ಜರ್ಮನಿಯ ವಿದೇಶಾಂಗ ಸಚಿವರನ್ನು ಪ್ರಧಾನಮಂತ್ರಿ ಭೇಟಿಯಾದರು
September 03rd, 08:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜರ್ಮನಿಯ ವಿದೇಶಾಂಗ ಸಚಿವರಾದ ಜೋಹಾನ್ ವಾಡೆಫುಲ್ ಅವರನ್ನು ಭೇಟಿಯಾದರು. ಭಾರತ ಮತ್ತು ಜರ್ಮನಿ 25 ವರ್ಷಗಳ ಕಾರ್ಯತಂತ್ರದ ಸಹಭಾಗಿತ್ವವನ್ನು ಆಚರಿಸುತ್ತಿವೆ. ರೋಮಾಂಚಕ ಪ್ರಜಾಪ್ರಭುತ್ವಗಳು ಮತ್ತು ಪ್ರಮುಖ ಆರ್ಥಿಕತೆಗಳಾಗಿ, ವ್ಯಾಪಾರ, ತಂತ್ರಜ್ಞಾನ, ನಾವೀನ್ಯತೆ, ಸುಸ್ಥಿರತೆ, ಉತ್ಪಾದನೆ ಮತ್ತು ಚಲನಶೀಲತೆಯಲ್ಲಿ ಪರಸ್ಪರ ಲಾಭದಾಯಕ ಸಹಕಾರವನ್ನು ಹೆಚ್ಚಿಸಲು ನಾವು ಅಪಾರ ಸಾಮರ್ಥ್ಯವನ್ನು ಕಾಣುತ್ತೇವೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಜರ್ಮನಿಯ ಚಾನ್ಸೆಲರ್ ಅವರನ್ನು ಭೇಟಿಯಾದ ಪ್ರಧಾನಮಂತ್ರಿ ಶ್ರೀ ಮೋದಿ
June 17th, 11:58 pm
ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆದ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಜರ್ಮನಿಯ ಚಾನ್ಸೆಲರ್ ಗೌರವಾನ್ವಿತ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರನ್ನು ಭೇಟಿಯಾದರು. 2025 ಮೇ ತಿಂಗಳಲ್ಲಿ ಚಾನ್ಸೆಲರ್ ಮೆರ್ಜ್ ಅಧಿಕಾರ ವಹಿಸಿಕೊಂಡ ನಂತರ ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಪ್ರಧಾನಮಂತ್ರಿ ಮೆರ್ಜ್ ಅವರನ್ನು ಅಭಿನಂದಿಸಿದರು. ಕಳೆದ ವಾರ ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತ ದುರಂತದ ಬಗ್ಗೆ ಜರ್ಮನ್ ಸರ್ಕಾರ ವ್ಯಕ್ತಪಡಿಸಿದ ಸಂತಾಪಕ್ಕೆ ಅವರು ಆಳವಾದ ಕೃತಜ್ಞತೆ ವ್ಯಕ್ತಪಡಿಸಿದರು.