ರಾಯ್ ಪಿಥೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಪಿಪ್ರಾಹ್ವಾ ಅವಶೇಷಗಳನ್ನು ವೀಕ್ಷಿಸಲು ನಾಗರಿಕರಿಗೆ ಪ್ರಧಾನಮಂತ್ರಿ ಕರೆ
January 02nd, 06:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 3ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ರಾಯ್ ಪಿಥೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಪವಿತ್ರ ಪಿಪ್ರಾಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನ ಜನವರಿ 3 ರಂದು ಪ್ರಧಾನಮಂತ್ರಿ ಅವರಿಂದ ಉದ್ಘಾಟನೆ
January 01st, 05:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 3 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ರಾಯ್ ಪಿಥೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಆಧ್ಯಾತ್ಮಿಕ ಶುದ್ಧತೆ ಮತ್ತು ಪರಿಪೂರ್ಣತೆ ಸಾರುವ “ದಿ ಲೈಟ್ & ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ (“ಬೆಳಕು ಮತ್ತು ಕಮಲ (ಆಧ್ಯಾತ್ಮಿಕ ಸಂಕೇತ): ಜ್ಞಾನೋದಯ ವ್ಯಕ್ತಿಯ ಅವಶೇಷ”) ಎಂಬ ಶೀರ್ಷಿಕೆಯಡಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.