ಫ್ರಾನ್ಸ್ ಮತ್ತು ಸ್ಲೋವಾಕಿಯಾಕ್ಕೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ
June 13th, 10:03 am
ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇಮ್ಯಾನುಯೆಲ್ ಮ್ಯಾಕ್ರನ್ ಮತ್ತು ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ರಾಬರ್ಟ್ ಫಿಕೊ ಅವರ ಆಹ್ವಾನದ ಮೇರೆಗೆ, ನಾನು 2026ರ ಜೂನ್ 13 ರಿಂದ 18 ರವರೆಗೆ ಫ್ರಾನ್ಸ್ ಮತ್ತು ಸ್ಲೋವಾಕ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ಕೈಗೊಳ್ಳುತ್ತಿದ್ದೇನೆ.ಭಾರತ-ಫ್ರಾನ್ಸ್ ಜಂಟಿ ಹೇಳಿಕೆ
February 18th, 08:10 am
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು 2026ರ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು ಮತ್ತು ʻಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ-2026ʼರಲ್ಲಿ ಭಾಗವಹಿಸಿದರು. ಭೇಟಿಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಫೆಬ್ರವರಿ 17ರಂದು ಮುಂಬೈನಲ್ಲಿ ʻಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ-2026ʼ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಇದು ಅಧ್ಯಕ್ಷ ಮ್ಯಾಕ್ರನ್ ಅವರ 4ನೇ ಭಾರತ ಭೇಟಿಯಾಗಿದ್ದು, ಫೆಬ್ರವರಿ 2025ರಲ್ಲಿ ಪ್ರಧಾನಿ ಮೋದಿಯವರ ಫ್ರಾನ್ಸ್ ಭೇಟಿಯ ನಂತರ ಇದು ನೆರವೇರಿದೆ.