ಗೌರವಾನ್ವಿತ ಪ್ರಧಾನಮಂತ್ರಿಯವರ ಸ್ಲೋವಾಕಿಯಾ ಭೇಟಿಯ ಸಂದರ್ಭದಲ್ಲಿನ ಫಲಿತಾಂಶಗಳ ಪಟ್ಟಿ
June 15th, 05:17 pm
ಕಾರ್ಮಿಕ ವಲಸೆ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳುವಳಿಕಾ ಒಪ್ಪಂದಫ್ರಾನ್ಸ್ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್ 2026 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
June 14th, 04:36 pm
ಈ ಸಂದರ್ಭದಲ್ಲಿ ಇಲ್ಲಿ ಉಪಸ್ಥಿತರಿದ್ದದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷ ಮ್ಯಾಕ್ರನ್, ಈ ಶತಮಾನದ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಫ್ರಾನ್ಸ್ ಒಟ್ಟಾಗಿ ಬರಬೇಕು ಎಂದು ನೀವು ಹೇಳಿದ್ದೀರಿ. ಇಂದು, ಈ ಉಪಕ್ರಮವು ಆ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.2026ರ ಭಾರತ್ ಇನ್ನೋವೇಟ್ಸ್ ನಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
June 14th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಗೌರವಾನ್ವಿತ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ನೈಸ್‌ನ ಪಲೈಸ್ ಡೆಸ್ ಎಕ್ಸ್‌ಪೊಸಿಷನ್ಸ್‌ನಲ್ಲಿ ಭಾರತ್ ಇನ್ನೋವೇಟ್ಸ್ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಮೂರು ದಿನಗಳ ಕಾರ್ಯಕ್ರಮವಾದ ಭಾರತ್ ಇನ್ನೋವೇಟ್ಸ್, ಜಾಗತಿಕ ನಾವೀನ್ಯತೆ ನಿಧಿಗಳು ಮತ್ತು ಹೆಜ್ಜೆಗುರುತನ್ನು ಹೊಂದಿರುವ ಭಾರತೀಯ ಡೀಪ್-ಟೆಕ್ ನವೋದ್ಯಮಗಳು (ಸ್ಟಾರ್ಟ್-ಅಪ್‌ಗಳು), ನಾವೀನ್ಯಕಾರರು, ಸಂಶೋಧಕರು ಮತ್ತು ಹೂಡಿಕೆದಾರರನ್ನು ಒಟ್ಟುಗೂಡಿಸುತ್ತದೆ. ಇದು ಜಾಗತಿಕ ಹಂತದಲ್ಲಿ ಭಾರತದ ಪ್ರಮುಖ ಡೀಪ್ ಟೆಕ್ ತಂತ್ರಜ್ಞಾನವನ್ನು ಪ್ರದರ್ಶಿಸುತ್ತದೆ, ಜಾಗತಿಕ ಪ್ರಾಮುಖ್ಯತೆಯ 13 ನಿರ್ಣಾಯಕ ತಂತ್ರಜ್ಞಾನ ಸ್ತಂಭಗಳಲ್ಲಿ 120 ಪಥ-ಭಂಜಕ (ಹೊಸ ಹಾದಿ ತೋರುವ) ಸ್ಟಾರ್ಟ್-ಅಪ್‌ಗಳು ಮತ್ತು 20ಕ್ಕೂ ಹೆಚ್ಚು ಶ್ರೇಷ್ಠತಾ ಸಂಸ್ಥೆಗಳನ್ನು ಪ್ರಸ್ತುತಪಡಿಸುತ್ತದೆ. ಪ್ರಪಂಚದಾದ್ಯಂತದ 350ಕ್ಕೂ ಹೆಚ್ಚು ಉನ್ನತ ಹೂಡಿಕೆದಾರರು ಮತ್ತು ಸಾಹಸೋದ್ಯಮ (ವೆಂಚರ್) ಬಂಡವಾಳಗಾರರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.ಭಾರತದ ಪ್ರಧಾನಮಂತ್ರಿ ಅವರ ನೆದರ್‌ಲ್ಯಾಂಡ್ಸ್ ಭೇಟಿ ಕುರಿತು ಭಾರತ- ನೆದರ್‌ಲ್ಯಾಂಡ್ಸ್ ಜಂಟಿ ಹೇಳಿಕೆ
May 17th, 03:45 am
ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 16-17ರಂದು ನೆದರ್‌ಲ್ಯಾಂಡ್ಸ್ ಗೆ ಅಧಿಕೃತ ಭೇಟಿ ನೀಡಿದ್ದರು. ಇದು ಪ್ರಧಾನಮಂತ್ರಿ ಮೋದಿ ಅವರು ನೆದರ್‌ಲ್ಯಾಂಡ್ಸ್ ಗೆ ನೀಡುತ್ತಿರುವ 2ನೇ ಭೇಟಿಯಾಗಿದೆ.ಭಾರತ-ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ (2026-2030)
May 17th, 03:15 am
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರು 2026 ಮೇ 16ರಂದು ಹೇಗ್‌ನಲ್ಲಿ ನಡೆದ ಸಭೆಯಲ್ಲಿ ಗಮನ ಕೇಂದ್ರೀಕರಿಸಿದ ಸಮಯಬದ್ಧ ಉಪಕ್ರಮಗಳು ಮತ್ತು ಜಂಟಿ ಕ್ರಿಯಾ ಯೋಜನೆಗಳನ್ನು ಅನುಸರಿಸುವ ಮೂಲಕ ಭಾರತ- ನೆದರ್ ಲ್ಯಾಂಡ್ಸ್ ದ್ವಿಪಕ್ಷೀಯ ಸಂಬಂಧವನ್ನು ಕಾರ್ಯತಂತ್ರ ಪಾಲುದಾರಿಕೆಗೆ ಹೆಚ್ಚಿಸಲು ಒಪ್ಪಿಕೊಂಡರು. ಈ ನಿಟ್ಟಿನಲ್ಲಿ, ಭಾರತ ಮತ್ತು ನೆದರ್ ಲ್ಯಾಂಡ್ಸ್ ಮುಂದಿನ 5 ವರ್ಷಗಳ(2026-2030) ಭಾರತ- ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ ಅಳವಡಿಸಿಕೊಂಡವು.