ಆಸ್ಟ್ರಿಯಾದ ಚಾನ್ಸಲರ್ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
April 16th, 11:55 am
40 ವರ್ಷಗಳ ನಂತರ ಆಸ್ಟ್ರಿಯಾದ ಚಾನ್ಸಲರ್ ಭಾರತಕ್ಕೆ ಭೇಟಿ ನೀಡಿರುವುದು ಬಹಳ ಮುಖ್ಯ. 2026ರಲ್ಲಿ ಭಾರತ-ಯುರೋಪಿಯನ್ ಯೂನಿಯನ್ ಮುಕ್ತ ವ್ಯಾಪಾರ ಒಪ್ಪಂದದ ನಂತರ, ಭಾರತ-ಐರೋಪ್ಯ ಒಕ್ಕೂಟ ಸಂಬಂಧಗಳಲ್ಲಿ ಹೊಸ ಹಂತ ಪ್ರಾರಂಭವಾಗಿದೆ. ಚಾನ್ಸಲರ್ ಸ್ಟಾಕರ್ ಅವರ ಭೇಟಿಯ ಮೂಲಕ ನಾವು ಭಾರತ-ಆಸ್ಟ್ರಿಯಾ ಬಾಂಧವ್ಯವನ್ನು ಹೊಸ ಯುಗಕ್ಕೆ ಕೊಂಡೊಯ್ಯುತ್ತಿದ್ದೇವೆ.TMC came to power by lying in the name of “Maa, Maati, Manush”: PM Modi in Dakshin Dinajpur, West Bengal
April 11th, 11:40 am
PM Modi addressed a massive rally Dakshin Dinajpur, West Bengal. In his speech, he prioritised women’s safety, justice, and empowerment, outlining measures like fast-tracking cases, increasing women police recruitment, and financial support initiatives. He remarked that while the BJP believes in Sabka Saath, Sabka Vikas, it will also ensure that ‘hisaab’ is fulfilled in West Bengal.The BJP’s resolve is a declaration to end TMC’s jungle raj and syndicate rule: PM Modi in Jangipur, West Bengal
April 11th, 11:38 am
PM Modi addressed a massive rally in Jangipur, West Bengal. In his speech, he lauded BJP’s manifesto, outlining six key guarantees focused on ending syndicate raj, ensuring women’s empowerment, boosting education infrastructure, and delivering transparent governance. He also promised employment opportunities and benefits for government employees.Massive public meetings in Purba Bardhaman, Jangipur & Dakshin Dinajpur, West Bengal
April 11th, 11:30 am
Tapping into the growing momentum in West Bengal, PM Modi addressed a massive public gathering in Purba Bardhaman, highlighting BJP’s vision for a fear-free, Viksit Bengal while launching a sharp attack on the TMC government over corruption, lawlessness and appeasement politics.ಅಸ್ಸಾಂನ ಸಿಲ್ಚಾರ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 14th, 11:10 am
ಸಂಸ್ಕೃತಿ, ಧೈರ್ಯ ಮತ್ತು ಚೈತನ್ಯದಿಂದ ತುಂಬಿರುವ ಬರಾಕ್ ಕಣಿವೆಯ ಕುಟುಂಬಗಳನ್ನು ನೋಡಲು ಇಲ್ಲಿಗೆ ಬರುವುದು ನನಗೆ ಯಾವಾಗಲೂ ವಿಶೇಷ ಅನುಭವ ತರುತ್ತದೆ. ಸಿಲ್ಚಾರ್ ಅನ್ನು ಬರಾಕ್ ಕಣಿವೆಯ ಪ್ರವೇಶದ್ವಾರ ಎಂದು ಕರೆಯಲಾಗುತ್ತದೆ. ಇತಿಹಾಸ, ಭಾಷೆ, ಸಂಸ್ಕೃತಿ ಮತ್ತು ಉದ್ಯಮಗಳು ಒಟ್ಟಾಗಿ ಒಂದು ವಿಶಿಷ್ಟ ಗುರುತು ಸೃಷ್ಟಿಸಿದ ಸ್ಥಳ ಇದು. ಇಲ್ಲಿ ಬಂಗಾಳಿ ಮಾತನಾಡುತ್ತಾರೆ, ಅಸ್ಸಾಮಿಯ ಅನುರಣನ ಕೇಳುತ್ತದೆ ಮತ್ತು ಇತರೆ ಬುಡಕಟ್ಟು ಸಂಪ್ರದಾಯಗಳು ಸಹ ಪ್ರವರ್ಧಮಾನಕ್ಕೆ ಬರುತ್ತವೆ. ಈ ವೈವಿಧ್ಯತೆಯನ್ನು ಶಕ್ತಿಯಾಗಿ ಪರಿವರ್ತಿಸುವ ಮೂಲಕ, ನೀವೆಲ್ಲರೂ ಈ ಇಡೀ ಪ್ರದೇಶವನ್ನು ಸಹೋದರತ್ವ ಮತ್ತು ಸಾಮರಸ್ಯದಿಂದ ಅಭಿವೃದ್ಧಿಪಡಿಸುತ್ತಿದ್ದೀರಿ. ಇದು ಬರಾಕ್ ಕಣಿವೆಯ ದೊಡ್ಡ ಸಾಮರ್ಥ್ಯವಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಸಿಲ್ಚಾರ್ ನಲ್ಲಿ 23,550 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
March 14th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಸಿಲ್ಚಾರ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಮೋದಿ, ತನ್ನ ಸಂಸ್ಕೃತಿ ಮತ್ತು ಚೈತನ್ಯದಿಂದ ವ್ಯಾಖ್ಯಾನಿಸಲ್ಪಟ್ಟ ಭೂಮಿಯಾದ ಬರಾಕ್ ಕಣಿವೆಗೆ ಭೇಟಿ ನೀಡುವುದು ಸದಾ ತಮಗೆ ಆಳವಾದ ವಿಶೇಷ ಅನುಭವವನ್ನು ತರುತ್ತದೆ ಎಂದು ಹೇಳಿದರು. ಇತಿಹಾಸ ಮತ್ತು ಭಾಷೆ ವಿಲೀನಗೊಂಡು ವಿಶಿಷ್ಟ ಪ್ರಾದೇಶಿಕ ಗುರುತನ್ನು ಸೃಷ್ಟಿಸಲು ಸಿಲ್ಚಾರ್ ಈ ಕಣಿವೆಯ ಹೆಬ್ಬಾಗಿಲಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಬಂಗಾಳಿ, ಅಸ್ಸಾಮಿ ಮತ್ತು ಬುಡಕಟ್ಟು ಸಂಪ್ರದಾಯಗಳು ಸಾಮರಸ್ಯದಿಂದ ಜೊತೆಗೆ ಬೆಳೆಯುವ ವೈವಿಧ್ಯತೆಯಲ್ಲಿ ಈ ಪ್ರದೇಶದ ಶಕ್ತಿ ಅಡಗಿದೆ ಎಂದು ಶ್ರೀ ಮೋದಿ ಹೇಳಿದರು. ಬರಾಕ್ ಕಣಿವೆಯ ವೈವಿಧ್ಯತೆಯು ಅದರ ದೊಡ್ಡ ಆಸ್ತಿಯಾಗಿದ್ದು, ಅದರ ನಾಗರಿಕರಲ್ಲಿ ಸಹೋದರತ್ವದ ಮನೋಭಾವವನ್ನು ಬೆಳೆಸುತ್ತದೆ ಎಂದು ಶ್ರೀ ಮೋದಿ ದೃಢಪಡಿಸಿದರು.ಕೋಟಾ ವಿಮಾನ ನಿಲ್ದಾಣ ನಿರ್ಮಾಣದ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ
March 07th, 03:15 pm
ಕಳೆದ ವಾರವಷ್ಟೇ ನನಗೆ ರಾಜಸ್ಥಾನಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿತು. ಪವಿತ್ರ ಭೂಮಿ ಅಜ್ಮೀರ್‌ನಿಂದ, ಸಾವಿರಾರು ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದ್ದೇವೆ. ಅದೇ ಕಾರ್ಯಕ್ರಮದಲ್ಲಿ, ರಾಜಸ್ಥಾನದ 21,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಯಿತು. ಅಜ್ಮೀರ್ ಭೇಟಿಯ ಕೆಲವೇ ದಿನಗಳ ನಂತರ, ಇಂದು ಕೋಟಾಗೆ ಸಂಪರ್ಕ ಹೊಂದಿದ ಈ ಪ್ರಮುಖ ವಿಮಾನ ನಿಲ್ದಾಣ ಯೋಜನೆಯನ್ನು ಪ್ರಾರಂಭಿಸುವ ಸೌಭಾಗ್ಯ ನನಗೆ ಸಿಕ್ಕಿದೆ. ಒಂದೇ ವಾರದೊಳಗೆ, ರಾಜಸ್ಥಾನದಲ್ಲಿನ ಈ 2 ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳು ಪ್ರಬಲ ಸಂದೇಶವನ್ನು ರವಾನಿಸುತ್ತವೆ. ರಾಜಸ್ಥಾನ ಇಂದು ಎಷ್ಟು ವೇಗವಾಗಿ ಪ್ರಗತಿ ಸಾಧಿಸುತ್ತಿದೆ ಎಂಬುದನ್ನು ಅವು ತೋರಿಸುತ್ತವೆ. ಅದು ಮೂಲಸೌಕರ್ಯವಾಗಿರಲಿ, ಯುವಕರಿಗೆ ಉದ್ಯೋಗಾವಕಾಶಗಳಾಗಲಿ, ರೈತರು ಮತ್ತು ಮಹಿಳೆಯರ ಯೋಜನೆಗಳಾಗಲಿ ಅಥವಾ ಪ್ರತಿಯೊಂದು ವಲಯದ ಉಪಕ್ರಮಗಳು ರಾಜಸ್ಥಾನದಾದ್ಯಂತ ಹೆಚ್ಚಿನ ವೇಗದಲ್ಲಿ ನಡೆಯುತ್ತಿವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕೋಟಾ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ; ಪ್ರದೇಶದ ಪರಿವರ್ತನೆಗೆ ಒತ್ತು
March 07th, 02:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಕೋಟಾ ವಿಮಾನ ನಿಲ್ದಾಣದ ಶಂಕುಸ್ಥಾಪನೆ ನೆರವೇರಿಸಿದರು. ಇದು ಹಾಡೋತಿ ಪ್ರಾಂತ್ಯದ ಪಾಲಿಗೆ ಒಂದು ಮಹತ್ವದ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನವು ಅಭೂತಪೂರ್ವ ವೇಗದಲ್ಲಿ ಪ್ರಗತಿ ಹೊಂದುತ್ತಿದೆ. ಈ ಹೊಸ ವಿಮಾನ ನಿಲ್ದಾಣವು ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಗೆ ವೇಗವರ್ಧಕವಾಗಲಿದೆ, ಎಂದು ಒತ್ತಿಹೇಳಿದರು.ಕೃತಕ ಬುದ್ಧಿಮತ್ತೆ (ಎಐ) ವಲಯದಲ್ಲಿ ಕೆಲಸ ಮಾಡುವ ವಿವಿಧ ಸಂಸ್ಥೆಗಳ ಸಿಇಒಗಳು ಮತ್ತು ತಜ್ಞರೊಂದಿಗೆ ಪ್ರಧಾನಮಂತ್ರಿ ಅವರು ಸಂವಾದ ನಡೆಸಿದರು
January 29th, 06:33 pm
ಪ್ರಧಾನಮಂತ್ರಿ ಅವರು ಇಂದು ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರದಲ್ಲಿ ಕೆಲಸ ಮಾಡುವ ವಿವಿಧ ಸಂಸ್ಥೆಗಳ ಸಿಇಒಗಳು ಮತ್ತು ತಜ್ಞರೊಂದಿಗೆ ಸಂವಾದ ನಡೆಸಿದರು.ಓಮನ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳು ಮತ್ತು ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 18th, 12:32 pm
ನಿಮ್ಮೆಲ್ಲರ ಯೌವನದ ಉತ್ಸಾಹ ಮತ್ತು ಚೈತನ್ಯವು ಇಲ್ಲಿನ ವಾತಾವರಣವನ್ನು ನಿಜವಾಗಿಯೂ ಚೈತನ್ಯಗೊಳಿಸಿದೆ. ಈ ಸಭಾಂಗಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗದ ಕಾರಣಕ್ಕೆ ಹತ್ತಿರದ ಸಭಾಂಗಣದಲ್ಲಿ ಕುಳಿತು ಪರದೆಗಳಲ್ಲಿ ನೇರ ಪ್ರಸಾರದ ಕಾರ್ಯಕ್ರಮ ವೀಕ್ಷಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇಲ್ಲಿಯವರೆಗೆ ಬಂದಿದ್ದರೂ ಸಭಾಂಗಣಕ್ಕೆ ಪ್ರವೇಶಿಸಲು ಸಾಧ್ಯವಾಗದ ಅವರಿಗೆ ಹೇಗೆ ಅನಿಸುತ್ತಿರಬಹುದು ಎಂಬುದನ್ನು ನೀವೇ ಊಹಿಸಬಹುದು.ಒಮಾನ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 18th, 12:31 pm
ಪ್ರಧಾನಮಂತ್ರಿ ಅವರು ಇಂದು ಮಸ್ಕತ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ವಿವಿಧ ಭಾರತೀಯ ಶಾಲೆಗಳ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಓಮನ್ ನಲ್ಲಿ ಭಾರತೀಯ ಶಾಲೆಗಳು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷವು ಅಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ವಿಶೇಷವಾಗಿದೆ.RJD forced Congress to surrender its CM claim at gunpoint: PM Modi in Bhagalpur, Bihar
November 06th, 12:01 pm
In the Bhagalpur rally, PM Modi criticised RJD and Congress for never understanding the value of self-reliance or Swadeshi. He reminded the people that the Congress can never erase the stain of the Bhagalpur riots. Outlining NDA’s roadmap for progress, PM Modi said the government is working to make Bihar a hub for textiles, tourism and technology.No IIT, no IIM, no National Law University — a whole generation’s future was devoured by RJD’s leadership: PM Modi in Araria, Bihar
November 06th, 11:59 am
PM Modi addressed a large public gathering in Araria, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’PM Modi stirs up massive rallies with his addresses in Araria & Bhagalpur, Bihar
November 06th, 11:35 am
PM Modi addressed large public gatherings in Araria & Bhagalpur, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 03rd, 11:00 am
ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಜಿತೇಂದ್ರ ಸಿಂಗ್ ಜಿ, ಪ್ರಧಾನ ವೈಜ್ಞಾನಿಕ ಸಲಹೆಗಾರ ಅಜಯ್ ಕುಮಾರ್ ಸೂದ್, ನೊಬೆಲ್ ಪ್ರಶಸ್ತಿ ವಿಜೇತ ಸರ್ ಆಂಡ್ರೆ ಗೀಮ್ ಅವರು ನಮ್ಮೊಂದಿಗೆ ಉಪಸ್ಥಿತರಿದ್ದಾರೆ, ಇಲ್ಲಿರುವ ಎಲ್ಲಾ ವಿಜ್ಞಾನಿಗಳೆ, ಅನುಶೋಧಕರೆ, ಶೈಕ್ಷಣಿಕ ಕ್ಷೇತ್ರದ ಗಣ್ಯರೆ, ಭಾರತ ಮತ್ತು ವಿದೇಶಗಳಿಂದ ಆಗಮಿಸಿರುವ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ 2025' ಅನ್ನು ಉದ್ದೇಶಿಸಿ ಮಾತನಾಡಿದರು
November 03rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ 'ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ (ESTIC) 2025' ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿಯವರು, ಭಾರತ ಮತ್ತು ವಿದೇಶಗಳ ವಿಜ್ಞಾನಿಗಳು, ನಾವೀನ್ಯಕಾರರು (innovators), ಶಿಕ್ಷಣ ತಜ್ಞರು ಮತ್ತು ಇತರ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಐಸಿಸಿ ಮಹಿಳಾ ವಿಶ್ವಕಪ್ 2025 ರಲ್ಲಿ ಭಾರತ ಗಳಿಸಿದ ಗಮನಾರ್ಹ ವಿಜಯದ ಬಗ್ಗೆ ಮಾತನಾಡಿದ ಶ್ರೀ ಮೋದಿಯವರು, ಭಾರತೀಯ ಕ್ರಿಕೆಟ್ ತಂಡದ ಯಶಸ್ಸಿನಿಂದ ಇಡೀ ರಾಷ್ಟ್ರವೇ ಹರ್ಷಗೊಂಡಿದೆ ಎಂದು ಪ್ರಸ್ತಾಪಿಸಿದರು. ಇದು ಭಾರತದ ಮೊದಲ ಮಹಿಳಾ ವಿಶ್ವಕಪ್ ಗೆಲುವು ಎಂಬುದನ್ನು ಒತ್ತಿ ಹೇಳಿದ ಅವರು, ಮಹಿಳಾ ಕ್ರಿಕೆಟ್ ತಂಡಕ್ಕೆ ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ರಾಷ್ಟ್ರವು ಅವರ ಬಗ್ಗೆ ಹೆಮ್ಮೆಪಡುತ್ತದೆ ಎಂದು ಹೇಳಿದ ಪ್ರಧಾನಿಯವರು, ಅವರ ಈ ಸಾಧನೆಯು ದೇಶಾದ್ಯಂತ ಲಕ್ಷಾಂತರ ಯುವಜನರಿಗೆ ಸ್ಫೂರ್ತಿ ನೀಡುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ಒಡಿಶಾದ ಜಾರ್ಸುಗುಡದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 27th, 11:45 am
ಇಲ್ಲಿ ಕೆಲವು ಯುವ ಸ್ನೇಹಿತರು ಅನೇಕ ಕಲಾಕೃತಿಗಳನ್ನು ತಂದಿದ್ದಾರೆ. ಒಡಿಶಾದ ಕಲೆಯ ಮೇಲಿನ ಪ್ರೀತಿ ವಿಶ್ವಪ್ರಸಿದ್ಧವಾಗಿದೆ. ನಾನು ನಿಮ್ಮೆಲ್ಲರಿಂದ ಈ ಉಡುಗೊರೆಗಳನ್ನು ಸ್ವೀಕರಿಸುತ್ತೇನೆ, ನನ್ನ ಎಸ್‌ಪಿಜಿ ಸಹೋದ್ಯೋಗಿಗಳನ್ನು ಈ ಎಲ್ಲಾ ವಸ್ತುಗಳನ್ನು ನಿಮ್ಮಿಂದ ಸಂಗ್ರಹಿಸಲು ವಿನಂತಿಸುತ್ತೇನೆ. ನೀವು ನಿಮ್ಮ ಹೆಸರು ಮತ್ತು ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ಖಂಡಿತವಾಗಿಯೂ ನನ್ನಿಂದ ನಿಮಗೆ ಪತ್ರ ಬರುತ್ತದೆ. ಅಲ್ಲಿ ಹಿಂಭಾಗದಲ್ಲಿ, ಆ ಮಗು ಬಹಳ ಹೊತ್ತಿನಿಂದ ಏನನ್ನೋ ಕೈಯಲ್ಲಿ ಹಿಡಿದಿರುವುದನ್ನು ನಾನು ನೋಡುತ್ತಿದ್ದೇನೆ. ಅವನ ಕೈಗಳು ನೋಯುತ್ತಿರಬೇಕು. ದಯವಿಟ್ಟು ಅವನಿಗೆ ಸಹಾಯ ಮಾಡಿ ಮತ್ತು ಅದನ್ನೂ ಪಡೆಯಿರಿ. ನೀವು ನಿಮ್ಮ ಹೆಸರನ್ನು ಹಿಂಭಾಗದಲ್ಲಿ ಬರೆದಿದ್ದರೆ, ನಾನು ಖಂಡಿತವಾಗಿಯೂ ನಿಮಗೆ ಪತ್ರ ಬರೆಯುತ್ತೇನೆ. ಈ ಕಲಾಕೃತಿಗಳನ್ನು ಸಿದ್ಧಪಡಿಸಿದ್ದಕ್ಕಾಗಿ ನಿಮ್ಮ ಈ ಪ್ರೀತಿಗಾಗಿ ಎಲ್ಲಾ ಯುವಕರು, ಯುವತಿಯರು ಮತ್ತು ಪುಟ್ಟ ಮಕ್ಕಳಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 27th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲಾ ಗಣ್ಯರಿಗೆ ಗೌರವಯುತ ಶುಭಾಶಯಗಳನ್ನು ಸಲ್ಲಿಸಿದರು. ಪ್ರಸ್ತುತ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿರುವುದನ್ನು ಎತ್ತಿ ತೋರಿಸಿದ ಶ್ರೀ ಮೋದಿ, ಈ ಶುಭ ದಿನಗಳಲ್ಲಿ ಮಾ ಸಮಲೈ ಮತ್ತು ಮಾ ರಾಮಚಂಡಿಯ ಪವಿತ್ರ ಭೂಮಿಗೆ ಭೇಟಿ ನೀಡಿ ಅಲ್ಲಿ ನೆರೆದಿದ್ದ ಜನರನ್ನು ಭೇಟಿ ಮಾಡುವ ಅದೃಷ್ಟ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ತಾಯಂದಿರು ಮತ್ತು ಸಹೋದರಿಯರು ಇರುವುದನ್ನು ಗಮನಿಸಿದ ಪ್ರಧಾನಮಂತ್ರಿ, ಅವರ ಆಶೀರ್ವಾದವೇ ನಿಜವಾದ ಶಕ್ತಿಯ ಮೂಲ ಎಂದು ಹೇಳಿದರು, ಜನರಿಗೆ ನಮನಗಳನ್ನು ಅರ್ಪಿಸಿದರು.ಸೆಪ್ಟೆಂಬರ್ 27 ರಂದು ಒಡಿಶಾಗೆ ಪ್ರಧಾನಮಂತ್ರಿ ಭೇಟಿ
September 26th, 09:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸೆಪ್ಟೆಂಬರ್ 27 ರಂದು ಒಡಿಶಾಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:30ರ ಸುಮಾರಿಗೆ, ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೂರಸಂಪರ್ಕ, ರೈಲ್ವೆ, ಉನ್ನತ ಶಿಕ್ಷಣ, ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಗ್ರಾಮೀಣ ವಸತಿ ಕ್ಷೇತ್ರಗಳು ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಈ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ.ಕರ್ನಾಟಕದ ಬೆಂಗಳೂರಿನಲ್ಲಿ ವಿವಿಧ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 10th, 01:30 pm
ಕರ್ನಾಟಕ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಜೀ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಶ್ರೀ ಮನೋಹರ್ ಲಾಲ್ ಖಟ್ಟರ್ ಜೀ, ಶ್ರೀ ಹೆಚ್.ಡಿ. ಕುಮಾರಸ್ವಾಮಿ ಜೀ, ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ವಿ. ಸೋಮಣ್ಣ ಜೀ, ಶ್ರೀಮತಿ ಶೋಭಾ ಜೀ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಜೀ, ಕರ್ನಾಟಕ ಸರ್ಕಾರದ ಸಚಿವರಾದ ಶ್ರೀ ಬಿ. ಸುರೇಶ್ ಜೀ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ ಜೀ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಜೀ, ಡಾ. ಮಂಜುನಾಥ್ ಜೀ, ಶಾಸಕರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಜೀ, ಮತ್ತು ಕರ್ನಾಟಕದ ನನ್ನ ಸಹೋದರ ಸಹೋದರಿಯರೇ,