ಪ್ರಧಾನಮಂತ್ರಿ ಅವರ ಸೀಶೆಲ್ಸ್ ಅಧಿಕೃತ ಭೇಟಿ
June 28th, 08:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 27 ರಿಂದ 29 ರವರೆಗೆ ಸೀಶೆಲ್ಸ್‌ಗೆ ಕೈಗೊಂಡಿರುವ ಅಧಿಕೃತ ಭೇಟಿಯ ಭಾಗವಾಗಿ, ಪ್ರಧಾನಮಂತ್ರಿ ಮತ್ತು ಸೀಶೆಲ್ಸ್ ಅಧ್ಯಕ್ಷರಾದ ಘನತೆವೆತ್ತ ಡಾ. ಪ್ಯಾಟ್ರಿಕ್ ಹರ್ಮಿನ್ ಅವರು ಇಂದು ಮಾಹೆಯ ವಿಕ್ಟೋರಿಯಾದಲ್ಲಿರುವ ಸ್ಟೇಟ್ ಹೌಸ್‌ನಲ್ಲಿ ಅಧಿಕೃತ ಮಾತುಕತೆ ನಡೆಸಿದರು.ಫಲಿತಾಂಶಗಳ ಪಟ್ಟಿ: ಪ್ರಧಾನಮಂತ್ರಿ ಅವರ ಸೀಶೆಲ್ಸ್ ಭೇಟಿ
June 28th, 08:17 pm
ಸೀಶೆಲ್ಸ್ ಸರ್ಕಾರಕ್ಕೆ ಒಂದು ವೇಗದ ಗಸ್ತು ನೌಕೆಯನ್ನು ಉಡುಗೊರೆಯಾಗಿ ನೀಡುವುದುಪಶ್ಚಿಮ ಬಂಗಾಳದ ತಾರಕೇಶ್ವರದಲ್ಲಿ ನಡೆದ ಪಶ್ಚಿಮಬಂಗಾ ದಿವಸ್ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ
June 20th, 05:13 pm
ಈ ವೇದಿಕೆಯಲ್ಲಿ, ರಾಜ್ಯಪಾಲ ಆರ್.ಎನ್. ರವಿ ಜೀ, ಜನಪ್ರಿಯ ಮತ್ತು ಶಕ್ತಿಯುತ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಜೀ, ಇತರ ಗಣ್ಯರು ಮತ್ತು ಬಂಗಾಳದ ನನ್ನ ಸಹೋದರ ಸಹೋದರಿಯರು - ಬಾಬಾ ತಾರಕನಾಥ್ ಅವರ ಈ ಪವಿತ್ರ ಭೂಮಿ, ಐತಿಹಾಸಿಕ ಪಶ್ಚಿಮ ಬಂಗಾಳ ದಿನಾಚರಣೆಯಂದು ಮತ್ತು ಇಷ್ಟು ದೊಡ್ಡ ಸಭೆಯ ಸಮ್ಮುಖದಲ್ಲಿ, ಚುನಾವಣೆಗಳು ಮತ್ತು ಪ್ರಮಾಣ ವಚನ ಸ್ವೀಕಾರದ ನಂತರ ಮೊದಲ ಬಾರಿಗೆ ನಿಮ್ಮೊಂದಿಗೆ ಇರುವುದಕ್ಕೆ ನನಗೆ ಹೆಮ್ಮೆ ಎನಿಸಿದೆ. ಬಂಗಾಳದ ಗಾಳಿಯು ಈಗ ಹೊಸ ತಾಜಾತನವನ್ನು ಹೊಂದಿದೆ, ಪ್ರತಿಯೊಂದು ಕಣವೂ ಹೊಸ ಪರಿಮಳವನ್ನು ಹೊರಸೂಸುತ್ತಿದೆ. ಬಂಗಾಳವು ಸಂಕೋಲೆಗಳಿಂದ ಮುಕ್ತವಾಗಿದೆ ಎಂದು ಭಾಸವಾಗುತ್ತದೆ, ಬಂಗಾಳದ ಹೆಮ್ಮೆ ಮರಳಲು ಪ್ರಾರಂಭಿಸಿದೆ. ಇಂದಿನ ಕಾರ್ಯಕ್ರಮ, ಈ ಯೋಜನೆಗಳ ಉದ್ಘಾಟನೆಯು ಹೊಸ ಭವಿಷ್ಯವನ್ನು ನಿರ್ಮಿಸುವ ಬಂಗಾಳದ ಬದ್ಧತೆಗೆ ಸಾಕ್ಷಿಯಾಗಿದೆ. ಜನರ ಮುಖಗಳಲ್ಲಿನ ಹೊಳಪು, ಪ್ರತಿ ಹಳ್ಳಿಯಲ್ಲಿನ ಸಂತೋಷ ಮತ್ತು ನಂಬಿಕೆ - ನಿಮ್ಮ ಸಂತೋಷದಲ್ಲಿ ಹಂಚಿಕೊಳ್ಳಲು ನಾನು ಇಲ್ಲಿಗೆ ಬಂದಿದ್ದೇನೆ. ಒಂದು ಮತ, ಒಂದು ಚುನಾವಣೆ, ಅದು ಎಷ್ಟು ಪರಿವರ್ತನೆ ತರಬಹುದು - ಇದು ಬಂಗಾಳದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆದ 'ಪಶ್ಚಿಮ ಬಂಗಾ ದಿವಸ' ಆಚರಣೆಯಲ್ಲಿ ಭಾಗವಹಿಸಿದರು
June 20th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳ ದಿವಸ (ಪಶ್ಚಿಮ ಬಂಗಾಳ ದಿನ) ಸಂಭ್ರಮಾಚರಣೆಯಲ್ಲಿ ಭಾಗವಹಿಸಿದರು. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರೊಂದಿಗೆ ನಂಟು ಹೊಂದಿರುವ ಐತಿಹಾಸಿಕ ಮಹತ್ವದ ಸ್ಥಳವಾದ ಹೂಗ್ಲಿಯ ತಾರಕೇಶ್ವರದಲ್ಲಿ ರಾಜ್ಯ ಮಟ್ಟದ ಆಚರಣೆಗಳನ್ನು ಆಯೋಜಿಸಲಾಗಿದೆ. ಈ ವರ್ಷದ ಪಶ್ಚಿಮ ಬಂಗಾಳ ದಿನಾಚರಣೆಯ ವಿಷಯವಾದ ಪಶ್ಚಿಮ ಬಂಗಾಳ: ಪರಂಪರೆ, ಸಾಮರಸ್ಯ ಮತ್ತು ಅಭಿವೃದ್ಧಿ ಎಂಬುದು ರಾಜ್ಯದ ಸಾಂಸ್ಕೃತಿಕ ಶ್ರೀಮಂತಿಕೆ, ಸಾಮಾಜಿಕ ಸಾಮರಸ್ಯ ಮತ್ತು ಅಭಿವೃದ್ಧಿಯ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ.ಪ್ರಧಾನಮಂತ್ರಿ ಮೇ 10 ರಂದು ಕರ್ನಾಟಕ ಮತ್ತು ತೆಲಂಗಾಣಕ್ಕೆ ಭೇಟಿ
May 09th, 11:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮೇ 10 ರಂದು ಕರ್ನಾಟಕ ಮತ್ತು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನ ಮಂತ್ರಿ ಬೆಳಿಗ್ಗೆ ಸುಮಾರು 11 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಆರ್ಟ್ ಆಫ್ ಲಿವಿಂಗ್‌ನ 45ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ, ಅಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಪ್ರಧಾನಮಂತ್ರಿ ಹೈದರಾಬಾದ್‌ಗೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 3 ಗಂಟೆಗೆ ಸುಮಾರು 9,400 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 3:45 ರ ಸುಮಾರಿಗೆ ಪ್ರಧಾನಮಂತ್ರಿ ಹೈದರಾಬಾದ್‌ನಲ್ಲಿರುವ ಸಿಂಧು ಆಸ್ಪತ್ರೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.ಉತ್ತರ ಪ್ರದೇಶದ ವಾರಾಣಸಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 28th, 05:30 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳೆ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ನಿತಿನ್ ನಬಿನ್ ಜಿ, ಉತ್ತರ ಪ್ರದೇಶದ ಸಂಸದ ಮತ್ತು ಯುಪಿ ಬಿಜೆಪಿ ಅಧ್ಯಕ್ಷರಾದ ಶ್ರೀ ಪಂಕಜ್ ಚೌಧರಿ ಜಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಹೋದರಿ ಪೂನಂ ಮೌರ್ಯ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಕಾಶಿಯ ಮಹಿಳಾ ಕೌನ್ಸಿಲರ್‌ಗಳು ಮತ್ತು ಗ್ರಾಮ ಮುಖ್ಯಸ್ಥರೆ, ಇತರೆ ಜನಪ್ರತಿನಿಧಿಗಳೆ ಮತ್ತು ಇಲ್ಲಿಗೆ ಬಂದಿರುವ ನನ್ನ ತಾಯಂದಿರು, ಸಹೋದರಿಯರು ಮತ್ತು ಹೆಣ್ಣು ಮಕ್ಕಳೆ ನಿಮ್ಮೆಲ್ಲರಿಗೂ ನಮಸ್ಕಾರ.ವಾರಣಾಸಿಯಲ್ಲಿ ಮಹಿಳಾ ಸಮ್ಮೇಳನದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಸುಮಾರು 6,350 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ
April 28th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಣಾಸಿಯಲ್ಲಿ ನಡೆದ ಸಮಾವೇಶದಲ್ಲಿ ಬೃಹತ್ ಮಹಿಳಾ ಸಭೆಯನ್ನುದ್ದೇಶಿಸಿ ಮಾತನಾಡಿದರು, ಅಲ್ಲಿ ಅವರು ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಿಲಾನ್ಯಾಸ ಮಾಡಿದರು.Cabinet approves construction of 1720 MW Kamala Hydro Electric Project in Arunachal Pradesh
April 08th, 04:26 pm
The Cabinet Committee on Economic Affairs, chaired by PM Modi has approved investment of Rs.26,069.50 crore for construction of Kamala Hydro Electric Project (HEP) in Kamle, Kra Daadi & Kurung Kumey Districts of Arunachal Pradesh. The project will significantly improve infrastructure in the state and provide essential facilities, benefiting local communities.ಮಥುರಾದಲ್ಲಿ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
March 16th, 12:05 pm
ಉತ್ತರ ಪ್ರದೇಶದ ಮಥುರಾದಲ್ಲಿ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ಮೋದಿ ಹಾರೈಸಿದ್ದಾರೆ.ಕೇರಳದ ಆರ್ಯ ವೈದ್ಯ ಶಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
January 28th, 02:39 pm
ಇಂದು ಈ ಮಹತ್ವದ ಸಂದರ್ಭದಲ್ಲಿ, ನಿಮ್ಮೆಲ್ಲರೊಂದಿಗೆ ಸಂಪರ್ಕ ಸಾಧಿಸುವುದು ನನಗೆ ಸಂತೋಷದ ಸಂಗತಿಯಾಗಿದೆ. ಆರ್ಯ ವೈದ್ಯ ಶಾಲೆಯು ಆಯುರ್ವೇದವನ್ನು ಕಾಪಿಡುವಲ್ಲಿ, ರಕ್ಷಿಸುವಲ್ಲಿ ಮತ್ತು ಮುನ್ನಡೆಸುವಲ್ಲಿ ಮಹತ್ವದ ಕೊಡುಗೆಯನ್ನು ಹೊಂದಿದೆ. 125 ವರ್ಷಗಳ ತನ್ನ ಪ್ರಯಾಣದಲ್ಲಿ, ಈ ಸಂಸ್ಥೆಯು ಆಯುರ್ವೇದವನ್ನು ಪ್ರಬಲ ಚಿಕಿತ್ಸಾ ವ್ಯವಸ್ಥೆಯಾಗಿ ಸ್ಥಾಪಿಸಿದೆ. ಇಂದು ಈ ಸಂದರ್ಭದಲ್ಲಿ, ಆರ್ಯ ವೈದ್ಯ ಶಾಲೆಯ ಸ್ಥಾಪಕ ವೈದ್ಯರತ್ನಂ ಪಿ.ಎಸ್. ವಾರಿಯರ್ ಜೀ ಅವರ ಕೊಡುಗೆಗಳನ್ನು ನಾನು ಸ್ಮರಿಸುತ್ತೇನೆ. ಆಯುರ್ವೇದದ ಬಗ್ಗೆ ಅವರ ದೃಷ್ಟಿಕೋನ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ಸಮರ್ಪಣೆ ಇಂದಿಗೂ ನಮಗೆ ಸ್ಫೂರ್ತಿ ನೀಡುತ್ತದೆ.ಕೇರಳದ ಆರ್ಯ ವೈದ್ಯ ಸಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
January 28th, 02:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಆರ್ಯ ವೈದ್ಯ ಸಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದರು. ಈ ಸಂದರ್ಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾಮಂತ್ರಿ, ಈ ಶುಭ ಸಂದರ್ಭದಲ್ಲಿ ಎಲ್ಲರೊಂದಿಗೂ ಸಂಪರ್ಕ ಸಾಧಿಸುತ್ತಿರುವುದು ಸಂತೋಷದ ವಿಷಯ ಎಂದು ಹೇಳಿದರು. ಆರ್ಯ ವೈದ್ಯಶಾಲೆ ಆಯುರ್ವೇದವನ್ನು ಸಂರಕ್ಷಿಸುವಲ್ಲಿ, ರಕ್ಷಣೆ ಮಾಡುವಲ್ಲಿ ಮತ್ತು ಮುನ್ನಡೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಅವರು ಪ್ರಮುಖವಾಗಿ ಪ್ರಸ್ತಾಪಿಸಿದರು. ತನ್ನ 125 ವರ್ಷಗಳ ಪಯಣದಲ್ಲಿ, ಸಂಸ್ಥೆಯು ಆಯುರ್ವೇದವನ್ನು ಪ್ರಬಲ ಚಿಕಿತ್ಸಾ ವ್ಯವಸ್ಥೆಯಾಗಿ ಸ್ಥಾಪಿಸಿದೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು. ಆರ್ಯ ವೈದ್ಯಶಾಲೆಯ ಸಂಸ್ಥಾಪಕ ವೈದ್ಯರತ್ನಂ ಪಿ.ಎಸ್. ವೇರಿಯರ್ ಅವರ ಕೊಡುಗೆಗಳನ್ನು ಸ್ಮರಿಸಿದ ಪ್ರಧಾನಮಂತ್ರಿ, ಆಯುರ್ವೇದದ ಬಗೆಗಿನ ಅವರ ವಿಧಾನವು ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ಬದ್ಧತೆಯು ಸದಾ ಸ್ಫೂರ್ತಿ ನೀಡುವುದು ಮುಂದುವರಿಯುತ್ತದೆ ಎಂದು ಒತ್ತಿ ಹೇಳಿದರು.ಅಸ್ಸಾಂನ ನಮ್ರಪ್‌ನಲ್ಲಿ ಯೂರಿಯಾ ಉತ್ಪಾದನಾ ಸ್ಥಾವರದ ಭೂಮಿಪೂಜೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 21st, 04:25 pm
ಸೌಲುಂಗ್ ಸುಕಫಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ವೀರರ ಈ ಭೂಮಿ, ಭಿಂಬರ್ ದೇವೂರಿ, ಹುತಾತ್ಮ ಕುಸಲ್ ಕುವರ್, ಮೋರನ್ ರಾಜಾ ಬೊಡೌಸಾ, ಮಾಲತಿ ಮೇಮ್, ಇಂದಿರಾ ಮಿರಿ, ಸ್ವರ್ಗದೇವ್ ಸರ್ಬಾನಂದ ಸಿಂಗ್ ಮತ್ತು ಯೋಧ ಮಹಿಳೆ ಸತಿ ಸಾಧ್ನಿ ಅವರ ಈ ತಪೋಭೂಮಿ, ಉಜಾನಿ ಅಸ್ಸಾಂನ ಈ ಪುಣ್ಯ ಭೂಮಿಗೆ ನಾನು ಭಕ್ತಿಯಿಂದ ನಮಸ್ಕರಿಸುತ್ತೇನೆ.ಅಸ್ಸಾಂನ ನಮ್ರೂಪ್‌ನಲ್ಲಿ ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 21st, 12:00 pm
ಅಸ್ಸಾಂನ ದಿಬ್ರುಗಢದ ನಮ್ರೂಪ್‌ನಲ್ಲಿ ಇಂದು ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚೌಲುಂಗ್ ಸುಖಪಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ಮಹಾನ್ ವೀರರ ಭೂಮಿ ಎಂದು ಹೇಳಿದರು. ಭಿಂಬರ್ ದೇವೂರಿ, ಶಹೀದ್ ಕುಶಾಲ್ ಕುನ್ವರ್, ಮೋರನ್ ರಾಜ ಬೊಡೌಸಾ, ಮಾಲತಿ ಮೇಮ್, ಇಂದಿರಾ ಮಿರಿ, ಸ್ವರ್ಗದೇವ್ ಸರ್ಬಾನಂದ ಸಿಂಗ್ ಮತ್ತು ಧೀರ ಸತಿ ಸಾಧನಿ ಅವರ ಕೊಡುಗೆಗಳನ್ನು ಅವರು ಎತ್ತಿ ತೋರಿಸಿದರು. ಶೌರ್ಯ ಮತ್ತು ತ್ಯಾಗದ ಈ ಮಹಾನ್ ಭೂಮಿಯಾದ ಉಜಾನಿ ಅಸ್ಸಾಂನ ಪವಿತ್ರ ಮಣ್ಣಿಗೆ ನಾನು ಶಿರಬಾಗಿ ನಮಸ್ಕರಿಸುತ್ತೇನೆ ಎಂದು ಪ್ರಧಾನಮಂತ್ರಿ ಹೇಳಿದರು.ನಾಲ್ಕು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ವಾರಣಾಸಿಯಿಂದ ಚಾಲನೆ ನೀಡುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 08th, 08:39 am
ಉತ್ತರ ಪ್ರದೇಶದ ಉತ್ಸಾಹಭರಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ; ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮತ್ತು ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ದ ಬಲವಾದ ಅಡಿಪಾಯವನ್ನು ಹಾಕುತ್ತಿರುವ ಗಮನಾರ್ಹ ತಾಂತ್ರಿಕ ಪ್ರಗತಿಗೆ ಕಾರಣರಾದ ಶ್ರೀ ಅಶ್ವಿನಿ ವೈಷ್ಣವ್ ಜಿ; ಎರ್ನಾಕುಲಂನಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರುತ್ತಿರುವ ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್ ಜಿ; ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳಾದ ಶ್ರೀ ಸುರೇಶ್ ಗೋಪಿ ಜಿ ಮತ್ತು ಶ್ರೀ ಜಾರ್ಜ್ ಕುರಿಯನ್ ಜಿ; ಕೇರಳದಲ್ಲಿ ಈ ಕಾರ್ಯಕ್ರಮದಲ್ಲಿ ಹಾಜರಿರುವ ಎಲ್ಲಾ ಇತರ ಸಚಿವರು ಮತ್ತು ಸಾರ್ವಜನಿಕ ಪ್ರತಿನಿಧಿಗಳು; ಫಿರೋಜ್ ಪುರದಿಂದ ಸಂಪರ್ಕ ಹೊಂದಿದ ಕೇಂದ್ರದ ನನ್ನ ಸಹೋದ್ಯೋಗಿ ಮತ್ತು ಪಂಜಾಬ್ ನಾಯಕ ಶ್ರೀ ರವನೀತ್ ಸಿಂಗ್ ಬಿಟ್ಟು ಜಿ; ಅಲ್ಲಿನ ಎಲ್ಲಾ ಸಾರ್ವಜನಿಕ ಪ್ರತಿನಿಧಿಗಳು; ಲಕ್ನೋದಿಂದ ಸಂಪರ್ಕ ಹೊಂದಿದ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜಿ; ಇತರ ಗಣ್ಯ ಅತಿಥಿಗಳೇ; ಮತ್ತು ಕಾಶಿಯಲ್ಲಿರುವ ನನ್ನ ಕುಟುಂಬ ಸದಸ್ಯರುಗಳೇ!ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 08th, 08:15 am
ಭಾರತದ ಆಧುನಿಕ ರೈಲ್ವೆ ಮೂಲಸೌಕರ್ಯವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ, ಉತ್ತರ ಪ್ರದೇಶದ ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ, ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಬಾಬಾ ವಿಶ್ವನಾಥನ ಪವಿತ್ರ ನಗರವಾದ ವಾರಣಾಸಿಯ ಎಲ್ಲಾ ಕುಟುಂಬಗಳಿಗೆ ತಮ್ಮ ಗೌರವಯುತ ಶುಭಾಶಯಗಳನ್ನು ಕೋರಿದರು. ದೇವ ದೀಪಾವಳಿಯ ಸಮಯದ ಅದ್ಭುತ ಆಚರಣೆಗಳ ಬಗ್ಗೆ ಅವರು ಮಾತನಾಡಿದರು ಮತ್ತು ಇಂದು ಕೂಡ ಒಂದು ಶುಭ ಸಂದರ್ಭವಾಗಿದೆ ಮತ್ತು ಈ ಅಭಿವೃದ್ಧಿಯ ಹಬ್ಬಕ್ಕೆ ಎಲ್ಲರಿಗೂ ಅವರು ಶುಭಾಶಯಗಳನ್ನು ತಿಳಿಸಿದರು.ಸೆಪ್ಟೆಂಬರ್ 17ರಂದು ಮಧ್ಯಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ
September 16th, 02:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಧಾರ್ ನಲ್ಲಿ 'ಸ್ವಸ್ಥ ನಾರಿ ಸಶಕ್ತ ಪರಿವಾರ್' ಮತ್ತು '8ನೇ ರಾಷ್ಟ್ರೀಯ ಪೋಷಣ್ ಮಾಹ್' ಅಭಿಯಾನಗಳಿಗೆ ಅವರು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಹಲವಾರು ಇತರ ಉಪಕ್ರಮಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಭಾರತ-ಮಾರಿಷಸ್ ಜಂಟಿ ಘೋಷಣೆ; ವಿಶೇಷ ಆರ್ಥಿಕ ಪ್ಯಾಕೇಜ್
September 11th, 01:53 pm
ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಮಾರಿಷಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಸನ್ಮಾನ್ಯ ಡಾ. ನವೀನ್‌ಚಂದ್ರ ರಾಮಗೂಲಂ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ. ಇಬ್ಬರೂ ಪ್ರಧಾನಮಂತ್ರಿ ಇಂದು ವಾರಣಾಸಿಯಲ್ಲಿ ವ್ಯಾಪಕ ಶ್ರೇಣಿಯ ದ್ವಿಪಕ್ಷೀಯ ವಿಷಯಗಳ ಕುರಿತು ತುಂಬಾ ಫಲಪ್ರದ ಸಮಾಲೋಚನೆಗಳನ್ನು ನಡೆಸಿದರು. ಮಾರಿಷಸ್ ಸರ್ಕಾರ ಸಲ್ಲಿಸಿದ ಮನವಿ ಆಧರಿಸಿ ಭಾರತ ಮತ್ತು ಮಾರಿಷಸ್ ಜಂಟಿಯಾಗಿ ಕಾರ್ಯಗತಗೊಳಿಸಲು ಈ ಕೆಳಗಿನ ಯೋಜನೆಗಳನ್ನು ತಾತ್ವಿಕವಾಗಿ ಒಪ್ಪಿಕೊಂಡಿವೆ.ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
September 11th, 12:30 pm
ನನ್ನ ಸಂಸದೀಯ ಕ್ಷೇತ್ರಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಕಾಶಿಯು ಸದಾ ಭಾರತದ ನಾಗರಿಕತೆ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ.ಬಿಹಾರದ ಗಯಾಜಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 22nd, 12:00 pm
ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಜಿ, ಜನಪ್ರಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಜಿತನ್ ರಾಮ್ ಮಾಂಝಿ ಜಿ, ರಾಜೀವ್ ರಂಜನ್ ಸಿಂಗ್, ಚಿರಾಗ್ ಪಾಸ್ವಾನ್ ಜಿ, ರಾಮ್ ನಾಥ್ ಠಾಕೂರ್ ಜಿ, ನಿತ್ಯಾನಂದ ರೈ ಜಿ, ಸತೀಶ್ ಚಂದ್ರ ದುಬೆ ಜಿ, ರಾಜ್ ಭೂಷಣ್ ಚೌಧರಿ ಜಿ, ಉಪಮುಖ್ಯಮಂತ್ರಿಗಳಾದ ಸಮ್ರಾಟ್ ಚೌಧರಿ ಜಿ ಮತ್ತು ವಿಜಯ್ ಕುಮಾರ್ ಸಿನ್ಹಾ ಜಿ, ಬಿಹಾರ ಸರ್ಕಾರದ ಸಚಿವರೆ, ನನ್ನ ಸಂಸದ ಮಿತ್ರರಾದ ಉಪೇಂದ್ರ ಕುಶ್ವಾಹ ಜಿ, ಇಲ್ಲಿರುವ ಇತರ ಸಂಸದರೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಬಿಹಾರದ ಗಯಾದಲ್ಲಿ 12,000 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು
August 22nd, 11:20 am
ಬಿಹಾರದ ಗಯಾದಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 12,000 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಜ್ಞಾನ ಮತ್ತು ಮೋಕ್ಷದ ಪವಿತ್ರ ನಗರವಾದ ಗಯಾಕ್ಕೆ ಪ್ರಧಾನಿಯವರು ನಮನ ಸಲ್ಲಿಸಿದರು ಮತ್ತು ವಿಷ್ಣುಪಾದ ಮಂದಿರದ ಅದ್ಭುತ ಭೂಮಿಯಿಂದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು. ಗಯಾ ಆಧ್ಯಾತ್ಮಿಕತೆ ಮತ್ತು ಶಾಂತಿಯ ಭೂಮಿ ಎಂದು ಶ್ರೀ ಮೋದಿ ಹೇಳಿದರು. ಭಗವಾನ್ ಬುದ್ಧ ಜ್ಞಾನೋದಯವನ್ನು ಪಡೆದದ್ದು ಈ ಪುಣ್ಯಭೂಮಿಯಲ್ಲಿ ಎಂದು ಅವರು ಹೇಳಿದರು. ಗಯಾ ಪ್ರಾಚೀನ ಮತ್ತು ಅತ್ಯಂತ ಶ್ರೀಮಂತ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು. ಈ ಪ್ರದೇಶದ ಜನರು ನಗರವನ್ನು ಗಯಾ ಎಂದು ಮಾತ್ರ ಕರೆಯಬಾರದು, ಬದಲಿಗೆ ಗೌರವಯುತವಾಗಿ ಗಯಾಜಿ ಎಂದು ಕರೆಯಬೇಕೆಂದು ಬಯಸುತ್ತಾರೆ ಎಂದು ಹೇಳಿದ ಪ್ರಧಾನಿ, ಈ ಭಾವನೆಯನ್ನು ಗೌರವಿಸಿದ್ದಕ್ಕಾಗಿ ಬಿಹಾರ ಸರ್ಕಾರವನ್ನು ಅಭಿನಂದಿಸಿದರು. ಗಯಾದ ತ್ವರಿತ ಅಭಿವೃದ್ಧಿಗಾಗಿ ಕೇಂದ್ರ ಮತ್ತು ಬಿಹಾರದಲ್ಲಿರುವ ತಮ್ಮ ಸರ್ಕಾರಗಳು ನಿರಂತರ ಪ್ರಯತ್ನಗಳನ್ನು ಮಾಡುತ್ತಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು.