ಟ್ರಿನಿಡಾಡ್ ಮತ್ತು ಟೊಬೆಗೊ ಪ್ರಧಾನಮಂತ್ರಿಯೊಂದಿಗೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ
July 04th, 11:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪೋರ್ಟ್ ಆಫ್ ಸ್ಪೇನ್‌ನ ರೆಡ್ ಹೌಸ್‌ನಲ್ಲಿ ಟ್ರಿನಿಡಾಡ್ ಮತ್ತು ಟೊಬೆಗೊ ಗಣರಾಜ್ಯದ [ಟಿ&ಟಿ] ಪ್ರಧಾನಮಂತ್ರಿ ಶ್ರೀಮತಿ ಕಮಲಾ ಪರ್ಸಾದ್-ಬಿಸ್ಸೆಸ್ಸರ್ ಅವರ ಜೊತೆ ಮಾತುಕತೆ ನಡೆಸಿದರು. ಇತ್ತೀಚಿನ ಚುನಾವಣೆಗಳಲ್ಲಿ ಜಯಗಳಿಸಿದ ನಂತರ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಪ್ರಧಾನಿ ಕಮಲಾ ಪರ್ಸಾದ್-ಬಿಸ್ಸೆಸ್ಸರ್ ಅವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಿ ಶುಭ ಕೋರಿದರು. ಸಾಂಪ್ರದಾಯಿಕವಾಗಿ ಸ್ವಾಗತ ಕೋರಿದ್ದಕ್ಕಾಗಿ ಟ್ರಿನಿಡಾಡ್ ಪ್ರಧಾನಿಗೆ ಧನ್ಯವಾದ ಅರ್ಪಿಸಿದರು.ಟ್ರಿನಿಡಾಡ್ ಮತ್ತು ಟೊಬಾಗೋ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 04th, 09:30 pm
ಈ ಐತಿಹಾಸಿಕ 'ರೆಡ್ ಹೌಸ್'ನಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿಯಾಗಿರುವುದು ನನಗೆ ದೊರೆತ ವಿನಮ್ರ ಗೌರವ. ಈ ಐತಿಹಾಸಿಕ ಕಟ್ಟಡವು ಟ್ರಿನಿಡಾಡ್ ಮತ್ತು ಟೊಬಾಗೋ ಜನರ ಸ್ವಾತಂತ್ರ್ಯ ಮತ್ತು ಘನತೆಗಾಗಿ ನಡೆದ ಹೋರಾಟ ಹಾಗೂ ತ್ಯಾಗಗಳಿಗೆ ಸಾಕ್ಷಿಯಾಗಿದೆ. ಕಳೆದ ಆರು ದಶಕಗಳಲ್ಲಿ ನೀವು ನ್ಯಾಯನಿಷ್ಠ, ಸರ್ವಸಮ್ಮತ ಹಾಗೂ ಸಮೃದ್ಧಿಯುತ ಪ್ರಜಾಪ್ರಭುತ್ವವನ್ನು ರೂಪಿಸುವಲ್ಲಿ, ಈ ಭವನವು ನಿಮ್ಮ ಪಯಣದ ದೃಢ ಹೆಗ್ಗುರುತಾಗಿ ನಿಂತಿದೆ.ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
July 04th, 09:00 pm
ಸೆನೆಟ್ ಅಧ್ಯಕ್ಷರಾದ ಗೌರವಾನ್ವಿತ ವೇಡ್ ಮಾರ್ಕ್ ಮತ್ತು ಸದನದ ಸ್ಪೀಕರ್ ಗೌರವಾನ್ವಿತ ಜಗದೇವ್ ಸಿಂಗ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಸಭೆಯನ್ನು ಉದ್ದೇಶಿಸಿ ಇಂದು ಮಾತನಾಡಿದರು. ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನ ಮಂತ್ರಿ ಮೋದಿ ಅವರು, ಈ ಸಂದರ್ಭವು ಭಾರತ-ಟ್ರಿನಿಡಾಡ್ ಮತ್ತು ಟೊಬಾಗೊ ನಡುವಿನ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಮೈಲಿಗಲ್ಲು ಗುರುತಿಸಿದೆ ಎಂದರು.