ಸೈಪ್ರಸ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
June 16th, 03:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರೊಂದಿಗೆ ಅಧಿಕೃತ ಮಾತುಕತೆ ನಡೆಸಿದರು. ಅಧ್ಯಕ್ಷರ ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ಅಧ್ಯಕ್ಷ ಕ್ರಿಸ್ಟೋಡೌಲೈಡ್ಸ್ ಅವರು ಬರಮಾಡಿಕೊಂಡು, ಸಾಂಪ್ರದಾಯಿಕ ಸ್ವಾಗತವನ್ನು ನೀಡಿದರು. ನಿನ್ನೆ, ವಿಶೇಷ ಸೌಹಾರ್ದದ ಸಂಕೇತವಾಗಿ ಅಧ್ಯಕ್ಷ ಕ್ರಿಸ್ಟೋಡೌಲಿಡೀಸ್ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದು, ಇದು ಎರಡೂ ರಾಷ್ಟ್ರಗಳ ನಡುವಿನ ಪರಸ್ಪರ ವಿಶ್ವಾಸ ಮತ್ತು ಶಾಶ್ವತ ಸ್ನೇಹವನ್ನು ಪ್ರತಿಬಿಂಬಿಸುತ್ತದೆ.