ಫಿನ್‌ಲೆಂಡ್‌ ಗಣರಾಜ್ಯದ ಅಧ್ಯಕ್ಷರ ಅಧಿಕೃತ ಭೇಟಿಯ ಕುರಿತು ಭಾರತ – ಫಿನ್‌ಲೆಂಡ್‌ ಜಂಟಿ ಹೇಳಿಕೆ

March 05th, 08:03 pm

ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫಿನ್‌ಲೆಂಡ್‌ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಅಲೆಕ್ಸಾಂಡರ್ ಸ್ಟಬ್ ಅವರು ಮಾರ್ಚ್ 4-7, 2026 ರವರೆಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಪ್ರಸ್ತುತ ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಅಧ್ಯಕ್ಷ ಸ್ಟಬ್ ಅವರು ನವದೆಹಲಿ ಮತ್ತು ಮುಂಬೈ ಪ್ರವಾಸ ಕೈಗೊಂಡಿದ್ದಾರೆ. ಫಿನ್‌ಲೆಂಡ್‌ನ ಹವಾಮಾನ ಮತ್ತು ಪರಿಸರ ಸಚಿವರಾದ ಶ್ರೀಮತಿ ಸಾರಿ ಮುಲ್ತಾಲಾ, ಉದ್ಯೋಗ ಸಚಿವರಾದ ಶ್ರೀ ಮಟಿಯಾಸ್ ಮಾರ್ಟಿನೆನ್ ಮತ್ತು ಅಧಿಕಾರಿಗಳು ಮತ್ತು ವ್ಯಾಪಾರ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗ ಅವರೊಂದಿಗೆ ಇದ್ದಾರೆ. ಪ್ರಧಾನಮಂತ್ರಿ ಮೋದಿ ಮಾರ್ಚ್ 5, 2026 ರಂದು ನವದೆಹಲಿಯಲ್ಲಿ ರೈಸಿನಾ ಸಂವಾದದ 11 ನೇ ಆವೃತ್ತಿಯನ್ನು ಉದ್ಘಾಟಿಸಿದರು, ಅಧ್ಯಕ್ಷರಾದ ಸ್ಟಬ್ ಮುಖ್ಯ ಅತಿಥಿಯಾಗಿ ಉದ್ಘಾಟನಾ ಭಾಷಣ ಮಾಡಿದರು. ಫೆಬ್ರವರಿ 2026 ರಲ್ಲಿ ನಡೆಯಲಿರುವ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಫಿನ್‌ಲೆಂಡ್‌ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ಪೆಟ್ಟೇರಿ ಓರ್ಪೊ ಭಾಗವಹಿಸಿದ್ದರು. ಆ ನಂತರ ಈಗ ಅಧ್ಯಕ್ಷ ಸ್ಟಬ್ ಭೇಟಿ ನೀಡಿದ್ದಾರೆ.

ಮಲೇಷ್ಯಾದ ಪ್ರಧಾನಮಂತ್ರಿ ಅವರೊಂದಿಗೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ ಮೋದಿ

February 08th, 11:19 am

ನಾಯಕರು ವ್ಯಾಪಕ ಚರ್ಚೆಗಳನ್ನು ನಡೆಸಿದರು ಮತ್ತು 2024ರಲ್ಲಿ ಉಭಯ ದೇಶಗಳ ನಡುವೆ ಸ್ಥಾಪಿಸಲಾದ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಸಹಮತ ವ್ಯಕ್ತಪಡಿಸಿದರು. ಪಾಲುದಾರಿಕೆ ಮತ್ತು ಜನರ ನಡುವಿನ ನಿಕಟ ಸಂಬಂಧದಲ್ಲಿ ನೆಲೆಯೂರಿರುವ ಭಾರತ-ಮಲೇಷ್ಯಾ ಹಳೆಯ ಬಾಂಧವ್ಯವನ್ನು ಅವರು ಸ್ಮರಿಸಿದರು. ವ್ಯಾಪಾರ, ಹೂಡಿಕೆ, ರಕ್ಷಣೆ, ಭದ್ರತೆ, ಸಮುದ್ರ, ಶುದ್ಧ ಇಂಧನ, ಮೂಲಸೌಕರ್ಯ, ನವೋದ್ಯಮಗಳು, ಕೃಷಿ, ಶಿಕ್ಷಣ, ಆರೋಗ್ಯ, ಆಯುರ್ವೇದ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಂಪರ್ಕಗಳಂತಹ ಆದ್ಯತೆಯ ಕ್ಷೇತ್ರಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ಆಯಾಮವನ್ನು ನಾಯಕರು ಪರಿಶೀಲಿಸಿದರು. ಸೆಮಿಕಂಡಕ್ಟರ್‌ಗಳು ಮತ್ತು ಕೃತಕ ಬುದ್ಧಿಮತ್ತೆಯಂತಹ ಉದಯೋನ್ಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಬಗ್ಗೆಯೂ ಅವರು ಚರ್ಚಿಸಿದರು. 'ದ್ವಿಪಕ್ಷೀಯ ಡಿಜಿಟಲ್ ಮಂಡಳಿ' ಮೂಲಕ ಉಭಯ ದೇಶಗಳ ನಡುವಿನ ಡಿಜಿಟಲ್ ಸಹಕಾರದ ಸ್ಥಿರ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು. ಇದೇವೇಳೆ 'ಫಿನ್‌ಟೆಕ್‌' ಕ್ಷೇತ್ರದಲ್ಲಿ ಸಹಯೋಗವನ್ನು ಹೆಚ್ಚಿಸಲು 'ಯುಪಿಐ' ಮತ್ತು 'ಪೇ-ನೆಟ್' ನಡುವಿನ ಒಪ್ಪಂದವನ್ನು ಅವರು ಸ್ವಾಗತಿಸಿದರು.

ಕೃತಕ ಬುದ್ಧಿಮತ್ತೆ (ಎಐ) ವಲಯದಲ್ಲಿ ಕೆಲಸ ಮಾಡುವ ವಿವಿಧ ಸಂಸ್ಥೆಗಳ ಸಿಇಒಗಳು ಮತ್ತು ತಜ್ಞರೊಂದಿಗೆ ಪ್ರಧಾನಮಂತ್ರಿ ಅವರು ಸಂವಾದ ನಡೆಸಿದರು

January 29th, 06:33 pm

ಪ್ರಧಾನಮಂತ್ರಿ ಅವರು ಇಂದು ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರದಲ್ಲಿ ಕೆಲಸ ಮಾಡುವ ವಿವಿಧ ಸಂಸ್ಥೆಗಳ ಸಿಇಒಗಳು ಮತ್ತು ತಜ್ಞರೊಂದಿಗೆ ಸಂವಾದ ನಡೆಸಿದರು.

ಮಾರಿಷಸ್ ಪ್ರಧಾನಮಂತ್ರಿ ಅವರ ಭಾರತ ಭೇಟಿ: ಫಲಪ್ರದತೆಯ ವಿವರ

September 11th, 02:10 pm

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಮಾರಿಷಸ್ ಗಣರಾಜ್ಯದ ತೃತೀಯ ಶಿಕ್ಷಣ, ವಿಜ್ಞಾನ ಮತ್ತು ಸಂಶೋಧನಾ ಸಚಿವಾಲಯದ ನಡುವೆ ಒಪ್ಪಂದ

ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

September 11th, 12:30 pm

ನನ್ನ ಸಂಸದೀಯ ಕ್ಷೇತ್ರಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಕಾಶಿಯು ಸದಾ ಭಾರತದ ನಾಗರಿಕತೆ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ.