ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
November 23rd, 12:45 pm
ಐಬಿಎಸ್‌ಎ ಕೇವಲ ಮೂರು ದೇಶಗಳ ವೇದಿಕೆಯಲ್ಲ; ಇದು ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ಶಕ್ತಿಗಳು ಮತ್ತು ಮೂರು ಮಹತ್ವದ ಆರ್ಥಿಕತೆಗಳನ್ನು ಜೋಡಿಸುವ ಪ್ರಮುಖ ವೇದಿಕೆಯಾಗಿದೆ. ಇದು ನಮ್ಮ ವೈವಿಧ್ಯತೆ, ಹಂಚಿಕೆಯ ಮೌಲ್ಯಗಳು ಮತ್ತು ಹಂಚಿಕೆಯ ಆಕಾಂಕ್ಷೆಗಳಲ್ಲಿ ಬೇರೂರಿರುವ ಆಳವಾದ ಮತ್ತು ನಿರಂತರ ಪಾಲುದಾರಿಕೆಯಾಗಿದೆ.ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಭಾಗಿ
November 23rd, 12:30 pm
ಸಭೆಯನ್ನು ಸಕಾಲಿಕ ಎಂದು ಬಣ್ಣಿಸಿದ ಪ್ರಧಾನಮಂತ್ರಿ, ಕಾಕತಾಳೀಯವೆಂದರೆ ಇದು ಆಫ್ರಿಕಾದ ನೆಲದಲ್ಲಿ ನಡೆದ ಮೊದಲ ಜಿ20 ಶೃಂಗಸಭೆಯಾಗಿದೆ ಮತ್ತು ಜಾಗತಿಕ ದಕ್ಷಿಣ ದೇಶಗಳು ಸತತ ನಾಲ್ಕು ಜಿ20 ಸಭೆಗಳ ಅಧ್ಯಕ್ಷತೆಗಳನ್ನು ವಹಿಸಿಕೊಂಡವು, ಅವುಗಳಲ್ಲಿ ಕೊನೆಯ ಮೂರು ಐ.ಬಿ.ಎಸ್.ಎ ಸದಸ್ಯ ರಾಷ್ಟ್ರಗಳದ್ದಾಗಿದ್ದವು ಎಂದು ಉಲ್ಲೇಖಿಸಿದರು. ಇದು ಮಾನವ ಕೇಂದ್ರಿತ ಅಭಿವೃದ್ಧಿ, ಬಹುಪಕ್ಷೀಯ ಸುಧಾರಣೆ ಮತ್ತು ಸುಸ್ಥಿರ ಬೆಳವಣಿಗೆಯ ಮೇಲೆ ಕೇಂದ್ರೀಕರಿಸಿದ ಹಲವಾರು ಪ್ರಮುಖ ಉಪಕ್ರಮಗಳಿಗೆ ಕಾರಣವಾಗಿದೆ ಎಂದು ಅವರು ಉಲ್ಲೇಖಿಸಿದರು.ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ಗೆ ಆಗಮಿಸಿದರು
November 21st, 06:25 pm
ಪ್ರಧಾನಿ ಮೋದಿ ಸ್ವಲ್ಪ ಸಮಯದ ಹಿಂದೆ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ಗೆ ಆಗಮಿಸಿದರು. ಪ್ರಧಾನಿ ಮೋದಿ 20 ನೇ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಶೃಂಗಸಭೆಯ ಸಂದರ್ಭದಲ್ಲಿ, ಅವರು ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಮತ್ತು ಭಾರತ-ಬ್ರೆಜಿಲ್-ದಕ್ಷಿಣ ಆಫ್ರಿಕಾ (ಐಬಿಎಸ್‌ಎ) ನಾಯಕರ ಸಭೆಯಲ್ಲಿಯೂ ಭಾಗವಹಿಸಲಿದ್ದಾರೆ.ದಕ್ಷಿಣ ಆಫ್ರಿಕಾ ಗಣರಾಜ್ಯಕ್ಕೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
November 21st, 06:45 am
ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿ ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ 20ನೇ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಘನತೆವೆತ್ತ ಶ್ರೀ ಹೆಚ್.ಇ. ಸಿರಿಲ್ ರಾಮಫೋಸಾ ಅವರ ಆಹ್ವಾನದ ಮೇರೆಗೆ ನಾನು 2025ರ ನವೆಂಬರ್ 21-23 ರವರೆಗೆ ದಕ್ಷಿಣ ಆಫ್ರಿಕಾ ಗಣರಾಜ್ಯಕ್ಕೆ ಭೇಟಿ ನೀಡುತ್ತಿದ್ದೇನೆ.