ಇಸ್ರೇಲ್ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
February 26th, 08:56 pm
ಭಾರತ ಮತ್ತು ಇಸ್ರೇಲ್ ಪಾಲುದಾರಿಕೆಯ ಎಲ್ಲಾ ಅಂಶಗಳ ಕುರಿತು ಎರಡೂ ದೇಶದ ಪ್ರಧಾನಮಂತ್ರಿಗಳು ವಿಸ್ತೃತ ಚರ್ಚೆಗಳನ್ನು ನಡೆಸಿದರು. ಎರಡೂ ದೇಶಗಳ ನಡುವಿನ ಬಲವಾದ ನಂಬಿಕೆ ಮತ್ತು ಸ್ನೇಹವನ್ನು ಪ್ರತಿಬಿಂಬಿಸುತ್ತಾ, ಇಬ್ಬರೂ ನಾಯಕರು ತಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಶಾಂತಿ, ನಾವೀನ್ಯತೆ ಮತ್ತು ಸಮೃದ್ಧಿಗಾಗಿ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಉನ್ನತ ಮಟ್ಟಕ್ಕೆ ಏರಿಸಲು ನಿರ್ಧರಿಸಿದರು. ಇದು ಪರಸ್ಪರ ಹಿತಾಸಕ್ತಿಗಳು ಹೆಚ್ಚುತ್ತಿರುವ ಒಮ್ಮುಖ ಮತ್ತು ಸುರಕ್ಷಿತ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಎರಡೂ ದೇಶಗಳ ಹಂಚಿಕೆಯ ದೃಷ್ಟಿಕೋನದ ಸಂಕೇತವಾಗಿದೆ.ಇಸ್ರೇಲ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 26th, 03:30 pm
ನನಗೆ ಮತ್ತು ಭಾರತೀಯ ನಿಯೋಗಕ್ಕೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ಮತ್ತೊಮ್ಮೆ ಪ್ರಧಾನಮಂತ್ರಿ ನೆತನ್ಯಾಹು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ತಿಳಿಸುತ್ತೇನೆ.ಜೆರುಸಲೇಂನಲ್ಲಿ ಟೆಕ್ ವಸ್ತು ಪ್ರದರ್ಶನಕ್ಕೆ ಪ್ರಧಾನಮಂತ್ರಿ ಭೇಟಿ
February 26th, 10:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 25ರಂದು ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಹಲವಾರು ಕ್ಷೇತ್ರಗಳಲ್ಲಿ ಪ್ರವರ್ತಕ ಇಸ್ರೇಲಿ ಆವಿಷ್ಕಾರಗಳನ್ನು ಪ್ರದರ್ಶಿಸುವ ಪ್ರದರ್ಶನಕ್ಕೆ ಭೇಟಿ ನೀಡಿದರು. ಪ್ರದರ್ಶನದಲ್ಲಿ ಕೃಷಿ-ತಂತ್ರಜ್ಞಾನ, ಜಲ-ತಂತ್ರಜ್ಞಾನ, ಹವಾಮಾನ-ತಂತ್ರಜ್ಞಾನ, ಆರೋಗ್ಯ-ಜೈವಿಕ ತಂತ್ರಜ್ಞಾನ, ಸ್ಮಾರ್ಟ್ ಮೊಬಿಲಿಟಿ, ಕೃತಕ ಬುದ್ಧಿಮತ್ತೆ, ಸೈಬರ್ ಸೆಕ್ಯುರಿಟಿ ಮತ್ತು ಕ್ವಾಂಟಮ್ ತಂತ್ರಜ್ಞಾನಗಳಲ್ಲಿ ಪರಿಣತಿ ಹೊಂದಿರುವ ಪ್ರಮುಖ ಕಂಪನಿಗಳು ಮತ್ತು ಸಂಶೋಧನಾ ಘಟಕಗಳು ಭಾಗವಹಿಸಿದ್ದವು.ನೆಸ್ಸೆಟ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 25th, 08:20 pm
ಈ ಗೌರವಾನ್ವಿತ ಸದನದ ಮುಂದೆ ನಿಂತಿರುವುದು ನನಗೆ ಸಂದ ಗೌರವ ಮತ್ತು ಸೌಭಾಗ್ಯವಾಗಿದೆ. ನಾನು ಭಾರತದ ಪ್ರಧಾನಮಂತ್ರಿಯಾಗಿ ಮಾತ್ರವಲ್ಲದೆ, ಒಂದು ಪ್ರಾಚೀನ ನಾಗರಿಕತೆಯ ಪ್ರತಿನಿಧಿಯಾಗಿ ಮತ್ತೊಂದು ಪ್ರಾಚೀನ ನಾಗರಿಕತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ನಾನು ನಿಮ್ಮ ಬಳಿಗೆ 140 ಕೋಟಿ ಭಾರತೀಯರ ಶುಭಾಶಯಗಳು ಹಾಗೂ ಸ್ನೇಹ, ಗೌರವ ಮತ್ತು ಸಹಭಾಗಿತ್ವದ ಸಂದೇಶವನ್ನು ಹೊತ್ತು ತಂದಿದ್ದೇನೆ.ಇಸ್ರೇಲ್ ಸಂಸತ್ತನ್ನು (ನೆಸ್ಸೆಟ್) ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 25th, 08:00 pm
ಕನೆಸೆಟ್‌ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನೆಸ್ಸೆಟ್ ನ ಸ್ಪೀಕರ್ ಘನತೆವೆತ್ತ ಅಮೀರ್ ಓಹಾನಾ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು. ಇಸ್ರೇಲ್ ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಬೆಂಜಮಿನ್ ನೆತನ್ಯಾಹು; ವಿರೋಧ ಪಕ್ಷದ ನಾಯಕರಾದ ಘನತೆವೆತ್ತ ಶ್ರೀ ಯಾಯಿರ್ ಲಾಪಿಡ್; ಮತ್ತು ಸ್ಪೀಕರ್ ಒಹಾನಾ ಅವರು ಪ್ರಧಾನಮಂತ್ರಿಯವರ ಭಾಷಣಕ್ಕೂ ಮುನ್ನ ಅಧಿವೇಶನದಲ್ಲಿ ಮಾತನಾಡಿ, ಭಾರತ-ಇಸ್ರೇಲ್ ಸಂಬಂಧಗಳಿಗೆ ಬಲವಾದ ದ್ವಿಪಕ್ಷೀಯ ಬೆಂಬಲವನ್ನು ವ್ಯಕ್ತಪಡಿಸಿದರು.ಪ್ರಧಾನಮಂತ್ರಿ ಇದೇ 25-26ರಂದು ಇಸ್ರೇಲ್‌ಗೆ ಭೇಟಿ
February 24th, 05:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ 2026ರ ಫೆಬ್ರವರಿ 25-26ರಂದು ಇಸ್ರೇಲ್‌ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಇದು ಇಸ್ರೇಲ್ ಗೆ ಪ್ರಧಾನಮಂತ್ರಿ ಅವರ ಎರಡನೇ ಭೇಟಿಯಾಗಲಿದೆ.ಇಸ್ರೇಲ್ ಪ್ರಧಾನಮಂತ್ರಿ ಅವರಿಂದ ದೂರವಾಣಿ ಕರೆ ಸ್ವೀಕರಿಸಿದ ಪ್ರಧಾನಮಂತ್ರಿ
January 07th, 03:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ದೀಪಾವಳಿಯ ಶುಭಾಶಯಗಳನ್ನು ತಿಳಿಸಿದ ಇಸ್ರೇಲ್ ಪ್ರಧಾನಮಂತ್ರಿ ಅವರಿಗೆ ಧನ್ಯವಾದ ತಿಳಿಸಿ, ಜನ್ಮದಿನದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ
October 21st, 11:23 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಮಂತ್ರಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಕೂಡಾ ಅರ್ಪಿಸಿದರು. ಇದು ಎರಡೂ ರಾಷ್ಟ್ರಗಳ ನಡುವಿನ ಶಾಶ್ವತ ಸ್ನೇಹವನ್ನು ಪುನರುಚ್ಚರಿಸಿತ್ತದೆ ಎಂದು ಅವರು ತಿಳಿಸಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಮಂತ್ರಿ ಜೊತೆ ಮಾತುಕತೆ ನಡೆಸಿದ್ದಾರೆ
August 16th, 05:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೂರವಾಣಿ ಕರೆಯನ್ನು ಇಸ್ರೇಲ್ ಪ್ರಧಾನಮಂತ್ರಿ ಹೆಚ್.ಇ. ಶ್ರೀ ಬೆಂಜಮಿನ್ ನೆತನ್ಯಾಹು.