ಫ್ರಾನ್ಸ್‌ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರರು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು

January 13th, 10:52 pm

ಫ್ರಾನ್ಸ್‌ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಶ್ರೀ ಇಮ್ಯಾನುಯೆಲ್‌ ಬೊನ್ನೆ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಅಧ್ಯಕ್ಷರಾದ ಮ್ಯಾಕ್ರನ್ ಅವರಿಂದ ದೂರವಾಣಿ ಕರೆ

August 21st, 06:30 pm

ಇಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಫ್ರೆಂಚ್ ಗಣರಾಜ್ಯದ ಘನತೆವೆತ್ತ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಂದ ದೂರವಾಣಿ ಕರೆ ಬಂದಿತು.

ಜಿ7 ಶೃಂಗಸಭೆಯಲ್ಲಿ ಫ್ರಾನ್ಸ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಂವಾದ

June 18th, 02:57 pm

ಕೆನಡಾದ ಕನನಾಸ್ಕಿಸ್‌ನಲ್ಲಿ 2025ರ ಜೂನ್ 17 ರಂದು ನಡೆದ 51ನೇ ಜಿ 7 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಮಾನ್ಯ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಸಂವಾದ ನಡೆಸಿದರು. ವಿವಿಧ ವಿಷಯಗಳ ಕುರಿತ ತಮ್ಮ ತಮ್ಮ ದೃಷ್ಟಿಕೋನಗಳನ್ನು ವಿನಿಮಯ ಮಾಡಿಕೊಂಡ ಇಬ್ಬರೂ ನಾಯಕರು, ಭಾರತ ಮತ್ತು ಫ್ರಾನ್ಸ್ ನಮ್ಮ ಭೂಗ್ರಹದ ಯೋಗಕ್ಷೇಮಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತವೆ ಎಂದು ಪ್ರತಿಪಾದಿಸಿದರು.

ಮಜಾರ್ಗಸ್ ಯುದ್ಧ ಸ್ಮಾರಕಕ್ಕೆ ಪ್ರಧಾನಮಂತ್ರಿ ಮತ್ತು ಫ್ರಾನ್ಸ್ ಅಧ್ಯಕ್ಷರ ಭೇಟಿ

February 12th, 04:57 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಇಮ್ಯಾನುಯೆಲ್ ಮ್ಯಾಕ್ರೋನ್ ಅವರು ಇಂದು ಬೆಳಗ್ಗೆ ಮಾರ್ಸಿಲ್ಲೆ ನಲ್ಲಿರುವ ಮಜಾರ್ಗಸ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದರು ಮತ್ತು ಮೊದಲ ಮತ್ತು ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ಗೌರವ ನಮನ ಸಲ್ಲಿಸಿದರು. ಉಭಯ ನಾಯಕರು ಮಡಿದವರ ತ್ಯಾಗದ ಗೌರವಾರ್ಥವಾಗಿ ಪುಷ್ಪಗುಚ್ಛವಿರಿಸಿ ನಮನ ಸಲ್ಲಿಸಿದರು.

ಫ್ರಾನ್ಸ್ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

November 19th, 05:26 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರೋನ್ ಅವರನ್ನು ಭೇಟಿ ಮಾಡಿದರು. ಜನವರಿಯಲ್ಲಿ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಧ್ಯಕ್ಷ ಮ್ಯಾಕ್ರನ್ ಭಾರತಕ್ಕೆ ಭೇಟಿ ನೀಡಿದ ನಂತರ ಮತ್ತು ಜೂನ್ ನಲ್ಲಿ ಇಟಲಿಯಲ್ಲಿ ನಡೆದ ಜಿ 7 ಶೃಂಗಸಭೆಯ ಹೊರತಾಗಿ ಅವರ ಸಭೆಯ ನಂತರ ಈ ವರ್ಷ ಉಭಯ ನಾಯಕರ ನಡುವಿನ ಮೂರನೇ ಸಭೆ ಇದಾಗಿದೆ.