ಕರ್ನಾಟಕದ ಬೆಂಗಳೂರಿನಲ್ಲಿ ವಿವಿಧ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

August 10th, 01:30 pm

ಕರ್ನಾಟಕ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಜೀ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಶ್ರೀ ಮನೋಹರ್ ಲಾಲ್ ಖಟ್ಟರ್ ಜೀ, ಶ್ರೀ ಹೆಚ್.ಡಿ. ಕುಮಾರಸ್ವಾಮಿ ಜೀ, ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ವಿ. ಸೋಮಣ್ಣ ಜೀ, ಶ್ರೀಮತಿ ಶೋಭಾ ಜೀ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಜೀ, ಕರ್ನಾಟಕ ಸರ್ಕಾರದ ಸಚಿವರಾದ ಶ್ರೀ ಬಿ. ಸುರೇಶ್ ಜೀ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ ಜೀ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಜೀ, ಡಾ. ಮಂಜುನಾಥ್ ಜೀ, ಶಾಸಕರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಜೀ, ಮತ್ತು ಕರ್ನಾಟಕದ ನನ್ನ ಸಹೋದರ ಸಹೋದರಿಯರೇ,

ಬೆಂಗಳೂರಿನಲ್ಲಿ 22,800 ಕೋಟಿ ರೂಪಾಯಿಗಳ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 10th, 01:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಸುಮಾರು 7,160 ಕೋಟಿ ರೂ. ಮೌಲ್ಯದ ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಿದರು ಮತ್ತು 15,610 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದ ಬೆಂಗಳೂರು ಮೆಟ್ರೋ ಹಂತ-3 ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು ಬೆಂಗಳೂರಿನ ಕೆ ಎಸ್ ಆರ್ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ನೆಲಕ್ಕೆ ಕಾಲಿಟ್ಟಾಗ ತಮಗೆ ಒಂದು ರೀತಿಯ ಆತ್ಮೀಯತೆಯ ಭಾವನೆ ಮೂಡಿತು ಎಂದು ಹೇಳಿದರು. ಕರ್ನಾಟಕದ ಸಂಸ್ಕೃತಿಯ ಶ್ರೀಮಂತಿಕೆ, ಜನರ ವಾತ್ಸಲ್ಯ, ಮತ್ತು ಹೃದಯವನ್ನು ತಟ್ಟುವ ಕನ್ನಡ ಭಾಷೆಯ ಮಾಧುರ್ಯವನ್ನು ಶ್ಲಾಘಿಸಿದ ಶ್ರೀ ಮೋದಿ ಅವರು ಬೆಂಗಳೂರಿನ ಅಧಿದೇವತೆ ಅಣ್ಣಮ್ಮ ತಾಯಿಯ ಪಾದಗಳಿಗೆ ನಮಸ್ಕರಿಸುವುದರ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದರು. ಶತಮಾನಗಳ ಹಿಂದೆ ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರಕ್ಕೆ ಅಡಿಪಾಯ ಹಾಕಿದ್ದನ್ನು ಸ್ಮರಿಸಿದ ಪ್ರಧಾನ ಮಂತ್ರಿಗಳು, ಕೆಂಪೇಗೌಡರು ಸಂಪ್ರದಾಯದಲ್ಲಿ ಬೇರೂರಿರುವ ಜೊತೆಗೆ ಪ್ರಗತಿಯ ಹೊಸ ಎತ್ತರಗಳನ್ನು ತಲುಪುವ ನಗರದ ಕನಸು ಕಂಡಿದ್ದರು ಎಂದು ಹೇಳಿದರು. “ಬೆಂಗಳೂರು ಯಾವಾಗಲೂ ಆ ಮನೋಭಾವವನ್ನು ಜೀವಂತವಾಗಿರಿಸಿದೆ ಮತ್ತು ಅದನ್ನು ಕಾಪಾಡಿಕೊಂಡಿದೆ. ಇಂದು, ಬೆಂಗಳೂರು ಅದೇ ಕನಸನ್ನು ನನಸಾಗಿಸುತ್ತಿದೆ” ಎಂದು ಪ್ರಧಾನಮಂತ್ರಿ ಹೇಳಿದರು.

ನವದೆಹಲಿಯ ಜಜ್ಜರ್ ಕ್ಯಾಂಪಸ್‌ನಲ್ಲಿರುವ ನ್ಯಾಷನಲ್ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌ನಲ್ಲಿ ಇನ್ಫೋಸಿಸ್ ಫೌಂಡೇಶನ್ ವಿಶ್ರಾಮ್ ಸದನ್ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

October 21st, 10:31 am

ಹರಿಯಾಣ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಖಟ್ಟರ್ ಜೀ, ಕೇಂದ್ರ ಆರೋಗ್ಯ ಸಚಿವ ಶ್ರೀ ಮನ್ಸುಖ್ ಮಾಂಡವಿಯ ಜಿ, ಕೇಂದ್ರ ಆರೋಗ್ಯ ರಾಜ್ಯ ಸಚಿವರಾದ ಡಾ. ಭಾರತಿ ಪವಾರ್ ಜಿ, ಹರಿಯಾಣ ಆರೋಗ್ಯ ಸಚಿವರಾದ ಶ್ರೀ ಅನಿಲ್ ವಿಜ್ ಜಿ, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಸುಧಾ ಮೂರ್ತಿ ಜೀ, ಸಂಸತ್ತಿನ ನನ್ನ ಸಹೋದ್ಯೋಗಿಗಳು, ಶಾಸಕರು, ಇತರ ಗಣ್ಯರು ಮತ್ತು ನನ್ನ ಸಹೋದರ ಸಹೋದರಿಯರೆ.

ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಮಹಾಸಂಸ್ಥೆ ಎಐಐಎಂಎಸ್ ನ ಝಾಜ್ಜಾರ್ ಕ್ಯಾಂಪಸ್ ನಲ್ಲಿರುವ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ವಿಶ್ರಾಮ್ ಸದನ್ ಉದ್ಘಾಟಿಸಿದ ಪ್ರಧಾನ ಮಂತ್ರಿ

October 21st, 10:30 am

ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಮಹಾಸಂಸ್ಥೆ ಎಐಐಎಂಎಸ್ ನ ಝಾಜ್ಜಾರ್ ಕ್ಯಾಂಪಸ್ ನಲ್ಲಿರುವ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯಲ್ಲಿ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನ ನಿರ್ಮಿಸಿರುವ ವಿಶ್ರಾಮ್ ಸದನವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದರು.

ಅಕ್ಟೋಬರ್ 21ರಂದು ನವದೆಹಲಿಯ ಏಮ್ಸ್ ನ ಝಜರ್ ಆವರಣದ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ವಿಶ್ರಾಮ ಸದನವನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

October 20th, 04:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 2021ರ ಅಕ್ಟೋಬರ್ 21ರಂದು ಬೆಳಗ್ಗೆ 10.30ಕ್ಕೆ ನವದೆಹಲಿಯ ಏಮ್ಸ್ ನ ಝಜರ್ ಆವರಣದ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ವಿಶ್ರಾಮ ಸದನವನ್ನು ಉದ್ಘಾಟಿಸಲಿದ್ದು, ಈ ಸಂದರ್ಭದಲ್ಲಿ ಭಾಷಣ ಮಾಡಲಿದ್ದಾರೆ.