ಕೇರಳದ ಆರ್ಯ ವೈದ್ಯ ಶಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

January 28th, 02:39 pm

ಇಂದು ಈ ಮಹತ್ವದ ಸಂದರ್ಭದಲ್ಲಿ, ನಿಮ್ಮೆಲ್ಲರೊಂದಿಗೆ ಸಂಪರ್ಕ ಸಾಧಿಸುವುದು ನನಗೆ ಸಂತೋಷದ ಸಂಗತಿಯಾಗಿದೆ. ಆರ್ಯ ವೈದ್ಯ ಶಾಲೆಯು ಆಯುರ್ವೇದವನ್ನು ಕಾಪಿಡುವಲ್ಲಿ, ರಕ್ಷಿಸುವಲ್ಲಿ ಮತ್ತು ಮುನ್ನಡೆಸುವಲ್ಲಿ ಮಹತ್ವದ ಕೊಡುಗೆಯನ್ನು ಹೊಂದಿದೆ. 125 ವರ್ಷಗಳ ತನ್ನ ಪ್ರಯಾಣದಲ್ಲಿ, ಈ ಸಂಸ್ಥೆಯು ಆಯುರ್ವೇದವನ್ನು ಪ್ರಬಲ ಚಿಕಿತ್ಸಾ ವ್ಯವಸ್ಥೆಯಾಗಿ ಸ್ಥಾಪಿಸಿದೆ. ಇಂದು ಈ ಸಂದರ್ಭದಲ್ಲಿ, ಆರ್ಯ ವೈದ್ಯ ಶಾಲೆಯ ಸ್ಥಾಪಕ ವೈದ್ಯರತ್ನಂ ಪಿ.ಎಸ್. ವಾರಿಯರ್ ಜೀ ಅವರ ಕೊಡುಗೆಗಳನ್ನು ನಾನು ಸ್ಮರಿಸುತ್ತೇನೆ. ಆಯುರ್ವೇದದ ಬಗ್ಗೆ ಅವರ ದೃಷ್ಟಿಕೋನ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ಸಮರ್ಪಣೆ ಇಂದಿಗೂ ನಮಗೆ ಸ್ಫೂರ್ತಿ ನೀಡುತ್ತದೆ.

ಕೇರಳದ ಆರ್ಯ ವೈದ್ಯ ಸಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

January 28th, 02:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಆರ್ಯ ವೈದ್ಯ ಸಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದರು. ಈ ಸಂದರ್ಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾಮಂತ್ರಿ, ಈ ಶುಭ ಸಂದರ್ಭದಲ್ಲಿ ಎಲ್ಲರೊಂದಿಗೂ ಸಂಪರ್ಕ ಸಾಧಿಸುತ್ತಿರುವುದು ಸಂತೋಷದ ವಿಷಯ ಎಂದು ಹೇಳಿದರು. ಆರ್ಯ ವೈದ್ಯಶಾಲೆ ಆಯುರ್ವೇದವನ್ನು ಸಂರಕ್ಷಿಸುವಲ್ಲಿ, ರಕ್ಷಣೆ ಮಾಡುವಲ್ಲಿ ಮತ್ತು ಮುನ್ನಡೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಅವರು ಪ್ರಮುಖವಾಗಿ ಪ್ರಸ್ತಾಪಿಸಿದರು. ತನ್ನ 125 ವರ್ಷಗಳ ಪಯಣದಲ್ಲಿ, ಸಂಸ್ಥೆಯು ಆಯುರ್ವೇದವನ್ನು ಪ್ರಬಲ ಚಿಕಿತ್ಸಾ ವ್ಯವಸ್ಥೆಯಾಗಿ ಸ್ಥಾಪಿಸಿದೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು. ಆರ್ಯ ವೈದ್ಯಶಾಲೆಯ ಸಂಸ್ಥಾಪಕ ವೈದ್ಯರತ್ನಂ ಪಿ.ಎಸ್. ವೇರಿಯರ್ ಅವರ ಕೊಡುಗೆಗಳನ್ನು ಸ್ಮರಿಸಿದ ಪ್ರಧಾನಮಂತ್ರಿ, ಆಯುರ್ವೇದದ ಬಗೆಗಿನ ಅವರ ವಿಧಾನವು ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ಬದ್ಧತೆಯು ಸದಾ ಸ್ಫೂರ್ತಿ ನೀಡುವುದು ಮುಂದುವರಿಯುತ್ತದೆ ಎಂದು ಒತ್ತಿ ಹೇಳಿದರು.

Practical Knowledge is the true essence of the NEP: PM Modi

May 13th, 06:22 pm

PM Modi addressed the gathering at the Akhil Bhartiya Shiksha Sangh Adhiveshan, which is the 29th Biennial Conference of the All India Primary Teacher’ Federation. In his address, he acknowledged the importance of education and how the National Education Policy (NEP) will transform and foster learning for the 21st century in India.

ನಮ್ಮ ಯುವಕರು ಪ್ರತಿಯೊಂದು ಕ್ಷೇತ್ರದಲ್ಲೂ ದೇಶವನ್ನು ಹೆಮ್ಮೆ ಪಡುವಂತೆ ಮಾಡುತ್ತಿದ್ದಾರೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

July 31st, 11:30 am

ಮಿತ್ರರೇ, ಜುಲೈ 31 ರಂದು, ಅಂದರೆ ಈ ಇಂದು ನಾವೆಲ್ಲ ದೇಶವಾಸಿಗಳು, ಹುತಾತ್ಮ ಯೋಧ ಶಹೀದ್ ಉಧಂ ಸಿಂಗ್ ಅವರಿಗೆ ನಮಿಸುತ್ತೇವೆ. ದೇಶಕ್ಕಾಗಿ ಸರ್ವಸ್ವವನ್ನೇ ತ್ಯಾಗ ಮಾಡಿದ ಇತರ ಎಲ್ಲ ಮಹಾನ್ ಕ್ರಾಂತಿಕಾರಿಗಳಿಗೆ ನಾನು ವಿನಮ್ರ ಗೌರವ ನಮನವನ್ನು ಸಲ್ಲಿಸುತ್ತೇನೆ.

ಸೆಪ್ಟೆಂಬರ್ 7ರಂದು ಶಿಕ್ಷಕ ಪರ್ವದ ಉದ್ಘಾಟನಾ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 05th, 02:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಸೆಪ್ಟೆಂಬರ್ 7ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷಕ ಪರ್ವದ ಉದ್ಘಾಟನಾ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ಬಹು ಉಪಕ್ರಮಗಳಿಗೂ ಚಾಲನೆ ನೀಡಲಿದ್ದಾರೆ.

ಡಿಜಿಟಲ್ ಭಾರತವು ಪಾರದರ್ಶಕತೆ, ಪರಿಣಾಮಕಾರಿ ಸೇವಾ ವಿತರಣೆ ಮತ್ತು ಉತ್ತಮ ಆಡಳಿತವನ್ನು ನೀಡುತ್ತದೆ: ಪ್ರಧಾನಿ ಮೋದಿ

October 07th, 06:15 pm

ಪ್ರಧಾನಿ ನರೇಂದ್ರ ಮೋದಿ ಇಂದು ಐಐಟಿ ಗಾಂಧೀನಗರ ಹೊಸ ಕ್ಯಾಂಪಸ್ ಕಟ್ಟಡ ದೇಶಕ್ಕೆ ಸಮರ್ಪಿಸಿದರು ಮತ್ತು ಪ್ರಧಾನ್ ಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಯೋಜನೆಯನ್ನು ಪ್ರಾರಂಭಿಸಿದರು . ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ, ಎಲ್ಲಾ ವಯಸ್ಸಿನ ಗುಂಪುಗಳು ಮತ್ತು ಸಮಾಜದ ವರ್ಗಗಳಲ್ಲಿ ಡಿಜಿಟಲ್ ಪ್ರತಿಶತಕ್ಕೆ ಡಿಜಿಟಲ್ ಸಾಕ್ಷರತೆಯನ್ನು ಹರಡಲು ಕಾರ್ಯವು ನಡೆಯುತ್ತಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ಐಐಟಿ ಗಾಂಧಿನಗರ ಸಮುಚ್ಛಯವನ್ನು ದೇಶಕ್ಕೆ ಸಮರ್ಪಿಸಿದರು , ಡಿಜಿಟಲ್ ಸಾಕ್ಷರತಾ ಯೋಜನೆಯನ್ನು ಚಾಲನೆ ನೀಡಿದರು

October 07th, 06:13 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐಐಟಿ ಗಾಂಧಿನಗರ ಕ್ಯಾಂಪಸ್ ಅನ್ನು ದೇಶಕ್ಕೆ ಸಮರ್ಪಿಸಿದರು. ಪ್ರಧಾನಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನದಡಿ ತರಬೇತಿ ಪಡೆಯುತ್ತಿರುವವರನ್ನು ಅವರು ಪುರಸ್ಕರಿಸಿದರು. ಗಾಂಧಿ ನಗರದಲ್ಲಿ ಪ್ರಧಾನಮಂತ್ರಿಯವರು ದೊಡ್ಡ ಸಂಖ್ಯೆಯಲ್ಲಿದ್ದ ಐಐಟಿ ವಿದ್ಯಾರ್ಥಿಗಳೂ ಸೇರಿದಂತೆ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ ಮಾಡಿದರು .