ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಿದ ಕುರಿತು ಜಂಟಿ ಹೇಳಿಕೆ
December 16th, 03:56 pm
ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯದ ಘನವೆತ್ತ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 15 ಮತ್ತು 16 ರಂದು ಜೋರ್ಡಾನ್ಗೆ ಭೇಟಿ ನೀಡಿದರು.ಭಾರತ - ಜೋರ್ಡಾನ್ ವ್ಯಾಪಾರ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
December 16th, 12:24 pm
ನಿನ್ನೆ ಘನತೆವೆತ್ತ ಮಹಾರಾಜರೊಂದಿಗೆ ನನ್ನ ಚರ್ಚೆಯ ಸಾರವೂ ಇದಾಗಿತ್ತು. ಭೌಗೋಳಿಕತೆಯನ್ನು ಅವಕಾಶವಾಗಿ ಮತ್ತು ಅವಕಾಶವನ್ನು ಬೆಳವಣಿಗೆಯಾಗಿ ಹೇಗೆ ಪರಿವರ್ತಿಸುವುದು ಎಂಬುದರ ಕುರಿತು ನಾವು ವಿವರವಾದ ಚರ್ಚೆಗಳನ್ನು ನಡೆಸಿದ್ದೇವೆ.ಭಾರತ-ಜೋರ್ಡಾನ್ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಮತ್ತು ಘನತೆವೆತ್ತ ದೊರೆ ಅಬ್ದುಲ್ಲಾ II ಅವರ ಭಾಷಣ
December 16th, 12:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಘನವೆತ್ತ ದೊರೆ ಅಬ್ದುಲ್ಲಾ II ಅವರು ಇಂದು ಅಮ್ಮನ್ ನಲ್ಲಿ ನಡೆದ 'ಭಾರತ-ಜೋರ್ಡಾನ್ ವಾಣಿಜ್ಯ ವೇದಿಕೆ'ಯನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಯುವರಾಜ ಹುಸೇನ್ ಹಾಗೂ ಜೋರ್ಡಾನ್ ನ ವಾಣಿಜ್ಯ, ಕೈಗಾರಿಕೆ ಮತ್ತು ಹೂಡಿಕೆ ಸಚಿವರು ಕೂಡ ಭಾಗವಹಿಸಿದ್ದರು. ಉಭಯ ದೇಶಗಳ ನಡುವಿನ ಪರಸ್ಪರ ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸುವ ಮಹತ್ವವನ್ನು ಇಬ್ಬರೂ ನಾಯಕರು ಗುರುತಿಸಿದರು. ಅಲ್ಲದೆ, ಇಲ್ಲಿರುವ ಸಾಮರ್ಥ್ಯ ಮತ್ತು ಅವಕಾಶಗಳನ್ನು ಬಳಸಿಕೊಂಡು ಅಭಿವೃದ್ಧಿ ಹಾಗೂ ಸಮೃದ್ಧಿಯನ್ನಾಗಿ ಪರಿವರ್ತಿಸಲು ಎರಡೂ ಕಡೆಯ ಉದ್ಯಮ ಮುಖಂಡರಿಗೆ ಅವರು ಕರೆ ನೀಡಿದರು. ಜೋರ್ಡಾನ್ನ ಮುಕ್ತ ವ್ಯಾಪಾರ ಒಪ್ಪಂದಗಳು ಮತ್ತು ಭಾರತದ ಆರ್ಥಿಕ ಶಕ್ತಿಯನ್ನು ಒಗ್ಗೂಡಿಸುವ ಮೂಲಕ, ದಕ್ಷಿಣ ಏಷ್ಯಾ ಮತ್ತು ಪಶ್ಚಿಮ ಏಷ್ಯಾ ನಡುವೆ ಹಾಗೂ ಅದರಾಚೆಗೂ ಒಂದು ಆರ್ಥಿಕ ಕಾರಿಡಾರ್ ಅನ್ನು ನಿರ್ಮಿಸಬಹುದು ಎಂದು ರಾಜರು ಅಭಿಪ್ರಾಯಪಟ್ಟರು.