Prime Minister greets Indian Navy personnel on the Navy Day
December 04th, 08:41 am
The Prime Minister, Shri Narendra Modi has greeted all the personnel of Indian Navy on the Navy Day, today. Shri Modi stated that our Navy is synonymous with exceptional courage and determination. They safeguard our shores and uphold our maritime interests. I can never forget this year’s Diwali, which I spent with Naval personnel on board INS Vikrant. Wishing the Indian Navy the very best for their endeavours ahead, Shri Modi said.'ಮನ್ ಕಿ ಬಾತ್' ಜನರ ಸಾಮೂಹಿಕ ಪ್ರಯತ್ನಗಳನ್ನು ಸಾರ್ವಜನಿಕರಿಗೆ ತಿಳಿಸಲು ಅತ್ಯುತ್ತಮ ವೇದಿಕೆಯಾಗಿದೆ: ಪ್ರಧಾನಿ ಮೋದಿ
November 30th, 11:30 am
ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನ ದಿನಾಚರಣೆ, ವಂದೇ ಮಾತರಂನ 150 ನೇ ವಾರ್ಷಿಕೋತ್ಸವ, ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ, ಐಎನ್ಎಸ್ 'ಮಹೆ' ಸೇರ್ಪಡೆ ಮತ್ತು ಕುರುಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ ಸೇರಿದಂತೆ ನವೆಂಬರ್ ತಿಂಗಳ ಪ್ರಮುಖ ಘಟನೆಗಳನ್ನು ಹೈಲೈಟ್ ಮಾಡಿದರು. ದಾಖಲೆಯ ಆಹಾರ ಧಾನ್ಯ ಮತ್ತು ಜೇನುತುಪ್ಪ ಉತ್ಪಾದನೆ, ಭಾರತದ ಕ್ರೀಡಾ ಯಶಸ್ಸುಗಳು, ವಸ್ತು ಸಂಗ್ರಹಾಲಯಗಳು ಮತ್ತು ನೈಸರ್ಗಿಕ ಕೃಷಿಯಂತಹ ಹಲವಾರು ಪ್ರಮುಖ ವಿಷಯಗಳನ್ನು ಸಹ ಅವರು ಸ್ಪರ್ಶಿಸಿದರು. ಎಲ್ಲರೂ ಕಾಶಿ-ತಮಿಳು ಸಂಗಮದ ಭಾಗವಾಗಬೇಕೆಂದು ಪ್ರಧಾನಿ ಒತ್ತಾಯಿಸಿದರು.ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 07:00 pm
ಮೊದಲಿಗೆ, ತಡವಾಗಿ ಬಂದಿದ್ದಕ್ಕಾಗಿ ನಾನುನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಇಂದು ಸರ್ದಾರ್ ಸಾಹೇಬ್ ಅವರ 150ನೇ ಜನ್ಮ ದಿನಾಚರಣೆ. ಏಕ್ತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಆ ಕಾರ್ಯಕ್ರಮದಿಂದಾಗಿ, ನಾನು ಇಲ್ಲಿಗೆ ತಲುಪಲು ವಿಳಂಬವಾಯಿತು. ಸಮಯಕ್ಕೆ ಸರಿಯಾಗಿ ಆಗಮಿಸಲು ಮತ್ತು ಅದಕ್ಕಾಗಿ ನಿಮ್ಮ ಕ್ಷಮೆ ಕೇಳಲು ಸಾಧ್ಯವಾಗದಿದ್ದಕ್ಕೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ಆರಂಭದಲ್ಲಿ ನಾವು ಕೇಳಿದ ಮಂತ್ರಗಳ ಶಕ್ತಿ ಮತ್ತು ಚೈತನ್ಯವನ್ನು ಇನ್ನೂ ನಾವೆಲ್ಲರೂ ಅನುಭವಿಸುತ್ತಿದ್ದೇವೆ. ನಿಮ್ಮೊಂದಿಗೆ ಬರಲು ಅವಕಾಶ ಸಿಕ್ಕಾಗಲೆಲ್ಲಾ ಇದು ನನಗೆ ದೈವಿಕ ಮತ್ತು ಅಸಾಧಾರಣ ಅನುಭವವಾಗಿದೆ. ಇದು ಸ್ವಾಮಿ ದಯಾನಂದ ಜಿ ಅವರ ಆಶೀರ್ವಾದ, ಇದು ಅವರ ಆದರ್ಶಗಳಿಗೆ ನಮ್ಮ ಸಾಮೂಹಿಕ ಗೌರವ, ಮತ್ತು ನಿಮ್ಮೆಲ್ಲ ಚಿಂತಕರೊಂದಿಗಿನ ನನ್ನ ದಶಕಗಳ ವೈಯಕ್ತಿಕ ಬಾಂಧವ್ಯದ ಪರಿಣಾಮವಾಗಿ ನಾನು ನಿಮ್ಮೊಂದಿಗೆ ಇರಲು ಅವಕಾಶ ಪಡೆದಿದ್ದೇನೆ. ನಾನು ನಿಮ್ಮನ್ನು ಭೇಟಿಯಾದಾಗ ಮತ್ತು ಅವರೊಂದಿಗೆ ಮಾತನಾಡುವಾಗಲೆಲ್ಲಾ ನಾನು ಒಂದು ಅನನ್ಯ ಶಕ್ತಿ ಮತ್ತು ಸ್ಫೂರ್ತಿಯಿಂದ ತುಂಬಿದ್ದೇನೆ. ಇದೇ ರೀತಿಯ 9 ಸಭಾಂಗಣಗಳನ್ನು ಸ್ಥಾಪಿಸಲಾಗಿದೆ ಎಂಬುದು ನನಗೆ ತಿಳಿದುಬಂದಿದೆ. ಅಲ್ಲಿ ನಮ್ಮ ಎಲ್ಲಾ ಆರ್ಯ ಸಮಾಜದ ಸದಸ್ಯರು ವೀಡಿಯೊ ಲಿಂಕ್ ಮೂಲಕ ಈ ಕಾರ್ಯಕ್ರಮ ವೀಕ್ಷಿಸುತ್ತಿದ್ದಾರೆ. ನಾನು ಅವರನ್ನು ನೋಡಲು ಸಾಧ್ಯವಾಗದಿದ್ದರೂ, ನಾನು ಇಲ್ಲಿಂದ ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 09:00 am
ಸರ್ದಾರ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಐತಿಹಾಸಿಕ ಸಂದರ್ಭ, ಏಕತಾನಗರದಲ್ಲಿ ಈ ಶುಭ ಬೆಳಗ್ಗೆ, ಈ ವಿಹಂಗಮ ನೋಟ, ಸರ್ದಾರ್ ಸಾಹೇಬರ ಪಾದಗಳ ಬಳಿ ನಮ್ಮ ಉಪಸ್ಥಿತಿಯ ಮೂಲಕ ಇಂದು ನಾವೆಲ್ಲರೂ ಒಂದು ಮಹಾನ್ ಕ್ಷಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. ದೇಶಾದ್ಯಂತ ನಡೆಯುತ್ತಿರುವ ಏಕತಾ ಓಟ, ಕೋಟ್ಯಂತರ ಭಾರತೀಯರ ಉತ್ಸಾಹ, ನಾವು ಹೊಸ ಭಾರತದ ಸಂಕಲ್ಪವನ್ನು ನೇರವಾಗಿ ಅನುಭವಿಸುತ್ತಿದ್ದೇವೆ. ನಿನ್ನೆ ಸಂಜೆ ನಡೆದ ಅದ್ಭುತ ಪ್ರಸ್ತುತಿ ಸೇರಿದಂತೆ ಇತ್ತೀಚೆಗೆ ಇಲ್ಲಿ ನಡೆದ ಕಾರ್ಯಕ್ರಮಗಳು ಭೂತಕಾಲದ ಸಂಪ್ರದಾಯ, ವರ್ತಮಾನದ ಕಠಿಣ ಪರಿಶ್ರಮ, ಶೌರ್ಯ ಮತ್ತು ಭವಿಷ್ಯದ ಸಾಧನೆಗಳ ಒಂದು ನೋಟವನ್ನು ಹೊಂದಿದ್ದವು. ಸರ್ದಾರ್ ಸಾಹೇಬರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥವಾಗಿ, ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಸರ್ದಾರ್ ಸಾಹೇಬರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿವಸ್(ರಾಷ್ಟ್ರೀಯ ಏಕತಾ ದಿನ)ದಂದು ಎಲ್ಲಾ 140 ಕೋಟಿ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು ಮತ್ತು ಧನ್ಯವಾದಗಳನ್ನು ಸಲ್ಲಿಸುತ್ತೇನೆ.ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
October 31st, 08:44 am
ಗುಜರಾತ್ ನ ಕೆವಾಡಿಯಾದಲ್ಲಿ ಇಂದು ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಸರ್ದಾರ್ ಪಟೇಲ್ ಅವರ 150ನೇ ಜಯಂತಿಯು ಒಂದು ಐತಿಹಾಸಿಕ ಸಂದರ್ಭವಾಗಿದೆ ಎಂದು ಅವರು ಹೇಳಿದರು. ಏಕತಾ ನಗರದ ಮುಂಜಾವು ದೈವಿಕ ಮತ್ತು ಸುಂದರ ಎಂದು ಬಣ್ಣಿಸಿದ ಶ್ರೀ ಮೋದಿ, ಸರ್ದಾರ್ ಪಟೇಲ್ ಅವರ ಪಾದಗಳ ಬಳಿ ನೆರೆದ ಜನಸಮೂಹವನ್ನು ಉಲ್ಲೇಖಿಸಿದರು ಮತ್ತು ದೇಶವು ಬಹಳ ಮಹತ್ವದ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ದೇಶಾದ್ಯಂತ ನಡೆದ ಏಕತಾ ಓಟ ಮತ್ತು ಲಕ್ಷಾಂತರ ಭಾರತೀಯರ ಉತ್ಸಾಹಭರಿತ ಭಾಗವಹಿಸುವಿಕೆಯನ್ನು ಅವರು ಎತ್ತಿ ತೋರಿಸಿದರು, ನವ ಭಾರತಕ್ಕಾಗಿ ಸಂಕಲ್ಪವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಒತ್ತಿ ಹೇಳಿದರು. ಹಿಂದೆ ನಡೆದ ಕಾರ್ಯಕ್ರಮಗಳು ಮತ್ತು ನಿನ್ನೆ ಸಂಜೆ ನಡೆದ ಗಮನಾರ್ಹ ಪ್ರಸ್ತುತಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಹಿಂದಿನ ಸಂಪ್ರದಾಯಗಳು, ಇಂದಿನ ಕಠಿಣ ಪರಿಶ್ರಮ ಮತ್ತು ಶೌರ್ಯ ಮತ್ತು ಭವಿಷ್ಯದ ಸಾಧನೆಗಳನ್ನು ಇವುಗಳು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು. ಸರ್ದಾರ್ ಪಟೇಲ್ ಅವರ 150 ನೇ ಜಯಂತಿಯ ಸ್ಮರಣಾರ್ಥ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು. ಸರ್ದಾರ್ ಪಟೇಲ್ ಅವರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿ ದೇಶದ 140 ಕೋಟಿ ನಾಗರಿಕರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು.ಐ.ಎನ್.ಎಸ್. ವಿಕ್ರಾಂತ್ ನಲ್ಲಿ ದೀಪಾವಳಿ ಆಚರಣೆಯ ಕ್ಷಣಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ
October 21st, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐ.ಎನ್.ಎಸ್. ವಿಕ್ರಾಂತ್ ನಲ್ಲಿ ಭಾರತೀಯ ನೌಕಾಪಡೆಯೊಂದಿಗೆ ಆಚರಿಸಿದ ದೀಪಾವಳಿ ಆಚರಣೆಯ ಕ್ಷಣಗಳನ್ನು ಹಂಚಿಕೊಂಡರು. ಈ ದಿನವು ಒಂದು ಗಮನಾರ್ಹ ದಿನ, ಒಂದು ಗಮನಾರ್ಹ ಕ್ಷಣ ಮತ್ತು ಒಂದು ಗಮನಾರ್ಹ ದೃಶ್ಯವಾಗಿತ್ತು ಎಂದು ಉಲ್ಲೇಖಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಒಂದು ಕಡೆ ವಿಶಾಲ ಸಾಗರ ಮತ್ತು ಇನ್ನೊಂದು ಕಡೆ ಭಾರತ ಮಾತೆಯ ಧೈರ್ಯಶಾಲಿ ಸೈನಿಕರ ಅಗಾಧ ಶಕ್ತಿಯನ್ನು ಪ್ರದರ್ಶಿಸುತ್ತದೆ. ಒಂದು ಕಡೆ ಅನಂತ ದಿಗಂತ ಮತ್ತು ಮಿತಿಯಿಲ್ಲದ ಆಕಾಶವನ್ನು ಪ್ರಸ್ತುತಪಡಿಸಿದರೆ, ಇನ್ನೊಂದು ಕಡೆ ಅನಂತ ಶಕ್ತಿಯನ್ನು ಸಾಕಾರಗೊಳಿಸುವ ಐ.ಎನ್.ಎಸ್. ವಿಕ್ರಾಂತ್ ನ ಬೃಹತ್ ಶಕ್ತಿಯನ್ನು ಪ್ರದರ್ಶಿಸುತ್ತದೆ. ಸಮುದ್ರದ ಮೇಲಿನ ಸೂರ್ಯನ ಬೆಳಕಿನ ಹೊಳಪು ದೀಪಾವಳಿಯ ಸಮಯದಲ್ಲಿ ವೀರ ಸೈನಿಕರು ಬೆಳಗಿದ ದೀಪಗಳನ್ನು ಹೋಲುತ್ತದೆ, ಇದು ದೀಪಗಳ ದೈವಿಕ ಹಾರವನ್ನು ಸ್ಪಷ್ಟವಾಗಿ ರೂಪಿಸುತ್ತದೆ ಎಂದು ಹೇಳಿದರು. ಭಾರತೀಯ ನೌಕಾಪಡೆಯ ಧೈರ್ಯಶಾಲಿ ಸಿಬ್ಬಂದಿಯ ಜೊತೆಗೆ ಈ ದೀಪಾವಳಿ ಹಬ್ಬವನ್ನು ಆಚರಿಸಲು ದೊರಕಿದ ಅವಕಾಶವನ್ನು ಬಹುದೊಡ್ಡ ಸೌಭಾಗ್ಯವೆಂದು ಅವರು ತಮ್ಮ ಆಶಯವನ್ನು ವ್ಯಕ್ತಪಡಿಸಿದರು.ಐ.ಎನ್.ಎಸ್ ವಿಕ್ರಾಂತ್ ನಲ್ಲಿ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ
October 20th, 10:30 am
ಇಂದು ಅದ್ಭುತ ದಿನ, ಈ ಕ್ಷಣವನ್ನು ಮರೆಯಲಾಗದು, ಇವತ್ತಿನ ಈ ದೃಶ್ಯ ಅಸಾಧಾರಣವಾಗಿದೆ. ನನ್ನ ಒಂದು ಬದಿಯಲ್ಲಿ ವಿಶಾಲವಾದ ಅಮಿತ ಸಾಗರವಿದೆ, ಇನ್ನೊಂದು ಬದಿಯಲ್ಲಿ ಭಾರತ ಮಾತೆಯ ಧೈರ್ಯಶಾಲಿ ಸೈನಿಕರ ಅಪಾರ ಶಕ್ತಿಯೇ ಇದೆ. ನನ್ನ ಒಂದು ಬದಿಯಲ್ಲಿ ಅನಂತ ದಿಗಂತ ಮತ್ತು ಅಂತ್ಯ ಕಾಣದ ಆಗಸವಿದೆ, ಇನ್ನೊಂದು ಬದಿಯಲ್ಲಿ ತನ್ನೊಳಗೆ ಅನಂತ ಶಕ್ತಿಯನ್ನು ಸಾಕಾರಗೊಳಿಸುವ ಪ್ರಬಲ ಮತ್ತು ಭವ್ಯವಾದ ಐಎನ್ಎಸ್ ವಿಕ್ರಾಂತ್ ನೆಲೆ ನಿಂತಿದೆ. ಸಾಗರ ನೀರಿನ ಮೇಲೆ ಸೂರ್ಯನ ಬೆಳಕಿನ ಹೊಳಪು, ಒಂದು ರೀತಿಯಲ್ಲಿ, ನಮ್ಮ ಧೈರ್ಯಶಾಲಿ ಸೈನಿಕರು ಬೆಳಗಿದ ದೀಪಾವಳಿ ದೀಪಗಳಂತೆ ಕಾಣುತ್ತಿದ್ದಾರೆ. ಇವು ನಮ್ಮ ದೈವಿಕ ಬೆಳಕಿನ ಹಾರಗಳಾಗಿವೆ. ಈ ಬಾರಿ ನಾನು ನಮ್ಮ ನೌಕಾಪಡೆಯ ಅಪ್ರತಿಮ ಯೋಧರ ನಡುವೆ ದೀಪಾವಳಿಯ ಪವಿತ್ರ ಹಬ್ಬ ಆಚರಿಸುತ್ತಿರುವುದು ನನ್ನ ಪಾಲಿನ ದೊಡ್ಡ ಅದೃಷ್ಟವೇ ಆಗಿದೆ.PM Modi celebrates Diwali on board the INS Vikrant
October 20th, 10:00 am
In his address to the armed forces personnel on board INS Vikrant, PM Modi extended heartfelt Diwali greetings to the countrymen. He highlighted that, inspired by Chhatrapati Shivaji Maharaj, the Indian Navy has adopted a new flag. Recalling various operations, the PM emphasized that India stands ready to provide humanitarian assistance anywhere in the world. He also noted that over 100 districts have now fully emerged from Maoist terror.ಸ್ವದೇಶಿ ಉತ್ಪನ್ನಗಳು, ವೋಕಲ್ ಫಾರ್ ಲೋಕಲ್ : ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿಯವರ ಹಬ್ಬದ ಕರೆ.
September 28th, 11:00 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಭಗತ್ ಸಿಂಗ್ ಮತ್ತು ಲತಾ ಮಂಗೇಶ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸಿದರು. ಭಾರತೀಯ ಸಂಸ್ಕೃತಿ, ಮಹಿಳಾ ಸಬಲೀಕರಣ, ದೇಶಾದ್ಯಂತ ಆಚರಿಸಲಾಗುವ ವಿವಿಧ ಹಬ್ಬಗಳು, ಆರ್‌ಎಸ್‌ಎಸ್‌ನ 100 ವರ್ಷಗಳ ಪಯಣ, ಸ್ವಚ್ಛತೆ ಮತ್ತು ಖಾದಿ ಮಾರಾಟದಲ್ಲಿನ ಏರಿಕೆಯಂತಹ ಪ್ರಮುಖ ವಿಷಯಗಳ ಬಗ್ಗೆಯೂ ಅವರು ಮಾತನಾಡಿದರು. ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡುವ ಮಾರ್ಗವು ಸ್ವದೇಶಿತ್ವವನ್ನು ಅಳವಡಿಸಿಕೊಳ್ಳುವುದರಲ್ಲಿದೆ ಎಂದು ಪ್ರಧಾನಿ ಪುನರುಚ್ಚರಿಸಿದರು.ಗುಜರಾತ್‌ನ ಭಾವನಗರದಲ್ಲಿ 'ಸಮುದ್ರ ಸೇ ಸಮೃದ್ಧಿ' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
September 20th, 11:00 am
ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಸಿ.ಆರ್. ಪಾಟೀಲ್, ಮನ್ಸುಖ್‌ಭಾಯಿ ಮಾಂಡವಿಯಾ, ಶಾಂತನು ಠಾಕೂರ್, ನಿಮುಬೆನ್ ಬಂಭಾನಿಯಾ, ದೇಶಾದ್ಯಂತ 40ಕ್ಕೂ ಹೆಚ್ಚು ಸ್ಥಳಗಳಿಂದ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ಗಣ್ಯರೆ, ಎಲ್ಲಾ ಪ್ರಮುಖ ಬಂದರುಗಳೊಂದಿಗೆ ಸಂಪರ್ಕ ಹೊಂದಿರುವ ವಿವಿಧ ರಾಜ್ಯಗಳ ಸಚಿವರೆ, ಹಿರಿಯ ಅಧಿಕಾರಿಗಳೆ, ಇತರೆ ಗಣ್ಯ ಅತಿಥಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನಾನು ನಿಮ್ಮೆಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಭಾವನಗರದಲ್ಲಿ 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು
September 20th, 10:30 am
ಗುಜರಾತ್‌ನ ಭಾವನಗರದಲ್ಲಿ ಇಂದು 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲಾ ಗಣ್ಯರು ಮತ್ತು ಜನರನ್ನು ಸ್ವಾಗತಿಸಿದರು. ಸೆಪ್ಟೆಂಬರ್ 17 ರಂದು ತಮಗೆ ಕಳುಹಿಸಲಾದ ಹುಟ್ಟುಹಬ್ಬದ ಶುಭಾಶಯಗಳನ್ನು ಸ್ವೀಕರಿಸಿದ ಪ್ರಧಾನಮಂತ್ರಿ, ಜನರಿಂದ ಪಡೆದ ಪ್ರೀತಿಯು ಶಕ್ತಿಯ ದೊಡ್ಡ ಮೂಲವಾಗಿದೆ ಎಂದು ಹೇಳಿದರು, ರಾಷ್ಟ್ರವು ವಿಶ್ವಕರ್ಮ ಜಯಂತಿಯಿಂದ ಗಾಂಧಿ ಜಯಂತಿಯವರೆಗೆ, ಅಂದರೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸೇವಾ ಪಖ್ವಾಡವನ್ನು ಆಚರಿಸುತ್ತಿದೆ ಎಂದು ಅವರು ಎತ್ತಿ ತೋರಿಸಿದರು. ಕಳೆದ 2-3 ದಿನಗಳಲ್ಲಿ ಗುಜರಾತ್‌ನಲ್ಲಿ ಹಲವಾರು ಸೇವಾ-ಆಧಾರಿತ ಚಟುವಟಿಕೆಗಳು ನಡೆದಿವೆ ಎಂದು ಅವರು ಹೇಳಿದರು. ನೂರಾರು ಸ್ಥಳಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ, ಇಲ್ಲಿಯವರೆಗೆ ಒಂದು ಲಕ್ಷ ವ್ಯಕ್ತಿಗಳು ರಕ್ತದಾನ ಮಾಡಿದ್ದಾರೆ ಎಂಬುದರತ್ತ ಪ್ರಧಾನಮಂತ್ರಿ ಗಮನ ಸೆಳೆದರು. ಹಲವಾರು ನಗರಗಳಲ್ಲಿ ಸ್ವಚ್ಛತಾ ಅಭಿಯಾನಗಳನ್ನು ನಡೆಸಲಾಗಿದ್ದು, ಲಕ್ಷಾಂತರ ನಾಗರಿಕರು ಸಕ್ರಿಯವಾಗಿ ಭಾಗವಹಿಸಿದ್ದಾರೆ ಎಂದು ಅವರು ಹೇಳಿದರು. ರಾಜ್ಯಾದ್ಯಂತ 30,000 ಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರಿಗೆ ಮತ್ತು ವಿಶೇಷವಾಗಿ ಮಹಿಳೆಯರಿಗೆ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ದೇಶಾದ್ಯಂತ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರಿಗೂ ಅವರು ತಮ್ಮ ಮೆಚ್ಚುಗೆ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ಫಿಲಿಪೈನ್ಸ್ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿ: ಫಲಪ್ರದತೆಯ ವಿವರ
August 05th, 04:31 pm
ಭಾರತ ಗಣರಾಜ್ಯ ಮತ್ತು ಫಿಲಿಪೈನ್ಸ್ ಗಣರಾಜ್ಯದ ನಡುವೆ ಕಾರ್ಯತಂತ್ರದ ಸಹಭಾಗಿತ್ವದ ಸ್ಥಾಪಿಸುವ ಘೋಷಣೆಫಿಲಿಪ್ಪೀನ್ಸ್ ಅಧ್ಯಕ್ಷರೊಂದಿಗೆ ಜಂಟಿ ಮಾಧ್ಯಮ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಮಾಧ್ಯಮ ಹೇಳಿಕೆಯ ಕನ್ನಡ ಅನುವಾದ
August 05th, 11:06 am
ಮೊದಲನೆಯದಾಗಿ, ನಾನು ಅಧ್ಯಕ್ಷರನ್ನು ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಈ ವರ್ಷ, ಭಾರತ ಮತ್ತು ಫಿಲಿಪ್ಪೀನ್ಸ್ ರಾಜತಾಂತ್ರಿಕ ಸಂಬಂಧಗಳ 75ನೇ ವರ್ಷವನ್ನು ಆಚರಿಸುತ್ತಿವೆ. ಮತ್ತು ಈ ಸಂದರ್ಭದಲ್ಲಿ, ಈ ಭೇಟಿಯು ವಿಶೇಷ ಮಹತ್ವವನ್ನು ಪಡೆದಿದೆ. ನಮ್ಮ ರಾಜತಾಂತ್ರಿಕ ಸಂಬಂಧಗಳು ಇತ್ತೀಚಿನವಾದರೂ, ನಮ್ಮ ನಾಗರಿಕ ಸಂಪರ್ಕವು ಪ್ರಾಚೀನ ಕಾಲದಿಂದಲೂ ಇದೆ. ರಾಮಾಯಣದ ಫಿಲಿಪ್ಪೀನ್ಸ್ ಆವೃತ್ತಿ - ಮಹಾರಾಡಿಯಾ ಲಾವಾನಾ ನಮ್ಮ ಆಳವಾಗಿ ಬೇರೂರಿರುವ ಸಾಂಸ್ಕೃತಿಕ ಬಂಧಕ್ಕೆ ಜೀವಂತ ಪುರಾವೆಯಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಅಂಚೆ ಚೀಟಿಗಳು, ಎರಡೂ ದೇಶಗಳ ರಾಷ್ಟ್ರೀಯ ಹೂವುಗಳನ್ನು ಒಳಗೊಂಡಿದ್ದು, ನಮ್ಮ ಸ್ನೇಹದ ಪರಿಮಳವನ್ನು ಸುಂದರವಾಗಿ ಸಂಕೇತಿಸುತ್ತವೆ.ಆಪರೇಷನ್ ಸಿಂದೂರ ಕುರಿತ ವಿಶೇಷ ಚರ್ಚೆಯಲ್ಲಿ ಲೋಕಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 29th, 05:32 pm
ಈ ಅಧಿವೇಶನದ ಆರಂಭದಲ್ಲೇ ನಾನು ಮಾಧ್ಯಮ ಮಿತ್ರರೊಂದಿಗೆ ಮಾತನಾಡುವಾಗ, ಎಲ್ಲಾ ಸಂಸದರಿಗೂ ಒಂದು ಮನವಿ ಮಾಡಿದ್ದೆ. ಈ ಅಧಿವೇಶನವು ಭಾರತದ ವಿಜಯಗಳ ಆಚರಣೆಯಾಗಿದೆ ಎಂದು ನಾನು ಹೇಳಿದ್ದೆ. ಈ ಸಂಸತ್ತಿನ ಅಧಿವೇಶನವು ಭಾರತದ ಕೀರ್ತಿಯನ್ನು ಬಣ್ಣಿಸುವ ಅಧಿವೇಶನವಾಗಿದೆ.ʻಆಪರೇಷನ್ ಸಿಂದೂರʼ ಕುರಿತ ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
July 29th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತದ ದಿಟ್ಟ, ಯಶಸ್ವಿ ಮತ್ತು ನಿರ್ಣಾಯಕ ಕಾರ್ಯಾಚರಣೆ 'ಆಪರೇಷನ್ ಸಿಂದೂರ' ಕುರಿತ ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಮಾತನಾಡಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಅಧಿವೇಶನದ ಆರಂಭದಲ್ಲಿ ಮಾಧ್ಯಮಗಳ ಜೊತೆಗಿನ ತಮ್ಮ ಸಂವಾದವನ್ನು ಸ್ಮರಿಸಿದರು, ಅಧಿವೇಶನವನ್ನು ಭಾರತದ ವಿಜಯಗಳ ಆಚರಣೆ ಮತ್ತು ಭಾರತದ ವೈಭವಕ್ಕೆ ಗೌರವ ಎಂದು ಪರಿಗಣಿಸುವಂತೆ ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರಿಗೆ ಮನವಿ ಮಾಡಿದ್ದಾಗಿ ಹೇಳಿದರು.ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ ಆದಿ ತಿರುವಥಿರೈ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 27th, 12:30 pm
ಅತ್ಯಂತ ಗೌರವಾನ್ವಿತ ಆಧೀನಂ ಮಠಾಧೀಶಗನ್ (ಮುಖ್ಯಸ್ಥರೆ), ಚಿನ್ಮಯ ಮಿಷನ್ ಸ್ವಾಮಿಗಳೆ, ತಮಿಳುನಾಡು ರಾಜ್ಯಪಾಲರಾದ ಆರ್ ಎನ್ ರವಿ ಜಿ, ನನ್ನ ಸಂಪುಟ ಸಹೋದ್ಯೋಗಿ ಡಾ. ಎಲ್ ಮುರುಗನ್ ಜಿ, ಸ್ಥಳೀಯ ಸಂಸದರಾದ ತಿರುಮ-ವಲವನ್ ಜಿ, ವೇದಿಕೆಯಲ್ಲಿರುವ ತಮಿಳುನಾಡು ಸಚಿವರೆ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಇಳಯರಾಜ ಜಿ, ಇಲ್ಲಿ ನೆರೆದಿರುವ ಎಲ್ಲಾ ಭಕ್ತರೆ, ವಿದ್ಯಾರ್ಥಿಗಳೆ, ಸಹೋದರ ಸಹೋದರಿಯರೆ! ನಮಃ ಶಿವಾಯಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಗಂಗೈಕೊಂಡ ಚೋಳಪುರಂನಲ್ಲಿ ʻಆದಿ ತಿರುವಥಿರೈʼ ಉತ್ಸವ ಉದ್ದೇಶಿಸಿ ಮಾತನಾಡಿದರು
July 27th, 12:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ `ಆದಿ ತಿರುವಥಿರೈ' ಉತ್ಸವ ಉದ್ದೇಶಿಸಿ ಮಾತನಾಡಿದರು. ಸರ್ವಶಕ್ತನಾದ ಶಿವನಿಗೆ ನಮಿಸುತ್ತಾ, ರಾಜ ರಾಜ ಚೋಳನ ಪವಿತ್ರ ಭೂಮಿಯಲ್ಲಿ ದೈವಿಕ ಶಿವದರ್ಶನದ ಮೂಲಕ ಅನುಭವಿಸಿದ ಆಳವಾದ ಆಧ್ಯಾತ್ಮಿಕ ಶಕ್ತಿಯ ಬಗ್ಗೆ ಮಾತನಾಡಿದರು. ಶ್ರೀ ಇಳಯರಾಜಾ ಅವರ ಸಂಗೀತ ಮತ್ತು ಒಥುವರರ ಪವಿತ್ರ ಪಠಣದೊಂದಿಗೆ, ಆಧ್ಯಾತ್ಮಿಕ ವಾತಾವರಣವು ಆತ್ಮವನ್ನು ಆಳವಾಗಿ ಪ್ರಭಾವಿಸಿದೆ ಎಂದು ಶ್ರೀ ಮೋದಿ ಹೇಳಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
June 29th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 21st, 07:06 am
ಆಂಧ್ರ ಪ್ರದೇಶ ರಾಜ್ಯಪಾಲರಾದ ಸೈಯದ್ ಅಬ್ದುಲ್ ನಜೀರ್ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ, ನನ್ನ ಆತ್ಮೀಯ ಗೆಳೆಯ ಚಂದ್ರಬಾಬು ನಾಯ್ಡು ಗಾರು, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಕೆ. ರಾಮಮೋಹನ್ ನಾಯ್ಡು ಜಿ, ಪ್ರತಾಪರಾವ್ ಜಾಧವ್ ಜಿ, ಚಂದ್ರಶೇಖರ್ ಜಿ, ಭೂಪತಿ ರಾಜು ಶ್ರೀನಿವಾಸ್ ವರ್ಮಾ ಗಾರು, ರಾಜ್ಯದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಗಾರು, ಇಲ್ಲಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ! ನಿಮ್ಮೆಲ್ಲರಿಗೂ ನಮಸ್ಕಾರ!ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
June 21st, 06:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ ವಹಿಸಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು.