ಮಾರ್ಚ್ 31ರಂದು ಗುಜರಾತ್‌ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

March 30th, 11:05 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 31ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿಯವರು ಗಾಂಧಿನಗರದಲ್ಲಿ ʻಸಾಮ್ರಾಟ್ ಸಂಪ್ರತಿʼ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 12:45ರ ಸುಮಾರಿಗೆ ಪ್ರಧಾನಮಂತ್ರಿಯವರು ಅಹಮದಾಬಾದ್‌ನ ಸನಂದ್‌ನಲ್ಲಿ ʻಕೇನ್ಸ್ ಸೆಮಿಕಾನ್ʼ ಘಟಕವನ್ನು ಉದ್ಘಾಟಿಸಲಿದ್ದಾರೆ. ಅಲ್ಲಿಯೂ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಪ್ರಧಾನಮಂತ್ರಿಯವರು ವಾವ್-ಥರಾಡ್‌ಗೆ ಪ್ರಯಾಣಿಸಲಿದ್ದಾರೆ, ಅಲ್ಲಿ ಅವರು ಸಂಜೆ 4 ಗಂಟೆಗೆ 20,000 ಕೋಟಿ ರೂ.ಗೂ ಅಧಿಕ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಇಂಡಿಯಾ ಚಿಪ್ ಲಿಮಿಟೆಡ್‌ನ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವಿಡಿಯೋ ಕಾನ್ಫರೆನ್ಸಿಂಗ್ ಭಾಷಣ

February 21st, 05:30 pm

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಅಶ್ವಿನಿ ವೈಷ್ಣವ್ ಜಿ, ಜಿತಿನ್ ಪ್ರಸಾದ ಜಿ, ಉತ್ತರ ಪ್ರದೇಶ ಸರ್ಕಾರದ ಎಲ್ಲಾ ಸಚಿವರೆ, ಫಾಕ್ಸ್‌ಕಾನ್‌ ಸೆಮಿಕಂಡಕ್ಟರ್ ಬಿಸಿನೆಸ್ ಗ್ರೂಪ್‌ ಅಧ್ಯಕ್ಷರಾದ ಬಾಬ್ ಚೆನ್, ಎಚ್‌ಸಿಎಲ್ ಟೆಕ್ನಾಲಜೀಸ್ ಅಧ್ಯಕ್ಷರಾದ ರೋಶ್ನಿ ನಾಡರ್ ಜಿ, ಕಾರ್ಯಕ್ರಮದಲ್ಲಿ ಹಾಜರಿರುವ ಉದ್ಯಮ ಮುಖಂಡರೆ, ಇತರ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಉತ್ತರಪ್ರದೇಶದಲ್ಲಿ ಎಚ್‌ಸಿಎಲ್-ಫಾಕ್ಸ್‌ಕಾನ್ ಸೆಮಿಕಂಡಕ್ಟರ್ ಘಟಕದ ಶಿಲಾನ್ಯಾಸ ಸಮಾರಂಭಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

February 21st, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದಲ್ಲಿ ನಡೆದ ಎಚ್‌ಸಿಎಲ್-ಫಾಕ್ಸ್‌ಕಾನ್ ಸೆಮಿಕಂಡಕ್ಟರ್ ಘಟಕದ ಶಿಲಾನ್ಯಾಸ ಸಮಾರಂಭಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ನವದೆಹಲಿಯಲ್ಲಿ ನಡೆದ ಜಾಗತಿಕ ಎಐ ಇಂಪ್ಯಾಕ್ಟ್ ಶೃಂಗಸಭೆಯ ನಂತರ, ಜಾಗತಿಕ ಸೆಮಿಕಂಡಕ್ಟರ್ ಕೇಂದ್ರವಾಗುವತ್ತ ಭಾರತದ ಪ್ರಯಾಣ ಸಾಗಿದೆ, ಈ ಸಮಾರಂಭವು ಒಂದು ಐತಿಹಾಸಿಕ ಮೈಲಿಗಲ್ಲನ್ನು ಗುರುತಿಸುತ್ತದೆ.