ಮಾಲ್ಡೀವ್ಸ್‌ ದೇಶದ ಸ್ವಾತಂತ್ರ್ಯದ 60ನೇ ವಾರ್ಷಿಕೋತ್ಸವದಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಿದ ಪ್ರಧಾನಮಂತ್ರಿ

July 26th, 06:47 pm

ರಾಜಧಾನಿ ಮಾಲೆ ಭೇಟಿಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಲ್ಡೀವ್ಸ್‌ ನ ಸ್ವಾತಂತ್ರ್ಯದ 60 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ 'ಗೌರವ ಅತಿಥಿ'ಯಾಗಿ ಭಾಗವಹಿಸಿದರು. ಮಾಲ್ಡೀವ್ಸ್‌ ನಲ್ಲಿ ಈತನಕದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾರತದ ಪ್ರಧಾನಮಂತ್ರಿಯೊಬ್ಬರು ಭಾಗವಹಿಸುತ್ತಿರುವುದು ಇದೇ ಮೊದಲು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಲ್ಡೀವ್ಸ್‌ ಅಧ್ಯಕ್ಷರಾದ ಶ್ರೀ ಮುಯಿಝು ಅವರು ಆತಿಥ್ಯ ವಹಿಸಿದ ರಾಷ್ಟ್ರ ಅಥವಾ ಸರ್ಕಾರದ ಮುಖ್ಯಸ್ಥರ ಮಟ್ಟದ ವಿಶೇಷ ಸಭೆಯಲ್ಲಿ ಭಾಗವಹಿಸಿದ ಮೊದಲ ವಿದೇಶಿ ನಾಯಕರಾಗಿದ್ದಾರೆ.

ಮಾಲ್ಡೀವ್ಸ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

July 25th, 08:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಲೆಯಲ್ಲಿರುವ ಅಧ್ಯಕ್ಷರ ಕಚೇರಿಯಲ್ಲಿ ಮಾಲ್ಡೀವ್ಸ್ ಗಣರಾಜ್ಯದ ಘನತೆವೆತ್ತ ಅಧ್ಯಕ್ಷರಾದ ಡಾ. ಮೊಹಮ್ಮದ್ ಮುಯಿಝು ಅವರನ್ನು ಭೇಟಿಯಾದರು. ಸಭೆಗೂ ಮುನ್ನ, ಅಧ್ಯಕ್ಷ ಮುಯಿಝು ಅವರು ಪ್ರಧಾನ ಮಂತ್ರಿಯವರನ್ನು ಬರಮಾಡಿಕೊಂಡು ಗಣರಾಜ್ಯ ಚೌಕದಲ್ಲಿ ಅವರಿಗೆ ಔಪಚಾರಿಕ ಸ್ವಾಗತ ನೀಡಿದರು. ಸಭೆಯು ಆತ್ಮೀಯವಾಗಿತ್ತು ಮತ್ತು ಎರಡೂ ದೇಶಗಳ ನಡುವಿನ ಆಳವಾದ ಸ್ನೇಹವನ್ನು ದೃಢೀಕರಿಸಿತು.

ಬ್ರಿಟನ್ ಮತ್ತು ಮಾಲ್ಡೀವ್ಸ್ ಗೆ ಅಧಿಕೃತ ಭೇಟಿ ಮುನ್ನಾದಿನದಂದು ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ

July 23rd, 01:05 pm

ಭಾರತ ಮತ್ತು ಬ್ರಿಟನ್ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಹಂಚಿಕೊಂಡಿದ್ದು, ಇತ್ತೀಚಿನ ವರ್ಷಗಳಲ್ಲಿ ಅದು ಗಮನಾರ್ಹ ಪ್ರಗತಿಗೆ ಸಾಕ್ಷಿಯಾಗಿದೆ. ನಮ್ಮ ಸಹಯೋಗವು ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ನಾವೀನ್ಯತೆ, ರಕ್ಷಣೆ, ಶಿಕ್ಷಣ, ಸಂಶೋಧನೆ, ಸುಸ್ಥಿರತೆ, ಆರೋಗ್ಯ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಕ್ಷೇತ್ರಗಳನ್ನು ವ್ಯಾಪಿಸಿದೆ. ಪ್ರಧಾನಮಂತ್ರಿ ಗೌರವಾನ್ವಿತ ಸರ್ ಕೈರ್ ಸ್ಟಾರ್ಮರ್ ಅವರೊಂದಿಗಿನ ನನ್ನ ಭೇಟಿಯ ವೇಳೆ, ಉಭಯ ದೇಶಗಳ ಸಮೃದ್ಧಿ, ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ನಮ್ಮ ಆರ್ಥಿಕ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ನಮಗೆ ಅವಕಾಶ ಸಿಗಲಿದೆ. ಈ ಭೇಟಿಯ ವೇಳೆ ಘನತೆವೆತ್ತ ದೊರೆ ಮೂರನೇ ಚಾರ್ಲ್ಸ್ ಅವರನ್ನು ಭೇಟಿ ಮಾಡಲು ನಾನು ಎದುರು ನೋಡುತ್ತಿದ್ದೇನೆ.