ನ್ಯೂಜಿಲೆಂಡ್‌ನಲ್ಲಿರುವ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 11th, 01:15 pm
ನ್ಯೂಜಿಲೆಂಡ್ ಭೇಟಿ ಅಂತಿಮಗೊಳಿಸಿದಾಗ, ಹವಾಮಾನವು ತುಂಬಾ ಚಳಿ ಇರುತ್ತದೆ ಎಂದು ನನಗೆ ಹೇಳಿದ್ದರಿಂದ, ನಾನು ಅದನ್ನು ನನ್ನೊಂದಿಗೆ ತರುವ ನಿರ್ಧಾರ ತೆಗೆದುಕೊಂಡೆ.ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರಿಂದ ಭಾಷಣ
July 11th, 12:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಕ್ ಲ್ಯಾಂಡ್ ನಲ್ಲಿ ನಡೆದ 'ಕಿಯಾ ಔರಾ ಮೋದಿ' ಕಾರ್ಯಕ್ರಮದಲ್ಲಿ ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ವಿಶೇಷ ಸನ್ನಿವೇಶದಲ್ಲಿ, ನ್ಯೂಜಿಲೆಂಡ್ ನ ಪ್ರಧಾನಮಂತ್ರಿ ಯವರಾದ ಗೌರವಾನ್ವಿತ ಆರ್. ಕ್ರಿಸ್ಟೋಫರ್ ಲಕ್ಸನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾರತೀಯ ವಲಸಿಗರ 10,000ಕ್ಕೂ ಹೆಚ್ಚು ಸದಸ್ಯರ ಶಕ್ತಿ, ಉತ್ಸಾಹ ಮತ್ತು ಉಲ್ಲಾಸದಿಂದ ಈ ಸಭೆ ತುಂಬಿತ್ತು.ಅದ್ಧೂರಿ ಭೋಜನಕೂಟ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 11th, 12:32 pm
ಕಳೆದ ವರ್ಷ ಪ್ರಧಾನ ಮಂತ್ರಿ ಲಕ್ಸನ್ ಅವರ ಭಾರತ ಭೇಟಿಯು ನಮ್ಮ ದ್ವಿಪಕ್ಷೀಯ ಸಂಬಂಧದ ಪ್ರತಿಯೊಂದು ಅಂಶಕ್ಕೂ ಹೊಸ ಶಕ್ತಿ ತುಂಬಿತು. ಅವರ ನಾಯಕತ್ವ, ಸ್ಪಷ್ಟ ದೃಷ್ಟಿಕೋನ ಮತ್ತು ಬಲವಾದ ಬದ್ಧತೆಯಡಿ, ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸ್ನೇಹವು ಹೊಸ ಆವೇಗ ಮತ್ತು ಹೊಸ ದಿಕ್ಕನ್ನು ಪಡೆದುಕೊಂಡಿದೆ. 40 ವರ್ಷಗಳಲ್ಲಿ ಭಾರತೀಯ ಪ್ರಧಾನ ಮಂತ್ರಿಯೊಬ್ಬರು ನ್ಯೂಜಿಲೆಂಡ್‌ಗೆ ನೀಡಿದ ಮೊದಲ ಭೇಟಿ ಇದಾಗಿದೆ. ನಾನು ಆಗಾಗ್ಗೆ ಹೇಳುವಂತೆ, ನನಗಿಂತ ಮೊದಲು ಬಂದವರು ನನಗಾಗಿ ಅನೇಕ ಉತ್ತಮ ಕಾರ್ಯಗಳನ್ನು ಬಿಟ್ಟು ಹೋಗಿದ್ದಾ, ಅವುಗಳನ್ನು ಪೂರ್ಣಗೊಳಿಸುವ ಸೌಭಾಗ್ಯ ನನಗಿದೆ. ಸ್ನೇಹಿತರೆ, ಇದು ನಮ್ಮ ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಅಧ್ಯಾಯದ ಆರಂಭವನ್ನು ಸೂಚಿಸುತ್ತಿದೆ."ಭಾರತ-ನ್ಯೂಜಿಲೆಂಡ್: ಒಂದು ಯಶಸ್ವಿ ಪಾಲುದಾರಿಕೆ" ಎಂಬ ವಿಷಯದ ಮೇಲೆ ನ್ಯೂಜಿಲೆಂಡ್ ಪ್ರಧಾನಮಂತ್ರಿ ಅವರು ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
July 11th, 12:30 pm
ನ್ಯೂಜಿಲೆಂಡ್ ಪ್ರಧಾನಮಂತ್ರಿ ಅವರಾದ ಮಾನ್ಯ ಕ್ರಿಸ್ಟೋಫರ್ ಅವರು ಆಯೋಜಿಸಿದ್ದ ಭಾರತ-ನ್ಯೂಜಿಲೆಂಡ್: ಒಂದು ಯಶಸ್ವಿ ಪಾಲುದಾರಿಕೆ ಎಂಬ ವಿಷಯಾಧಾರಿತ ವಿಶೇಷ ಭೋಜನಕೂಟದಲ್ಲಿ ಪ್ರಧಾನಮಂತ್ರಿ ಅವರಾದ ಶ್ರೀ ನರೇಂದ್ರ ಮೋದಿಯವರು ಭಾಗವಹಿಸಿದ್ದರು. ರಾಜಕೀಯ, ವ್ಯಾಪಾರ, ಕೈಗಾರಿಕೆ, ಶಿಕ್ಷಣ, ತಂತ್ರಜ್ಞಾನ, ಕ್ರೀಡೆ ಮತ್ತು ಕಲೆ ಮುಂತಾದ ಕ್ಷೇತ್ರಗಳ ಗಣ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ನ್ಯೂಜಿಲೆಂಡ್ ಪ್ರಧಾನಮಂತ್ರಿಯೊಂದಿಗೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ
July 11th, 08:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಕ್ಲೆಂಡ್‌ನ ಸರ್ಕಾರಿ ಭವನದಲ್ಲಿಂದು ನ್ಯೂಜಿಲೆಂಡ್ ಪ್ರಧಾನಮಂತ್ರಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಸರ್ಕಾರಿ ಭವನಕ್ಕೆ ಆಗಮಿಸಿದಾಗ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸಾಂಪ್ರದಾಯಿಕ ಮಾವೊರಿ ಸ್ವಾಗತ ನೀಡಲಾಯಿತು. ಸಮಾರಂಭದಲ್ಲಿ ಶಾಂತಿ, ಗೌರವ ಮತ್ತು ಸ್ವಾಗತವನ್ನು ಸಂಕೇತಿಸುವ ಸಾಂಪ್ರದಾಯಿಕ ಮಾವೊರಿ ಆಚರಣೆಗಳು ಒಳಗೊಂಡಿದ್ದವು. ಸಾಂಪ್ರದಾಯಿಕ ಸ್ವಾಗತದ ನಂತರ, ಪ್ರಧಾನಮಂತ್ರಿಯವರು ಗೌರವ ರಕ್ಷೆ (ಗಾರ್ಡ್ ಆಫ್ ಆನರ್ ) ಸ್ವೀಕರಿಸಿದರು.ಭಾರತ-ನ್ಯೂಜಿಲೆಂಡ್ ಕಾರ್ಯತಾಂತ್ರಿಕ ಪಾಲುದಾರಿಕೆ: 2030ರ ನೀಲನಕ್ಷೆ
July 11th, 08:06 am
ಭಾರತ ಮತ್ತು ನ್ಯೂಜಿಲೆಂಡ್ ಪ್ರಧಾನಮಂತ್ರಿಗಳು 2026ರ ಜುಲೈ 11 ರಂದು ನ್ಯೂಜಿಲೆಂಡ್‌ನ ಆಕ್ಲೆಂಡ್‌ನಲ್ಲಿ ಪರಸ್ಪರ ಭೇಟಿ ಮಾಡಿ ಮಾತುಕತೆ ನಡೆಸಿದರು ಮತ್ತು ಭಾರತ-ನ್ಯೂಜಿಲೆಂಡ್ ಕಾರ್ಯತಾಂತ್ರಿಕ ಪಾಲುದಾರಿಕೆಯನ್ನು ರೂಪಿಸುವುದಾಗಿ ಘೋಷಿಸಿದರು. ಮುಂದಿನ ನಾಲ್ಕು ವರ್ಷಗಳಲ್ಲಿ ಜಂಟಿ ಕ್ರಮಕ್ಕೆ ಮಾರ್ಗದರ್ಶನ ನೀಡಲು ಮತ್ತು ಭಾರತ-ನ್ಯೂಜಿಲೆಂಡ್ ಕಾರ್ಯತಂತ್ರ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಹಂಚಿಕೆಯ ಚೌಕಟ್ಟಾಗಿ 2030 ರ ಈ ನೀಲನಕ್ಷೆಯನ್ನು ಇಬ್ಬರೂ ಪ್ರಧಾನ ಮಂತ್ರಿಗಳು ಅನುಮೋದಿಸಿದರು. ಕಾರ್ಯತಂತ್ರದ ಪಾಲುದಾರಿಕೆಯು ಈ ಮಾರ್ಗಸೂಚಿಯ ಕೆಳಗಿನ ಸ್ತಂಭ(ಆಧಾರ)ಗಳಲ್ಲಿ ನಿಗದಿಪಡಿಸಲಾದ ಕ್ಷೇತ್ರಗಳು ಮತ್ತು ಉಪಕ್ರಮಗಳನ್ನು ಒಳಗೊಂಡವೆ, ಆದರೆ ಅವುಗಳಿಗೆ ಮಾತ್ರ ಸೀಮಿತವಾಗಿಲ್ಲ.ಭಾರತ-ನ್ಯೂಜಿಲೆಂಡ್ ಜಂಟಿ ಹೇಳಿಕೆ
July 11th, 07:59 am
ನ್ಯೂಜಿಲೆಂಡ್ ಪ್ರಧಾನಮಂತ್ರಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜುಲೈ 10 ಮತ್ತು 11 ರಂದು ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ಅಧಿಕೃತ ಭೇಟಿ ನೀಡಿದ್ದರು. 40 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದ್ದು, ಇದು ಐತಿಹಾಸಿಕ ಮೈಲಿಗಲ್ಲೆಂದು ಗುರುತಿಸಲಾಗಿದೆ ಮತ್ತು ಎರಡೂ ರಾಷ್ಟ್ರಗಳ ನಡುವಿನ ಕಾಯಂ ಸ್ನೇಹ ಮತ್ತು ಪಾಲುದಾರಿಕೆಯಲ್ಲಿ ಹೊಸ ಹಾದಿಯನ್ನು ರೂಪಿಸುತ್ತದೆ.ಭಾರತ-ನ್ಯೂಜಿಲೆಂಡ್ ನಿಯೋಗ ಮಟ್ಟದ ಮಾತುಕತೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ
July 11th, 07:00 am
ನಿಮ್ಮ ಸಚಿವರು ರಾತ್ರಿಯಿಡೀ ನನ್ನೊಂದಿಗೆ ಇದ್ದರು, ಅದಕ್ಕೂ ನಾನು ಕೃತಜ್ಞನಾಗಿದ್ದೇನೆ. 40 ವರ್ಷಗಳ ನಂತರ ಭಾರತದ ಪ್ರಧಾನ ಮಂತ್ರಿಯೊಬ್ಬರು ನ್ಯೂಜಿಲೆಂಡ್‌ಗೆ ಚೊಚ್ಚಲ ಭೇಟಿ ನೀಡುತ್ತಿರುವುದು ನನಗೆ ತುಂಬಾ ಸಂತೋಷದ ವಿಷಯ. ನಿಮ್ಮ ಆರ್ಥಿಕ ರಾಜಧಾನಿಯಲ್ಲಿ ಈ ಕಾರ್ಯಕ್ರಮ ಆಯೋಜಿಸುವ ಮೂಲಕ, ನೀವು ಭಾರತ-ನ್ಯೂಜಿಲೆಂಡ್ ಸಂಬಂಧಗಳಿಗೆ ಹೊಸ ಉತ್ತೇಜನ ನೀಡುವ ಅವಕಾಶ ಸೃಷ್ಟಿಸಿದ್ದೀರಿ. ಇದಕ್ಕಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ.