ಜನರು ಹರ್ ಘರ್ ತಿರಂಗಾ ಆಂದೋಲನದಲ್ಲಿ ಭಾಗಿಯಾಗುವಂತೆ ಪ್ರಧಾನಮಂತ್ರಿ ಕರೆ
August 09th, 07:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರ್ ಘರ್ ತಿರಂಗಾ ಆಂದೋಲನದಲ್ಲಿ ಜನರು ಉತ್ಸಾಹದಿಂದ ಭಾಗಿಯಾಗುವಂತೆ ಮತ್ತು ವಿಕಸಿತ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡುವ ಸಾಮೂಹಿಕ ಸಂಕಲ್ಪಕ್ಕೆ ಹೊಸ ಚೈತನ್ಯ ತುಂಬುವಂತೆ ನಾಗರಿಕರಿಗೆ ಕರೆ ನೀಡಿದ್ದಾರೆ. ತ್ರಿವರ್ಣ ಧ್ವಜವು ಭಾರತದ ಹೆಮ್ಮೆಯ ಸಂಕೇತವಾಗಿದೆ ಹಾಗೂ ಪ್ರತಿಯೊಬ್ಬ ನಾಗರಿಕರೂ ರಾಷ್ಟ್ರಕ್ಕಾಗಿ ತಮ್ಮ ಅತ್ಯುತ್ತಮವಾದದ್ದನ್ನು ನೀಡುವುದಕ್ಕೆ ಶ್ರಮಿಸಲು ಸದಾ ಸ್ಫೂರ್ತಿಯ ಸೆಲೆಯಾಗಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಮನ್ ಕಿ ಬಾತ್ ನಲ್ಲಿ ಭಾರತದ ರಕ್ಷಣಾ ಶಕ್ತಿ, ನಾವೀನ್ಯತೆ ಮತ್ತು ಸಾಮೂಹಿಕ ಪ್ರಯತ್ನಗಳನ್ನು ಪ್ರಧಾನಿ ಮೋದಿ ಎತ್ತಿ ತೋರಿಸಿದ್ದಾರೆ
July 26th, 11:30 am
Prime Minister Narendra Modi addressed the nation through Mann Ki Baat. In his speech, he highlighted important topics such as Kargil Vijay Diwas, Catch the Rain campaign, India's space sector prowess, Science Olympiads, Environmental conservation, Khadi and more. He called upon the citizens to share their ideas and suggestions for Independence Day through MyGov.ಪ್ರಧಾನಿ ಮೋದಿಯವರ ಸ್ವಾತಂತ್ರ್ಯ ದಿನಾಚರಣೆಯ ಭಾಷಣಕ್ಕೆ ನಿಮ್ಮ ಆಲೋಚನೆಗಳನ್ನು ಶೇರ್ ಮಾಡಿ.
July 25th, 02:34 pm
ಪ್ರಧಾನಿ ಮೋದಿಯವರ ಸ್ವಾತಂತ್ರ್ಯ ದಿನಾಚರಣೆಯ ಭಾಷಣಕ್ಕಾಗಿ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ನಾಗರಿಕರನ್ನು ಆಹ್ವಾನಿಸಿದ್ದಾರೆ.ನ್ಯೂಜಿಲೆಂಡ್‌ನಲ್ಲಿರುವ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 11th, 01:15 pm
ನ್ಯೂಜಿಲೆಂಡ್ ಭೇಟಿ ಅಂತಿಮಗೊಳಿಸಿದಾಗ, ಹವಾಮಾನವು ತುಂಬಾ ಚಳಿ ಇರುತ್ತದೆ ಎಂದು ನನಗೆ ಹೇಳಿದ್ದರಿಂದ, ನಾನು ಅದನ್ನು ನನ್ನೊಂದಿಗೆ ತರುವ ನಿರ್ಧಾರ ತೆಗೆದುಕೊಂಡೆ.ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರಿಂದ ಭಾಷಣ
July 11th, 12:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಕ್ ಲ್ಯಾಂಡ್ ನಲ್ಲಿ ನಡೆದ 'ಕಿಯಾ ಔರಾ ಮೋದಿ' ಕಾರ್ಯಕ್ರಮದಲ್ಲಿ ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ವಿಶೇಷ ಸನ್ನಿವೇಶದಲ್ಲಿ, ನ್ಯೂಜಿಲೆಂಡ್ ನ ಪ್ರಧಾನಮಂತ್ರಿ ಯವರಾದ ಗೌರವಾನ್ವಿತ ಆರ್. ಕ್ರಿಸ್ಟೋಫರ್ ಲಕ್ಸನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾರತೀಯ ವಲಸಿಗರ 10,000ಕ್ಕೂ ಹೆಚ್ಚು ಸದಸ್ಯರ ಶಕ್ತಿ, ಉತ್ಸಾಹ ಮತ್ತು ಉಲ್ಲಾಸದಿಂದ ಈ ಸಭೆ ತುಂಬಿತ್ತು.ಇಂಡೋನೇಷ್ಯಾದ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 07th, 03:15 pm
ಇಂಡೋನೇಷ್ಯಾದ ಜನರು - ಅದರ ಮಕ್ಕಳು, ಯುವಕರು ಮತ್ತು ಮಹಿಳೆಯರು - ಇಂದಿನ ದಿನವನ್ನು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಂಡೋನೇಷ್ಯಾದ ಜನರಿಂದ ನನಗೆ ದೊರೆತ ಆತ್ಮೀಯ, ಪ್ರೀತಿಯ ಮತ್ತು ಅದ್ದೂರಿ ಸ್ವಾಗತವನ್ನು ನಾನು ಎಂದಿಗೂ ಸ್ಮರಿಸುತ್ತೇನೆ. ಇಂದು ಮುಂಜಾನೆ, ಅಧ್ಯಕ್ಷ ಪ್ರಬೋವೊ ಹಕ್ಕುಸ್ವಾಮ್ಯದ ಬಗ್ಗೆ ಮಾತನಾಡಿದರು. ಪ್ರೀತಿ, ವಾತ್ಸಲ್ಯ, ಸ್ನೇಹ ಅಥವಾ ಪರಸ್ಪರ ಗೌರವದ ಮೇಲೆ ಯಾರೂ ಹಕ್ಕುಸ್ವಾಮ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಅಧ್ಯಕ್ಷ ಪ್ರಬೋವೊ ಅವರೊಂದಿಗಿನ ನನ್ನ ಸ್ನೇಹವು ಹಕ್ಕುಸ್ವಾಮ್ಯದ ಎಲ್ಲಾ ಗಡಿಗಳನ್ನು ಮೀರಿದೆ.ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 07th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಕಾರ್ತದಲ್ಲಿ ಇಂಡೋನೇಷ್ಯಾ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಿದರು. ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಿದ ಭಾರತದ ಮೊದಲ ಪ್ರಧಾನಮಂತ್ರಿ ಅವರಾಗಿದ್ದಾರೆ.ಅಮೆರಿಕಾ ಸಂಯುಕ್ತ ಸಂಸ್ಥಾನದ 250ನೇ ಸ್ವಾತಂತ್ರ್ಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ
July 04th, 09:40 pm
ಅಮೆರಿಕದ ಅಧ್ಯಕ್ಷರಾದ ಶ್ರೀ ಡೊನಾಲ್ಡ್ ಜೆ. ಟ್ರಂಪ್ ಮತ್ತು ಅಮೆರಿಕದ ಜನರಿಗೆ ದೇಶದ ಸ್ವಾತಂತ್ರ್ಯದ 250ನೇ ವಾರ್ಷಿಕೋತ್ಸವದ ಐತಿಹಾಸಿಕ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶುಭ ಕೋರಿದ್ದಾರೆ. ಭಾರತ ಮತ್ತು ಅಮೆರಿಕ ಪಾಲುದಾರಿಕೆಯ ಶಕ್ತಿಯನ್ನು ಶ್ರೀ ಮೋದಿ ಒತ್ತಿ ಹೇಳಿದರು. ಈ ಎರಡು ಪ್ರಜಾಪ್ರಭುತ್ವಗಳ ನಡುವಿನ ಸಂಬಂಧವು ಕಾರ್ಯತಂತ್ರದ ಪಾಲುದಾರಿಕೆಯನ್ನು ಮೀರಿ, ಪ್ರಜಾಪ್ರಭುತ್ವದ ಹಂಚಿಕೆಯ ಮೌಲ್ಯಗಳು, ಕಾನೂನಿನ ಆಳ್ವಿಕೆ ಮತ್ತು ಜನರ ಅಪರಿಮಿತ ಸಾಮರ್ಥ್ಯದ ಮೇಲಿನ ನಂಬಿಕೆಯಾಗಿದೆ ಎಂದು ಅವರು ಹೇಳಿದರು.ಸೆಶೆಲ್ಸ್ ಸ್ವಾತಂತ್ರ್ಯದ 50ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಮಂತ್ರಿ ಭಾಗಿ
June 29th, 08:00 am
ಸೆಶೆಲ್ಸ್ ಅಧ್ಯಕ್ಷ ಘನತೆವೆತ್ತ ಡಾ. ಪ್ಯಾಟ್ರಿಕ್ ಹರ್ಮಿನಿ ಅವರ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೆಶೆಲ್ಸ್ ಸ್ವಾತಂತ್ರ್ಯದ 50ನೇ ವಾರ್ಷಿಕೋತ್ಸವದಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಿದ್ದರು. ಸೆಶೆಲ್ಸ್ ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ ಮೊದಲ ಭಾರತೀಯ ಪ್ರಧಾನಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ದೇಶಭಕ್ತಿ ಗೀತೆಯಾಗಿ ವಂದೇ ಮಾತರಂ ಅಳವಡಿಸಿಕೊಂಡು 150 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಲೋಕಸಭೆಯಲ್ಲಿ ನಡೆದ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 08th, 12:30 pm
ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿದ್ದಕ್ಕಾಗಿ ನಿಮಗೆ ಮತ್ತು ಈ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇನೆ. ರಾಷ್ಟ್ರದ ಸ್ವಾತಂತ್ರ್ಯ ಚಳುವಳಿಗೆ ಶಕ್ತಿ, ಸ್ಫೂರ್ತಿ, ತ್ಯಾಗ ಮತ್ತು ಕಾಠಿನ್ಯದ ಮನೋಭಾವ ತುಂಬಿದ ಆ ಮಂತ್ರ, ಆ ಸ್ಪಷ್ಟ ಕರೆಯನ್ನು ಗೌರವದಿಂದ ನೆನಪಿಸಿಕೊಳ್ಳುವುದು, ಈ ಸದನದೊಳಗೆ ವಂದೇ ಮಾತರಂ(ಇದನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳು ಸಂದಿವೆ, ಕವಿ ರವೀಂದ್ರನಾಥ್ ಠ್ಯಾಗೋರ್ ಅವರ ಜನ ಗಣ ಮನ ಅಧಿನಾಯಕ ಜಯ ಹೇ – ಹಾಗೂ ಬಂಕಿಮ್ ಚಂದ್ರ ಚಟರ್ಜಿ ಅವರ ವಂದೇ ಮಾತರಂಗೆ 1950 ಜನವರಿ 24ರಂದು ರಾಷ್ಟ್ರಗೀತೆಯ ಸ್ಥಾನಮಾನ ನೀಡಲಾಗಿದೆ) ಅನ್ನು ಸ್ಮರಿಸುವುದು ನಮಗೆಲ್ಲರಿಗೂ ಸೌಭಾಗ್ಯದ ವಿಷಯವಾಗಿದೆ. ವಂದೇ ಮಾತರಂ ಅನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳನ್ನು ಗುರುತಿಸುವ ಐತಿಹಾಸಿಕ ಸಂದರ್ಭಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ ಎಂಬುದು ಬಹಳ ಹೆಮ್ಮೆಯ ವಿಷಯ. ಈ ಅವಧಿಯು ಇತಿಹಾಸ ಪುಟದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ. ಈ ಚರ್ಚೆಯು ಖಂಡಿತವಾಗಿಯೂ ಈ ಸದನದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ, ಆದರೆ ನಾವು ಈ ಕ್ಷಣವನ್ನು ಸಾಮೂಹಿಕವಾಗಿ ಬಳಸಿಕೊಂಡರೆ, ಅದು ಮುಂದಿನ ಪೀಳಿಗೆಗೆ, ಪ್ರತಿ ಪೀಳಿಗೆಗೂ ಸತತ ಕಲಿಕೆಯ ಮೂಲವಾಗಿಯೂ ಕಾರ್ಯ ನಿರ್ವಹಿಸಬಹುದು.ಲೋಕಸಭೆಯಲ್ಲಿ ನಡೆದ ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ವರ್ಷಗಳ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
December 08th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಮಾತನಾಡಿದರು. ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ರಾಷ್ಟ್ರದ ಸ್ವಾತಂತ್ರ್ಯ ಚಳವಳಿಗೆ ಶಕ್ತಿ ತುಂಬಿದ ಮತ್ತು ಸ್ಫೂರ್ತಿ ನೀಡಿದ, ತ್ಯಾಗ ಮತ್ತು ತಪಸ್ಸಿನ ಮಾರ್ಗವನ್ನು ತೋರಿಸಿದ ವಂದೇ ಮಾತರಂ ಎಂಬ ಮಂತ್ರ ಮತ್ತು ಘೋಷವಾಕ್ಯವನ್ನು ನೆನಪಿಸಿಕೊಳ್ಳಲಾಗುತ್ತಿದೆ ಮತ್ತು ಇದು ಸದನದಲ್ಲಿರುವ ಎಲ್ಲರಿಗೂ ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ವಂದೇ ಮಾತರಂನ 150 ವರ್ಷಗಳ ಐತಿಹಾಸಿಕ ಸಂದರ್ಭಕ್ಕೆ ದೇಶ ಸಾಕ್ಷಿಯಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ಹೇಳಿದರು. ಈ ಅವಧಿಯು ಇತಿಹಾಸದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ ಎಂದು ಅವರು ಹೇಳಿದರು. ಈ ಚರ್ಚೆಯು ಸದನದ ಬದ್ಧತೆಯನ್ನು ಪ್ರತಿಬಿಂಬಿಸುವುದಲ್ಲದೆ, ಎಲ್ಲರೂ ಸಾಮೂಹಿಕವಾಗಿ ಇದನ್ನು ಸದುಪಯೋಗಪಡಿಸಿಕೊಂಡರೆ ಭವಿಷ್ಯದ ಪೀಳಿಗೆಗೆ ಶಿಕ್ಷಣದ ಮೂಲವೂ ಆಗುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು.ಸಾಮಾನ್ಯ ಜನರು, ರೈತರು, ಎಂ.ಎಸ್.ಎಂ.ಇಗಳು, ಮಧ್ಯಮ ವರ್ಗ, ಮಹಿಳೆಯರು ಮತ್ತು ಯುವಕರಿಗೆ ಅನುಕೂಲವಾಗಬಲ್ಲ ಜಿ.ಎಸ್.ಟಿ ದರ ಕಡಿತ ಮತ್ತು ಸುಧಾರಣೆಗಳ ಕೇಂದ್ರ ಸರ್ಕಾರದ ಪ್ರಸ್ತಾವನೆಗಳಿಗೆ ಸಂಘಟಿತ ಸಹಮತ ನೀಡಿದ ಜಿ.ಎಸ್.ಟಿ ಮಂಡಳಿಯ ನಡೆಗೆ ಪ್ರಧಾನಮಂತ್ರಿ ಶ್ಲಾಘನೆ
September 03rd, 11:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಮಾನ್ಯ ಜನರು, ರೈತರು, ಎಂ.ಎಸ್.ಎಂ.ಇ ಗಳು, ಸಣ್ಣ ಮತ್ತು ಮಧ್ಯಮ ವರ್ಗದವರು, ಮಹಿಳೆಯರು ಮತ್ತು ಯುವಕರಿಗೆ ಅನುಕೂಲವಾಗಬಲ್ಲ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ) ದರ ಕಡಿತ ಮತ್ತು ಸುಧಾರಣೆಗಳ ಕೇಂದ್ರ ಸರ್ಕಾರದ ಪ್ರಸ್ತಾವನೆಗಳಿಗೆ ಕೇಂದ್ರ ಮತ್ತು ರಾಜ್ಯಗಳನ್ನು ಒಳಗೊಂಡ ಜಿ.ಎಸ್.ಟಿ ಮಂಡಳಿಯು ಸಂಘಟಿತ ಸಮ್ಮತಿ ಸೂಚಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ. ಈ ವ್ಯಾಪಕ ಸುಧಾರಣೆಗಳು ನಮ್ಮ ನಾಗರಿಕರ ಜೀವನವನ್ನು ಉನ್ನತೀಕರಿಸಲಿದೆ ಮತ್ತು ಎಲ್ಲರಿಗೂ ವಿಶೇಷವಾಗಿ ಸಣ್ಣ ವರ್ತಕರಿಗೆ ಮತ್ತು ಉದ್ಯಮಿಗಳಿಗೆ ಸುಲಲಿತ ವ್ಯಾಪಾರ ಖಚಿತಪಡಿಸಲಿದೆ ಎಂದು ಶ್ರೀ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.ಅಹಮದಾಬಾದ್ ನಲ್ಲಿ ಸರ್ದಾರ್ ಧಾಮ್ ಹಂತ-II, ಬಾಲಕಿಯರ ಹಾಸ್ಟೆಲ್ ನ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
August 24th, 10:39 pm
ಕೇಂದ್ರ ಸಚಿವ ಸಂಪುಟದ ನನ್ನ ಎಲ್ಲ ಸಹೋದ್ಯೋಗಿಗಳೇ, ಗುಜರಾತ್ ಸರ್ಕಾರದ ಎಲ್ಲ ಸಚಿವರೇ, ಇಲ್ಲಿ ನೆರೆದಿರುವ ಎಲ್ಲ ಸಂಸತ್ ಸದಸ್ಯರೇ, ಎಲ್ಲ ಶಾಸಕರೇ, ಸರ್ದಾರ್ ಧಾಮದ ಅಧ್ಯಕ್ಷರಾದ ಶ್ರೀ ಗಗ್ಜಿ ಭಾಯಿ ಅವರೇ, ಟ್ರಸ್ಟಿ ವಿ.ಕೆ. ಪಟೇಲ್ ಅವರೇ, ದಿಲೀಪ್ ಭಾಯಿ ಅವರೇ, ಎಲ್ಲ ಗಣ್ಯರೇ, ಹಾಗೂ ನನ್ನ ಪ್ರೀತಿಯ ಸಹೋದರ ಮತ್ತು ಸಹೋದರಿಯರೇ, ವಿಶೇಷವಾಗಿ ನನ್ನ ಪ್ರೀತಿಯ ಹೆಣ್ಣು ಮಕ್ಕಳೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹ್ಮದಾಬಾದ್ ನ ʻಸರ್ದಾರ್ ಧಾಮ್ʼ ಎರಡನೇ ಹಂತದ ಬಾಲಕಿಯರ ವಸತಿಗೃಹದ ಶಂಕುಸ್ಥಾಪನೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು
August 24th, 10:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಅಹ್ಮದಾಬಾದ್ ನಲ್ಲಿ ಸರ್ದಾರ್ ಧಾಮ್ ಹಂತ-2ರ ಬಾಲಕಿಯರ ವಸತಿಗೃಹದ ಶಂಕುಸ್ಥಾಪನೆ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಸರ್ದಾರ್ ಧಾಮದ ಹೆಸರು ಅದರ ಕಾರ್ಯದಷ್ಟೇ ಪವಿತ್ರವಾಗಿದೆ ಎಂದು ಬಣ್ಣಿಸಿದರು. ಹೆಣ್ಣುಮಕ್ಕಳ ಸೇವೆ ಮತ್ತು ಶಿಕ್ಷಣಕ್ಕಾಗಿ ಮೀಸಲಾಗಿರುವ ವಸತಿಗೃಹದ ಉದ್ಘಾಟನೆಯ ಬಗ್ಗೆ ಒತ್ತಿ ಹೇಳಿದರು. ಈ ವಸತಿಗೃಹದಲ್ಲಿ ತಂಗುವ ಬಾಲಕಿಯರು ಆಕಾಂಕ್ಷೆಗಳು ಮತ್ತು ಕನಸುಗಳನ್ನು ಹೊಂದಿರುತ್ತಾರೆ ಮತ್ತು ಅವುಗಳನ್ನು ಪೂರೈಸಲು ಹಲವಾರು ಅವಕಾಶಗಳನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು. ಈ ಹೆಣ್ಣುಮಕ್ಕಳು ಒಮ್ಮೆ ಸ್ವಾವಲಂಬಿಗಳು ಮತ್ತು ಸಮರ್ಥರಾಗಿ ಬದಲಾದರೆ, ಅವರು ಸಹಜವಾಗಿಯೇ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಮತ್ತು ಅವರ ಕುಟುಂಬಗಳು ಸಹ ಸಬಲೀಕರಣಗೊಳ್ಳುತ್ತವೆ ಎಂದು ಶ್ರೀ ಮೋದಿ ಅವರು ಒತ್ತಿ ಹೇಳಿದರು. ತಮ್ಮ ಶುಭ ಹಾರೈಕೆಗಳನ್ನು ತಿಳಿಸಿದ ಪ್ರಧಾನಮಂತ್ರಿ ಅವರು, ಈ ವಸತಿಗೃಹದಲ್ಲಿ ಉಳಿಯಲು ಅವಕಾಶ ಪಡೆದ ಎಲ್ಲ ಹೆಣ್ಣುಮಕ್ಕಳಿಗೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಅವರ ಕುಟುಂಬ ಸದಸ್ಯರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು.ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 23rd, 10:10 pm
ಜಾಗತಿಕ(ವಿಶ್ವ) ನಾಯಕರ ವೇದಿಕೆಗೆ ಆಗಮಿಸಿರುವ ಎಲ್ಲ ಗೌರವಾನ್ವಿತ ಅತಿಥಿಗಳನ್ನು ನಾನು ಸ್ವಾಗತಿಸುತ್ತೇನೆ. ಈ ವೇದಿಕೆಯ ಸಮಯವು ತುಂಬಾ ಪರಿಪೂರ್ಣವಾಗಿದೆ, ಆದ್ದರಿಂದ ನಾನು ಅದನ್ನು ಪ್ರಶಂಸಿಸುತ್ತೇನೆ. ಕಳೆದ ವಾರವಷ್ಟೇ ನಾನು ಕೆಂಪು ಕೋಟೆಯಿಂದ ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಮಾತನಾಡಿದ್ದೆ, ಈಗ ಈ ವೇದಿಕೆ ಆ ಉತ್ಸಾಹದಲ್ಲಿ ಶಕ್ತಿ ಗುಣಕವಾಗಿ ಕಾರ್ಯ ನಿರ್ವಹಿಸುತ್ತಿದೆ.ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 23rd, 05:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ಅವರು ವರ್ಲ್ಡ್ ಲೀಡರ್ ಫೋರಂನಲ್ಲಿ ಭಾಗವಹಿಸಿದ್ದ ಎಲ್ಲಾ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಈ ವೇದಿಕೆಯ ಸಮಯ ಅತ್ಯಂತ ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟ ಶ್ರೀ ಮೋದಿ ಅವರು, ಈ ಸಕಾಲಿಕ ಉಪಕ್ರಮಕ್ಕಾಗಿ ಆಯೋಜಕರನ್ನು ಶ್ಲಾಘಿಸಿದರು.ಕಳೆದ ವಾರವಷ್ಟೇ, ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಕೆಂಪು ಕೋಟೆಯಿಂದ ಮಾತನಾಡಿದ ಅವರು, ಈ ವೇದಿಕೆ ಈಗ ಆ ಚೈತನ್ಯಕ್ಕೆ ಶಕ್ತಿ ವರ್ಧಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಮಂತ್ರಿ ಸಂವಾದ
August 19th, 09:43 am
ಹಾಗಾದರೆ, ಆಸನ ವ್ಯವಸ್ಥೆಗೆ ಸಂಬಂಧಿಸಿದಂತೆ, ಅದು ಹಾಗೆಯೇ ಉಳಿದಿದೆಯೇ?ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
August 19th, 09:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ನಿನ್ನೆ ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ಸಂವಾದ ನಡೆಸಿದರು. ಬಾಹ್ಯಾಕಾಶ ಪಯಣದ ಪರಿವರ್ತನಾತ್ಮಕ ಅನುಭವಗಳ ಬಗ್ಗೆ ಬೆಳಕು ಚೆಲ್ಲಿದ, ಪ್ರಧಾನಮಂತ್ರಿ ಅವರು, ಇಂತಹ ಮಹತ್ವದ ಪ್ರಯಾಣವನ್ನು ಕೈಗೊಂಡ ನಂತರ, ಒಬ್ಬರ ಬದಲಾವಣೆಯನ್ನು ಅನುಭವಿಸಬೇಕು ಎಂದು ಹೇಳಿದರು ಮತ್ತು ಗಗನಯಾತ್ರಿಗಳು ಈ ಪರಿವರ್ತನೆಯನ್ನು ಹೇಗೆ ಗ್ರಹಿಸುತ್ತಾರೆ ಮತ್ತು ಅನುಭವಿಸುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರು. ಪ್ರಧಾನಮಂತ್ರಿ ಅವರ ಮಾತಿಗೆ ಪ್ರತಿಕ್ರಿಯಿಸಿದ ಶುಭಾಂಶು ಶುಕ್ಲಾ, ಬಾಹ್ಯಾಕಾಶದಲ್ಲಿನ ಪರಿಸರವು ಅತ್ಯಂತ ವಿಭಿನ್ನವಾಗಿದೆ, ಗುರುತ್ವಾಕರ್ಷಣೆಯ ಅನುಪಸ್ಥಿತಿಯು ಪ್ರಮುಖ ಅಂಶವಾಗಿದೆ ಎಂದು ಹೇಳಿದರು.ಯು.ಇ.ಆರ್-II ಮತ್ತು ದ್ವಾರಕಾ ಎಕ್ಸ್‌ಪ್ರೆಸ್‌ವೇಯ ದೆಹಲಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ
August 17th, 12:45 pm
ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜೀ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜೀ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ಅಜಯ್ ತಮ್ತಾ ಜೀ, ಹರ್ಷ ಮಲ್ಹೋತ್ರಾ ಜೀ, ದೆಹಲಿ ಮತ್ತು ಹರಿಯಾಣದ ಸಂಸದರು, ಉಪಸ್ಥಿತರಿರುವ ಸಚಿವರು, ಇತರ ಜನಪ್ರತಿನಿಧಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11,000 ಕೋಟಿ ರೂಪಾಯಿ ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು
August 17th, 12:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಸುಮಾರು 11,000 ಕೋಟಿ ರೂ.ಗಳ ಒಟ್ಟಾರೆ ವೆಚ್ಚದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಹತ್ವವನ್ನು ಒತ್ತಿ ಹೇಳಿದರು. ಉದ್ಘಾಟಿಸಲಾದ ʻಎಕ್ಸ್‌ಪ್ರೆಸ್ ಹೆದ್ದಾರಿʼಯ ಹೆಸರು ದ್ವಾರಕಾ ಆಗಿರುವುದು ಮತ್ತು ಕಾರ್ಯಕ್ರಮವನ್ನು ರೋಹಿಣಿಯಲ್ಲಿ ನಡೆಸಲಾಗುತ್ತಿರುವುದು ವಿಶೇಷ ಎಂದು ಹೇಳಿದರು. ಕೃಷ್ಣ ಜನ್ಮಾಷ್ಟಮಿಯ ಹಬ್ಬದ ಉತ್ಸಾಹವನ್ನು ಎತ್ತಿ ತೋರಿದ ಪ್ರಧಾನಮಂತ್ರಿ ಮೋದಿ ಸ್ವತಃ ತಾವು ಸಹ ದ್ವಾರಕಾಧೀಶನ ಭೂಮಿಯಿಂದ ಬಂದವರು ಎಂಬ ಕಾಕತಾಳೀಯತೆಯ ಬಗ್ಗೆ ಗಮನ ಸೆಳೆದರು. ಇಡೀ ವಾತಾವರಣವು ಭಗವಾನ್ ಕೃಷ್ಣನ ಸಾರದಿಂದ ಆಳವಾಗಿ ಆವರಿಸಿದೆ ಎಂದು ಪ್ರಧಾನಮಂತ್ರಿ ಗಮನಿಸಿದರು.