ಭಾರತದಲ್ಲಿ ಅತ್ಯಂತ ದೀರ್ಘಕಾಲ ಸತತವಾಗಿ ಸೇವೆ ಸಲ್ಲಿಸಿದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಪ್ರಧಾನಮಂತ್ರಿಯಾಗಿ ಹೊರಹೊಮ್ಮಿದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಜಾಗತಿಕ ನಾಯಕರಿಂದ ಅಭಿನಂದನೆಗಳ ಮಹಾಪೂರ
June 10th, 02:08 pm
ಭಾರತದ ಇತಿಹಾಸದಲ್ಲಿ ಅತ್ಯಂತ ದೀರ್ಘಕಾಲ ಸತತವಾಗಿ ಸೇವೆ ಸಲ್ಲಿಸಿದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಪ್ರಧಾನಮಂತ್ರಿಯಾಗಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ವಿಶ್ವದಾದ್ಯಂತದ ಹಲವು ದೇಶಗಳ ಮುಖ್ಯಸ್ಥರು ಮತ್ತು ಸರ್ಕಾರಗಳು ಅಭಿನಂದನಾ ಸಂದೇಶಗಳನ್ನು ಕಳುಹಿಸಿದ್ದಾರೆ.ಭಾರತ-ಇಟಲಿ ಜಂಟಿ ಘೋಷಣೆ
May 20th, 10:28 pm
ಇಟಲಿಯ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು 19-20 ಮೇ 2026 ರಂದು ಇಟಲಿಗೆ ಅಧಿಕೃತ ಭೇಟಿ ನೀಡಿದರು. ಜಿ7 ಶೃಂಗಸಭೆಗಾಗಿ ಜೂನ್ 2024ರಲ್ಲಿ ಪ್ರಧಾನಮಂತ್ರಿ ಮೋದಿ ಅವರು ಇಟಲಿಗೆ ನೀಡಿದ್ದ ಭೇಟಿ ಮತ್ತು 2023ರಲ್ಲಿ ಜಿ20 ಶೃಂಗಸಭೆಗಾಗಿ ಪ್ರಧಾನಮಂತ್ರಿ ಮೆಲೋನಿ ಅವರು ಭಾರತಕ್ಕೆ ನೀಡಿದ್ದ ಭೇಟಿಯ ಮುಂದುವರಿಕೆಯಾಗಿ ನಡೆದ ಈ ಭೇಟಿಯು, ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ಉತ್ತೇಜನವನ್ನು ನೀಡಿತು. ಉಭಯ ನಾಯಕರು ಭಾರತ-ಇಟಲಿ ಸಂಬಂಧಗಳನ್ನು 'ವಿಶೇಷ ಕಾರ್ಯತಂತ್ರದ ಪಾಲುದಾರಿಕೆ'ಯ ಮಟ್ಟಕ್ಕೆ ಏರಿಸಲು ನಿರ್ಧರಿಸಿದರು.ಪ್ರಧಾನಮಂತ್ರಿ ಅವರಿಂದ ಇಟಲಿ ಅಧ್ಯಕ್ಷರ ಭೇಟಿ
May 20th, 07:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರೋಮ್ ನ ಅಧ್ಯಕ್ಷರ ಅರಮನೆಯಾದ ಕ್ವಿರಿನಾಲೆಯಲ್ಲಿ ಇಟಲಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಸೆರ್ಗಿಯೋ ಮಟ್ಟರೆಲ್ಲಾ ಅವರನ್ನು ಭೇಟಿ ಮಾಡಿದರು.