
ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 08th, 08:30 pm
ಈ ಶೃಂಗಸಭೆಯ ಮೂಲಕ ದೇಶ ಮತ್ತು ವಿಶ್ವಾದ್ಯಂತದ ಗೌರವಾನ್ವಿತ ಅತಿಥಿಗಳೊಂದಿಗೆ ಮತ್ತು ನಿಮ್ಮ ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸಲು ನೀವು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು “ನೆಟ್‌ವರ್ಕ್ 18”ಗೆ ನನ್ನ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಈ ವರ್ಷದ ಶೃಂಗಸಭೆಯನ್ನು ಭಾರತದ ಯುವಕರ ಆಕಾಂಕ್ಷೆಗಳೊಂದಿಗೆ ನೀವು ಸಂಪರ್ಕಿಸಿದ್ದೀರಿ ಎಂಬುದನ್ನು ತಿಳಿದು ನನಗೆ ಸಂತೋಷವಾಗಿದೆ. ಈ ವರ್ಷದ ಆರಂಭದಲ್ಲಿ, ವಿವೇಕಾನಂದ ಜಯಂತಿಯಂದು, ಭಾರತ್ ಮಂಟಪದಲ್ಲಿ ವಿಕಸಿತ ಭಾರತ ಯುವ ನಾಯಕರ ಸಂವಾದ ನಡೆಸಲಾಯಿತು. ಆ ಸಮಯದಲ್ಲಿ, ಯುವಕರ ಕಣ್ಣುಗಳಲ್ಲಿ ಕನಸುಗಳ ಮಿಂಚು, ಅವರ ಸಂಕಲ್ಪ ಶಕ್ತಿ ಮತ್ತು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಅವರ ಉತ್ಸಾಹವನ್ನು ನಾನು ನೋಡಿದೆ. 2047ರ ವೇಳೆಗೆ ನಾವು ಭಾರತವನ್ನು ಕೊಂಡೊಯ್ಯಲು ಬಯಸುವ ಎತ್ತರ ಮತ್ತು ನಾವು ಅನುಸರಿಸುತ್ತಿರುವ ಮಾರ್ಗಸೂಚಿಯನ್ನು ನಾವು ಪ್ರತಿ ಹಂತದಲ್ಲೂ ಚರ್ಚಿಸುವುದನ್ನು ಮುಂದುವರಿಸಿದರೆ, 'ಅಮೃತ' (ಅಮೃತ ಕಾಲ) ಖಂಡಿತವಾಗಿಯೂ ಹೊರಹೊಮ್ಮುತ್ತದೆ. ಈ 'ಅಮೃತ'ವು 'ಅಮೃತ ಕಾಲ'ದ ಪೀಳಿಗೆಗೆ ಶಕ್ತಿ ಮತ್ತು ನಿರ್ದೇಶನ ನೀಡುವ ಜತೆಗೆ, ಭಾರತಕ್ಕೆ ಆವೇಗವನ್ನು ನೀಡುತ್ತದೆ. ಈ ಶೃಂಗಸಭೆಯಲ್ಲಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನ್ಯೂಸ್18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ
April 08th, 08:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನ್ಯೂಸ್18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಮಾವೇಶದಲ್ಲಿ ಭಾರತ ಮತ್ತು ಪ್ರಪಂಚದಾದ್ಯಂತದ ಗಣ್ಯ ಅತಿಥಿಗಳೊಂದಿಗೆ ಸಂವಹನ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಅವರು ನೆಟ್ವರ್ಕ್18 ಗೆ ಕೃತಜ್ಞತೆ ಸಲ್ಲಿಸಿದರು. ಈ ವರ್ಷದ ಶೃಂಗಸಭೆಯು ಭಾರತದ ಯುವಕರ ಆಕಾಂಕ್ಷೆಗಳ ಮೇಲೆ ಗಮನ ಕೇಂದ್ರೀಕರಿಸಿದ್ದನ್ನು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವರ್ಷದ ಆರಂಭದಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯಂದು ಭಾರತ್ ಮಂಟಪದಲ್ಲಿ ನಡೆದ ‘ವಿಕಸಿತ ಭಾರತ ಯುವ ನಾಯಕರ ಸಂವಾದ’ (Viksit Bharat Young Leaders Dialogue) ಮಹತ್ವವನ್ನು ಒತ್ತಿ ಹೇಳಿದ ಅವರು, ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಯುವಕರ ಕನಸುಗಳು, ದೃಢಸಂಕಲ್ಪ ಮತ್ತು ಉತ್ಸಾಹದ ಬಗ್ಗೆ ಮಾತನಾಡಿದರು. ಭಾರತದ ಪ್ರಗತಿಗಾಗಿ 2047 ರವರೆಗಿನ ಮಾರ್ಗಸೂಚಿಯನ್ನು ಅವರು ಒತ್ತಿ ಹೇಳಿದರು, ಪ್ರತಿ ಹಂತದಲ್ಲೂ ನಿರಂತರ ಚಿಂತನೆ ಅಮೂಲ್ಯವಾದ ಒಳನೋಟಗಳನ್ನು ನೀಡುತ್ತದೆ ಎಂದು ಅವರು ಹೇಳಿದರು. ಈ ಒಳನೋಟಗಳು ಅಮೃತ ಕಾಲದ ಪೀಳಿಗೆಗೆ ಶಕ್ತಿ ತುಂಬುತ್ತವೆ, ಮಾರ್ಗದರ್ಶನ ನೀಡುತ್ತವೆ ಮತ್ತು ವೇಗವನ್ನು ಹೆಚ್ಚಿಸುತ್ತವೆ ಎಂದು ಅವರು ಹೇಳಿದರು. ಅವರು ಶೃಂಗಸಭೆಯ ಯಶಸ್ಸಿಗೆ ತಮ್ಮ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳನ್ನು ತಿಳಿಸಿದರು.
ಐಎನ್‌ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘ್‌ಶೀರ್ ಕಾರ್ಯಾರಂಭ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣ
January 15th, 11:08 am
ಮಹಾರಾಷ್ಟ್ರದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಸಿಪಿ ರಾಧಾಕೃಷ್ಣನ್ ಅವರು, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ, ಶ್ರೀ ದೇವೇಂದ್ರ ಫಡ್ನವೀಸ್ ಅವರು, ಮಂತ್ರಿ ಪರಿಷತ್ತಿನಲ್ಲಿ ನನ್ನ ಹಿರಿಯ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ಅವರು, ಸಂಜಯ್ ಸೇಠ್ ಜಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಅವರೊಂದಿಗೆ ಇಂದು ನಮ್ಮ ಇಬ್ಬರು ಉಪಮುಖ್ಯಮಂತ್ರಿಗಳಾದ. ಉಪಮುಖ್ಯಮಂತ್ರಿ ಶ್ರೀ.ಏಕನಾಥ ಶಿಂಧೆಯವರು, ಶ್ರೀ ಅಜಿತ್ ಪವಾರ್ ಅವರು, CDS, CNS, ಎಲ್ಲ ನೌಕಾ ಸಿಬ್ಬಂದಿ, ಮಡಗಾಂವ್ ನೌಕಾನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಹೋದ್ಯೋಗಿಗಳೇ, ಇತರ ಆಹ್ವಾನಿತರೆ, ಮಹಿಳೆಯರೇ ಮತ್ತು ಮಹನೀಯರೇ,ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 15th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು.ಮೂರು ಮುಂಚೂಣಿ ನೌಕಾ ಯೋಧರ ತಂಡವನ್ನು ನಿಯೋಜಿಸುವುದರಿಂದ ರಕ್ಷಣಾ ಕಾರ್ಯದಲ್ಲಿ ಜಾಗತಿಕ ನಾಯಕರಾಗುವ ನಮ್ಮ ಪ್ರಯತ್ನಗಳನ್ನು ನಾವು ಬಲಪಡಿಸುತ್ತಿದ್ದೇವೆ ಮತ್ತು ಈ ಪ್ರಕ್ರಿಯೆಯು ಸ್ವಾವಲಂಬನೆಯತ್ತ ನಮ್ಮ ಅನ್ವೇಷಣೆಯನ್ನು ಹೆಚ್ಚಿಸುತ್ತದೆ: ಪ್ರಧಾನಮಂತ್ರಿ
January 14th, 09:38 pm
2025ರ ಜನವರಿ 15 ರಂದು ಮೂರು ಮುಂಚೂಣಿ ನೌಕಾ ಯೋಧರ ತಂಡವನ್ನು ನಿಯೋಜಿಸುವುದರಿಂದ ರಕ್ಷಣೆಯಲ್ಲಿ ಜಾಗತಿಕ ನಾಯಕರಾಗುವ ನಮ್ಮ ಪ್ರಯತ್ನಗಳನ್ನು ಬಲಪಡಿಸುತ್ತದೆ ಮತ್ತು ಸ್ವಾವಲಂಬನೆಯತ್ತ ನಮ್ಮ ಅನ್ವೇಷಣೆಯನ್ನು ಹೆಚ್ಚಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದ್ದಾರೆ.ಜನವರಿ 15 ರಂದು ಮಹಾರಾಷ್ಟ್ರಕ್ಕೆ ಪ್ರಧಾನಮಂತ್ರಿ ಭೇಟಿ
January 13th, 11:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 15 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:30ರ ಸುಮಾರಿಗೆ, ಪ್ರಧಾನಮಂತ್ರಿಯವರು ಮೂರು ಮುಂಚೂಣಿ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘ್‌ಶೀರ್‌ಗಳನ್ನು ಮುಂಬೈನ ನೌಕಾ ನೌಕಾನೆಲೆಯಲ್ಲಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ನಂತರ, ಮಧ್ಯಾಹ್ನ 3:30ರ ಸುಮಾರಿಗೆ ಅವರು ನವಿ ಮುಂಬೈನ ಖಾರ್ಘರ್‌ನಲ್ಲಿ ಇಸ್ಕಾನ್ ದೇವಾಲಯವನ್ನು ಉದ್ಘಾಟಿಸಲಿದ್ದಾರೆ.