ಕೀನ್ಯಾದ ಮಾಜಿ ಪ್ರಧಾನಮಂತ್ರಿ ಶ್ರೀ ರೈಲಾ ಒಡಿಂಗಾ ಅವರ ನಿಧನಕ್ಕೆ ಅತೀವ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
October 15th, 02:41 pm
ಕೀನ್ಯಾದ ಮಾಜಿ ಪ್ರಧಾನಮಂತ್ರಿ ಶ್ರೀ ರೈಲಾ ಒಡಿಂಗಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ನನ್ನ ಆತ್ಮೀಯ ಸ್ನೇಹಿತ ಮತ್ತು ಕೀನ್ಯಾದ ಮಾಜಿ ಪ್ರಧಾನಮಂತ್ರಿ ಶ್ರೀ ರೈಲಾ ಒಡಿಂಗಾ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ಒಬ್ಬ ಉನ್ನತ ರಾಜನೀತಿಜ್ಞ ಮತ್ತು ಭಾರತದ ಪ್ರೀತಿಯ ಸ್ನೇಹಿತರಾಗಿದ್ದರು. ಗುಜರಾತ್ ಮುಖ್ಯಮಂತ್ರಿಯಾಗಿದ್ದ ದಿನಗಳಿಂದ ಅವರನ್ನು ಹತ್ತಿರದಿಂದ ತಿಳಿದುಕೊಳ್ಳುವ ಸೌಭಾಗ್ಯ ನನಗೆ ಸಿಕ್ಕಿತು ಮತ್ತು ನಮ್ಮ ಒಡನಾಟವು ವರ್ಷಗಳಿಂದ ಮುಂದುವರೆದಿದೆ ಎಂದು ಶ್ರೀ ಮೋದಿ ಅವರು ಹೇಳಿದರು. ಶ್ರೀ ರೈಲಾ ಒಡಿಂಗಾ ಅವರು ಭಾರತದ ಸಂಸ್ಕೃತಿ, ಮೌಲ್ಯಗಳು ಮತ್ತು ಪ್ರಾಚೀನ ಜ್ಞಾನದ ಬಗ್ಗೆ ವಿಶೇಷ ಪ್ರೀತಿಯನ್ನು ಹೊಂದಿದ್ದರು, ಇದು ಭಾರತ-ಕೀನ್ಯಾ ಸಂಬಂಧಗಳನ್ನು ಬಲಪಡಿಸುವ ಅವರ ಪ್ರಯತ್ನಗಳಲ್ಲಿ ಪ್ರತಿಫಲಿಸುತ್ತದೆ” ಎಂದು ಶ್ರೀ ಮೋದಿ ಅವರು ಹೇಳಿದರು.