ನವದೆಹಲಿಯ ಭಾರತ ಮಂಟಪದಲ್ಲಿ ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆದ ಭಾರತ-ರಷ್ಯಾ ಬಿಸಿನೆಸ್ ಫೋರಂನಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 05th, 03:45 pm
ಇಂದು ಇಷ್ಟು ದೊಡ್ಡ ನಿಯೋಗದೊಂದಿಗೆ ಈ ಕಾರ್ಯಕ್ರಮದ ಭಾಗವಾಗಿರುವುದು ಅಧ್ಯಕ್ಷರಾದ ಪುಟಿನ್ ಅವರ ಅತ್ಯಂತ ಪ್ರಮುಖ ನಿರ್ಧಾರ ಹಾಗೂ ಹೆಜ್ಜೆ ಎಂದು ನಾನು ಭಾವಿಸುತ್ತೇನೆ. 'ಇಂಡಿಯಾ ರಷ್ಯಾ ಬಿಸಿನೆಸ್ ಫೋರಂ'ನಲ್ಲಿ ಭಾಗವಹಿಸಿರುವ ನಿಮ್ಮೆಲ್ಲರನ್ನೂ ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ನಿಮ್ಮೆಲ್ಲರ ನಡುವೆ ಇರುವುದು ನನಗೆ ಅತ್ಯಂತ ಸಂತಸದ ವಿಷಯವಾಗಿದೆ. ಈ ವೇದಿಕೆಗೆ ಆಗಮಿಸಿ ತಮ್ಮ ಅಮೂಲ್ಯವಾದ ಅನಿಸಿಕೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನನ್ನ ಸ್ನೇಹಿತರಾದ ಅಧ್ಯಕ್ಷ ಪುಟಿನ್ ಅವರಿಗೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ವ್ಯಾಪಾರ-ವಹಿವಾಟಿಗೆ ಸರಳ ಮತ್ತು ಸುಗಮವಾದ ವ್ಯವಸ್ಥೆಗಳನ್ನು ರೂಪಿಸಲಾಗುತ್ತಿದೆ. ಭಾರತ ಮತ್ತು ಯುರೇಷಿಯನ್ ಎಕನಾಮಿಕ್ ಯೂನಿಯನ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ (FTA) ಕುರಿತು ಚರ್ಚೆಗಳು ಪ್ರಾರಂಭವಾಗಿವೆ.ರಷ್ಯಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಭಾರತ – ರಷ್ಯಾ ವಾಣಿಜ್ಯ ವೇದಿಕೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 05th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿ ರಷ್ಯಾ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಭಾರತ-ರಷ್ಯಾ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಇಂದು ಮಾತನಾಡಿದರು. ತಮ್ಮ ಭಾಷಣದ ಆರಂಭದಲ್ಲಿ ಪ್ರಧಾನಮಂತ್ರಿ ಅವರು, ಘನತೆವೆತ್ತ ಅಧ್ಯಕ್ಷ ಪುಟಿನ್, ಭಾರತ ಮತ್ತು ವಿದೇಶಗಳ ನಾಯಕರು ಮತ್ತು ಎಲ್ಲಾ ಗೌರವಾನ್ವಿತ ಅತಿಥಿಗಳಿಗೆ ಶುಭಾಶಯ ಕೋರಿದರು. ಭಾರತ ರಷ್ಯಾ ವ್ಯಾಪಾರ ವೇದಿಕೆಯು ಅಧ್ಯಕ್ಷ ಪುಟಿನ್ ಅವರ ಮಹತ್ವದ ಉಪಕ್ರಮವನ್ನು ಪ್ರತಿಬಿಂಬಿಸುತ್ತದೆ, ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ದೊಡ್ಡ ನಿಯೋಗವನ್ನು ಕರೆತಂದಿದ್ದಾರೆ ಎಂದು ಹೇಳಿದರು. ಸಭೆಯಲ್ಲಿ ಭಾಗವಹಿಸಿದ ಎಲ್ಲರಿಗೂ ತಮ್ಮ ಹೃತ್ಪೂರ್ವಕ ಸ್ವಾಗತವನ್ನು ಕೋರಿದ ಪ್ರಧಾನಮಂತ್ರಿ ಮೋದಿ, ಇಂದು ಗಣ್ಯರ ಜೊತೆ ಇರುವುದು ಬಹಳ ಸಂತೋಷ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಮತ್ತು ತಮ್ಮ ಅಮೂಲ್ಯವಾದ ಆಲೋಚನೆಗಳನ್ನು ಹಂಚಿಕೊಂಡಿದ್ದಕ್ಕಾಗಿ ಶ್ರೀ ಮೋದಿ ಅವರು ತಮ್ಮ ಸ್ನೇಹಿತ ಅಧ್ಯಕ್ಷ ಪುಟಿನ್ ಅವರಿಗೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದರು. ವ್ಯಾಪಾರಕ್ಕಾಗಿ ಸರಳೀಕರಣಕೃತ ಮತ್ತು ಪೂರ್ವ ಅಂದಾಜಿನ ಕಾರ್ಯವಿಧಾನಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದ ಅವರು, ಭಾರತ ಮತ್ತು ಯುರೇಷಿಯನ್ ಆರ್ಥಿಕ ಒಕ್ಕೂಟದ ನಡುವೆ ಮುಕ್ತ ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚೆಗಳು ಪ್ರಾರಂಭವಾಗಿವೆ ಎಂದು ಮಾಹಿತಿ ನೀಡಿದರು.ರಷ್ಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
December 05th, 02:00 pm
ಇಂದು 23 ನೇ ಭಾರತ-ರಷ್ಯಾ ಶೃಂಗಸಭೆಗೆ ಅಧ್ಯಕ್ಷ ಪುಟಿನ್ ಅವರನ್ನು ಸ್ವಾಗತಿಸಲು ನನಗೆ ಸಂತೋಷವಾಗಿದೆ. ನಮ್ಮ ದ್ವಿಪಕ್ಷೀಯ ಸಂಬಂಧವು ಹಲವಾರು ಐತಿಹಾಸಿಕ ಮೈಲಿಗಲ್ಲುಗಳ ಮೂಲಕ ಸಾಗುತ್ತಿರುವ ಸಮಯದಲ್ಲಿ ಅವರ ಭೇಟಿ ಬಂದಿದೆ. ನಿಖರವಾಗಿ 25 ವರ್ಷಗಳ ಹಿಂದೆ, ಅಧ್ಯಕ್ಷ ಪುಟಿನ್ ನಮ್ಮ ಕಾರ್ಯತಂತ್ರದ ಪಾಲುದಾರಿಕೆಗೆ ಅಡಿಪಾಯ ಹಾಕಿದರು. ಹದಿನೈದು ವರ್ಷಗಳ ಹಿಂದೆ, 2010 ರಲ್ಲಿ, ನಮ್ಮ ಪಾಲುದಾರಿಕೆಯನ್ನು ವಿಶೇಷ ಮತ್ತು ಸವಲತ್ತು ಪಡೆದ/ಆದ್ಯತೆಯ ಕಾರ್ಯತಂತ್ರದ ಪಾಲುದಾರಿಕೆ ಮಟ್ಟಕ್ಕೆ ಏರಿಸಲಾಯಿತು.PM Modi’s remarks during the joint press meet with Russian President Vladimir Putin
December 05th, 01:50 pm
PM Modi addressed the joint press meet with President Putin, highlighting the strong and time-tested India-Russia partnership. He said the relationship has remained steady like the Pole Star through global challenges. PM Modi announced new steps to boost economic cooperation, connectivity, energy security, cultural ties and people-to-people linkages. He reaffirmed India’s commitment to peace in Ukraine and emphasised the need for global unity in the fight against terrorism.