ನಾರ್ವೆ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಿದರು
May 18th, 08:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಓಸ್ಲೋದಲ್ಲಿ ನಾರ್ವೆ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಜೋನಸ್ ಗಹರ್ ಸ್ಟೋರೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಭಾರತ ಮತ್ತು ನಾರ್ವೆ ನಡುವಿನ ನಿಕಟ ಸಂಬಂಧಗಳ ಸಂಕೇತವಾಗಿ, ಇಂದು ಬೆಳಿಗ್ಗೆ ಓಸ್ಲೋ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನಾರ್ವೆ ಪ್ರಧಾನಮಂತ್ರಿ ಶ್ರೀ ಸ್ಟೋರೆ ಅವರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.ನಾರ್ವೆಯ ದೊರೆ ಐದನೇ ಹೆರಾಲ್ಡ್ ಅವರೊಂದಿಗೆ ಪ್ರಧಾನ ಮಂತ್ರಿಯವರ ಸಭೆ.
May 18th, 07:36 pm
ನಾರ್ವೆಯ ದೊರೆ ಐದನೇ ಹೆರಾಲ್ಡ್ ಅವರೊಂದಿಗೆ ಪ್ರಧಾನ ಮಂತ್ರಿಯವರ ಸಭೆ. ಓಸ್ಲೋದ ರಾಯಲ್ ಪ್ಯಾಲೇಸ್‌ನಲ್ಲಿ ನಾರ್ವೆಯ ಘನತೆವೆತ್ತ ರಾಜ ಹೆರಾಲ್ಡ್ V ಅವರೊಂದಿಗೆ ಪ್ರಧಾನಿ ಮೋದಿ ಸಮಾಲೋಚಿಸಿದರು, ಅಲ್ಲಿ ಇಬ್ಬರೂ ಭಾರತ-ನಾರ್ವೆ ಪಾಲುದಾರಿಕೆ ಮತ್ತು ವಿವಿಧ ಕ್ಷೇತ್ರಗಳಲ್ಲಿ, ವಿಶೇಷವಾಗಿ ಹೊಸ ತಂತ್ರಜ್ಞಾನಗಳ ಪ್ರಗತಿಯ ಬಗ್ಗೆ ಚರ್ಚಿಸಿದರು. ಸಭೆಯ ನಂತರ ಪ್ರಧಾನಿ ಮೋದಿ ಅವರ ಗೌರವಾರ್ಥವಾಗಿ ಭೋಜನ ಕೂಟವನ್ನು ಆಯೋಜಿಸಲಾಗಿತ್ತು.ರಾಯಲ್ ನಾರ್ವೇಜಿಯನ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಯ ಗ್ರ್ಯಾಂಡ್ ಕ್ರಾಸ್ ಪದಕವನ್ನು ಸ್ವೀಕರಿಸಿದ ಪ್ರಧಾನಮಂತ್ರಿ
May 18th, 07:35 pm
ಓಸ್ಲೋದಲ್ಲಿ ಆಯೋಜಿಸಲಾದ ವಿಶೇಷ ಸಮಾರಂಭದಲ್ಲಿ, ನಾರ್ವೆಯ ಮಹಾರಾಜ ಘನತೆವೆತ್ತ 5ನೇ ಹೆರಾಲ್ಡ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ 'ಗ್ರ್ಯಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್ ಆಫ್ ಮೆರಿಟ್' ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಯು, ವಿದೇಶಿ ಸರ್ಕಾರದ ಮುಖ್ಯಸ್ಥರಿಗೆ ನೀಡಲಾಗುವ ನಾರ್ವೆಯ ಅತ್ಯುನ್ನತ ಗೌರವವಾಗಿದೆ ಮತ್ತು ನಾರ್ವೆ ಮತ್ತು ಮಾನವಕುಲದ ಹಿತಾಸಕ್ತಿಗಾಗಿ ಅತ್ಯುತ್ತಮ ಸೇವೆಯನ್ನು ಗುರುತಿಸಿ ಇದನ್ನು ನಾರ್ವೆ ಸರ್ಕಾರದಿಂದ ನೀಡಲಾಗುತ್ತದೆ.