ್ಬ ಭಾರತೀಯನಲ್ಲೂ ಹೆಮ್ಮೆಯನ್ನು ತುಂಬುತ್ತಿದೆ ಮತ್ತು ಅವರ ಶೌರ್ಯದ ಕಥೆಯು ರಾಷ್ಟ್ರದ ಪ್ರತಿಯೊಂದು ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಶ್ರೀ ಮೋದಿ ಹೇಳಿದರು.ಶ್ರೀ ಕೆ. ಕಾಮರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
July 15th, 12:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಕೆ. ಕಾಮರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಭಾರತದ ಸ್ವಾತಂತ್ರ್ಯ ಚಳವಳಿಯ ದಿಗ್ಗಜರು ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅಸಾಧಾರಣ ಸಾರ್ವಜನಿಕ ವ್ಯಕ್ತಿ ಎಂದು ಸ್ಮರಿಸಿದರು. ಶಿಕ್ಷಣ, ಅಂತರ್ಗತ ಅಭಿವೃದ್ಧಿ ಮತ್ತು ದೀನದಲಿತರ ಕಲ್ಯಾಣಕ್ಕೆ ಶ್ರೀ ಕೆ. ಕಾಮರಾಜ್ ಅವರ ಅಚಲ ಬದ್ಧತೆಯು ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
June 28th, 10:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಶ್ರೀ ಪಿ.ವಿ.ನರಸಿಂಹ ರಾವ್ ಅವರು ನಮ್ಮ ರಾಷ್ಟ್ರದ ಇತಿಹಾಸದ ನಿರ್ಣಾಯಕ ಹಂತದಲ್ಲಿ ಭಾರತದ ಪ್ರಗತಿಗೆ ಶಾಶ್ವತ ಕೊಡುಗೆಗಳನ್ನು ನೀಡಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
June 26th, 12:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾನ್ ವ್ಯಕ್ತಿ ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿ, ಅವರನ್ನು ಸ್ಮರಿಸಿದರು. ಅವರ ಬರಹಗಳು ಭಾರತೀಯರ ತಲೆಮಾರುಗಳಲ್ಲಿ ದೇಶಭಕ್ತಿ ಮತ್ತು ಸಾಂಸ್ಕೃತಿಕ ಹೆಮ್ಮೆಯ ಸೂಧಿರ್ತಿಯನ್ನು ಹುಟ್ಟುಹಾಕಿದ ಅತ್ಯುನ್ನತ ಸಾಹಿತ್ಯಕ ದಿಗ್ಗಜರಾಗಿದ್ದರು.ರಾಜರ್ಷಿ ಛತ್ರಪತಿ ಶಾಹು ಜೀ ಮಹಾರಾಜ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
June 26th, 12:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜರ್ಷಿ ಛತ್ರಪತಿ ಶಾಹು ಜೀ ಮಹಾರಾಜ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ‘ಅವರು ವಂಚಿತರು, ಶೋಷಿತರು ಮತ್ತು ಹಿಂದುಳಿದ ವರ್ಗಗಳ ಏಳಿಗೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ಮಹಾನ್ ಕಾರ್ಯಗಳು ಮತ್ತು ಆದರ್ಶಗಳು ಮುಂದಿನ ಯುಗಗಳವರೆಗೆ ರಾಷ್ಟ್ರಕ್ಕೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ,’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಪರವಾಗಿ ಬೆಂಬಲ ಸೂಚಿಸಿದವರಿಗೆ ಪ್ರಧಾನಮಂತ್ರಿ ಅವರು ಗೌರವ ಸಲ್ಲಿಸಿದರು
June 25th, 10:53 am
ತುರ್ತು ಪರಿಸ್ಥಿತಿಯ ಸಮಯದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದೃಢವಾಗಿ ಬೆಂಬಲ ಸೂಚಿಸಿ, ರಕ್ಷಿಸಿದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗೌರವ ಸಲ್ಲಿಸಿದರು. ಇದನ್ನು ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದು ಎಂದು ಶ್ರೀ ಮೋದಿಯವರು ಬಣ್ಣಿಸಿದರು. ಬಂಡಾಯವೆದ್ದು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಆದರ್ಶಗಳನ್ನು ಎತ್ತಿಹಿಡಿದ ಅಸಂಖ್ಯಾತ ನಾಗರಿಕರ ಅಸಾಧಾರಣ ಧೈರ್ಯ ಮತ್ತು ಸ್ಥಿತಿಸ್ಥಾಪಕತ್ವವನ್ನು ಈ ಅವಧಿಯು ಪ್ರತಿಪಾದಿಸುತ್ತದೆ ಎಂದು ಅವರು ಹೇಳಿದರು.ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
May 27th, 08:33 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು.ಆದಿ ಶಂಕರಾಚಾರ್ಯರಿಗೆ ಪ್ರಧಾನಮಂತ್ರಿ ಗೌರವ ನಮನ
April 21st, 01:09 pm
ಭಾರತದ ಶ್ರೇಷ್ಠ ಆಧ್ಯಾತ್ಮಿಕ ದಿಗ್ಗಜರಲ್ಲಿ ಒಬ್ಬರಾದ ಆದಿ ಶಂಕರಾಚಾರ್ಯರ ಜಯಂತಿ ಅಂಗವಾಗಿ ಅವರಿಗೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು. ಶಂಕರಾಚಾರ್ಯರ ಅಗಾಧ ಬೋಧನೆಗಳು, ಚಿಂತನೆಗಳು ಮತ್ತು ಅದ್ವೈತ ವೇದಾಂತದ ತತ್ವಶಾಸ್ತ್ರವು ಜಗತ್ತಿನ ಅಸಂಖ್ಯಾತ ಜನರಿಗೆ ಮಾರ್ಗದರ್ಶನ ನೀಡುತ್ತಲೇ ಇದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಆಧ್ಯಾತ್ಮಿಕ ಚಿಂತನೆಯನ್ನು ಪುನರುಜ್ಜೀವನಗೊಳಿಸಲು ಮತ್ತು ರಾಷ್ಟ್ರದಾದ್ಯಂತ ಆಧ್ಯಾತ್ಮಿಕ ಕೇಂದ್ರಗಳನ್ನು ಸ್ಥಾಪಿಸಲು ಅವರ ಪ್ರಯತ್ನಗಳು ಶಾಶ್ವತ ಸ್ಫೂರ್ತಿಯಾಗಿವೆ. ಅವರ ವಿವೇಕವು ನಮ್ಮ ಪಥ ಬೆಳಗುವುದನ್ನು ಮುಂದುವರಿಸಲಿ ಹಾಗೂ ಸತ್ಯ, ಸಹಾನುಭೂತಿ ಮತ್ತು ಸಾಮೂಹಿಕ ಯೋಗಕ್ಷೇಮಕ್ಕೆ ನಮ್ಮ ಬದ್ಧತೆಯನ್ನು ಬಲಪಡಿಸಲಿ ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ.ಬಸವ ಜಯಂತಿಯಂದು ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
April 20th, 09:43 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಸವ ಜಯಂತಿಯಂದು ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸಿದರು.ಸಂಸತ್ ಭವನದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
April 14th, 11:33 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಸಂಸತ್ ಭವನದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.ಜಲಿಯನ್ ವಾಲಾಬಾಗ್ ಹುತಾತ್ಮರಿಗೆ ಪ್ರಧಾನಮಂತ್ರಿ ಗೌರವ ನಮನ
April 13th, 09:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಲಿಯನ್ ವಾಲಾಬಾಗ್ ನ ವೀರ ಹುತಾತ್ಮರಿಗೆ ಹೃತ್ಪೂರ್ವಕ ಗೌರವ ನಮನ ಸಲ್ಲಿಸಿದರು. ಅವರ ತ್ಯಾಗ ನಮ್ಮ ಜನರ ಅದಮ್ಯ ಚೈತನ್ಯದ ಪ್ರಬಲ ಜ್ಞಾಪಕವಾಗಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಸಂಸತ್ ಭವನದಲ್ಲಿ ಮಹಾತ್ಮ ಫುಲೆ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
April 11th, 11:48 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾತ್ಮ ಫುಲೆ ಅವರ ಜನ್ಮ ದಿನಾಚರಣೆಯ ಅಂಗವಾಗಿ ಸಂಸತ್ ಭವನದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು.ಪ್ರಕಾಶ್ ಪುರಬ್ ಅಂಗವಾಗಿ ಶ್ರೀ ಗುರು ತೇಜ್ ಬಹದ್ದೂರ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
April 07th, 10:52 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪವಿತ್ರ ಪ್ರಕಾಶ್ ಪುರಬ್ ಅಂಗವಾಗಿ ನಮ್ಮ ನಾಗರಿಕತೆಯ ಶ್ರೇಷ್ಠ ಧಾರ್ಮಿಕ ನಾಯಕ ಶ್ರೀ ಗುರು ತೇಜ್ ಬಹದ್ದೂರ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರಿಗೆ ಪ್ರಧಾನಮಂತ್ರಿ ಅವರಿಂದ ಗೌರವ ನಮನ
March 31st, 10:58 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ವಿಶೇಷ ಸಂದರ್ಭದಲ್ಲಿ ಅವರಿಗೆ ಇಂದು ಗೌರವ ನಮನ ಸಲ್ಲಿಸಿದ್ದಾರೆ. ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಅವರು ಸೇವೆ ಮತ್ತು ಆಧ್ಯಾತ್ಮಿಕತೆಗೆ ತಮ್ಮನ್ನು ತಾವು ಅರ್ಪಿಸಿಕೊಂಡು ಸಮಾಜದ ಮೇಲೆ ಶಾಶ್ವತ ಪ್ರಭಾವ ಬೀರಿದ್ದಾರೆ ಎಂದು ಶ್ರೀ ಮೋದಿ ಅವರು ಸ್ಮರಿಸಿದ್ದಾರೆ. ಪೂಜ್ಯ ಸ್ವಾಮಿಗಳು ಅನೇಕ ಸಂಸ್ಥೆಗಳು ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಿದರು ಮತ್ತು ಜನರಲ್ಲಿ ಶಿಕ್ಷಣದ ಆನಂದ ಪಸರಿಸಲು ಬಹುವಾಗಿ ಬದ್ಧರಾಗಿದ್ದರು ಎಂದು ಅವರು ವಿವರಿಸಿದ್ದಾರೆ.ಶ್ಯಾಮ್‌ಜಿ ಕೃಷ್ಣ ವರ್ಮ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
March 30th, 09:50 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಭಾರತ ಮಾತೆಯ ಧೈರ್ಯಶಾಲಿ ಪುತ್ರ ಶ್ಯಾಮ್‌ಜಿ ಕೃಷ್ಣ ವರ್ಮ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ತಮ್ಮ ಕ್ರಾಂತಿಕಾರಿ ವಿಚಾರಗಳಿಂದ ಅವರು ಸ್ವಾತಂತ್ರ್ಯ ಚಳವಳಿಯಲ್ಲಿ ಹೊಸ ಪ್ರಜ್ಞೆಯನ್ನು ಜಾಗೃತಗೊಳಿಸಿದರು ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. “ಅವರ ಜೀವನ ಮತ್ತು ಆದರ್ಶಗಳು ದೇಶದ ಪ್ರತಿಯೊಂದು ಪೀಳಿಗೆಯನ್ನೂ ರಾಷ್ಟ್ರ ಸೇವೆಯತ್ತ ಪ್ರೇರೇಪಿಸುತ್ತಲೇ ಇರುತ್ತವೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.ದಂಡಿ ಸತ್ಯಾಗ್ರಹದಲ್ಲಿ ಭಾಗವಹಿಸಿದ ಎಲ್ಲರಿಗೂ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
March 12th, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 1930ರಲ್ಲಿ ಇದೇ ದಿನ ಪ್ರಾರಂಭವಾದ ದಂಡಿ ಯಾತ್ರೆಯಲ್ಲಿ ಭಾಗವಹಿಸಿದ ಎಲ್ಲ ಮಹಾನ್ ವ್ಯಕ್ತಿಗಳಿಗೆ ಗೌರವ ನಮನ ಸಲ್ಲಿಸಿದರು.ಶ್ರೇಷ್ಠ ಸಮಾಜ ಸುಧಾರಕ ಶ್ರೀ ಸಂತ ಸೇವಾಲಾಲ್ ಮಹಾರಾಜ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
February 15th, 02:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೇಷ್ಠ ಸಮಾಜ ಸುಧಾರಕ ಶ್ರೀ ಸಂತ್ ಸೇವಾಲಾಲ್ ಮಹಾರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಸತ್ಯ, ಅಹಿಂಸೆ ಮತ್ತು ಉನ್ನತ ನೈತಿಕ ಮೌಲ್ಯಗಳ ಸಂದೇಶವನ್ನು ಹರಡುವ ಮೂಲಕ ಅವರು ಸಮಾಜದಲ್ಲಿ ಹೊಸ ಪ್ರಜ್ಞೆಯನ್ನು ತುಂಬಿದರು. ಅವರ ಸ್ಫೂರ್ತಿದಾಯಕ ಜೀವನವು ದೇಶದ ಜನರಿಗೆ ಎಂದೆಂದಿಗೂ ಮಾರ್ಗದರ್ಶನ ನೀಡುತ್ತಲೇ ಇರುತ್ತದೆ, ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
February 11th, 10:19 am
ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು. “ಮೌಲ್ಯಗಳಲ್ಲಿ ಬೇರೂರಿರುವ ಅವರ ತತ್ವಗಳು ಮತ್ತು ಆಲೋಚನೆಗಳು ದೇಶದ ಪ್ರತಿಯೊಂದು ಪೀಳಿಗೆಗೂ ಮಾರ್ಗದರ್ಶಕ ಬೆಳಕಾಗಿ ಉಳಿಯುತ್ತವೆ “ ಎಂದು ಶ್ರೀ ಮೋದಿ ಅವರು ಹೇಳಿದರು.ಮಹಾನ್ ಸಂತ ಶ್ರೀ ಗುರು ರವಿದಾಸ್ ಮಹಾರಾಜ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
February 01st, 09:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾನ್ ಸಂತ ಶ್ರೀ ಗುರು ರವಿದಾಸ್ ಮಹಾರಾಜ್ ಅವರ ಜನ್ಮದಿನೋತ್ಸವದ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು. ಗುರು ರವಿದಾಸ್ ಮಹಾರಾಜ್ ಅವರ ಚಿಂತನೆಗಳಲ್ಲಿ ನ್ಯಾಯ ಮತ್ತು ಕರುಣೆಯ ಅತ್ಯುನ್ನತವಾಗಿದ್ದು, ಅದುವೇ ನಮ್ಮ ಸಾರ್ವಜನಿಕ ಕಲ್ಯಾಣ ಯೋಜನೆಗಳ ಅತ್ಯಂತ ಮೂಲಾಧಾರವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಹೇಳಿದ್ದಾರೆ. “ಅವರು ಪ್ರಜ್ವಲಿಸಿದ ಸಾಮಾಜಿಕ ಸೌಹಾರ್ದತೆ ಮತ್ತು ಸದುದ್ದೇಶದ ದೀಪವು ದೇಶದ ಜನರ ಹಾದಿಯನ್ನು ಸದಾ ಪ್ರಕಾಶಮಾನಗೊಳಿಸುತ್ತಲೇ ಇರುತ್ತದೆ,” ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.ರಾಜ್‌ಘಾಟ್ ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು
January 30th, 01:54 pm
ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಇಂದು ರಾಜ್‌ಘಾಟ್ ನಲ್ಲಿ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಬಾಪು ಅವರ ಕಾಲಾತೀತ ಆದರ್ಶಗಳು ನಮ್ಮ ರಾಷ್ಟ್ರದ ಪ್ರಯಾಣಕ್ಕೆ ಮಾರ್ಗದರ್ಶನ ನೀಡುತ್ತಿವೆ ಎಂದು ಶ್ರೀ ಮೋದಿ ಅವರು ಹೇಳಿದರು. ನ್ಯಾಯ, ಸಾಮರಸ್ಯ ಮತ್ತು ಮಾನವೀಯತೆಯ ಸೇವೆಯಲ್ಲಿ ಬೇರೂರಿರುವ ಭಾರತವನ್ನು ನಿರ್ಮಿಸಲು ಮತ್ತು ಅವರ ತತ್ವಗಳಿಗೆ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.