Prime Minister condoles the loss of lives in a fire mishap in Indore, Madhya Pradesh
March 18th, 01:52 pm
The Prime Minister has expressed deep sorrow over the tragic fire incident in Indore and has announced ex-gratia for the affected families.Our government is making the vision of women-led development the axis of development: PM Modi in Bhopal, Madhya Pradesh
May 31st, 11:00 am
PM Modi participated in the Devi Ahilyabai Mahila Sashaktikaran Mahasammelan and launched multiple projects in Bhopal, Madhya Pradesh. Quoting Devi Ahilyabai, he reiterated that true governance means serving the people and improving their lives. Emphasising the government’s commitment to increasing women's participation in policymaking, the PM highlighted the progressive steps taken over the past decade.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಲೋಕಮಾತಾ ದೇವಿ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಮಹಿಳಾ ಸಶಕ್ತೀಕರಣ ಮಹಾಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದರು
May 31st, 10:27 am
ಲೋಕಮಾತಾ ದೇವಿ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ ಲೋಕಮಾತಾ ದೇವಿ ಅಹಲ್ಯಾಬಾಯಿ ಮಹಿಳಾ ಸಶಕ್ತೀಕರಣ ಮಹಾಸಮ್ಮೇಳನವನ್ನುದ್ದೇಶಿಸಿ ಭಾಷಣ ಮಾಡಿದರು. ಅವರು ಭೋಪಾಲ್ ನಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, 'ಮಾ ಭಾರತಿ'ಗೆ ಗೌರವ ಸಲ್ಲಿಸುವ ಮೂಲಕ ಮತ್ತು ಭಾರತದ ಮಹಿಳೆಯರ ಶಕ್ತಿಯನ್ನು ಅಂಗೀಕರಿಸುವ ಮೂಲಕ ಪ್ರಾರಂಭಿಸಿದರು. ಈ ಕಾರ್ಯಕ್ರಮವನ್ನು ಆಶೀರ್ವದಿಸಲು ಬಂದ ಸಹೋದರಿಯರು ಮತ್ತು ಹೆಣ್ಣುಮಕ್ಕಳ ದೊಡ್ಡ ಗುಂಪಿಗೆ ಅವರು ಕೃತಜ್ಞತೆ ಸಲ್ಲಿಸಿದರು, ಅವರ ಉಪಸ್ಥಿತಿಯಿಂದ ತಮಗೆ ಗೌರವವಿದೆ ಎಂದು ಹೇಳಿದರು. ಇಂದು ಲೋಕಮಾತಾ ದೇವಿ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ, ಇದು 140 ಕೋಟಿ ಭಾರತೀಯರಿಗೆ ಸ್ಫೂರ್ತಿಯ ಸಂದರ್ಭ ಮತ್ತು ರಾಷ್ಟ್ರ ನಿರ್ಮಾಣದ ಸ್ಮರಣೀಯ ಪ್ರಯತ್ನಗಳಿಗೆ ಕೊಡುಗೆ ನೀಡುವ ಕ್ಷಣವಾಗಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ದೇವಿ ಅಹಲ್ಯಾಬಾಯಿ ಅವರನ್ನು ಉಲ್ಲೇಖಿಸಿದ ಅವರು, ನಿಜವಾದ ಆಡಳಿತ ಎಂದರೆ ಜನರ ಸೇವೆ ಮತ್ತು ಅವರ ಜೀವನವನ್ನು ಸುಧಾರಿಸುವುದು ಎಂದು ಪುನರುಚ್ಚರಿಸಿದರು. ಇಂದಿನ ಕಾರ್ಯಕ್ರಮವು ಅವರ ದೃಷ್ಟಿಕೋನವನ್ನು ಸಾಕಾರಗೊಳಿಸುತ್ತದೆ ಮತ್ತು ಅವರ ಆದರ್ಶಗಳನ್ನು ಮುಂದಕ್ಕೆ ಕೊಂಡೊಯ್ಯುತ್ತದೆ ಎಂದು ಅವರು ಹೇಳಿದರು. ಇಂದೋರ್ ಮೆಟ್ರೋಗೆ ಚಾಲನೆ ನೀಡಿರುವುದನ್ನು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದರು, ಜೊತೆಗೆ ದಾತಿಯಾ ಮತ್ತು ಸತ್ನಾಕ್ಕೆ ವಾಯು ಸಂಪರ್ಕವನ್ನು ಸೇರಿಸಲಾಯಿತು. ಈ ಯೋಜನೆಗಳು ಮಧ್ಯಪ್ರದೇಶದಲ್ಲಿ ಮೂಲಸೌಕರ್ಯವನ್ನು ಹೆಚ್ಚಿಸುತ್ತವೆ, ಅಭಿವೃದ್ಧಿಯನ್ನು ವೇಗಗೊಳಿಸುತ್ತವೆ ಮತ್ತು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಅವರು ಒತ್ತಿ ಹೇಳಿದರು. ಹಾಜರಿದ್ದ ಎಲ್ಲರಿಗೂ ಅವರು ಅಭಿನಂದನೆ ಸಲ್ಲಿಸಿದರು.AAP-da's sinking ship will drown in Yamuna Ji: PM Modi in Kartar Nagar, Delhi
January 29th, 01:16 pm
PM Modi today, addressed a massive crowd in Kartar Nagar, declared that Delhi had rejected excuses, fake promises, and deception. He asserted that the city demanded a double-engine BJP government focused on welfare and development, ensuring housing, modernization, piped water, and an end to the tanker mafia. Confident of victory, he proclaimed, On February 5th, AAP-da Jayegi, BJP Aayegi!”PM Modi’s power-packed rally in Kartar Nagar ignites BJP’s campaign
January 29th, 01:15 pm
PM Modi today, addressed a massive crowd in Kartar Nagar, declared that Delhi had rejected excuses, fake promises, and deception. He asserted that the city demanded a double-engine BJP government focused on welfare and development, ensuring housing, modernization, piped water, and an end to the tanker mafia. Confident of victory, he proclaimed, On February 5th, AAP-da Jayegi, BJP Aayegi!”ವಿಶ್ವದ 31 ಜೌಗುಭೂಮಿ ಮಾನ್ಯತೆ ಪಡೆದ ನಗರಗಳ ಪಟ್ಟಿಗೆ ಇಂದೋರ್ ಮತ್ತು ಉದಯಪುರ ಸೇರ್ಪಡೆ : ಪ್ರಧಾನಮಂತ್ರಿ ಅಭಿನಂದನೆ
January 25th, 05:52 pm
ವಿಶ್ವದ 31 ಜೌಗುಭೂಮಿ (ತೇವಾಂಶಯುಕ್ತ ನೆಲ) ಮಾನ್ಯತೆ ಪಡೆದ ನಗರಗಳ ಪಟ್ಟಿಗೆ ಸೇರ್ಪಡೆಗೊಂಡ ಇಂದೋರ್ ಮತ್ತು ಉದಯಪುರ ನಗರಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ. ಈ ಮಾನ್ಯತೆಯು ಸುಸ್ಥಿರ ಅಭಿವೃದ್ಧಿ ಹಾಗೂ ಪ್ರಕೃತಿ ಮತ್ತು ನಗರ ಬೆಳವಣಿಗೆಯ ನಡುವಿನ ಸಾಮರಸ್ಯವನ್ನು ಪೋಷಿಸುವ ಭಾರತದ ಅಚಲ ಬದ್ಧತೆಯ ಪ್ರತಿಬಿಂಬವಾಗಿದೆ ಎಂದು ಅವರು ಬಣ್ಣಿಸಿದ್ದಾರೆ.ಭಾರತೀಯ ವಲಸಿಗರು ವಿವಿಧ ರಾಷ್ಟ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
November 24th, 11:30 am
ಮನ್ ಕಿ ಬಾತ್‌ನ 116 ನೇ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಎನ್‌ಸಿಸಿ ದಿನದ ಮಹತ್ವವನ್ನು ಚರ್ಚಿಸಿದರು, ಎನ್‌ಸಿಸಿ ಕೆಡೆಟ್‌ಗಳ ಬೆಳವಣಿಗೆ ಮತ್ತು ವಿಪತ್ತು ಪರಿಹಾರದಲ್ಲಿ ಅವರ ಪಾತ್ರವನ್ನು ಎತ್ತಿ ತೋರಿಸಿದರು. ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಯುವ ಸಬಲೀಕರಣಕ್ಕೆ ಒತ್ತು ನೀಡಿದರು ಮತ್ತು ವಿಕಸಿತ್ ಭಾರತ್ ಯುವ ನಾಯಕರ ಸಂವಾದದ ಕುರಿತು ಮಾತನಾಡಿದರು. ಅವರು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನ್ಯಾವಿಗೇಟ್ ಮಾಡಲು ಹಿರಿಯ ನಾಗರಿಕರಿಗೆ ಸಹಾಯ ಮಾಡುವ ಯುವಕರ ಸ್ಪೂರ್ತಿದಾಯಕ ಕಥೆಗಳು ಮತ್ತು ಏಕ್ ಪೆಡ್ ಮಾ ಕೆ ನಾಮ್ ಅಭಿಯಾನದ ಯಶಸ್ಸನ್ನು ಹಂಚಿಕೊಂಡರು.309 ಕಿಮೀ ಉದ್ದದ ಹೊಸ ಮಾರ್ಗದ ಯೋಜನೆಗೆ ಕೇಂದ್ರ ಸಂಪುಟದ ಅನುಮೋದನೆ: ಎರಡು ಪ್ರಮುಖ ವಾಣಿಜ್ಯ ಕೇಂದ್ರಗಳಾದ ಮುಂಬೈ ಮತ್ತು ಇಂದೋರ್ ನಡುವೆ ದೂರ ಕಡಿಮೆಗೊಳಿಸುವ ರೈಲು ಸಂಪರ್ಕವನ್ನು ಒದಗಿಸಲಿದೆ
September 02nd, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು (ಸಿ.ಸಿ.ಇ.ಎ.), ಕೇಂದ್ರ ರೈಲ್ವೆ ಸಚಿವಾಲಯದ ಅಡಿಯಲ್ಲಿ ಒಟ್ಟು ರೂ. 18,036 ಕೋಟಿಗಳ (ಅಂದಾಜು) ಹೊಸ ರೈಲು ಮಾರ್ಗ ಯೋಜನೆಗೆ ಅನುಮೋದನೆ ನೀಡಿದೆ. ಪ್ರಸ್ತಾವಿತ ಹೊಸ ಮಾರ್ಗವು ಇಂದೋರ್ ಮತ್ತು ಮನ್ಮಾಡ್ ನಡುವೆ ನೇರ ರೈಲು ಸಂಪರ್ಕವನ್ನು ಒದಗಿಸುತ್ತದೆ ಮತ್ತು ಚಲನಶೀಲತೆಯನ್ನು ಸುಧಾರಿಸುತ್ತದೆ, ಭಾರತೀಯ ರೈಲ್ವೆಗೆ ವರ್ಧಿತ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆಯನ್ನು ಒದಗಿಸುತ್ತದೆ. ಈ ಯೋಜನೆಯು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರ ನವಭಾರತದ ದೃಷ್ಟಿಕೋನಕ್ಕೆ ಅನುಗುಣವಾಗಿದೆ, ಇದು ಈ ಪ್ರದೇಶದ ಜನರನ್ನು ಆತ್ಮನಿರ್ಭರ ಮಾಡುವ ಮೂಲಕ ಈ ಪ್ರದೇಶದಲ್ಲಿ ಸಮಗ್ರ ಅಭಿವೃದ್ಧಿಯ ಮೂಲಕ ಅವರುಗಳಿಗೆ ಉದ್ಯೋಗ/ಸ್ವಯಂ ಉದ್ಯೋಗಗಳಿಗೆ ಅವಕಾಶಗಳನ್ನು ಹೆಚ್ಚಿಸುತ್ತದೆ.ಇಂದೋರ್ ನಲ್ಲಿ ನಡೆದ 'ಮಜ್ದೂರೂನ್ ಕಾ ಹಿಟ್ ಮಜ್ದೂರೂನ್ ಕೋ ಸಮರ್ಥ್' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡದ ಅನುವಾದ
December 25th, 12:30 pm
ಮೋಹನ್ ಯಾದವ್, ಮಧ್ಯಪ್ರದೇಶದ ಉತ್ಸಾಹಿ ಮುಖ್ಯಮಂತ್ರಿ; ಇಂದೋರ್ ನಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಲೋಕಸಭೆಯ ಮಾಜಿ ಸ್ಪೀಕರ್ ಸುಮಿತ್ರಾ ತಾಯ್; ನನ್ನ ಸಂಸದೀಯ ಸಹೋದ್ಯೋಗಿಗಳು; ಹೊಸ ವಿಧಾನಸಭೆಯಲ್ಲಿ ಆಯ್ಕೆಯಾದ ಶಾಸಕರು; ಇತರ ಗಣ್ಯರೇ, ಮತ್ತು ನನ್ನ ಪ್ರೀತಿಯ ಕಾರ್ಮಿಕ ಸಹೋದರ ಸಹೋದರಿಯರೇ!'ಕಾರ್ಮಿಕರ ಹಿತ, ಕಾರ್ಮಿಕರಿಗೆ ಸಮರ್ಪಿತ' ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ
December 25th, 12:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 'ಕಾರ್ಮಿಕರ ಹಿತ, ಕಾರ್ಮಿಕರಿಗೆ ಸಮರ್ಪಿತʼ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ʻಹುಕುಮ್‌ಚಂದ್ ಮಿಲ್ʼನ ಕಾರ್ಮಿಕರ ಬಾಕಿಗೆ ಸಂಬಂಧಿಸಿದ ಸುಮಾರು 224 ಕೋಟಿ ರೂ.ಗಳ ಚೆಕ್ ಅನ್ನು ಇಂದೋರ್‌ನ ʻಹುಕುಚ್‌ಚಂದ್ ಮಿಲ್ʼನ ಅಧಿಕೃತ ಲಿಕ್ವಿಡೇಟರ್ ಮತ್ತು ಕಾರ್ಮಿಕ ಒಕ್ಕೂಟದ ಮುಖ್ಯಸ್ಥರಿಗೆ ಹಸ್ತಾಂತರಿಸಿದರು. ʻಹುಕುಮ್‌ಚಂದ್ ಮಿಲ್ʼ ಕಾರ್ಮಿಕರ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳ ಇತ್ಯರ್ಥಕ್ಕೆ ಈ ಕಾರ್ಯಕ್ರಮವು ಸಾಕ್ಷಿಯಾಯಿತು. ಶ್ರೀ ಮೋದಿ ಅವರು ಖಾರ್ಗೋನ್ ಜಿಲ್ಲೆಯಲ್ಲಿ 60 ಮೆಗಾವ್ಯಾಟ್ ಸೌರ ವಿದ್ಯುತ್ ಸ್ಥಾವರಕ್ಕೂ ಶಂಕುಸ್ಥಾಪನೆ ನೆರವೇರಿಸಿದರು.ಡಿಸೆಂಬರ್ 25ರಂದು 'ಮಜ್ದೂರೋನ್ ಕಾ ಹಿತ್ ಮಜ್ದೂರೋನ್ ಕೋ ಸಮರ್ಪಿತ್' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಲಿದ್ದಾರೆ ಮತ್ತು ಹುಕುಮ್ ಚಂದ್ ಗಿರಣಿ ಕಾರ್ಮಿಕರ ಬಾಕಿಗೆ ಸಂಬಂಧಿಸಿದ ಚೆಕ್ ಹಸ್ತಾಂತರಿಸಲಿದ್ದಾರೆ
December 24th, 07:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಮಜ್ದೂರೋನ್ ಕಾ ಹಿತ್ ಮಜ್ದೂರೋನ್ ಕೋ ಸಮರ್ಪಿತ್ ' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಮತ್ತು ಹುಕುಮ್ ಚಂದ್ ಮಿಲ್ ಕಾರ್ಮಿಕರ ಬಾಕಿಗೆ ಸಂಬಂಧಿಸಿದ ಸುಮಾರು 224 ಕೋಟಿ ರೂ.ಗಳ ಚೆಕ್ ಅನ್ನು ಇಂದೋರ್ ನ ಹುಕುಮ್ ಚಂದ್ ಮಿಲ್ ನ ಅಧಿಕೃತ ಲಿಕ್ವಿಡೇಟರ್ ಮತ್ತು ಕಾರ್ಮಿಕ ಒಕ್ಕೂಟದ ಮುಖ್ಯಸ್ಥರಿಗೆ 2023ರ ಡಿಸೆಂಬರ್ 25ರಂದು ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಸ್ತಾಂತರಿಸಲಿದ್ದಾರೆ. ಈ ಕಾರ್ಯಕ್ರಮವು ಹುಕುಂ ಚಂದ್ ಗಿರಣಿ ಕಾರ್ಮಿಕರ ದೀರ್ಘಕಾಲದ ಬೇಡಿಕೆಗಳ ಇತ್ಯರ್ಥವನ್ನು ಸೂಚಿಸುತ್ತದೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಅಕ್ಟೋಬರ್ 5 ರಂದು ರಾಜಸ್ಥಾನ ಮತ್ತು ಮಧ್ಯಪ್ರದೇಶಕ್ಕೆ ಪ್ರಧಾನಿ ಭೇಟಿ
October 04th, 09:14 am
ಬೆಳಗ್ಗೆ 11.15ರ ಹೊತ್ತಿಗೆ ಪ್ರಧಾನಿ ಅವರು ರಾಜಸ್ಥಾನದ ಜೋಧ್‌ಪುರದಲ್ಲಿ, ರಸ್ತೆ, ರೈಲು, ವಿಮಾನಯಾನ, ಆರೋಗ್ಯ ಮತ್ತು ಉನ್ನತ ಶಿಕ್ಷಣದಂತಹ ಕ್ಷೇತ್ರ ಸೇರಿದಂತೆ ಸುಮಾರು 5000 ಕೋಟಿ ರೂಪಾಯಿ ಮೊತ್ತದ ಬಹು-ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಕೆಲವು ಯೋಜನೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 3.30ರ ಸುಮಾರಿಗೆ ಪ್ರಧಾನಿ ಅವರು ಮಧ್ಯಪ್ರದೇಶದ ಜಬಲ್‌ಪುರವನ್ನು ತಲುಪಲಿದ್ದಾರೆ. ಅಲ್ಲಿ ಅವರು ರಸ್ತೆ, ರೈಲು, ಗ್ಯಾಸ್ ಪೈಪ್‌ಲೈನ್, ವಸತಿ ಮತ್ತು ಶುದ್ಧ ಕುಡಿಯುವ ನೀರು ಸೇರಿದಂತೆ ವಿವಿಧ ಕ್ಷೇತ್ರಗಳ 12,600 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರಾಷ್ಟ್ರೀಯ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ.ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 02nd, 09:07 pm
ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ನರೇಂದ್ರ ಸಿಂಗ್ ತೋಮರ್ ಜೀ, ವೀರೇಂದ್ರ ಕುಮಾರ್ ಜೀ, ಜ್ಯೋತಿರಾದಿತ್ಯ ಸಿಂಧಿಯಾ ಜೀ, ಇತರ ಎಲ್ಲಾ ಗಣ್ಯರು ಮತ್ತು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿಗೆ ಬಂದಿರುವ ನನ್ನ ಎಲ್ಲಾ ಕುಟುಂಬ ಸದಸ್ಯರೇ! ಗ್ವಾಲಿಯರ್ ನ ಈ ಐತಿಹಾಸಿಕ ಭೂಮಿಗೆ ನಾನು ನಮಸ್ಕರಿಸುತ್ತೇನೆ!ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಸುಮಾರು 19,260 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಣೆ
October 02nd, 03:53 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿಂದು ಸುಮಾರು 19,260 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಯೋಜನೆಗಳ ಪೈಕಿ ದೆಹಲಿ-ವಡೋದರಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ, ಪಿಎಂಎವೈ-ಗ್ರಾಮೀಣ ಯೋಜನೆ ಅಡಿ ನಿರ್ಮಿಸಲಾದ 2.2 ಲಕ್ಷ ಮನೆಗಳ ಗೃಹ ಪ್ರವೇಶ ಮತ್ತು ಪಿಎಂಎವೈ – ನಗರ ಯೋಜನೆ ಅಡಿ ನಿರ್ಮಿಸಲಾದ ಮನೆಗಳ ಲೋಕಾರ್ಪಣೆ, ಜಲಜೀವನ್ ಮಿಷನ್ ಯೋಜನೆಗಳಿಗೆ ಶಂಕುಸ್ಥಾಪನೆ, ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಅಡಿ 9 ಆರೋಗ್ಯ ಕೇಂದ್ರಗಳು, ಐಐಟಿ ಇಂದೋರ್‌ನ ಶೈಕ್ಷಣಿಕ ಕಟ್ಟಡದ ಸಮರ್ಪಣೆ ಮತ್ತು ಕ್ಯಾಂಪಸ್‌ನಲ್ಲಿ ಹಾಸ್ಟೆಲ್ ಮತ್ತು ಇತರ ಕಟ್ಟಡಗಳಿಗೆ ಶಂಕುಸ್ಥಾಪನೆ ಮತ್ತು ಇಂದೋರ್‌ನಲ್ಲಿ ಮಲ್ಟಿ-ಮೋಡಲ್ ಲಾಜಿಸ್ಟಿಕ್ಸ್ ಪಾರ್ಕ್ ಸೇರಿನೆ.ಮಧ್ಯಪ್ರದೇಶದ ಬಿನಾದಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
September 14th, 12:15 pm
ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಹರ್ದೀಪ್ ಸಿಂಗ್ ಪುರಿ ಅವರೇ, ಮಧ್ಯಪ್ರದೇಶದ ಇತರ ಸಚಿವರೇ, ಸಂಸತ್ ಸದಸ್ಯರೇ, ಶಾಸಕರೇ ಮತ್ತು ನನ್ನ ಪ್ರೀತಿಯ ಕುಟುಂಬ ಸದಸ್ಯರೇ!ಮಧ್ಯಪ್ರದೇಶದ ಬೀನಾದಲ್ಲಿ 50,700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ
September 14th, 11:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಬಿನಾದಲ್ಲಿ 50,700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದರು. ಬೀನಾದಲ್ಲಿ ಪೆಟ್ರೋ ಕೆಮಿಕಲ್ಸ್ ಸಂಸ್ಕರಣಾ ಘಟಕವನ್ನು [ಬಿಪಿಸಿಎಲ್]ವನ್ನು 49,000 ಸಾವಿರ ಕೋಟಿ ರೂಪಾಯಿ ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ನರ್ಮದಾಪುರಂ ವಿದ್ಯುತ್ ಮತ್ತು ನವೀಕೃತ ಇಂಧನ ಉತ್ಪಾದನಾ ವಲಯ ಮತ್ತು ರಾತಲಂನಲ್ಲಿ ಬೃಹತ್ ಕೈಗಾರಿಕಾ ಪಾರ್ಕ್ ಗೆ ಶಿಲಾನ್ಯಾಸ ಇಂದೋರ್ ನಲ್ಲಿ ಎರಡು ಮಾಹಿತಿ ತಂತ್ರಜ್ಞಾನ ಪಾರ್ಕ್ ಮತ್ತು ರಾಜ್ಯದ ವಿವಿಧೆಡೆ ಆರು ಹೊಸ ಕೈಗಾರಿಕಾ ಪಾರ್ಕ್ ಗಳಿಗೆ ಪ್ರಧಾನಮಂತ್ರಿ ಅವರು ಶಂಕು ಸ್ಥಾಪನೆ ನೆರವೇರಿಸಿದರು.ʻಜಿ-20 ಕಾರ್ಮಿಕ ಮತ್ತು ಉದ್ಯೋಗ ಸಚಿವರ ಸಭೆʼಯಲ್ಲಿ ಪ್ರಧಾನ ಮಂತ್ರಿಯವರ ವೀಡಿಯೊ ಸಂದೇಶದ ಪಠ್ಯ
July 21st, 09:06 am
ನಿಮ್ಮ ಕಾರ್ಯಪಡೆಯು ಪ್ರಮುಖ ಆರ್ಥಿಕ ಮತ್ತು ಸಾಮಾಜಿಕ ಅಂಶಗಳಲ್ಲಿ ಒಂದಾದ ಉದ್ಯೋಗದ ಬಗ್ಗೆ ಚರ್ಚಿಸುತ್ತಿದೆ. ನಾವು ಉದ್ಯೋಗ ಕ್ಷೇತ್ರದಲ್ಲಿನ ಕೆಲವು ಮಹತ್ತರ ಬದಲಾವಣೆಗಳ ಹಾದಿಯಲ್ಲಿದ್ದೇವೆ. ಈ ಕ್ಷಿಪ್ರ ಬದಲಾವಣೆಗಳನ್ನು ಪರಿಹರಿಸಲು ನಾವು ಸ್ಪಂದನಶೀಲ ಮತ್ತು ಪರಿಣಾಮಕಾರಿ ಕಾರ್ಯತಂತ್ರಗಳನ್ನು ಸಿದ್ಧಪಡಿಸಬೇಕಾಗಿದೆ. ನಾಲ್ಕನೇ ಕೈಗಾರಿಕಾ ಕ್ರಾಂತಿಯ ಈ ಯುಗದಲ್ಲಿ, ತಂತ್ರಜ್ಞಾನವು ಉದ್ಯೋಗದ ಮೂಲ ಚಾಲಕ ಶಕ್ತಿಯಾಗಿದ್ದು, ಅದು ಹಾಗೆಯೇ ಮುಂದುವರಿಯುತ್ತದೆ. ಕಳೆದ ಬಾರಿ ತಂತ್ರಜ್ಞಾನ-ನೇತೃತ್ವದ ಪರಿವರ್ತನೆಯ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ತಂತ್ರಜ್ಞಾನ ಆಧರಿತ ಉದ್ಯೋಗಗಳನ್ನು ಸೃಷ್ಟಿಸಿದ ಅನುಭವವನ್ನು ಹೊಂದಿರುವ ದೇಶದಲ್ಲಿ ಈ ಸಭೆ ನಡೆಯುತ್ತಿರುವುದು ನಮ್ಮ ಅದೃಷ್ಟ. ನಿಮ್ಮ ಆತಿಥೇಯ ನಗರವಾದ ಇಂದೋರ್ ಅಂತಹ ರೂಪಾಂತರಗಳ ಹೊಸ ಅಲೆಯನ್ನು ಮುನ್ನಡೆಸುವ ಅನೇಕ ನವೋದ್ಯಮಗಳಿಗೆ ನೆಲೆಯಾಗಿದೆ.ಜಿ-20 ಕಾರ್ಮಿಕ ಮತ್ತು ಉದ್ಯೋಗ ಸಚಿವರ ಸಮಾವೇಶ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
July 21st, 09:05 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಇಂದೋರ್‌ನಲ್ಲಿಂದು ಜಿ-20 ಕಾರ್ಮಿಕ ಮತ್ತು ಉದ್ಯೋಗ ಸಚಿವರ ಸಮಾವೇಶ ಉದ್ದೇಶಿಸಿ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದರು.ವಂದೇ ಭಾರತ್ 5 ರೈಲುಗಳಿಗೆ ಪ್ರಧಾನ ಮಂತ್ರಿ ಹಸಿರು ನಿಶಾನೆ
June 27th, 10:17 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಐದು ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ವಂದೇ ಭಾರತ್ ಐದು ರೈಲುಗಳೆಂದರೆ, ಭೋಪಾಲ್(ರಾಣಿ ಕಮಲಾಪತಿ) - ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್; ಭೋಪಾಲ್(ರಾಣಿ ಕಮಲಾಪತಿ) - ಜಬಲ್ಪುರ್ ವಂದೇ ಭಾರತ್ ಎಕ್ಸ್‌ಪ್ರೆಸ್; ರಾಂಚಿ - ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್; ಧಾರವಾಡ - ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಗೋವಾ (ಮಡ್ಗಾಂವ್) - ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳ ಪ್ರಧಾನಿ ಭೇಟಿಯ ಸಂದರ್ಭದಲ್ಲಿ ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
June 01st, 12:00 pm
ಗೌರವಾನ್ವಿತ ಪ್ರಧಾನ ಮಂತ್ರಿ 'ಪ್ರಚಂಡ' ಜೀ, ಎರಡೂ ನಿಯೋಗಗಳ ಸದಸ್ಯರೇ, ಮಾಧ್ಯಮದ ನಮ್ಮ ಸ್ನೇಹಿತರೇ,